ಅನ್ವೇಷಿಸಿ › ವಿಷಯಗಳು › ಹುಚ್ಚು, ನಿಜವಾದದ್ದೂ ನಟನೆಯದ್ದೂ
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಹುಚ್ಚು, ನಿಜವಾದದ್ದೂ ನಟನೆಯದ್ದೂ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 22 ವಾಕ್ಯಭಾಗಗಳು, ಸಾಲು ಸಾಲಾಗಿ.
- ಜ್ಞಾನೋಕ್ತಿಗಳು: ಮೋಸಮಾಡಿ ‘ತಮಾಷೆಗೆ ಮಾಡಿದೆ’ ಎನ್ನುವವನು ಹುಚ್ಚನಂತೆಜ್ಞಾನೋ 26:18–19
ವಚನಗಳು
ಜ್ಞಾನೋ 26:18–19ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು, ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
ಗತ್ ಊರಿನಲ್ಲಿ ದಾವೀದನು
- ಸೌಲನಿಂದ ಓಡಿಹೋಗುತ್ತಾ ದಾವೀದನು ಗತ್ ಊರಿನ ಅರಸನಾದ ಆಕೀಷನ ಬಳಿಗೆ ಬಂದನು1 ಸಮು 21:10
ವಚನಗಳು
1 ಸಮು 21:10ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
- ಆಕೀಷನ ಸೇವಕರು ಅವನನ್ನು ಗುರುತುಹಿಡಿದರು, ದಾವೀದನು ಬಹಳ ಭಯಪಟ್ಟನು1 ಸಮು 21:11–12
ವಚನಗಳು
1 ಸಮು 21:11–12ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು. ದಾವೀದನು ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ,
- ಅವನು ಹುಚ್ಚನಂತೆ ನಟಿಸಿ, ಬಾಗಿಲುಗಳನ್ನು ಗೀಚುತ್ತಾ, ಗಡ್ಡದ ಮೇಲೆ ಜೊಲ್ಲು ಸುರಿಸಿದನು1 ಸಮು 21:13
ವಚನಗಳು
1 ಸಮು 21:13ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
- ಆಕೀಷನು: ‘ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿದಿರೋ?’1 ಸಮು 21:14–15
ವಚನಗಳು
1 ಸಮು 21:14–15ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ? ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು.
- ಕೀರ್ತನೆ 34ರ ಶಿರೋನಾಮೆಯು ಅದನ್ನು ನೆನಪಿಸುತ್ತದೆ: ಅವನು ಹುಚ್ಚನಂತೆ ತೋರ್ಪಡಿಸಿಕೊಂಡನುಕೀರ್ತ 34:1
ವಚನಗಳು
ಕೀರ್ತ 34:1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ಇತರರು
- ಸಂಕಟದ ಆತ್ಮದಿಂದ ಬಾಧಿಸಲ್ಪಟ್ಟ ಸೌಲನನ್ನು ದಾವೀದನ ಕಿನ್ನರಿಯು ಶಾಂತಗೊಳಿಸಿತು1 ಸಮು 16:14–16, 1 ಸಮು 16:23
ವಚನಗಳು
1 ಸಮು 16:14–16ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ. ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.
1 ಸಮು 16:23ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.
- ಆ ಮೇಲೆ ದಾವೀದನು ಬಾರಿಸುತ್ತಿರುವಾಗ ಸೌಲನು ಅವನ ಮೇಲೆ ಈಟಿಯನ್ನು ಎಸೆದನು1 ಸಮು 18:10–11
ವಚನಗಳು
1 ಸಮು 18:10–11ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು. ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
- ನೆಬೂಕದ್ನೆಚ್ಚರನು ಎತ್ತಿನಂತೆ ಹುಲ್ಲು ತಿಂದನು; ಅವನ ಕೂದಲು ಹದ್ದಿನ ಗರಿಗಳಂತೆ ಬೆಳೆಯಿತುದಾನಿ 4:33
ವಚನಗಳು
ದಾನಿ 4:33ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
- ಅವನ ಬುದ್ಧಿಯು ಮರಳಿ ಬಂತು, ಅವನು ತನ್ನ ಸಿಂಹಾಸನಕ್ಕೆ ಪುನಃ ಸ್ಥಾಪಿಸಲ್ಪಟ್ಟನುದಾನಿ 4:34, ದಾನಿ 4:36
ವಚನಗಳು
ದಾನಿ 4:34ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
ದಾನಿ 4:36ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.
- ಕಾವಲುಗಾರನು: ಅವನು ಯೇಹುವಿನಂತೆ, ಹುಚ್ಚು ಹಿಡಿದವನಂತೆ ರಥ ಓಡಿಸುತ್ತಾನೆ2 ಅರಸು 9:20
ವಚನಗಳು
2 ಅರಸು 9:20ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
- ಯೇಹುವಿನ ಜೊತೆ ಅಧಿಕಾರಿಗಳು ಆ ಯುವ ಪ್ರವಾದಿಯನ್ನು ‘ಆ ಹುಚ್ಚನು’ ಎಂದು ಕರೆಯುತ್ತಾರೆ2 ಅರಸು 9:11
ವಚನಗಳು
2 ಅರಸು 9:11ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
- ಒಂದು ಪತ್ರ: ಪ್ರವಾದಿಯಂತೆ ನಟಿಸುವ ಯಾವ ಹುಚ್ಚನನ್ನಾದರೂ ಕೋಳಕ್ಕೆ ಹಾಕಬೇಕುಯೆರೆ 29:26
ವಚನಗಳು
ಯೆರೆ 29:26“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
- ಸಮಾಧಿಗಳಲ್ಲಿ ವಾಸಿಸುತ್ತಿದ್ದ ಒಬ್ಬನು ತನ್ನ ಸರಪಣಿಗಳನ್ನು ಮುರಿದು ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಿದ್ದನುಮಾರ್ಕ 5:3–5
ವಚನಗಳು
ಮಾರ್ಕ 5:3–5ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
- ಆ ಮೇಲೆ ಜನರು ಅವನನ್ನು ಬಟ್ಟೆ ಧರಿಸಿದವನಾಗಿಯೂ ಸ್ವಸ್ಥಬುದ್ಧಿಯುಳ್ಳವನಾಗಿಯೂ ಕಂಡರುಮಾರ್ಕ 5:15
ವಚನಗಳು
ಮಾರ್ಕ 5:15ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
- ಯೇಸುವಿನ ಬಂಧುಗಳು ಆತನನ್ನು ಹಿಡಿಯಲು ಹೊರಟರು: “ಅವನಿಗೆ ಹುಚ್ಚುಹಿಡಿದಿದೆ”ಮಾರ್ಕ 3:21
ವಚನಗಳು
ಮಾರ್ಕ 3:21ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
- ಕೆಲವರು ಯೇಸುವಿನ ಬಗ್ಗೆ ಹೇಳಿದರು: “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ”ಯೋಹಾ 10:20
ವಚನಗಳು
ಯೋಹಾ 10:20ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.
- ಪೇತ್ರನು ಬಾಗಿಲ ಬಳಿ ಇದ್ದಾನೆಂದು ರೋದಳು ಹೇಳುತ್ತಾಳೆ; ಅವಳಿಗೆ ಹುಚ್ಚು ಹಿಡಿದಿದೆ ಎನ್ನುತ್ತಾರೆಅ. ಕೃ 12:13–15
ವಚನಗಳು
ಅ. ಕೃ 12:13–15ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು. ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
- ಫೆಸ್ತನು: “ಪೌಲನೇ, ನಿನಗೆ ಹುಚ್ಚು ಹಿಡಿದಿದೆ” ಪೌಲನು: “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ”ಅ. ಕೃ 26:24–25
ವಚನಗಳು
ಅ. ಕೃ 26:24–25ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು. ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
- ಪೌಲನು: ಎಲ್ಲರೂ ಅನ್ಯಭಾಷೆಗಳಲ್ಲಿ ಮಾತಾಡಿದರೆ, ಹೊರಗಿನವರು ನಿಮಗೆ ಹುಚ್ಚು ಹಿಡಿದಿದೆ ಎನ್ನುವರು1 ಕೊರಿ 14:23
ವಚನಗಳು
1 ಕೊರಿ 14:23ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು