ದೈನಂದಿನ ಜೀವನ
ಬೈಬಲಿನಲ್ಲಿ ವ್ಯವಸಾಯ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 37 ವಾಕ್ಯಭಾಗಗಳು, ಸಾಲು ಸಾಲಾಗಿ.
- ಏದೆನ್ ತೋಟವನ್ನು ವ್ಯವಸಾಯಮಾಡಿ ಕಾಯಲು ಮನುಷ್ಯನನ್ನು ಅದರಲ್ಲಿ ಇರಿಸಲಾಗುತ್ತದೆಆದಿ 2:15
ವಚನಗಳು
ಆದಿ 2:15ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
- ಕಾಯಿನನು ಭೂಮಿಯನ್ನು ವ್ಯವಸಾಯಮಾಡುವವನು; ಹೇಬೆಲನು ಕುರಿಗಳನ್ನು ಕಾಯುವವನುಆದಿ 4:2
ವಚನಗಳು
ಆದಿ 4:2ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
- ವ್ಯವಸಾಯಗಾರನಾದ ನೋಹನು ದ್ರಾಕ್ಷಿತೋಟವನ್ನು ಮಾಡುತ್ತಾನೆಆದಿ 9:20
ವಚನಗಳು
ಆದಿ 9:20ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
- ಇಸಾಕನು ಬಿತ್ತಿ ಆ ವರ್ಷ ನೂರರಷ್ಟು ಬೆಳೆಯನ್ನು ಕೊಯ್ಯುತ್ತಾನೆಆದಿ 26:12
ವಚನಗಳು
ಆದಿ 26:12ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
- ರೂತಳು ಕೊಯ್ಯುವವರ ಹಿಂದೆ ಹಕ್ಕಲಾಯುತ್ತಾಳೆ: ಸುಮಾರು ಒಂದು ಏಫಾ ಜವೆಗೋದಿರೂತ 2:2–3, ರೂತ 2:17
ವಚನಗಳು
ರೂತ 2:2–3ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು. ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
ರೂತ 2:17ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
- ಬೋವಜನು ರಾತ್ರಿಯಲ್ಲಿ ಕಣದಲ್ಲಿ ಜವೆಗೋದಿಯನ್ನು ತೂರುತ್ತಾನೆರೂತ 3:2
ವಚನಗಳು
ರೂತ 3:2ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
- ಮಿದ್ಯಾನ್ಯರಿಂದ ಮರೆಮಾಡಲು ಗಿದ್ಯೋನನು ದ್ರಾಕ್ಷಿಯ ಆಲೆಯಲ್ಲಿ ಗೋದಿಯನ್ನು ಬಡಿಯುತ್ತಾನೆನ್ಯಾಯ 6:11
ವಚನಗಳು
ನ್ಯಾಯ 6:11ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
- ಬೇತ್ ಷೆಮೆಷಿನವರು ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದಾರೆ1 ಸಮು 6:13
ವಚನಗಳು
1 ಸಮು 6:13ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.
- ನೇಗಿಲ ಗುಳಗಳನ್ನೂ ಕುಡುಗೋಲುಗಳನ್ನೂ ಹರಿತಮಾಡಿಸಲು ಇಸ್ರಾಯೇಲ್ಯರು ಫಿಲಿಷ್ಟಿಯರ ಬಳಿಗೆ ಹೋಗುತ್ತಾರೆ1 ಸಮು 13:19–21
ವಚನಗಳು
1 ಸಮು 13:19–21ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ. ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು. ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.
- ಎಲೀಷನು ಹನ್ನೆರಡು ಜೋಡಿ ಎತ್ತುಗಳಿಂದ ಉಳುತ್ತಿದ್ದಾನೆ1 ಅರಸು 19:19
ವಚನಗಳು
1 ಅರಸು 19:19ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
- ಹೊಲಗಳು, ದ್ರಾಕ್ಷಿತೋಟಗಳು, ಎಣ್ಣೆಮರಗಳು ಮತ್ತು ದನಗಳ ಮೇಲೆ ದಾವೀದನ ಅಧಿಕಾರಿಗಳು1 ಪೂರ್ವ 27:26–31
ವಚನಗಳು
1 ಪೂರ್ವ 27:26–31ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ, ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ, ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್, ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು, ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ, ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.
- ವ್ಯವಸಾಯವನ್ನು ಪ್ರೀತಿಸುತ್ತಿದ್ದ ಉಜ್ಜೀಯನಿಗೆ ಒಕ್ಕಲಿಗರೂ ದ್ರಾಕ್ಷಿತೋಟಗಾರರೂ ಇದ್ದರು2 ಪೂರ್ವ 26:10
ವಚನಗಳು
2 ಪೂರ್ವ 26:10ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
- ಸೊಲೊಮೋನನು ದ್ರಾಕ್ಷಿತೋಟಗಳನ್ನೂ ಹಣ್ಣಿನ ತೋಟಗಳನ್ನೂ ಮಾಡಿ ಕೊಳಗಳನ್ನು ಕಟ್ಟಿಸುತ್ತಾನೆಪ್ರಸ 2:4–6
ವಚನಗಳು
ಪ್ರಸ 2:4–6ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು. ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು. ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.
- ಉಳುವುದು, ಸಾಲಾಗಿ ಬಿತ್ತುವುದು, ಪ್ರತಿಯೊಂದು ಬೆಳೆಯನ್ನು ಅದರದರ ರೀತಿಯಲ್ಲಿ ಬಡಿಯುವುದುಯೆಶಾ 28:24–28
ವಚನಗಳು
ಯೆಶಾ 28:24–28ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ? ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ? ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ. ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ. ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
- ವ್ಯವಸಾಯಮಾಡುವವನು ಮುಂಗಾರು, ಹಿಂಗಾರು ಮಳೆಗಳಿಗಾಗಿ ಕಾಯುತ್ತಾನೆಯಾಕೋ 5:7
ವಚನಗಳು
ಯಾಕೋ 5:7ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
- ಹೊಲಗಳ ನಡುವೆ ನಡೆಯುತ್ತಾ ಶಿಷ್ಯರು ತೆನೆಗಳನ್ನು ಕೀಳುತ್ತಾರೆಮತ್ತಾ 12:1
ವಚನಗಳು
ಮತ್ತಾ 12:1ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
- ದಾರಿಯಲ್ಲಿ, ಬಂಡೆಯ ಮೇಲೆ, ಮುಳ್ಳುಗಳ ನಡುವೆ, ಒಳ್ಳೆಯ ನೆಲದಲ್ಲಿ ಬಿದ್ದ ಬೀಜ (ಸಾಮ್ಯ)ಮತ್ತಾ 13:3–8
ವಚನಗಳು
ಮತ್ತಾ 13:3–8ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು. ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
- ದಿನಕ್ಕೆ ಒಂದು ದಿನಾರಿಗೆ ದ್ರಾಕ್ಷಿತೋಟಕ್ಕೆ ಕೂಲಿಯವರು (ಸಾಮ್ಯ)ಮತ್ತಾ 20:1–2
ವಚನಗಳು
ಮತ್ತಾ 20:1–2“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
ಧರ್ಮಶಾಸ್ತ್ರದಲ್ಲಿ
- ಆರು ವರ್ಷ ಬಿತ್ತು; ಏಳನೆಯ ವರ್ಷದಲ್ಲಿ ಭೂಮಿಗೆ ವಿಶ್ರಾಂತಿವಿಮೋ 23:10–11, ಯಾಜ 25:3–5
ವಚನಗಳು
ವಿಮೋ 23:10–11ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ. ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.
ಯಾಜ 25:3–5ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು. ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
- ಉಳುವ ಮತ್ತು ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸುವಿಮೋ 34:21
ವಚನಗಳು
ವಿಮೋ 34:21“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.
- ಹೊಲದ ಅಂಚುಗಳನ್ನೂ ಉದುರಿದ ದ್ರಾಕ್ಷಿಗಳನ್ನೂ ಬಡವರಿಗಾಗಿ ಬಿಡುಯಾಜ 19:9–10
ವಚನಗಳು
ಯಾಜ 19:9–10“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು. ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
- ಮರೆತ ಸಿವುಡನ್ನು ಪರದೇಶಿಗೂ ತಂದೆಯಿಲ್ಲದವನಿಗೂ ವಿಧವೆಗೂ ಬಿಡಲಾಗುತ್ತದೆಧರ್ಮೋ 24:19–21
ವಚನಗಳು
ಧರ್ಮೋ 24:19–21ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
- ಎರಡು ವಿಧದ ಬೀಜ ಬೇಡ; ಎತ್ತನ್ನೂ ಕತ್ತೆಯನ್ನೂ ಒಟ್ಟಿಗೆ ಹೂಡಬಾರದುಯಾಜ 19:19, ಧರ್ಮೋ 22:9–10
ವಚನಗಳು
ಯಾಜ 19:19“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
ಧರ್ಮೋ 22:9–10ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು. ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.
- ಹೊಸದಾಗಿ ನೆಟ್ಟ ಮರದ ಹಣ್ಣನ್ನು ಮೂರು ವರ್ಷ ತಿನ್ನಬಾರದುಯಾಜ 19:23–25
ವಚನಗಳು
ಯಾಜ 19:23–25“‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು. ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು. ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
- ದಾರಿತಪ್ಪಿದ ಪಶುಗಳಿಗೂ ಹೊಲದ ಬೆಂಕಿಗೂ ನಷ್ಟಪರಿಹಾರವಿಮೋ 22:5–6
ವಚನಗಳು
ವಿಮೋ 22:5–6ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು. ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.
- ನೆರೆಯವನ ದ್ರಾಕ್ಷಿತೋಟದಲ್ಲಿ ಹೊಟ್ಟೆತುಂಬಾ ತಿನ್ನು, ಆದರೆ ಬುಟ್ಟಿಯನ್ನು ತುಂಬಬೇಡಧರ್ಮೋ 23:24–25
ವಚನಗಳು
ಧರ್ಮೋ 23:24–25ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು. ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.
- ಕಣ ತುಳಿಯುವ ಎತ್ತಿನ ಬಾಯಿ ಕಟ್ಟಬಾರದುಧರ್ಮೋ 25:4
ವಚನಗಳು
ಧರ್ಮೋ 25:4ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.
- ತನ್ನ ಹೊಸ ದ್ರಾಕ್ಷಿತೋಟದ ಫಲವನ್ನು ಇನ್ನೂ ಅನುಭವಿಸದವನು ಯುದ್ಧದಿಂದ ಮನೆಗೆ ಹೋಗುತ್ತಾನೆಧರ್ಮೋ 20:6
ವಚನಗಳು
ಧರ್ಮೋ 20:6ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
ನುಡಿಗಳು
- ತನ್ನ ಭೂಮಿಯನ್ನು ವ್ಯವಸಾಯಮಾಡುವವನಿಗೆ ಹೇರಳವಾಗಿ ಆಹಾರ ಸಿಗುವುದುಜ್ಞಾನೋ 12:11
ವಚನಗಳು
ಜ್ಞಾನೋ 12:11ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
- ಮುಳ್ಳುಗಳಿಂದ ತುಂಬಿದ, ಕಲ್ಲಿನ ಗೋಡೆ ಬಿದ್ದುಹೋದ ಸೋಮಾರಿಯ ಹೊಲಜ್ಞಾನೋ 24:30–31
ವಚನಗಳು
ಜ್ಞಾನೋ 24:30–31ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು. ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
- ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು; ಸಾಯಂಕಾಲದಲ್ಲಿಯೂ ಕೈ ಬಿಡಬೇಡಪ್ರಸ 11:6
ವಚನಗಳು
ಪ್ರಸ 11:6ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
- ನಿನ್ನ ಕುರಿಹಿಂಡುಗಳ ಮತ್ತು ದನಗಳ ಸ್ಥಿತಿಯನ್ನು ತಿಳಿದುಕೋಜ್ಞಾನೋ 27:23–27
ವಚನಗಳು
ಜ್ಞಾನೋ 27:23–27ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು. ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ? ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು. ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು. ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.
- ಕಡಿಮೆಯಾಗಿ ಬಿತ್ತುವವನು ಕಡಿಮೆಯಾಗಿಯೇ ಕೊಯ್ಯುವನು2 ಕೊರಿ 9:6
ವಚನಗಳು
2 ಕೊರಿ 9:6ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
- ಕಷ್ಟಪಟ್ಟು ದುಡಿಯುವ ವ್ಯವಸಾಯಗಾರನೇ ಮೊದಲು ಬೆಳೆಯಲ್ಲಿ ಪಾಲು ಪಡೆಯಬೇಕು2 ತಿಮೊ 2:6
ವಚನಗಳು
2 ತಿಮೊ 2:6ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು