Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕ್ಷಾಮಗಳು ಮತ್ತು ಬರಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಕ್ಷಾಮಗಳು ಮತ್ತು ಬರಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 33 ವಾಕ್ಯಭಾಗಗಳು, ಸಾಲು ಸಾಲಾಗಿ.

ಆದಿಕಾಂಡದಲ್ಲಿ

  • ಕ್ಷಾಮವು ಬಹಳ ಘೋರವಾಗಿದ್ದುದರಿಂದ ಅಬ್ರಾಮನು ಐಗುಪ್ತಕ್ಕೆ ಇಳಿದುಹೋದನುಆದಿ 12:10
    ವಚನಗಳು
    ಆದಿ 12:10ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
  • ಇನ್ನೊಂದು ಕ್ಷಾಮದಲ್ಲಿ ಇಸಾಕನು ಐಗುಪ್ತಕ್ಕೆ ಅಲ್ಲ, ಗೆರಾರಿಗೆ ಹೋದನುಆದಿ 26:1–2
    ವಚನಗಳು
    ಆದಿ 26:1–2ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು. ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
  • ಐಗುಪ್ತದಲ್ಲಿ ಏಳು ವರ್ಷ ಸಮೃದ್ಧಿ, ಆ ಮೇಲೆ ಏಳು ವರ್ಷ ಕ್ಷಾಮಆದಿ 41:29–30, ಆದಿ 41:54
    ವಚನಗಳು
    ಆದಿ 41:29–30ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು. ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
    ಆದಿ 41:54ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
  • ಯೋಸೇಫನು ಸಮುದ್ರದ ಮರಳಿನಂತೆ ಧಾನ್ಯವನ್ನು ಕೂಡಿಸಿಟ್ಟನುಆದಿ 41:48–49
    ವಚನಗಳು
    ಆದಿ 41:48–49ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು. ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
  • ಧಾನ್ಯವನ್ನು ಕೊಂಡುಕೊಳ್ಳಲು ಎಲ್ಲಾ ದೇಶದವರು ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರುಆದಿ 41:56–57
    ವಚನಗಳು
    ಆದಿ 41:56–57ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು. ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
  • ಧಾನ್ಯವನ್ನು ಕೊಂಡುಕೊಳ್ಳಲು ಯೋಸೇಫನ ಹತ್ತು ಮಂದಿ ಅಣ್ಣಂದಿರು ಇಳಿದುಹೋದರುಆದಿ 42:1–3
    ವಚನಗಳು
    ಆದಿ 42:1–3ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?” “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು. ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
  • ಎರಡು ವರ್ಷ ಕ್ಷಾಮ, ಇನ್ನೂ ಐದು ವರ್ಷ ಉಳುವುದೂ ಕೊಯ್ಯುವುದೂ ಇಲ್ಲಆದಿ 45:6
    ವಚನಗಳು
    ಆದಿ 45:6ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
  • ಐಗುಪ್ತ್ಯರು ಆಹಾರಕ್ಕಾಗಿ ಹಣವನ್ನು, ಆ ಮೇಲೆ ತಮ್ಮ ಪಶುಗಳನ್ನು ಕೊಟ್ಟರುಆದಿ 47:13–17
    ವಚನಗಳು
    ಆದಿ 47:13–17ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು. ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು. ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
  • ಆ ಮೇಲೆ ತಮ್ಮ ಹೊಲಗಳನ್ನು ಮಾರಿದರು, ಭೂಮಿಯು ಫರೋಹನದಾಯಿತುಆದಿ 47:19–20
    ವಚನಗಳು
    ಆದಿ 47:19–20“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು. ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
  • ಅಂದಿನಿಂದ ಬೆಳೆಯಲ್ಲಿ ಐದನೆಯ ಒಂದು ಭಾಗ ಫರೋಹನಿಗೆ ಹೋಗುತ್ತಿತ್ತುಆದಿ 47:23–24
    ವಚನಗಳು
    ಆದಿ 47:23–24ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ. ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.

ಇಸ್ರಾಯೇಲಿನಲ್ಲಿ

  • ನ್ಯಾಯಸ್ಥಾಪಕರ ದಿನಗಳಲ್ಲಿ ಬೇತ್ಲೆಹೇಮಿನ ಒಂದು ಕುಟುಂಬವು ಮೋವಾಬಿಗೆ ಹೋಯಿತುರೂತ 1:1
    ವಚನಗಳು
    ರೂತ 1:1ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
  • ಮತ್ತೆ ಆಹಾರವಿದೆ ಎಂದು ಕೇಳಿ ನವೊಮಿಯು ಮನೆಗೆ ಹಿಂದಿರುಗಿದಳುರೂತ 1:6
    ವಚನಗಳು
    ರೂತ 1:6ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
  • ದಾವೀದನ ಕಾಲದಲ್ಲಿ ಮೂರು ವರ್ಷ ಒಂದರ ಮೇಲೊಂದು ಕ್ಷಾಮವಿತ್ತು2 ಸಮು 21:1
    ವಚನಗಳು
    2 ಸಮು 21:1ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
  • ಎಲೀಯನು ಅಹಾಬನಿಗೆ: ನನ್ನ ಮಾತಿಲ್ಲದೆ ಮಂಜಾಗಲಿ ಮಳೆಯಾಗಲಿ ಬೀಳುವುದಿಲ್ಲ1 ಅರಸು 17:1
    ವಚನಗಳು
    1 ಅರಸು 17:1ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
  • ಕಾಗೆಗಳು ಎಲೀಯನಿಗೆ ಬೆಳಿಗ್ಗೆಯೂ ಸಾಯಂಕಾಲವೂ ರೊಟ್ಟಿಯನ್ನೂ ಮಾಂಸವನ್ನೂ ತಂದವು1 ಅರಸು 17:6
    ವಚನಗಳು
    1 ಅರಸು 17:6ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
  • ವಿಧವೆಯ ಮಡಕೆಯ ಹಿಟ್ಟೂ ಕುಡಿಕೆಯ ಎಣ್ಣೆಯೂ ಮುಗಿದುಹೋಗಲಿಲ್ಲ1 ಅರಸು 17:14–16
    ವಚನಗಳು
    1 ಅರಸು 17:14–16ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
  • ಮೂರನೆಯ ವರ್ಷದಲ್ಲಿ ಸಮಾರ್ಯದಲ್ಲಿ ಕ್ಷಾಮವು ಘೋರವಾಗಿತ್ತು1 ಅರಸು 18:1–2
    ವಚನಗಳು
    1 ಅರಸು 18:1–2ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು. ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,
  • ಕುದುರೆಗಳಿಗೂ ಹೇಸರಗತ್ತೆಗಳಿಗೂ ಹುಲ್ಲನ್ನು ಹುಡುಕಲು ಅಹಾಬನು ಓಬದ್ಯನನ್ನು ಕಳುಹಿಸಿದನು1 ಅರಸು 18:5
    ವಚನಗಳು
    1 ಅರಸು 18:5ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
  • ಆ ಮೇಲೆ ನೆನಪಿಸಿಕೊಳ್ಳಲಾಯಿತು: ಮೂರುವರೆ ವರ್ಷ ಮಳೆಯಿರಲಿಲ್ಲಲೂಕ 4:25, ಯಾಕೋ 5:17
    ವಚನಗಳು
    ಲೂಕ 4:25ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
    ಯಾಕೋ 5:17ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
  • ಗಿಲ್ಗಾಲಿನಲ್ಲಿ ಕ್ಷಾಮ: ಅಡಿಗೆಯಲ್ಲಿ ಕಾಡುಸೋರೆಕಾಯಿಗಳು, “ಪಾತ್ರೆಯಲ್ಲಿ ವಿಷ”2 ಅರಸು 4:38–40
    ವಚನಗಳು
    2 ಅರಸು 4:38–40ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು. ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ. ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
  • ಶೂನೇಮ್ಯಳು ಕ್ಷಾಮದಲ್ಲಿ ಏಳು ವರ್ಷ ಫಿಲಿಷ್ಟಿಯರ ನಡುವೆ ವಾಸಿಸಿದಳು2 ಅರಸು 8:1–3
    ವಚನಗಳು
    2 ಅರಸು 8:1–3ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು. ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು. ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.
  • ಕುಷ್ಠರೋಗಿಗಳಾದ ನಾಲ್ಕು ಮಂದಿ ಸಮಾರ್ಯದ ಹೊರಗಿದ್ದ ಅರಾಮ್ಯರ ಪಾಳೆಯವನ್ನು ಬರಿದಾಗಿ ಕಂಡರು2 ಅರಸು 7:3–5
    ವಚನಗಳು
    2 ಅರಸು 7:3–5ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ? ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು. ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
  • ಆಗ ಒಂದು ಸೆಯಾ ನಯವಾದ ಹಿಟ್ಟು ಒಂದು ಶೆಕೆಲಿಗೆ ಮಾರಲ್ಪಟ್ಟಿತು2 ಅರಸು 7:16
    ವಚನಗಳು
    2 ಅರಸು 7:16ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
  • ಯೆರೂಸಲೇಮಿನ ಮುತ್ತಿಗೆಯಲ್ಲಿ ದೇಶದ ಜನರಿಗೆ ಆಹಾರವಿರಲಿಲ್ಲ2 ಅರಸು 25:3, ಯೆರೆ 52:6
    ವಚನಗಳು
    2 ಅರಸು 25:3ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
    ಯೆರೆ 52:6ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
  • ಯೆರೆಮೀಯನು: ನೆಲವು ಬಿರುಕುಬಿಟ್ಟಿತು; ಹುಲ್ಲಿಲ್ಲದ್ದರಿಂದ ಜಿಂಕೆಯು ತನ್ನ ಮರಿಯನ್ನು ಬಿಟ್ಟುಹೋಗುತ್ತದೆಯೆರೆ 14:4–5
    ವಚನಗಳು
    ಯೆರೆ 14:4–5ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ. ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
  • ಪ್ರಲಾಪಗಳು: ಚಿಕ್ಕ ಮಕ್ಕಳು ರೊಟ್ಟಿಗಾಗಿ ಬೇಡುತ್ತಾರೆಪ್ರಲಾ 4:4
    ವಚನಗಳು
    ಪ್ರಲಾ 4:4ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
  • ನೆಹೆಮೀಯನ ಕಾಲದಲ್ಲಿ ಜನರು ಧಾನ್ಯವನ್ನು ಕೊಳ್ಳಲು ಹೊಲಗಳನ್ನೂ ಮನೆಗಳನ್ನೂ ಅಡವಿಟ್ಟರುನೆಹೆ 5:3
    ವಚನಗಳು
    ನೆಹೆ 5:3ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.

ಹೊಸ ಒಡಂಬಡಿಕೆಯಲ್ಲಿ

  • ಯೇಸು ಹೇಳಿದ ಕಥೆಯಲ್ಲಿ ಘೋರ ಕ್ಷಾಮವು ಕಿರಿಯ ಮಗನನ್ನು ಕೊರತೆಗೆ ತಳ್ಳುತ್ತದೆಲೂಕ 15:14
    ವಚನಗಳು
    ಲೂಕ 15:14ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.
  • ಅಗಬನು ದೊಡ್ಡ ಕ್ಷಾಮವನ್ನು ಮುಂತಿಳಿಸಿದನು; ಅದು ಕ್ಲೌದ್ಯನ ಕಾಲದಲ್ಲಿ ಬಂತುಅ. ಕೃ 11:28
    ವಚನಗಳು
    ಅ. ಕೃ 11:28ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
  • ಶಿಷ್ಯರು ಬಾರ್ನಬ ಮತ್ತು ಸೌಲರ ಮೂಲಕ ಯೂದಾಯಕ್ಕೆ ಸಹಾಯವನ್ನು ಕಳುಹಿಸಿದರುಅ. ಕೃ 11:29–30
    ವಚನಗಳು
    ಅ. ಕೃ 11:29–30ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು. ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು