Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಚಾಡಿ ಮಾತು

ದೈನಂದಿನ ಜೀವನ

ಬೈಬಲಿನಲ್ಲಿ ಚಾಡಿ ಮಾತು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 24 ವಾಕ್ಯಭಾಗಗಳು, ಸಾಲು ಸಾಲಾಗಿ.

  • ನಿನ್ನ ಜನರಲ್ಲಿ ಚಾಡಿಹೇಳುತ್ತಾ ತಿರುಗಾಡಬೇಡಯಾಜ 19:16
    ವಚನಗಳು
    ಯಾಜ 19:16“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
  • ದೇವರ ಬಳಿ ಯಾರು ವಾಸಿಸಬಹುದು? ನಾಲಿಗೆಯಲ್ಲಿ ಚಾಡಿಯಿಲ್ಲದವನುಕೀರ್ತ 15:3
    ವಚನಗಳು
    ಕೀರ್ತ 15:3ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.
  • ಚಾಡಿಕೋರನು ಗುಟ್ಟನ್ನು ರಟ್ಟುಮಾಡುತ್ತಾನೆ; ನಂಬಿಗಸ್ತನು ಗುಟ್ಟನ್ನು ಕಾಪಾಡುತ್ತಾನೆಜ್ಞಾನೋ 11:13, ಜ್ಞಾನೋ 20:19
    ವಚನಗಳು
    ಜ್ಞಾನೋ 11:13ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
    ಜ್ಞಾನೋ 20:19ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
  • ಚಾಡಿಕೋರನು ಆಪ್ತ ಮಿತ್ರರನ್ನು ಅಗಲಿಸುತ್ತಾನೆಜ್ಞಾನೋ 16:28, ಜ್ಞಾನೋ 17:9
    ವಚನಗಳು
    ಜ್ಞಾನೋ 16:28ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
    ಜ್ಞಾನೋ 17:9ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
  • ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳಂತಿವೆಜ್ಞಾನೋ 18:8, ಜ್ಞಾನೋ 26:22
    ವಚನಗಳು
    ಜ್ಞಾನೋ 18:8ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
    ಜ್ಞಾನೋ 26:22ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
  • ಕಟ್ಟಿಗೆಯಿಲ್ಲದೆ ಬೆಂಕಿ ಆರಿಹೋಗುತ್ತದೆ; ಚಾಡಿಯಿಲ್ಲದೆ ಜಗಳ ನಿಲ್ಲುತ್ತದೆಜ್ಞಾನೋ 26:20–21
    ವಚನಗಳು
    ಜ್ಞಾನೋ 26:20–21ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು. ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
  • ಚಾಡಿಹೇಳುವ ನಾಲಿಗೆ ಕೋಪದ ಮುಖವನ್ನು ಉಂಟುಮಾಡುತ್ತದೆಜ್ಞಾನೋ 25:23
    ವಚನಗಳು
    ಜ್ಞಾನೋ 25:23ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
  • ಯೆರೆಮೀಯನು ಗುಸುಗುಸು ಮಾತನ್ನು ಕೇಳುತ್ತಾನೆ: “ಇವನ ಮೇಲೆ ದೂರು ಹೇಳಿರಿ”ಯೆರೆ 20:10
    ವಚನಗಳು
    ಯೆರೆ 20:10“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
  • ಕೆಲಸವಿಲ್ಲದ ಯುವ ವಿಧವೆಯರು ಹರಟೆಮಾತಿನವರೂ ಇತರರ ವಿಷಯದಲ್ಲಿ ತಲೆಹಾಕುವವರೂ ಆಗುತ್ತಾರೆ1 ತಿಮೊ 5:13
    ವಚನಗಳು
    1 ತಿಮೊ 5:13ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.
  • ಕೊರಿಂಥದಲ್ಲಿ ದೂಷಣೆಯೂ ಚಾಡಿಯೂ ಇರಬಹುದೆಂದು ಪೌಲನು ಭಯಪಡುತ್ತಾನೆ2 ಕೊರಿ 12:20
    ವಚನಗಳು
    2 ಕೊರಿ 12:20ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.
  • ಒಬ್ಬರನ್ನೊಬ್ಬರು ದೂಷಿಸಬೇಡಿರಿಯಾಕೋ 4:11
    ವಚನಗಳು
    ಯಾಕೋ 4:11ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.

ಉದಾಹರಣೆಗಳು

  • ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ಕೆಟ್ಟ ಸುದ್ದಿಯನ್ನು ತಂದೆಗೆ ತಿಳಿಸುತ್ತಾನೆಆದಿ 37:2
    ವಚನಗಳು
    ಆದಿ 37:2ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
  • ಗೂಢಚಾರರು ದೇಶದ ಬಗ್ಗೆ ಕೆಟ್ಟ ಸುದ್ದಿಯನ್ನು ಹಬ್ಬಿಸುತ್ತಾರೆಅರಣ್ಯ 13:32, ಅರಣ್ಯ 14:36
    ವಚನಗಳು
    ಅರಣ್ಯ 13:32ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.
    ಅರಣ್ಯ 14:36ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
  • ಅಹೀಮೆಲೆಕನು ದಾವೀದನಿಗೆ ಸಹಾಯಮಾಡಿದನೆಂದು ಎದೋಮ್ಯನಾದ ದೋಯೇಗನು ಸೌಲನಿಗೆ ಹೇಳುತ್ತಾನೆ1 ಸಮು 22:9–10
    ವಚನಗಳು
    1 ಸಮು 22:9–10ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು. ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
  • ಅಬ್ನೇರನು ಬಂದು ಸಮಾಧಾನದಿಂದ ಹೊರಟುಹೋದನೆಂದು ಯೋವಾಬನಿಗೆ ತಿಳಿಸಲಾಗುತ್ತದೆ2 ಸಮು 3:23
    ವಚನಗಳು
    2 ಸಮು 3:23ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
  • ಮೆಫೀಬೋಶೆತನು ರಾಜ್ಯವನ್ನು ಮತ್ತೆ ಪಡೆಯಲು ನಿರೀಕ್ಷಿಸುತ್ತಿದ್ದಾನೆಂದು ಚೀಬನು ಹೇಳುತ್ತಾನೆ2 ಸಮು 16:3
    ವಚನಗಳು
    2 ಸಮು 16:3ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು
  • ಯೆಹೂದ್ಯರು ದಂಗೆಯೇಳಲು ಯೋಚಿಸುತ್ತಿದ್ದಾರೆಂಬ ಸನ್ಬಲ್ಲಟನ ವದಂತಿನೆಹೆ 6:6–9
    ವಚನಗಳು
    ನೆಹೆ 6:6–9ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ. ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು. ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು. ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು
  • ಯೆಹೂದದ ಪ್ರಮುಖರು ಟೋಬೀಯನಿಗೂ ನೆಹೆಮೀಯನಿಗೂ ನಡುವೆ ಸುದ್ದಿ ಸಾಗಿಸುತ್ತಾರೆನೆಹೆ 6:17–19
    ವಚನಗಳು
    ನೆಹೆ 6:17–19ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು. ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು. ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.
  • ಸ್ತೆಫನನು ಮೋಶೆಗೆ ವಿರುದ್ಧವಾಗಿ ಮಾತಾಡಿದನೆಂದು ಹೇಳಲು ಜನರನ್ನು ಪ್ರೇರೇಪಿಸಲಾಗುತ್ತದೆಅ. ಕೃ 6:11
    ವಚನಗಳು
    ಅ. ಕೃ 6:11ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.
  • ಯೋಹಾನನ ವಿರುದ್ಧವಾಗಿ ದಿಯೊತ್ರೇಫನ ದುರುದ್ದೇಶದ ದೂಷಣೆ3 ಯೋಹಾ 1:9–10
    ವಚನಗಳು
    3 ಯೋಹಾ 1:9–10ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು