ದೈನಂದಿನ ಜೀವನ
ಬೈಬಲಿನಲ್ಲಿ ಆಹಾರ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 38 ವಾಕ್ಯಭಾಗಗಳು, ಸಾಲು ಸಾಲಾಗಿ.
ಜನರು ಏನು ತಿನ್ನುತ್ತಿದ್ದರು
- ಮನೆಯವರಿಗೆ ಮೇಕೆಯ ಹಾಲುಜ್ಞಾನೋ 27:27
ವಚನಗಳು
ಜ್ಞಾನೋ 27:27ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.
- ಮೊಸರು, ಹಾಲು, ಕುರಿಮರಿಗಳ ಕೊಬ್ಬು ಮತ್ತು ಶ್ರೇಷ್ಠವಾದ ಗೋದಿಧರ್ಮೋ 32:14
ವಚನಗಳು
ಧರ್ಮೋ 32:14ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
- ಸೇನಾಪತಿಗೆ ಹತ್ತು ಗಿಣ್ಣಿನ ಮುದ್ದೆಗಳು1 ಸಮು 17:17–18
ವಚನಗಳು
1 ಸಮು 17:17–18ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಇಗೋ ಇಲ್ಲಿ ಮೂವತ್ತು ಸೇರು ಹುರಿದ ಧಾನ್ಯ, ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು. ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.
- ದಾವೀದನ ಜನರಿಗೆ ಗೋದಿ, ಜವೆಗೋದಿ, ಅವರೆ, ಅಲಸಂದಿ, ಜೇನು ಮತ್ತು ಗಿಣ್ಣು2 ಸಮು 17:28–29
ವಚನಗಳು
2 ಸಮು 17:28–29ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ, ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
- ಅಬ್ರಹಾಮನು ರೊಟ್ಟಿ, ಎಳೆಯ ಕರು, ಮೊಸರು ಮತ್ತು ಹಾಲನ್ನು ಬಡಿಸುತ್ತಾನೆಆದಿ 18:5–8
ವಚನಗಳು
ಆದಿ 18:5–8ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
- ರೂತಳು ರೊಟ್ಟಿಯನ್ನು ಹುಳಿರಸದಲ್ಲಿ ಅದ್ದಿ ಹುರಿದ ಕಾಳುಗಳನ್ನು ತಿನ್ನುತ್ತಾಳೆರೂತ 2:14
ವಚನಗಳು
ರೂತ 2:14ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
- ಎಲ್ಲರಿಗೂ ರೊಟ್ಟಿ, ಖರ್ಜೂರದ ಅಡೆ ಮತ್ತು ಒಣದ್ರಾಕ್ಷಿಯ ಅಡೆ2 ಸಮು 6:19
ವಚನಗಳು
2 ಸಮು 6:19ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- ಅಬೀಗೈಲಳು ರೊಟ್ಟಿಗಳನ್ನೂ ದ್ರಾಕ್ಷಾರಸವನ್ನೂ ಕುರಿಗಳನ್ನೂ ಒಣದ್ರಾಕ್ಷಿಯನ್ನೂ ಅಂಜೂರದ ಅಡೆಗಳನ್ನೂ ತರುತ್ತಾಳೆ1 ಸಮು 25:18
ವಚನಗಳು
1 ಸಮು 25:18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,
- ಚೀಬನು ದಾವೀದನಿಗೆ ರೊಟ್ಟಿಯನ್ನೂ ಒಣದ್ರಾಕ್ಷಿಯನ್ನೂ ಬೇಸಿಗೆಯ ಹಣ್ಣುಗಳನ್ನೂ ತರುತ್ತಾನೆ2 ಸಮು 16:1–2
ವಚನಗಳು
2 ಸಮು 16:1–2ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು. ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.
- ಹಸಿವಿನಿಂದ ಬಳಲಿದ ಐಗುಪ್ತ್ಯನು ಅಂಜೂರದ ಅಡೆ ಮತ್ತು ಒಣದ್ರಾಕ್ಷಿಯಿಂದ ಚೇತರಿಸಿಕೊಳ್ಳುತ್ತಾನೆ1 ಸಮು 30:11–12
ವಚನಗಳು
1 ಸಮು 30:11–12ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
- ಐಗುಪ್ತದಲ್ಲಿ ಮೀನು, ಸೌತೆಕಾಯಿ, ಕಲ್ಲಂಗಡಿ, ಈರುಳ್ಳಿ ಸೊಪ್ಪು, ಈರುಳ್ಳಿ ಮತ್ತು ಬೆಳ್ಳುಳ್ಳಿಅರಣ್ಯ 11:5
ವಚನಗಳು
ಅರಣ್ಯ 11:5ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
- ರೊಟ್ಟಿ ಮತ್ತು ಅಲಸಂದಿಯ ಅಡಿಗೆಆದಿ 25:34
ವಚನಗಳು
ಆದಿ 25:34ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
- ಮನ್ನದ ರುಚಿ ಜೇನುತುಪ್ಪದಿಂದ ಮಾಡಿದ ಹಪ್ಪಳದಂತಿತ್ತುವಿಮೋ 16:31
ವಚನಗಳು
ವಿಮೋ 16:31ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
- ದೇಶದ ಹುರಿದ ಕಾಳು; ಆ ಮೇಲೆ ಮನ್ನವು ನಿಂತುಹೋಯಿತುಯೆಹೋ 5:11–12
ವಚನಗಳು
ಯೆಹೋ 5:11–12ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು. ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.
- ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ ಮತ್ತು ಕಡಲೆಯ ರೊಟ್ಟಿಯೆಹೆ 4:9
ವಚನಗಳು
ಯೆಹೆ 4:9“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.
- ದಾನಿಯೇಲನು ಕಾಯಿಪಲ್ಯವನ್ನೂ ನೀರನ್ನೂ ಮಾತ್ರ ಕೇಳುತ್ತಾನೆದಾನಿ 1:12
ವಚನಗಳು
ದಾನಿ 1:12ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
- ಕಾಗೆಗಳು ಎಲೀಯನಿಗೆ ಬೆಳಿಗ್ಗೆಯೂ ಸಾಯಂಕಾಲವೂ ರೊಟ್ಟಿಯನ್ನೂ ಮಾಂಸವನ್ನೂ ತರುತ್ತವೆ1 ಅರಸು 17:6
ವಚನಗಳು
1 ಅರಸು 17:6ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
- ಸ್ನಾನಿಕನಾದ ಯೋಹಾನನು ಮಿಡತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನುಮತ್ತಾ 3:4
ವಚನಗಳು
ಮತ್ತಾ 3:4ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
- ಕೊಬ್ಬಿದ ಎತ್ತಿಗಿಂತ ಪ್ರೀತಿಯೊಡನೆ ಸೊಪ್ಪಿನ ಊಟವೇ ಲೇಸುಜ್ಞಾನೋ 15:17
ವಚನಗಳು
ಜ್ಞಾನೋ 15:17ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
- ಮಗನು ರೊಟ್ಟಿಯನ್ನಾಗಲಿ ಮೀನನ್ನಾಗಲಿ ಕೇಳುತ್ತಾನೆಮತ್ತಾ 7:9–10
ವಚನಗಳು
ಮತ್ತಾ 7:9–10“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? ಮೀನು ಕೇಳಿದರೆ ಹಾವನ್ನು ಕೊಡುವನೋ?
- ಸರೋವರದ ತೀರದಲ್ಲಿ ಇದ್ದಲಿನ ಬೆಂಕಿಯ ಮೇಲೆ ಮೀನೂ ರೊಟ್ಟಿಯೂಯೋಹಾ 21:9
ವಚನಗಳು
ಯೋಹಾ 21:9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
- ಪುನರುತ್ಥಾನನಾದ ಯೇಸು ಸುಟ್ಟ ಮೀನಿನ ತುಂಡನ್ನು ತಿನ್ನುತ್ತಾನೆಲೂಕ 24:42
ವಚನಗಳು
ಲೂಕ 24:42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು.
ಊಟದ ಮೇಜಿನ ಬಳಿ
- ರೆಬೆಕ್ಕಳು ಎರಡು ಆಡುಮರಿಗಳಿಂದ ರುಚಿಯಾದ ಅಡಿಗೆ ಮಾಡುತ್ತಾಳೆಆದಿ 27:9
ವಚನಗಳು
ಆದಿ 27:9ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
- ಸ್ತ್ರೀಯರು ಅಡಿಗೆಯವರಾಗಿಯೂ ರೊಟ್ಟಿ ಸುಡುವವರಾಗಿಯೂ ಕೆಲಸಮಾಡುತ್ತಿದ್ದರು1 ಸಮು 8:13, ಜ್ಞಾನೋ 31:15
ವಚನಗಳು
1 ಸಮು 8:13ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
ಜ್ಞಾನೋ 31:15ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
- ಐಗುಪ್ತ್ಯರು ಇಬ್ರಿಯರ ಸಂಗಡ ಊಟಮಾಡುತ್ತಿರಲಿಲ್ಲಆದಿ 43:32
ವಚನಗಳು
ಆದಿ 43:32ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
- ರೊಟ್ಟಿ ಮುರಿಯುವ ಮೊದಲು ಕೃತಜ್ಞತೆ ಸಲ್ಲಿಸಲಾಗುತ್ತಿತ್ತುಮಾರ್ಕ 8:6, ಲೂಕ 24:30, ಅ. ಕೃ 27:35
ವಚನಗಳು
ಮಾರ್ಕ 8:6ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
ಲೂಕ 24:30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,
ಅ. ಕೃ 27:35ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
- ಕಡೆಯ ಭೋಜನದ ನಂತರ ಒಂದು ಕೀರ್ತನೆಯನ್ನು ಹಾಡಲಾಯಿತುಮತ್ತಾ 26:30
ವಚನಗಳು
ಮತ್ತಾ 26:30ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.
ತಿನ್ನಬಾರದವುಗಳು
- ನೆಲದ ಪ್ರಾಣಿಗಳು: ಸೀಳುಗೊರಸುಳ್ಳವುಗಳೂ ಮೆಲುಕುಹಾಕುವವುಗಳೂ ಮಾತ್ರಯಾಜ 11:3–4
ವಚನಗಳು
ಯಾಜ 11:3–4ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು. ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
- ನೀರಿನ ಜೀವಿಗಳು: ರೆಕ್ಕೆಗಳೂ ಪೊರೆಗಳೂ ಇರುವವುಗಳು ಮಾತ್ರಯಾಜ 11:9–10
ವಚನಗಳು
ಯಾಜ 11:9–10“‘ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.
- ಹದ್ದು, ರಣಹದ್ದು ಮತ್ತು ಪಟ್ಟಿಯಲ್ಲಿರುವ ಇತರ ಪಕ್ಷಿಗಳನ್ನು ತಿನ್ನಬಾರದುಯಾಜ 11:13
ವಚನಗಳು
ಯಾಜ 11:13“‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
- ಮಿಡತೆ, ಹುಲ್ಲುಮಿಡತೆ, ಜಿರಳೆಮಿಡತೆ ಮತ್ತು ಚಿಟ್ಟೆಮಿಡತೆಗಳನ್ನು ತಿನ್ನಬಹುದುಯಾಜ 11:21–22
ವಚನಗಳು
ಯಾಜ 11:21–22ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು. ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
- ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಲಾಗುತ್ತದೆಯಾಜ 17:13–14
ವಚನಗಳು
ಯಾಜ 17:13–14“‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು. ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
- ಹೊಲದಲ್ಲಿ ದುಷ್ಟಮೃಗದಿಂದ ಸೀಳಲ್ಪಟ್ಟ ಪಶುವಿನ ಮಾಂಸವನ್ನು ತಿನ್ನಬಾರದುವಿಮೋ 22:31
ವಚನಗಳು
ವಿಮೋ 22:31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.
- ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದುವಿಮೋ 23:19, ಧರ್ಮೋ 14:21
ವಚನಗಳು
ವಿಮೋ 23:19ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಧರ್ಮೋ 14:21ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು