ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ದೈತ್ಯರು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 29 ವಾಕ್ಯಭಾಗಗಳು, ಸಾಲು ಸಾಲಾಗಿ.
- ಆ ಕಾಲದಲ್ಲಿ ಭೂಮಿಯ ಮೇಲೆ ನೆಫೀಲಿಯರು ಇದ್ದರುಆದಿ 6:4
ವಚನಗಳು
ಆದಿ 6:4ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
- ಗೂಢಚಾರರು: ಅನಾಕನ ವಂಶದವರ ದೃಷ್ಟಿಗೆ ನಾವು ಮಿಡತೆಗಳಂತೆ ಕಾಣಿಸಿದೆವುಅರಣ್ಯ 13:32–33
ವಚನಗಳು
ಅರಣ್ಯ 13:32–33ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು. ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.
- ಅನಾಕ್ಯರು: ಬಲಿಷ್ಠರೂ ಎತ್ತರವಾದವರೂ ಆದ ಜನರುಧರ್ಮೋ 1:28, ಧರ್ಮೋ 9:2
ವಚನಗಳು
ಧರ್ಮೋ 1:28ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಧರ್ಮೋ 9:2ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
- ಅನಾಕ್ಯರಷ್ಟೇ ಎತ್ತರವಾದ ಏಮಿಯರು ಮೋವಾಬಿನಲ್ಲಿ ವಾಸಿಸುತ್ತಿದ್ದರುಧರ್ಮೋ 2:10–11
ವಚನಗಳು
ಧರ್ಮೋ 2:10–11ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು. ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
- ಅಮ್ಮೋನಿಯರು ತಮ್ಮ ದೇಶದ ರೆಫಾಯರನ್ನು ಜಂಜುಮ್ಯರೆಂದು ಕರೆಯುತ್ತಿದ್ದರುಧರ್ಮೋ 2:20–21
ವಚನಗಳು
ಧರ್ಮೋ 2:20–21ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
- ಕೆದೊರ್ಲಗೋಮರನು ರೆಫಾಯರನ್ನೂ ಜೂಜ್ಯರನ್ನೂ ಏಮಿಯರನ್ನೂ ಸೋಲಿಸಿದನುಆದಿ 14:5
ವಚನಗಳು
ಆದಿ 14:5ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
ಬಾಷಾನಿನ ಓಗ್
- ಬಾಷಾನಿನ ಅರಸನಾದ ಓಗನು ರೆಫಾಯರಲ್ಲಿ ಉಳಿದ ಕೊನೆಯವನುಧರ್ಮೋ 3:11, ಯೆಹೋ 12:4
ವಚನಗಳು
ಧರ್ಮೋ 3:11(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
ಯೆಹೋ 12:4ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.
- ಅವನ ಕಬ್ಬಿಣದ ಮಂಚವು ಒಂಭತ್ತು ಮೊಳ ಉದ್ದ, ನಾಲ್ಕು ಮೊಳ ಅಗಲಧರ್ಮೋ 3:11
ವಚನಗಳು
ಧರ್ಮೋ 3:11(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
- ಇಸ್ರಾಯೇಲರು ಎದ್ರೈಯಲ್ಲಿ ಓಗನನ್ನು ಸೋಲಿಸಿ ಅವನ ಅರುವತ್ತು ಪಟ್ಟಣಗಳನ್ನು ವಶಪಡಿಸಿಕೊಂಡರುಅರಣ್ಯ 21:33–35, ಧರ್ಮೋ 3:1–4
ವಚನಗಳು
ಅರಣ್ಯ 21:33–35ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು. ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು. ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
ಧರ್ಮೋ 3:1–4ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು. ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು. ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು. ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
- ಅವನ ದೇಶವು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲಕ್ಕೆ ಸೇರಿತುಅರಣ್ಯ 32:33, ಧರ್ಮೋ 29:7–8
ವಚನಗಳು
ಅರಣ್ಯ 32:33ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
ಧರ್ಮೋ 29:7–8ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು. ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.
ಹೆಬ್ರೋನ್ ಮತ್ತು ಅನಾಕ್ಯರು
- ಹೆಬ್ರೋನಿಗೆ ಮೊದಲು ಕಿರ್ಯತ್ಅರ್ಬ ಎಂಬ ಹೆಸರಿತ್ತು, ಅನಾಕ್ಯರಲ್ಲಿ ಪ್ರಮುಖನಾದ ಅರ್ಬನ ಹೆಸರಿನಿಂದಯೆಹೋ 14:15, ಯೆಹೋ 15:13
ವಚನಗಳು
ಯೆಹೋ 14:15ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.
ಯೆಹೋ 15:13ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
- ಕಾಲೇಬನು ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊರಡಿಸಿದನುಯೆಹೋ 15:14, ನ್ಯಾಯ 1:20
ವಚನಗಳು
ಯೆಹೋ 15:14ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
ನ್ಯಾಯ 1:20ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
- ಯೆಹೋಶುವನು ಅನಾಕ್ಯರನ್ನು ನಿರ್ಮೂಲಮಾಡಿದನು; ಕೆಲವರು ಗಾಜಾ, ಗತ್ ಮತ್ತು ಅಷ್ಡೋದಿನಲ್ಲಿ ಉಳಿದರುಯೆಹೋ 11:21–22
ವಚನಗಳು
ಯೆಹೋ 11:21–22ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು. ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
ಗೊಲ್ಯಾತನೂ ಅವನ ಬಂಧುಗಳೂ
- ಗತ್ ಊರಿನ ಗೊಲ್ಯಾತನು ಆರು ಮೊಳ ಮತ್ತು ಒಂದು ಗೇಣು ಎತ್ತರವಾಗಿದ್ದನು1 ಸಮು 17:4
ವಚನಗಳು
1 ಸಮು 17:4ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.
- ಅವನ ಕವಚವು ಐದು ಸಾವಿರ ಶೆಕೆಲ್ ತೂಕವಿತ್ತು1 ಸಮು 17:5
ವಚನಗಳು
1 ಸಮು 17:5ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.)
- ಅವನ ಈಟಿಯ ಮೊನೆ ಆರುನೂರು ಶೆಕೆಲ್ ತೂಕವಿತ್ತು1 ಸಮು 17:7
ವಚನಗಳು
1 ಸಮು 17:7ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.
- ನಾಲ್ವತ್ತು ದಿನ ಅವನು ಬೆಳಿಗ್ಗೆಯೂ ಸಾಯಂಕಾಲವೂ ಹೊರಗೆ ಬರುತ್ತಿದ್ದನು1 ಸಮು 17:16
ವಚನಗಳು
1 ಸಮು 17:16ಆ ಫಿಲಿಷ್ಟಿಯನು ನಲ್ವತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು.
- ದಾವೀದನು ಕವಣೆಯಿಂದಲೂ ಕಲ್ಲಿನಿಂದಲೂ ಅವನನ್ನು ಕೊಂದನು1 ಸಮು 17:49–50
ವಚನಗಳು
1 ಸಮು 17:49–50ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.
- ಗೊಲ್ಯಾತನ ಕತ್ತಿಯನ್ನು ಆ ಮೇಲೆ ಏಫೋದಿನ ಹಿಂದೆ ಬಟ್ಟೆಯಲ್ಲಿ ಸುತ್ತಿ ಇಡಲಾಗಿತ್ತು1 ಸಮು 21:9
ವಚನಗಳು
1 ಸಮು 21:9ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.
- ಇಷ್ಬಿಬೆನೋಬನ ತಾಮ್ರದ ಈಟಿಯು ಮುನ್ನೂರು ಶೆಕೆಲ್ ತೂಕವಿತ್ತು; ಅಬೀಷೈ ಅವನನ್ನು ಕೊಂದನು2 ಸಮು 21:16–17
ವಚನಗಳು
2 ಸಮು 21:16–17ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು. ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
- ಎಲ್ಹಾನಾನನು ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು1 ಪೂರ್ವ 20:5
ವಚನಗಳು
1 ಪೂರ್ವ 20:5ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
- ಗತ್ ಊರಿನ ಒಬ್ಬ ಮನುಷ್ಯನಿಗೆ ಪ್ರತಿಯೊಂದು ಕೈಗೆ ಆರು ಬೆರಳುಗಳೂ ಪ್ರತಿಯೊಂದು ಕಾಲಿಗೆ ಆರು ಬೆರಳುಗಳೂ ಇದ್ದವು2 ಸಮು 21:20–21, 1 ಪೂರ್ವ 20:6–7
ವಚನಗಳು
2 ಸಮು 21:20–21ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು. ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
1 ಪೂರ್ವ 20:6–7ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು