Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕೂದಲು ಮತ್ತು ಗಡ್ಡ

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಕೂದಲು ಮತ್ತು ಗಡ್ಡ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 36 ವಾಕ್ಯಭಾಗಗಳು, ಸಾಲು ಸಾಲಾಗಿ.

  • ನಿಮ್ಮ ತಲೆಯ ಕೂದಲುಗಳು ಸಹ ಎಲ್ಲಾ ಎಣಿಸಲ್ಪಟ್ಟಿವೆಮತ್ತಾ 10:30, ಲೂಕ 12:7
    ವಚನಗಳು
    ಮತ್ತಾ 10:30ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
    ಲೂಕ 12:7ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
  • ನೀನು ಒಂದು ಕೂದಲನ್ನಾದರೂ ಬಿಳುಪಾಗಿ ಇಲ್ಲವೆ ಕಪ್ಪಾಗಿ ಮಾಡಲಾರೆಮತ್ತಾ 5:36
    ವಚನಗಳು
    ಮತ್ತಾ 5:36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
  • ಪೌಲನು: ಉದ್ದ ಕೂದಲು ಪುರುಷನಿಗೆ ಅವಮಾನ, ಸ್ತ್ರೀಗೆ ಮಹಿಮೆ1 ಕೊರಿ 11:14–15
    ವಚನಗಳು
    1 ಕೊರಿ 11:14–15ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ, ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?
  • ಸೌಂದರ್ಯವು ಹೆಣೆದ ಕೂದಲಿನಿಂದ ಬರಬೇಕಾದದ್ದಲ್ಲ1 ತಿಮೊ 2:9, 1 ಪೇತ್ರ 3:3
    ವಚನಗಳು
    1 ತಿಮೊ 2:9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
    1 ಪೇತ್ರ 3:3ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಧರ್ಮಶಾಸ್ತ್ರದಲ್ಲಿ

  • ತಲೆಯ ಪಕ್ಕದ ಕೂದಲನ್ನು ಕತ್ತರಿಸಬಾರದು, ಗಡ್ಡದ ಅಂಚುಗಳನ್ನು ಕ್ಷೌರಮಾಡಬಾರದುಯಾಜ 19:27
    ವಚನಗಳು
    ಯಾಜ 19:27“‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
  • ಯಾಜಕರು ತಲೆಯನ್ನು ಬೋಳಿಸಿಕೊಳ್ಳಬಾರದು, ಗಡ್ಡದ ಅಂಚುಗಳನ್ನು ಕ್ಷೌರಮಾಡಬಾರದುಯಾಜ 21:5
    ವಚನಗಳು
    ಯಾಜ 21:5ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
  • ಸತ್ತವರಿಗಾಗಿ ಹಣೆಯನ್ನು ಬೋಳಿಸಿಕೊಳ್ಳಬಾರದುಧರ್ಮೋ 14:1
    ವಚನಗಳು
    ಧರ್ಮೋ 14:1ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.
  • ತಲೆಗೂದಲು ಉದುರಿಹೋದವನು ಆದರೂ ಶುದ್ಧನೇಯಾಜ 13:40–41
    ವಚನಗಳು
    ಯಾಜ 13:40–41“ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ. ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.
  • ನಾಜೀರನು ತನ್ನ ಕೂದಲನ್ನು ಬೆಳೆಯಬಿಟ್ಟು ಹರಕೆ ಮುಗಿದಾಗ ಅದನ್ನು ಸುಡುತ್ತಿದ್ದನುಅರಣ್ಯ 6:5, ಅರಣ್ಯ 6:18
    ವಚನಗಳು
    ಅರಣ್ಯ 6:5“ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
    ಅರಣ್ಯ 6:18ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.

ಉದಾಹರಣೆಗಳು

  • ಫರೋಹನ ಬಳಿಗೆ ಹೋಗುವ ಮೊದಲು ಯೋಸೇಫನು ಕ್ಷೌರಮಾಡಿಕೊಂಡನುಆದಿ 41:14
    ವಚನಗಳು
    ಆದಿ 41:14ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
  • ಸಂಸೋನನ ತಲೆಯ ಮೇಲೆ ಕ್ಷೌರಕತ್ತಿ ಬರಬಾರದಾಗಿತ್ತುನ್ಯಾಯ 13:5, ನ್ಯಾಯ 16:17
    ವಚನಗಳು
    ನ್ಯಾಯ 13:5ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
    ನ್ಯಾಯ 16:17ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
  • ದೆಲೀಲಳು ಅವನ ತಲೆಯನ್ನು ಬೋಳಿಸಿದಳು; ಆ ಮೇಲೆ ಅವನ ಕೂದಲು ಮತ್ತೆ ಬೆಳೆಯಲಾರಂಭಿಸಿತುನ್ಯಾಯ 16:19, ನ್ಯಾಯ 16:22
    ವಚನಗಳು
    ನ್ಯಾಯ 16:19ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
    ನ್ಯಾಯ 16:22ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.
  • ಹುಚ್ಚನಂತೆ ನಟಿಸುತ್ತಾ ದಾವೀದನು ತನ್ನ ಗಡ್ಡದ ಮೇಲೆ ಜೊಲ್ಲು ಸುರಿಸಿದನು1 ಸಮು 21:13
    ವಚನಗಳು
    1 ಸಮು 21:13ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
  • ಹಾನೂನನು ದಾವೀದನ ದೂತರ ಗಡ್ಡಗಳನ್ನು ಅರ್ಧ ಬೋಳಿಸಿದನು2 ಸಮು 10:4
    ವಚನಗಳು
    2 ಸಮು 10:4ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
  • ದಾವೀದನು: ನಿಮ್ಮ ಗಡ್ಡಗಳು ಮತ್ತೆ ಬೆಳೆಯುವ ತನಕ ಯೆರಿಕೋವಿನಲ್ಲಿರಿ2 ಸಮು 10:5
    ವಚನಗಳು
    2 ಸಮು 10:5ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
  • ಅಬ್ಷಾಲೋಮನ ವಾರ್ಷಿಕ ಕ್ಷೌರದ ಕೂದಲು ಇನ್ನೂರು ಶೆಕೆಲ್ ತೂಕವಿತ್ತು2 ಸಮು 14:26
    ವಚನಗಳು
    2 ಸಮು 14:26ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
  • ದಾವೀದನು ಹೊರಟುಹೋಗಿದ್ದಾಗ ಮೆಫೀಬೋಶೆತನು ತನ್ನ ಮೀಸೆಯನ್ನು ಕತ್ತರಿಸಿಕೊಳ್ಳಲಿಲ್ಲ2 ಸಮು 19:24
    ವಚನಗಳು
    2 ಸಮು 19:24ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
  • ಯೋವಾಬನು ಮುದ್ದಿಡುವವನಂತೆ ಅಮಾಸನ ಗಡ್ಡವನ್ನು ಹಿಡಿದನು2 ಸಮು 20:9
    ವಚನಗಳು
    2 ಸಮು 20:9ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
  • ಎಲೀಯನು ಕೂದಲುಳ್ಳವನೂ ಚರ್ಮದ ನಡುಕಟ್ಟು ಕಟ್ಟಿಕೊಂಡವನೂ ಆಗಿದ್ದನು2 ಅರಸು 1:8
    ವಚನಗಳು
    2 ಅರಸು 1:8ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
  • ಹುಡುಗರು ಎಲೀಷನನ್ನು ಪರಿಹಾಸ್ಯಮಾಡಿದರು: ‘ಬೋಳು ಮಂಡೆಯವನೇ ಏರಿ ಬಾ’2 ಅರಸು 2:23
    ವಚನಗಳು
    2 ಅರಸು 2:23ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.
  • ಆರೋನನ ಗಡ್ಡ ಮತ್ತು ಅದರ ಮೇಲೆ ಇಳಿಯುವ ಶ್ರೇಷ್ಠ ತೈಲಕೀರ್ತ 133:2
    ವಚನಗಳು
    ಕೀರ್ತ 133:2ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
  • ಯೋಬನು ದುಃಖದಿಂದ ತನ್ನ ತಲೆಯನ್ನು ಬೋಳಿಸಿಕೊಂಡನುಯೋಬ 1:20
    ವಚನಗಳು
    ಯೋಬ 1:20ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
  • ಎಜ್ರನು ದಿಗ್ಭ್ರಮೆಯಿಂದ ತನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತುಕೊಂಡನುಎಜ್ರ 9:3
    ವಚನಗಳು
    ಎಜ್ರ 9:3ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.
  • ಬೋಳಿಸಿದ ಗಡ್ಡಗಳೊಂದಿಗೆ ಎಂಬತ್ತು ಮಂದಿ ದುಃಖಿಗಳು ಯೆಹೋವನ ಆಲಯಕ್ಕೆ ಬಂದರುಯೆರೆ 41:5
    ವಚನಗಳು
    ಯೆರೆ 41:5ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
  • ನೆಬೂಕದ್ನೆಚ್ಚರನ ಕೂದಲು ಹದ್ದಿನ ಗರಿಗಳಂತೆ ಬೆಳೆಯಿತುದಾನಿ 4:33
    ವಚನಗಳು
    ದಾನಿ 4:33ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
  • ಒಬ್ಬ ಸ್ತ್ರೀಯು ತನ್ನ ತಲೆಕೂದಲಿನಿಂದ ಯೇಸುವಿನ ಪಾದಗಳನ್ನು ಒರಸಿದಳುಲೂಕ 7:38, ಯೋಹಾ 12:3
    ವಚನಗಳು
    ಲೂಕ 7:38ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
    ಯೋಹಾ 12:3ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
  • ಪೌಲನು ಹರಕೆಯ ನಿಮಿತ್ತ ಕೆಂಖ್ರೆಯದಲ್ಲಿ ತಲೆಯನ್ನು ಬೋಳಿಸಿಕೊಂಡನುಅ. ಕೃ 18:18
    ವಚನಗಳು
    ಅ. ಕೃ 18:18ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಶೋಕದಲ್ಲಿ

  • ಬೋಳಿಸಿದ ತಲೆಗಳೂ ಕತ್ತರಿಸಿದ ಗಡ್ಡಗಳೂ ಶೋಕದ ಗುರುತುಗಳುಯೆಶಾ 15:2, ಯೆರೆ 48:37, ಮೀಕ 1:16
    ವಚನಗಳು
    ಯೆಶಾ 15:2ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
    ಯೆರೆ 48:37ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
    ಮೀಕ 1:16ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು