ದೈನಂದಿನ ಜೀವನ
ಬೈಬಲಿನಲ್ಲಿ ಉಪವಾಸ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 40 ವಾಕ್ಯಭಾಗಗಳು, ಸಾಲು ಸಾಲಾಗಿ.
ಶೋಕದಲ್ಲಿಯೂ ದುಃಖದಲ್ಲಿಯೂ
- ಯಾಬೇಷಿನವರು ಸೌಲನ ಎಲುಬುಗಳನ್ನು ಹೂಣಿಟ್ಟು ಏಳು ದಿನ ಉಪವಾಸಮಾಡುತ್ತಾರೆ1 ಸಮು 31:13
ವಚನಗಳು
1 ಸಮು 31:13ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
- ದಾವೀದನೂ ಅವನ ಜನರೂ ಸೌಲನಿಗಾಗಿಯೂ ಯೋನಾತಾನನಿಗಾಗಿಯೂ ಸಾಯಂಕಾಲದ ವರೆಗೆ ಉಪವಾಸಮಾಡುತ್ತಾರೆ2 ಸಮು 1:12
ವಚನಗಳು
2 ಸಮು 1:12ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.
- ಅಬ್ನೇರನ ಮರಣದ ನಂತರ ದಾವೀದನು ಸೂರ್ಯಾಸ್ತದ ವರೆಗೆ ಊಟಮಾಡಲು ಒಪ್ಪುವುದಿಲ್ಲ2 ಸಮು 3:35
ವಚನಗಳು
2 ಸಮು 3:35ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
- ಅಸ್ವಸ್ಥವಾದ ಮಗುವಿಗಾಗಿ ದಾವೀದನು ಉಪವಾಸಮಾಡುತ್ತಾನೆ, ಮಗು ಸತ್ತ ಮೇಲೆ ಊಟಮಾಡುತ್ತಾನೆ2 ಸಮು 12:16–23
ವಚನಗಳು
2 ಸಮು 12:16–23ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು. ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ. ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು. ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು. ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು. ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು. ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
- ಯೆರೂಸಲೇಮಿನ ಸುದ್ದಿಯನ್ನು ಕೇಳಿ ನೆಹೆಮೀಯನು ಕೆಲವು ದಿನ ಉಪವಾಸಮಾಡುತ್ತಾ ದುಃಖಿಸುತ್ತಾನೆನೆಹೆ 1:4
ವಚನಗಳು
ನೆಹೆ 1:4ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
- ಎಜ್ರನು ದುಃಖಿಸುತ್ತಾ ಅನ್ನವನ್ನು ತಿನ್ನುವುದಿಲ್ಲ, ನೀರನ್ನು ಕುಡಿಯುವುದಿಲ್ಲಎಜ್ರ 10:6
ವಚನಗಳು
ಎಜ್ರ 10:6ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
- ಇತರರು ಅಸ್ವಸ್ಥರಾಗಿದ್ದಾಗ ಕೀರ್ತನೆಗಾರನು ಗೋಣಿತಟ್ಟು ಧರಿಸಿ ಉಪವಾಸಮಾಡಿದನುಕೀರ್ತ 35:13
ವಚನಗಳು
ಕೀರ್ತ 35:13ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
ಅಪಾಯದಲ್ಲಿಯೂ ಸಂಕಟದಲ್ಲಿಯೂ
- ಎಸ್ತೇರಳು: “ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ”ಎಸ್ತೇ 4:16
ವಚನಗಳು
ಎಸ್ತೇ 4:16ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.
- ಯೆಹೋಷಾಫಾಟನು ಯೆಹೂದ ದೇಶದಲ್ಲೆಲ್ಲಾ ಉಪವಾಸವನ್ನು ಪ್ರಕಟಿಸುತ್ತಾನೆ2 ಪೂರ್ವ 20:3
ವಚನಗಳು
2 ಪೂರ್ವ 20:3ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
- ಸುರಕ್ಷಿತ ಪ್ರಯಾಣಕ್ಕಾಗಿ ಎಜ್ರನು ಅಹವಾ ಕಾಲುವೆಯ ಬಳಿ ಉಪವಾಸವನ್ನು ಪ್ರಕಟಿಸುತ್ತಾನೆಎಜ್ರ 8:21–23
ವಚನಗಳು
ಎಜ್ರ 8:21–23ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು. ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು. ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
- ಬೆನ್ಯಾಮೀನ್ಯರೊಂದಿಗಿನ ಯುದ್ಧದ ಸಮಯದಲ್ಲಿ ಇಸ್ರಾಯೇಲರು ಬೇತೇಲಿನಲ್ಲಿ ಅತ್ತು ಉಪವಾಸಮಾಡುತ್ತಾರೆನ್ಯಾಯ 20:26
ವಚನಗಳು
ನ್ಯಾಯ 20:26ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
- ಮಿಚ್ಪದಲ್ಲಿ ಜನರು ನೀರನ್ನು ಹೊಯ್ದು ಉಪವಾಸಮಾಡುತ್ತಾರೆ1 ಸಮು 7:6
ವಚನಗಳು
1 ಸಮು 7:6ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
- ಇಸ್ರಾಯೇಲರು ಉಪವಾಸದಿಂದ, ಗೋಣಿತಟ್ಟು ಧರಿಸಿ, ತಲೆಯ ಮೇಲೆ ಧೂಳು ಹಾಕಿಕೊಂಡು ಕೂಡಿಬರುತ್ತಾರೆನೆಹೆ 9:1
ವಚನಗಳು
ನೆಹೆ 9:1ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.
- ಅಹಾಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟು ಧರಿಸಿ ಉಪವಾಸಮಾಡುತ್ತಾನೆ1 ಅರಸು 21:27
ವಚನಗಳು
1 ಅರಸು 21:27ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.
- ಯೆಹೋಯಾಕೀಮನ ಕಾಲದಲ್ಲಿ ಯೆರೂಸಲೇಮಿನಲ್ಲಿ ಉಪವಾಸವನ್ನು ಪ್ರಕಟಿಸಲಾಗುತ್ತದೆಯೆರೆ 36:9
ವಚನಗಳು
ಯೆರೆ 36:9ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
- ದಾನಿಯೇಲನು ಸಿಂಹಗಳ ನಡುವೆ ಇರುವಾಗ ಅರಸನಾದ ದಾರ್ಯಾವೆಷನು ರಾತ್ರಿಯೆಲ್ಲಾ ಉಪವಾಸದಿಂದಿರುತ್ತಾನೆದಾನಿ 6:18
ವಚನಗಳು
ದಾನಿ 6:18ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
- ದಾನಿಯೇಲನು ಉಪವಾಸದಿಂದಲೂ ಗೋಣಿತಟ್ಟು ಮತ್ತು ಬೂದಿಯಿಂದಲೂ ಪ್ರಾರ್ಥಿಸುತ್ತಾನೆದಾನಿ 9:3
ವಚನಗಳು
ದಾನಿ 9:3ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
- ದಾನಿಯೇಲನು ಮೂರು ವಾರ ಮೃಷ್ಟಾನ್ನವನ್ನಾಗಲಿ ಮಾಂಸವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಸೇವಿಸುವುದಿಲ್ಲದಾನಿ 10:2–3
ವಚನಗಳು
ದಾನಿ 10:2–3ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು. ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
- ನಿನೆವೆಯು ಗೋಣಿತಟ್ಟು ಧರಿಸಿ ಉಪವಾಸಮಾಡುತ್ತದೆ — ದನಕುರಿಗಳೂ ಸಹಯೋನ 3:5–8
ವಚನಗಳು
ಯೋನ 3:5–8ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
- ಸಾಯಂಕಾಲದ ಮೊದಲು ಊಟಮಾಡಬಾರದೆಂದು ಸೌಲನು ತನ್ನ ಸೈನಿಕರಿಗೆ ನಿಷೇಧಿಸುತ್ತಾನೆ1 ಸಮು 14:24
ವಚನಗಳು
1 ಸಮು 14:24ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
- ಪೌಲನನ್ನು ಕೊಲ್ಲುವ ತನಕ ಊಟಮಾಡುವುದಿಲ್ಲವೆಂದು ಅವನ ಶತ್ರುಗಳು ಪ್ರಮಾಣಮಾಡುತ್ತಾರೆಅ. ಕೃ 23:12
ವಚನಗಳು
ಅ. ಕೃ 23:12ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
ನಾಲ್ವತ್ತು ದಿನಗಳು
- ಮೋಶೆಯು ನಾಲ್ವತ್ತು ದಿನ ಹಗಲಿರುಳು ರೊಟ್ಟಿಯೂ ನೀರೂ ಇಲ್ಲದೆವಿಮೋ 34:28, ಧರ್ಮೋ 9:9, ಧರ್ಮೋ 9:18
ವಚನಗಳು
ವಿಮೋ 34:28ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
ಧರ್ಮೋ 9:9ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
ಧರ್ಮೋ 9:18ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
- ಒಂದು ಊಟದ ಬಲದಿಂದ ಎಲೀಯನು ನಾಲ್ವತ್ತು ದಿನ ನಡೆಯುತ್ತಾನೆ1 ಅರಸು 19:8
ವಚನಗಳು
1 ಅರಸು 19:8ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
- ಯೇಸು ನಾಲ್ವತ್ತು ದಿನ ಹಗಲೂ ನಾಲ್ವತ್ತು ರಾತ್ರಿಯೂ ಉಪವಾಸಮಾಡುತ್ತಾನೆಮತ್ತಾ 4:2
ವಚನಗಳು
ಮತ್ತಾ 4:2ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
ಪದ್ಧತಿಗಳು
- ದೋಷಪರಿಹಾರಕ ದಿನ: “ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು”ಯಾಜ 16:29
ವಚನಗಳು
ಯಾಜ 16:29“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
- ನಾಲ್ಕನೆಯ, ಐದನೆಯ, ಏಳನೆಯ ಮತ್ತು ಹತ್ತನೆಯ ತಿಂಗಳುಗಳ ಉಪವಾಸಗಳುಜೆಕ 7:5, ಜೆಕ 8:19
ವಚನಗಳು
ಜೆಕ 7:5“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
ಜೆಕ 8:19ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
- ಯೆಶಾಯನು: ಕೆಲಸಗಾರರನ್ನು ನ್ಯಾಯವಾಗಿ ನಡೆಸುವುದರೊಂದಿಗೆ ಹೊಂದುವ ಉಪವಾಸಯೆಶಾ 58:3–7
ವಚನಗಳು
ಯೆಶಾ 58:3–7“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ. ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ. ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
- ಅನ್ನಳು ಉಪವಾಸದಿಂದಲೂ ಪ್ರಾರ್ಥನೆಯಿಂದಲೂ ಹಗಲಿರುಳು ದೇವರನ್ನು ಆರಾಧಿಸುತ್ತಿದ್ದಳುಲೂಕ 2:37
ವಚನಗಳು
ಲೂಕ 2:37ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
- ಒಬ್ಬ ಫರಿಸಾಯನು: “ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ”ಲೂಕ 18:12
ವಚನಗಳು
ಲೂಕ 18:12ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
- ಯೋಹಾನನ ಶಿಷ್ಯರು ಉಪವಾಸಮಾಡುತ್ತಾರೆ, ಯೇಸುವಿನ ಶಿಷ್ಯರು ಏಕೆ ಮಾಡುವುದಿಲ್ಲ?ಮತ್ತಾ 9:14–15
ವಚನಗಳು
ಮತ್ತಾ 9:14–15ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
- ಯೇಸು: ನೀವು ಉಪವಾಸಮಾಡುವಾಗ ಮುಖವನ್ನು ತೊಳೆದುಕೊಳ್ಳಿರಿಮತ್ತಾ 6:16–18
ವಚನಗಳು
ಮತ್ತಾ 6:16–18“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
- ತಾರ್ಸದ ಸೌಲನು ಮೂರು ದಿನ ಏನನ್ನೂ ತಿನ್ನುವುದಿಲ್ಲ, ಕುಡಿಯುವುದಿಲ್ಲಅ. ಕೃ 9:9
ವಚನಗಳು
ಅ. ಕೃ 9:9ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.
- ಬಾರ್ನಬನನ್ನೂ ಸೌಲನನ್ನೂ ಕಳುಹಿಸುವ ಮೊದಲು ಅಂತಿಯೋಕ್ಯದ ಸಭೆಯು ಉಪವಾಸಮಾಡುತ್ತದೆಅ. ಕೃ 13:2–3
ವಚನಗಳು
ಅ. ಕೃ 13:2–3ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
- ಪ್ರಾರ್ಥನೆ ಮತ್ತು ಉಪವಾಸದೊಂದಿಗೆ ಹಿರಿಯರನ್ನು ನೇಮಿಸಲಾಗುತ್ತದೆಅ. ಕೃ 14:23
ವಚನಗಳು
ಅ. ಕೃ 14:23ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
- ಪೌಲನು ಅನೇಕಸಾರಿ ಆಹಾರವಿಲ್ಲದೆ ಇದ್ದನು2 ಕೊರಿ 11:27
ವಚನಗಳು
2 ಕೊರಿ 11:27ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
- “ಉಪವಾಸದ ದಿನವು” ಮುಗಿದ ನಂತರ ಸಮುದ್ರಪ್ರಯಾಣವು ಅಪಾಯಕರವಾಯಿತುಅ. ಕೃ 27:9
ವಚನಗಳು
ಅ. ಕೃ 27:9ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
- ಪೌಲನ ಸಹಪ್ರಯಾಣಿಕರು ಹದಿನಾಲ್ಕು ದಿನ ಆಹಾರವಿಲ್ಲದೆ ಇರುತ್ತಾರೆಅ. ಕೃ 27:33
ವಚನಗಳು
ಅ. ಕೃ 27:33ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು