ಪ್ರಕೃತಿ
ಬೈಬಲಿನಲ್ಲಿ ನರಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 10 ವಾಕ್ಯಭಾಗಗಳು, ಸಾಲು ಸಾಲಾಗಿ.
- “ನರಿಗಳಿಗೆ ಗುದ್ದುಗಳಿವೆ”ಮತ್ತಾ 8:20, ಲೂಕ 9:58
ವಚನಗಳು
ಮತ್ತಾ 8:20ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
ಲೂಕ 9:58ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
- ಸಂಸೋನನು 300 ನರಿಗಳನ್ನು ಹಿಡಿದು ಜೋಡಿ ಜೋಡಿ ಬಾಲಗಳ ನಡುವೆ ಪಂಜುಗಳನ್ನು ಕಟ್ಟಿದನುನ್ಯಾಯ 15:4
ವಚನಗಳು
ನ್ಯಾಯ 15:4ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,
- ನರಿಗಳು ಫಿಲಿಷ್ಟಿಯರ ಧಾನ್ಯವನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆಮರದ ತೋಪುಗಳನ್ನೂ ಸುಟ್ಟುಬಿಟ್ಟವುನ್ಯಾಯ 15:5
ವಚನಗಳು
ನ್ಯಾಯ 15:5ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.
- “ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ”ಪ.ಗೀ 2:15
ವಚನಗಳು
ಪ.ಗೀ 2:15ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
- ಟೋಬೀಯನು ಹಾಸ್ಯಮಾಡಿದನು: ನರಿ ಹತ್ತಿದರೂ ಅವರ ಗೋಡೆ ಬಿದ್ದುಹೋಗುವುದುನೆಹೆ 4:3
ವಚನಗಳು
ನೆಹೆ 4:3ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.
- ಹಾಳುಬಿದ್ದ ಚೀಯೋನ್ ಪರ್ವತ, ಅಲ್ಲಿ ನರಿಗಳು ತಿರುಗಾಡುತ್ತವೆಪ್ರಲಾ 5:18
ವಚನಗಳು
ಪ್ರಲಾ 5:18ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.
- ಹತರಾದವರು ನರಿಗಳಿಗೆ ಪಾಲಾಗುತ್ತಾರೆಕೀರ್ತ 63:10
ವಚನಗಳು
ಕೀರ್ತ 63:10ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು.
ನುಡಿಗಳು
- ಇಸ್ರಾಯೇಲಿನ ಪ್ರವಾದಿಗಳು “ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ”ಯೆಹೆ 13:4
ವಚನಗಳು
ಯೆಹೆ 13:4ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.
- ಯೇಸು ಹೆರೋದನನ್ನು “ಆ ನರಿ” ಎಂದು ಕರೆಯುತ್ತಾನೆಲೂಕ 13:31–32
ವಚನಗಳು
ಲೂಕ 13:31–32ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು, ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು