Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಶವಕ್ಕೆ ಸುಗಂಧದ್ರವ್ಯ ಹಾಕುವುದು ಮತ್ತು ಶವಸಂಸ್ಕಾರದ ಸುಗಂಧಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಶವಕ್ಕೆ ಸುಗಂಧದ್ರವ್ಯ ಹಾಕುವುದು ಮತ್ತು ಶವಸಂಸ್ಕಾರದ ಸುಗಂಧಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 18 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಯೋಸೇಫನು ತನ್ನ ತಂದೆಯಾದ ಯಾಕೋಬನ ಶವಕ್ಕೆ ತನ್ನ ವೈದ್ಯರಿಂದ ಸುಗಂಧದ್ರವ್ಯ ಹಾಕಿಸಿದನುಆದಿ 50:2
    ವಚನಗಳು
    ಆದಿ 50:2ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
  • ಸುಗಂಧದ್ರವ್ಯ ಹಾಕಲು ನಾಲ್ವತ್ತು ದಿನಗಳು ಬೇಕಾದವು; ಐಗುಪ್ತ್ಯರು ಎಪ್ಪತ್ತು ದಿನ ಗೋಳಾಡಿದರುಆದಿ 50:3
    ವಚನಗಳು
    ಆದಿ 50:3ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
  • ಯೋಸೇಫನು 110ನೆಯ ವಯಸ್ಸಿನಲ್ಲಿ ಸತ್ತನು; ಅವನ ಶವಕ್ಕೆ ಸುಗಂಧದ್ರವ್ಯ ಹಾಕಿ ಐಗುಪ್ತದಲ್ಲಿ ಶವಪೆಟ್ಟಿಗೆಯಲ್ಲಿ ಇಡಲಾಯಿತುಆದಿ 50:26
    ವಚನಗಳು
    ಆದಿ 50:26ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
  • ಯೋಸೇಫನು ಕೇಳಿಕೊಂಡಂತೆ ಮೋಶೆಯು ಯೋಸೇಫನ ಎಲುಬುಗಳನ್ನು ಐಗುಪ್ತದಿಂದ ತೆಗೆದುಕೊಂಡು ಹೋದನುವಿಮೋ 13:19
    ವಚನಗಳು
    ವಿಮೋ 13:19ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
  • ಯಾಕೋಬನು ಕೊಂಡುಕೊಂಡಿದ್ದ ಹೊಲದಲ್ಲಿ, ಶೆಕೆಮಿನಲ್ಲಿ ಅವನ ಎಲುಬುಗಳನ್ನು ಹೂಣಿಡಲಾಯಿತುಯೆಹೋ 24:32
    ವಚನಗಳು
    ಯೆಹೋ 24:32ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.

ಸುಗಂಧಗಳು ಮತ್ತು ನಾರುಬಟ್ಟೆ

  • ಅರಸನಾದ ಆಸನನ್ನು ಸುಗಂಧದ್ರವ್ಯಗಳೂ ಮಿಶ್ರ ಪರಿಮಳಗಳೂ ತುಂಬಿದ ಚಟ್ಟದ ಮೇಲೆ ಮಲಗಿಸಲಾಯಿತು2 ಪೂರ್ವ 16:14
    ವಚನಗಳು
    2 ಪೂರ್ವ 16:14ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
  • ಆಸನ ಗೌರವಾರ್ಥವಾಗಿ ದೊಡ್ಡ ಬೆಂಕಿಯನ್ನು ಹಾಕಲಾಯಿತು; ಯೆಹೋರಾಮನಿಗಾಗಿ ಹಾಕಲಿಲ್ಲ2 ಪೂರ್ವ 16:14, 2 ಪೂರ್ವ 21:19
    ವಚನಗಳು
    2 ಪೂರ್ವ 16:14ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
    2 ಪೂರ್ವ 21:19ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
  • ಮಾರ್ಥಳು: “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು”ಯೋಹಾ 11:39
    ವಚನಗಳು
    ಯೋಹಾ 11:39ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
  • ಲಾಜರನು ನಾರುಬಟ್ಟೆಯ ಪಟ್ಟಿಗಳಿಂದ ಕಟ್ಟಲ್ಪಟ್ಟು, ಮುಖಕ್ಕೆ ವಸ್ತ್ರ ಸುತ್ತಿದ್ದ ಸ್ಥಿತಿಯಲ್ಲಿ ಹೊರಗೆ ಬಂದನುಯೋಹಾ 11:44
    ವಚನಗಳು
    ಯೋಹಾ 11:44ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
  • ಯೇಸು: ಅವಳು ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹಕ್ಕೆ ತೈಲ ಹಚ್ಚಿದ್ದಾಳೆಮಾರ್ಕ 14:8, ಯೋಹಾ 12:7
    ವಚನಗಳು
    ಮಾರ್ಕ 14:8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
    ಯೋಹಾ 12:7ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
  • ನಿಕೊದೇಮನು ಬಹಳ ಮಟ್ಟಿಗೆ ರಕ್ತಬೋಳವನ್ನೂ ಅಗರನ್ನೂ ತಂದನುಯೋಹಾ 19:39
    ವಚನಗಳು
    ಯೋಹಾ 19:39ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
  • ಯೆಹೂದ್ಯರ ಶವಸಂಸ್ಕಾರದ ಪದ್ಧತಿಯಂತೆ ಯೇಸುವಿನ ದೇಹವನ್ನು ಸುಗಂಧಗಳೊಂದಿಗೆ ನಾರುಬಟ್ಟೆಯಲ್ಲಿ ಸುತ್ತಲಾಯಿತುಯೋಹಾ 19:40
    ವಚನಗಳು
    ಯೋಹಾ 19:40ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
  • ಸ್ತ್ರೀಯರು ಸುಗಂಧದ್ರವ್ಯಗಳನ್ನೂ ಪರಿಮಳ ತೈಲಗಳನ್ನೂ ಸಿದ್ಧಮಾಡಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರುಲೂಕ 23:55–56
    ವಚನಗಳು
    ಲೂಕ 23:55–56ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ, ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.
  • ಸಬ್ಬತ್ ದಿನ ಕಳೆದ ಮೇಲೆ ದೇಹಕ್ಕೆ ಹಚ್ಚಲು ಅವರು ಸುಗಂಧದ್ರವ್ಯಗಳನ್ನು ಕೊಂಡುಕೊಂಡರುಮಾರ್ಕ 16:1
    ವಚನಗಳು
    ಮಾರ್ಕ 16:1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
  • ವಾರದ ಮೊದಲನೆಯ ದಿನ ಬಹಳ ಮುಂಜಾನೆ ಅವರು ಸುಗಂಧದ್ರವ್ಯಗಳನ್ನು ಸಮಾಧಿಗೆ ತಂದರುಲೂಕ 24:1
    ವಚನಗಳು
    ಲೂಕ 24:1ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
  • ಪೇತ್ರನು ನಾರುಬಟ್ಟೆಗಳನ್ನೂ ಬೇರೆಯಾಗಿ ಸುತ್ತಿಟ್ಟಿದ್ದ ತಲೆವಸ್ತ್ರವನ್ನೂ ಕಂಡನುಯೋಹಾ 20:6–7
    ವಚನಗಳು
    ಯೋಹಾ 20:6–7ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು