Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಸ್ನೇಹ

ದೈನಂದಿನ ಜೀವನ

ಬೈಬಲಿನಲ್ಲಿ ಸ್ನೇಹ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 45 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಮಿತ್ರನು ಎಲ್ಲಾ ಕಾಲದಲ್ಲಿಯೂ ಪ್ರೀತಿಸುತ್ತಾನೆ; ಸಹೋದರನು ಆಪತ್ತಿಗಾಗಿ ಹುಟ್ಟಿದ್ದಾನೆಜ್ಞಾನೋ 17:17
    ವಚನಗಳು
    ಜ್ಞಾನೋ 17:17ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
  • ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟುಜ್ಞಾನೋ 18:24
    ವಚನಗಳು
    ಜ್ಞಾನೋ 18:24ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
  • ಮಿತ್ರನು ಮಾಡುವ ಗಾಯಗಳು ನಂಬಿಕೆಗೆ ಯೋಗ್ಯವಾದವುಜ್ಞಾನೋ 27:6
    ವಚನಗಳು
    ಜ್ಞಾನೋ 27:6ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.
  • ದೂರದಲ್ಲಿರುವ ಸಹೋದರನಿಗಿಂತ ಹತ್ತಿರದ ನೆರೆಯವನು ಲೇಸುಜ್ಞಾನೋ 27:10
    ವಚನಗಳು
    ಜ್ಞಾನೋ 27:10ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
  • ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವಂತೆ ಮನುಷ್ಯನು ಮನುಷ್ಯನನ್ನು ಹರಿತಗೊಳಿಸುತ್ತಾನೆಜ್ಞಾನೋ 27:17
    ವಚನಗಳು
    ಜ್ಞಾನೋ 27:17ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
  • ನೆರೆಯವನ ಮನೆಗೆ ಆಗಾಗ್ಗೆ ಹೋಗಬೇಡ, ಅವನು ನಿನ್ನಿಂದ ಬೇಸರಗೊಳ್ಳದಂತೆಜ್ಞಾನೋ 25:17
    ವಚನಗಳು
    ಜ್ಞಾನೋ 25:17ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
  • ಮುಂಜಾನೆ ಗಟ್ಟಿಯಾಗಿ ಹೇಳುವ ಆಶೀರ್ವಾದವು ಶಾಪವೆಂದು ಎಣಿಸಲ್ಪಡುತ್ತದೆಜ್ಞಾನೋ 27:14
    ವಚನಗಳು
    ಜ್ಞಾನೋ 27:14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
  • ಕೋಪಿಷ್ಠನೊಂದಿಗೆ ಸ್ನೇಹಮಾಡಬೇಡಜ್ಞಾನೋ 22:24–25
    ವಚನಗಳು
    ಜ್ಞಾನೋ 22:24–25ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
  • ಐಶ್ವರ್ಯವು ಅನೇಕ ಮಿತ್ರರನ್ನು ಸೇರಿಸುತ್ತದೆ; ಬಡವನನ್ನು ಎಲ್ಲರೂ ಬಿಟ್ಟುಬಿಡುತ್ತಾರೆಜ್ಞಾನೋ 19:4, ಜ್ಞಾನೋ 19:6
    ವಚನಗಳು
    ಜ್ಞಾನೋ 19:4ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
    ಜ್ಞಾನೋ 19:6ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
  • ತಪ್ಪನ್ನು ಮತ್ತೆ ಮತ್ತೆ ಎತ್ತುವುದು ಮಿತ್ರರನ್ನು ಅಗಲಿಸುತ್ತದೆಜ್ಞಾನೋ 17:9
    ವಚನಗಳು
    ಜ್ಞಾನೋ 17:9ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
  • ಒಬ್ಬನಿಗಿಂತ ಇಬ್ಬರು ಲೇಸು; ಮುಪ್ಪುರಿಯ ಹಗ್ಗವು ಬೇಗನೆ ಕಿತ್ತುಹೋಗುವುದಿಲ್ಲಪ್ರಸ 4:9–12
    ವಚನಗಳು
    ಪ್ರಸ 4:9–12ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ. ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ? ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
  • ರೊಟ್ಟಿ ಹಂಚಿಕೊಂಡ ಆಪ್ತ ಮಿತ್ರನು ಕೀರ್ತನೆಗಾರನಿಗೆ ವಿರುದ್ಧವಾಗಿ ತಿರುಗಿದನುಕೀರ್ತ 41:9, ಕೀರ್ತ 55:12–14
    ವಚನಗಳು
    ಕೀರ್ತ 41:9ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
    ಕೀರ್ತ 55:12–14ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು. ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ. ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
  • ತನ್ನ ಮಿತ್ರರು ತನಗೆ ವಿರುದ್ಧವಾದರೆಂದು ಯೋಬನು ದೂರುತ್ತಾನೆಯೋಬ 6:14–15, ಯೋಬ 16:20, ಯೋಬ 19:19
    ವಚನಗಳು
    ಯೋಬ 6:14–15ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು. ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.
    ಯೋಬ 16:20ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.
    ಯೋಬ 19:19ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.
  • ಪೌಲನ ಮೊದಲನೆಯ ಪ್ರತಿವಾದದ ಸಮಯದಲ್ಲಿ ಎಲ್ಲರೂ ಅವನನ್ನು ಕೈಬಿಟ್ಟರು2 ತಿಮೊ 4:16
    ವಚನಗಳು
    2 ತಿಮೊ 4:16ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
  • ಯೇಸು: ಸ್ನೇಹಿತರಿಗೋಸ್ಕರ ಪ್ರಾಣ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿ ಇಲ್ಲಯೋಹಾ 15:13–15
    ವಚನಗಳು
    ಯೋಹಾ 15:13–15ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು. ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.

ಉದಾಹರಣೆಗಳು

  • ಅಬ್ರಾಮನು 318 ಶಿಕ್ಷಿತ ಪುರುಷರೊಂದಿಗೆ ತನ್ನ ಸಂಬಂಧಿಕನಾದ ಲೋಟನನ್ನು ಬಿಡಿಸುತ್ತಾನೆಆದಿ 14:14–16
    ವಚನಗಳು
    ಆದಿ 14:14–16ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು. ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು. ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
  • ರೂತಳು ನವೊಮಿಯನ್ನು ಬಿಡುವುದಿಲ್ಲ: “ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು”ರೂತ 1:16–17
    ವಚನಗಳು
    ರೂತ 1:16–17ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
  • ಸಮುವೇಲನು ಸೌಲನಿಗಾಗಿ ದುಃಖಿಸುತ್ತಾನೆ1 ಸಮು 15:35, 1 ಸಮು 16:1
    ವಚನಗಳು
    1 ಸಮು 15:35ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.
    1 ಸಮು 16:1ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
  • ಯೋನಾತಾನನು ದಾವೀದನನ್ನು ತನ್ನಂತೆಯೇ ಪ್ರೀತಿಸಿ ಅವನಿಗೆ ತನ್ನ ನಿಲುವಂಗಿಯನ್ನು ಕೊಡುತ್ತಾನೆ1 ಸಮು 18:1–4
    ವಚನಗಳು
    1 ಸಮು 18:1–4ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು. ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು. ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
  • ದಾವೀದನೂ ಯೋನಾತಾನನೂ ಮುದ್ದಿಟ್ಟು, ಅತ್ತು, ಪ್ರಮಾಣಮಾಡಿ ಅಗಲುತ್ತಾರೆ1 ಸಮು 20:41–42, 1 ಸಮು 23:16–18
    ವಚನಗಳು
    1 ಸಮು 20:41–42ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು. ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.
    1 ಸಮು 23:16–18ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ, ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು. ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.
  • ದಾವೀದನ ಶೋಕಗೀತೆ: “ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು”2 ಸಮು 1:26
    ವಚನಗಳು
    2 ಸಮು 1:26ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
  • ಯೋನಾತಾನನ ನಿಮಿತ್ತ ಮೆಫೀಬೋಶೆತನು ಯಾವಾಗಲೂ ದಾವೀದನ ಮೇಜಿನಲ್ಲಿ ಊಟಮಾಡುತ್ತಾನೆ2 ಸಮು 9:1, 2 ಸಮು 9:7
    ವಚನಗಳು
    2 ಸಮು 9:1ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,
    2 ಸಮು 9:7ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.
  • ದಾವೀದನು ಯಾಜಕನಾದ ಎಬ್ಯಾತಾರನಿಗೆ: “ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ”1 ಸಮು 22:23
    ವಚನಗಳು
    1 ಸಮು 22:23ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.
  • ತೂರಿನ ಅರಸನಾದ ಹೀರಾಮನು ಯಾವಾಗಲೂ ದಾವೀದನ ಮಿತ್ರನಾಗಿದ್ದನು1 ಅರಸು 5:1
    ವಚನಗಳು
    1 ಅರಸು 5:1ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
  • ಅಬ್ಷಾಲೋಮನ ದಂಗೆಯ ಸಮಯದಲ್ಲಿ ದಾವೀದನ ಮಿತ್ರನಾದ ಹೂಷೈ ನಂಬಿಗಸ್ತನಾಗಿ ಉಳಿಯುತ್ತಾನೆ2 ಸಮು 15:32–37, 2 ಸಮು 16:16–17
    ವಚನಗಳು
    2 ಸಮು 15:32–37ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು. ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ. ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, ‘ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು. ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ. ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು. ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.
    2 ಸಮು 16:16–17ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು. ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.
  • ಗಿತ್ತೀಯನಾದ ಇತ್ತೈ ಓಡಿಹೋಗುತ್ತಿರುವ ದಾವೀದನನ್ನು ಬಿಡಲು ಒಪ್ಪುವುದಿಲ್ಲ2 ಸಮು 15:19–21
    ವಚನಗಳು
    2 ಸಮು 15:19–21ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು. ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು. ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.
  • ಅರಸನಾದ ಅಹಜ್ಯನು ಗಾಯಗೊಂಡ ಅರಸನಾದ ಯೋರಾಮನನ್ನು ನೋಡಲು ಹೋಗುತ್ತಾನೆ2 ಅರಸು 8:28–29
    ವಚನಗಳು
    2 ಅರಸು 8:28–29ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
  • ಯೋಬನ ಮೂವರು ಮಿತ್ರರು ಏಳು ದಿನ ಮೌನವಾಗಿ ಅವನ ಸಂಗಡ ಕುಳಿತುಕೊಳ್ಳುತ್ತಾರೆಯೋಬ 2:11–13
    ವಚನಗಳು
    ಯೋಬ 2:11–13ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು. ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.
  • ದಾನಿಯೇಲನು ತನ್ನ ಮೂವರು ಮಿತ್ರರಿಗೆ ಉನ್ನತ ಪದವಿ ಕೊಡಬೇಕೆಂದು ಅರಸನನ್ನು ಬೇಡುತ್ತಾನೆದಾನಿ 2:17–18, ದಾನಿ 2:49
    ವಚನಗಳು
    ದಾನಿ 2:17–18ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ, “ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
    ದಾನಿ 2:49ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.
  • ಯೇಸು ಮಾರ್ಥಳನ್ನೂ ಆಕೆಯ ತಂಗಿಯನ್ನೂ ಲಾಜರನನ್ನೂ ಪ್ರೀತಿಸುತ್ತಿದ್ದನುಲೂಕ 10:38–39, ಯೋಹಾ 11:5, ಯೋಹಾ 11:11
    ವಚನಗಳು
    ಲೂಕ 10:38–39ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
    ಯೋಹಾ 11:5ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
    ಯೋಹಾ 11:11ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
  • ಪೌಲನ ಸೋದರಳಿಯನು ಒಂದು ಒಳಸಂಚಿನ ಬಗ್ಗೆ ಅವನನ್ನು ಎಚ್ಚರಿಸುತ್ತಾನೆಅ. ಕೃ 23:16
    ವಚನಗಳು
    ಅ. ಕೃ 23:16ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
  • ಪ್ರಿಸ್ಕಿಲ್ಲಳೂ ಅಕ್ವಿಲನೂ ಪೌಲನಿಗಾಗಿ ತಮ್ಮ ಪ್ರಾಣವನ್ನೇ ಅಪಾಯಕ್ಕೆ ಒಡ್ಡಿದರುರೋಮಾ 16:3–4
    ವಚನಗಳು
    ರೋಮಾ 16:3–4ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
  • ಪೌಲನು ತಿಮೊಥೆಯನ ಕುರಿತು: “ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ”ಫಿಲಿಪ್ಪಿ 2:19–22
    ವಚನಗಳು
    ಫಿಲಿಪ್ಪಿ 2:19–22ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.
  • ಎಪಫ್ರೊದೀತನು, ಪೌಲನ ಸಹೋದರನೂ ಜೊತೆಕೆಲಸದವನೂ ಜೊತೆಸೈನಿಕನೂಫಿಲಿಪ್ಪಿ 2:25
    ವಚನಗಳು
    ಫಿಲಿಪ್ಪಿ 2:25ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು