ಅನ್ವೇಷಿಸಿ › ವಿಷಯಗಳು › ಹಬ್ಬಗಳು ಮತ್ತು ಔತಣಗಳು
ದೈನಂದಿನ ಜೀವನ
ಬೈಬಲಿನಲ್ಲಿ ಹಬ್ಬಗಳು ಮತ್ತು ಔತಣಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 44 ವಾಕ್ಯಭಾಗಗಳು, ಸಾಲು ಸಾಲಾಗಿ.
ಪದ್ಧತಿಗಳು
- ಯೋಸೇಫನ ಅಣ್ಣಂದಿರನ್ನು ಚೊಚ್ಚಲಿನವನಿಂದ ಕಿರಿಯವನ ವರೆಗೆ ವಯಸ್ಸಿನ ಪ್ರಕಾರ ಕುಳ್ಳಿರಿಸಲಾಗುತ್ತದೆಆದಿ 43:33
ವಚನಗಳು
ಆದಿ 43:33ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
- ಬೆನ್ಯಾಮೀನನ ಪಾಲು ಇತರರ ಪಾಲಿಗಿಂತ ಐದರಷ್ಟು ದೊಡ್ಡದುಆದಿ 43:34
ವಚನಗಳು
ಆದಿ 43:34ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
- ಸಮುವೇಲನು ಮೂವತ್ತು ಅತಿಥಿಗಳ ನಡುವೆ ಸೌಲನನ್ನು ಗೌರವದ ಸ್ಥಾನದಲ್ಲಿ ಕುಳ್ಳಿರಿಸುತ್ತಾನೆ1 ಸಮು 9:22–24
ವಚನಗಳು
1 ಸಮು 9:22–24ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ, “ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು. ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
- ಮದುವೆಯ ಔತಣದಲ್ಲಿ ಗೌರವದ ಸ್ಥಾನದಲ್ಲಿ ಕುಳಿತುಕೊಳ್ಳಬೇಡಲೂಕ 14:8–10
ವಚನಗಳು
ಲೂಕ 14:8–10ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ. ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
- ಅತಿಥಿಗಳು ಮಂಚಗಳ ಮೇಲೆ ಒರಗಿಕೊಳ್ಳುತ್ತಿದ್ದರುಆಮೋ 6:4, ಯೋಹಾ 13:23–25
ವಚನಗಳು
ಆಮೋ 6:4ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
ಯೋಹಾ 13:23–25ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು. ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು. ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
- ಊಟಮಾಡುವವರು ಒಂದೇ ತಟ್ಟೆಯಲ್ಲಿ ಅದ್ದುತ್ತಿದ್ದರುಮತ್ತಾ 26:23
ವಚನಗಳು
ಮತ್ತಾ 26:23ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.
- ಔತಣದ ಮೇಲ್ವಿಚಾರಕನು ದ್ರಾಕ್ಷಾರಸವನ್ನು ರುಚಿನೋಡುತ್ತಾನೆಯೋಹಾ 2:8–10
ವಚನಗಳು
ಯೋಹಾ 2:8–10ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
- ಔತಣಗಳಲ್ಲಿ ಕಿನ್ನರಿ ಮತ್ತು ವೀಣೆ, ದಮ್ಮಡಿ ಮತ್ತು ಕೊಳಲು, ದ್ರಾಕ್ಷಾರಸಯೆಶಾ 5:12, ಆಮೋ 6:5
- ಹಿಂದಿರುಗಿದ ಮಗನಿಗಾಗಿ ಮಾಡಿದ ಔತಣದಲ್ಲಿ ವಾದ್ಯವೂ ನೃತ್ಯವೂಲೂಕ 15:23–25
ವಚನಗಳು
ಲೂಕ 15:23–25ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು. ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
- ಏಳು ದಿನಗಳ ಮದುವೆಯ ಔತಣದಲ್ಲಿ ಸಂಸೋನನು ಒಗಟನ್ನು ಹೇಳುತ್ತಾನೆನ್ಯಾಯ 14:10–12
ವಚನಗಳು
ನ್ಯಾಯ 14:10–12ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು. ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು. ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
- ರಾಣಿಯಾದ ವಷ್ಟಿಯು ಸ್ತ್ರೀಯರಿಗಾಗಿ ಪ್ರತ್ಯೇಕ ಔತಣವನ್ನು ಮಾಡುತ್ತಾಳೆಎಸ್ತೇ 1:9
ವಚನಗಳು
ಎಸ್ತೇ 1:9ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
- ನಗುವಿಗಾಗಿ ಔತಣವನ್ನು ಸಿದ್ಧಮಾಡಲಾಗುತ್ತದೆಪ್ರಸ 10:19
ವಚನಗಳು
ಪ್ರಸ 10:19ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
- ಆಮಂತ್ರಿತ ಅತಿಥಿಗಳು ನೆಪ ಹೇಳುತ್ತಾರೆ (ಸಾಮ್ಯ)ಲೂಕ 14:16–20
ವಚನಗಳು
ಲೂಕ 14:16–20ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು. ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು. ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು. ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.
- ಏನೂ ಸಿದ್ಧಮಾಡಿಕೊಳ್ಳದವರಿಗೆ ಪಾಲುಗಳನ್ನು ಕಳುಹಿಸಿರಿನೆಹೆ 8:10–12
ವಚನಗಳು
ನೆಹೆ 8:10–12ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು. ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು. ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.
- ಯೋಬನ ಮಕ್ಕಳು ಸರದಿಯಂತೆ ಔತಣಮಾಡಿ ತಮ್ಮ ಸಹೋದರಿಯರನ್ನು ಕರೆಯುತ್ತಾರೆಯೋಬ 1:4–5
ವಚನಗಳು
ಯೋಬ 1:4–5ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು. ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
ಸಂದರ್ಭಗಳು
- ಫರೋಹನು ತನ್ನ ಜನ್ಮದಿನದಲ್ಲಿ ಔತಣಮಾಡುತ್ತಾನೆಆದಿ 40:20
ವಚನಗಳು
ಆದಿ 40:20ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.
- ಗಲಿಲಾಯದ ಪ್ರಮುಖರಿಗಾಗಿ ಹೆರೋದನ ಜನ್ಮದಿನದ ಔತಣಮಾರ್ಕ 6:21
ವಚನಗಳು
ಮಾರ್ಕ 6:21ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
- ಇಸಾಕನು ಮೊಲೆಬಿಟ್ಟ ದಿನದಲ್ಲಿ ಅಬ್ರಹಾಮನ ದೊಡ್ಡ ಔತಣಆದಿ 21:8
ವಚನಗಳು
ಆದಿ 21:8ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- ಇಸಾಕನೂ ಅಬೀಮೆಲೆಕನೂ ಔತಣದೊಂದಿಗೆ ಒಡಂಬಡಿಕೆಯನ್ನು ದೃಢಪಡಿಸುತ್ತಾರೆಆದಿ 26:28–30
ವಚನಗಳು
ಆದಿ 26:28–30“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು. ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.
- ಯಾಕೋಬನೂ ಅವನ ಬಂಧುಗಳೂ ಬೆಟ್ಟದ ಮೇಲೆ ಊಟಮಾಡುತ್ತಾರೆಆದಿ 31:54
ವಚನಗಳು
ಆದಿ 31:54ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.
- ದಾವೀದನು ಅಬ್ನೇರನಿಗೂ ಇಪ್ಪತ್ತು ಮಂದಿಗೂ ಔತಣಮಾಡುತ್ತಾನೆ2 ಸಮು 3:20
ವಚನಗಳು
2 ಸಮು 3:20ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.
- ತನ್ನನ್ನು ಅರಸನನ್ನಾಗಿ ಮಾಡುವರೆಂದು ನಿರೀಕ್ಷಿಸಿದವರಿಗಾಗಿ ಅದೋನೀಯನ ಔತಣ1 ಅರಸು 1:25
ವಚನಗಳು
1 ಅರಸು 1:25ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.
- ದಾವೀದನನ್ನು ಅರಸನನ್ನಾಗಿ ಮಾಡಲು ಹೆಬ್ರೋನಿನಲ್ಲಿ ಮೂರು ದಿನ ಅನ್ನಪಾನ1 ಪೂರ್ವ 12:38–40
ವಚನಗಳು
1 ಪೂರ್ವ 12:38–40ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು. ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು. ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.
- ತನ್ನ ಕನಸಿನ ನಂತರ ಸೊಲೊಮೋನನು ತನ್ನ ಎಲ್ಲಾ ಸೇವಕರಿಗೆ ಔತಣಮಾಡುತ್ತಾನೆ1 ಅರಸು 3:15
ವಚನಗಳು
1 ಅರಸು 3:15ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
- ಅಹಷ್ವೇರೋಷನು 180 ದಿನ ತನ್ನ ಐಶ್ವರ್ಯವನ್ನು ಪ್ರದರ್ಶಿಸಿ, ಆ ಮೇಲೆ ಏಳು ದಿನ ಔತಣಮಾಡುತ್ತಾನೆಎಸ್ತೇ 1:3–8
ವಚನಗಳು
ಎಸ್ತೇ 1:3–8ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು. ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು. ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು. ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು. ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು. “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
- ಎಸ್ತೇರಳ ಔತಣದಲ್ಲಿ: “ನಿನ್ನ ವಿಜ್ಞಾಪನೆ ಯಾವುದು ಹೇಳು”ಎಸ್ತೇ 5:6
ವಚನಗಳು
ಎಸ್ತೇ 5:6ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
- ಅರಸನ ಆಜ್ಞೆಯಾದಾಗಲೂ ಪೂರೀಮ್ ದಿನಗಳಲ್ಲಿಯೂ ಔತಣಎಸ್ತೇ 8:17, ಎಸ್ತೇ 9:17–19
ವಚನಗಳು
ಎಸ್ತೇ 8:17ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.
ಎಸ್ತೇ 9:17–19ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು. ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
- ಬೇಲ್ಶಚ್ಚರನು ತನ್ನ ಪ್ರಧಾನರಿಗಾಗಿ ಮಾಡಿದ ದೊಡ್ಡ ಔತಣದಾನಿ 5:1–3
ವಚನಗಳು
ದಾನಿ 5:1–3ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು. ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
- ಅರಸನ ಔತಣದಂಥ ನಾಬಾಲನ ಔತಣ1 ಸಮು 25:36
ವಚನಗಳು
1 ಸಮು 25:36ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
- ಜನರು ಬಸವನ ಮುಂದೆ ಅನ್ನಪಾನಗಳಿಗೆ ಕುಳಿತುಕೊಳ್ಳುತ್ತಾರೆವಿಮೋ 32:6
ವಚನಗಳು
ವಿಮೋ 32:6ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.
ಊಟದ ಮೇಜಿನ ಬಳಿ
- ಅಮಾವಾಸ್ಯೆಯ ಊಟದಲ್ಲಿ ದಾವೀದನ ಸ್ಥಳವು ಖಾಲಿಯಾಗಿದೆ1 ಸಮು 20:5, 1 ಸಮು 20:24–25
ವಚನಗಳು
1 ಸಮು 20:5ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
1 ಸಮು 20:24–25ದಾವೀದನು ಹೊಲದಲ್ಲಿ ಅಡಗಿಕೊಂಡನು. ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,
- ಮೆಫೀಬೋಶೆತನೂ ಬರ್ಜಿಲ್ಲೈಯ ಮಕ್ಕಳೂ ಅರಸನ ಮೇಜಿನಲ್ಲಿ ಊಟಮಾಡುತ್ತಾರೆ2 ಸಮು 9:10, 1 ಅರಸು 2:7
ವಚನಗಳು
2 ಸಮು 9:10ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.
1 ಅರಸು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
- 850 ಪ್ರವಾದಿಗಳು ಈಜೆಬೆಲಳ ಮೇಜಿನಲ್ಲಿ ಊಟಮಾಡುತ್ತಾರೆ1 ಅರಸು 18:19
ವಚನಗಳು
1 ಅರಸು 18:19ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
- ಲೋಟನು ಔತಣವನ್ನು ಸಿದ್ಧಮಾಡಿ ಹುಳಿಯಿಲ್ಲದ ರೊಟ್ಟಿಯನ್ನು ಸುಡುತ್ತಾನೆಆದಿ 19:3
ವಚನಗಳು
ಆದಿ 19:3ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
- ಲೇವಿಯು ಯೇಸುವಿಗಾಗಿ ದೊಡ್ಡ ಔತಣವನ್ನು ಮಾಡುತ್ತಾನೆಲೂಕ 5:29
ವಚನಗಳು
ಲೂಕ 5:29ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
- ಫರಿಸಾಯರು ತಮ್ಮೊಂದಿಗೆ ಊಟಮಾಡಲು ಯೇಸುವನ್ನು ಕರೆಯುತ್ತಾರೆಲೂಕ 7:36, ಲೂಕ 14:1
- ಬೇಥಾನ್ಯದಲ್ಲಿ ಔತಣದ ಸಮಯದಲ್ಲಿ ಯೇಸುವಿನ ಮೇಲೆ ಸುಗಂಧತೈಲವನ್ನು ಹೊಯ್ಯಲಾಗುತ್ತದೆಮಾರ್ಕ 14:3, ಯೋಹಾ 12:2–3
ವಚನಗಳು
ಮಾರ್ಕ 14:3ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
ಯೋಹಾ 12:2–3ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು