ಅನ್ವೇಷಿಸಿ › ವಿಷಯಗಳು › ಅತಿಯಾಗಿ ತಿನ್ನುವುದು
ದೈನಂದಿನ ಜೀವನ
ಬೈಬಲಿನಲ್ಲಿ ಅತಿಯಾಗಿ ತಿನ್ನುವುದು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 18 ವಾಕ್ಯಭಾಗಗಳು, ಸಾಲು ಸಾಲಾಗಿ.
- ಅಧಿಕಾರಿಯೊಂದಿಗೆ ಊಟಕ್ಕೆ ಕುಳಿತಿದ್ದೀಯಾ? ನಿನ್ನ ಗಂಟಲಿಗೆ ಕತ್ತಿಯನ್ನಿಟ್ಟುಕೋಜ್ಞಾನೋ 23:1–3
ವಚನಗಳು
ಜ್ಞಾನೋ 23:1–3ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ. ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
- ಜೇನು ಸಿಕ್ಕಿದರೆ ನಿನಗೆ ಬೇಕಾದಷ್ಟನ್ನೇ ತಿನ್ನುಜ್ಞಾನೋ 25:16
ವಚನಗಳು
ಜ್ಞಾನೋ 25:16ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
- ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಗೆ ಅವಮಾನ ತರುತ್ತಾನೆಜ್ಞಾನೋ 28:7
ವಚನಗಳು
ಜ್ಞಾನೋ 28:7ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
- ಮಾಂಸವನ್ನು ಹೊಟ್ಟೆಬಿರಿಯ ತಿನ್ನುವವರ ಸಂಗಡ ಸೇರಬೇಡಜ್ಞಾನೋ 23:20–21
ವಚನಗಳು
ಜ್ಞಾನೋ 23:20–21ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು. ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
- ಸರಿಯಾದ ಸಮಯದಲ್ಲಿ ಔತಣಮಾಡುವ ಪ್ರಭುಗಳಿರುವ ದೇಶವು ಧನ್ಯಪ್ರಸ 10:17
ವಚನಗಳು
ಪ್ರಸ 10:17ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
- “ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ”ಯೆಶಾ 22:13, 1 ಕೊರಿ 15:32
ವಚನಗಳು
ಯೆಶಾ 22:13ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
1 ಕೊರಿ 15:32ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- ದಂತದ ಮಂಚಗಳ ಮೇಲೆ ಒರಗಿಕೊಂಡು ಕುರಿಮರಿಗಳನ್ನೂ ಕರುಗಳನ್ನೂ ತಿನ್ನುವುದುಆಮೋ 6:4
ವಚನಗಳು
ಆಮೋ 6:4ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
- ಐಶ್ವರ್ಯವಂತನಾದ ಬುದ್ಧಿಹೀನನು: “ಊಟಮಾಡು, ಕುಡಿ, ಸುಖಪಡು”ಲೂಕ 12:19–20
ವಚನಗಳು
ಲೂಕ 12:19–20ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
- “ಹೊಟ್ಟೆಯೇ ಅವರ ದೇವರು”ಫಿಲಿಪ್ಪಿ 3:19
ವಚನಗಳು
ಫಿಲಿಪ್ಪಿ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
- ಅವರಲ್ಲೇ ಒಬ್ಬನು: “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ”ತೀತ 1:12
ವಚನಗಳು
ತೀತ 1:12“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.
ಉದಾಹರಣೆಗಳು
- ಬಹಳ ಹಸಿದಿದ್ದ ಏಸಾವನು ಕೆಂಪು ಅಡಿಗೆಗಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರುತ್ತಾನೆಆದಿ 25:29–34
ವಚನಗಳು
ಆದಿ 25:29–34ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ; ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು. ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು. ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
- ಐಗುಪ್ತದ ಮೀನು, ಸೌತೆಕಾಯಿ, ಕಲ್ಲಂಗಡಿಗಳಿಗಾಗಿ ಇಸ್ರಾಯೇಲರು ಅಳುತ್ತಾರೆಅರಣ್ಯ 11:4–6, ಕೀರ್ತ 78:18
ವಚನಗಳು
ಅರಣ್ಯ 11:4–6ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು? ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ. ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
ಕೀರ್ತ 78:18ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
- ಜನರು ಎರಡು ದಿನ ಲಾವಕ್ಕಿಗಳನ್ನು ಕೂಡಿಸುತ್ತಾರೆ; ಆ ಮೇಲೆ ವ್ಯಾಧಿ ಬರುತ್ತದೆಅರಣ್ಯ 11:31–33
ವಚನಗಳು
ಅರಣ್ಯ 11:31–33ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು. ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
- ಏಲಿಯ ಮಕ್ಕಳ ಸೇವಕನು ಮೂರು ಮುಳ್ಳಿನ ಕೊಕ್ಕೆಯಿಂದ ಮಾಂಸವನ್ನು ಎಳೆದುಕೊಳ್ಳುತ್ತಾನೆ1 ಸಮು 2:12–17
ವಚನಗಳು
1 ಸಮು 2:12–17ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ. ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು. ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು. ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು. ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು. ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.
- ಮಾತು ಕೇಳದ ಮಗನ ಮೇಲೆ “ಕುಡುಕ ಮತ್ತು ಹೊಟ್ಟೆಬಾಕ” ಎಂಬ ದೂರುಧರ್ಮೋ 21:20
ವಚನಗಳು
ಧರ್ಮೋ 21:20ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
- ಯೇಸುವನ್ನು “ಹೊಟ್ಟೆಬಾಕನು ಕುಡುಕನು” ಎಂದು ಕರೆಯುತ್ತಾರೆಮತ್ತಾ 11:19
ವಚನಗಳು
ಮತ್ತಾ 11:19ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು