Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಭೂಕಂಪಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಭೂಕಂಪಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 15 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಭೂಮಿಯು ನಡುಗುವುದನ್ನೂ ಬೆಟ್ಟಗಳು ಕಂಪಿಸುವುದನ್ನೂ ಕೀರ್ತನೆಗಳು ವರ್ಣಿಸುತ್ತವೆಕೀರ್ತ 18:7, ಕೀರ್ತ 46:2–3, ಕೀರ್ತ 104:32
    ವಚನಗಳು
    ಕೀರ್ತ 18:7ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
    ಕೀರ್ತ 46:2–3ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
    ಕೀರ್ತ 104:32ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.

ಉದಾಹರಣೆಗಳು

  • ಸೀನಾಯಿ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತುವಿಮೋ 19:18, ಕೀರ್ತ 68:8
    ವಚನಗಳು
    ವಿಮೋ 19:18ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
    ಕೀರ್ತ 68:8ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.
  • ಕೋರಹ, ದಾತಾನ್ ಮತ್ತು ಅಬೀರಾಮರ ಕೆಳಗೆ ನೆಲವು ಬಾಯಿತೆರೆಯಿತುಅರಣ್ಯ 16:31–32
    ವಚನಗಳು
    ಅರಣ್ಯ 16:31–32ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು. ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
  • ಯೋನಾತಾನನ ದಾಳಿಯ ನಂತರ ಫಿಲಿಷ್ಟಿಯರ ಪಾಳೆಯದಲ್ಲಿ ಭೂಮಿಯು ಕಂಪಿಸಿತು1 ಸಮು 14:15
    ವಚನಗಳು
    1 ಸಮು 14:15ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.
  • ಹೋರೇಬಿನಲ್ಲಿ ಎಲೀಯನು: ಗಾಳಿ, ಭೂಕಂಪ, ಬೆಂಕಿ, ಆ ಮೇಲೆ ಮೆಲ್ಲನೆಯ ಪಿಸುಧ್ವನಿ1 ಅರಸು 19:11–12
    ವಚನಗಳು
    1 ಅರಸು 19:11–12ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ. ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
  • ಉಜ್ಜೀಯನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷ ಮೊದಲು ಆಮೋಸನು ಮಾತನಾಡಿದನುಆಮೋ 1:1
    ವಚನಗಳು
    ಆಮೋ 1:1ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.
  • ಉಜ್ಜೀಯನ ದಿನಗಳಲ್ಲಿ ಭೂಕಂಪದಿಂದ ಜನರು ಓಡಿಹೋದದ್ದನ್ನು ಜೆಕರ್ಯನು ನೆನಪಿಸುತ್ತಾನೆಜೆಕ 14:5
    ವಚನಗಳು
    ಜೆಕ 14:5ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
  • ಯೇಸುವಿನ ಮರಣದ ಸಮಯದಲ್ಲಿ ಭೂಮಿಯು ಕಂಪಿಸಿತು, ಬಂಡೆಗಳು ಸೀಳಿದವುಮತ್ತಾ 27:51
    ವಚನಗಳು
    ಮತ್ತಾ 27:51ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
  • ಶತಾಧಿಪತಿಯು ಭೂಕಂಪವನ್ನು ಕಂಡು ಬಹಳವಾಗಿ ಭಯಪಟ್ಟನುಮತ್ತಾ 27:54
    ವಚನಗಳು
    ಮತ್ತಾ 27:54ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
  • ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟಾಗ ಮಹಾ ಭೂಕಂಪಮತ್ತಾ 28:2
    ವಚನಗಳು
    ಮತ್ತಾ 28:2ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
  • ವಿಶ್ವಾಸಿಗಳು ಪ್ರಾರ್ಥಿಸಿದ ಸ್ಥಳವು ಕದಲಿತುಅ. ಕೃ 4:31
    ವಚನಗಳು
    ಅ. ಕೃ 4:31ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
  • ಫಿಲಿಪ್ಪಿಯಲ್ಲಿ ಭೂಕಂಪವು ಸೆರೆಮನೆಯ ಬಾಗಿಲುಗಳನ್ನು ತೆರೆಯಿತುಅ. ಕೃ 16:26
    ವಚನಗಳು
    ಅ. ಕೃ 16:26ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು