ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಜೇನು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 22 ವಾಕ್ಯಭಾಗಗಳು, ಸಾಲು ಸಾಲಾಗಿ.
- ಹಾಲೂ ಜೇನೂ ಹರಿಯುವ ದೇಶವಿಮೋ 3:8, ಯಾಜ 20:24
ವಚನಗಳು
ವಿಮೋ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
ಯಾಜ 20:24ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
- ಎಣ್ಣೆಯೂ ಜೇನೂ ಇರುವ ದೇಶಧರ್ಮೋ 8:8
ವಚನಗಳು
ಧರ್ಮೋ 8:8ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.
- ಮನ್ನದ ರುಚಿ ಜೇನುತುಪ್ಪದಿಂದ ಮಾಡಿದ ಹಪ್ಪಳದಂತಿತ್ತುವಿಮೋ 16:31
ವಚನಗಳು
ವಿಮೋ 16:31ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
- ಜೇನನ್ನು ಹೋಮವಾಗಿ ಸುಡಬಾರದಾಗಿತ್ತುಯಾಜ 2:11
ವಚನಗಳು
ಯಾಜ 2:11“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
- ಬಂಡೆಯಿಂದ ಜೇನುಧರ್ಮೋ 32:13, ಕೀರ್ತ 81:16
ವಚನಗಳು
ಧರ್ಮೋ 32:13ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.
ಕೀರ್ತ 81:16ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.
ಕಥೆಗಳಲ್ಲಿ
- ಯಾಕೋಬನು ಸ್ವಲ್ಪ ಜೇನನ್ನು ಉಡುಗೊರೆಯಾಗಿ ಐಗುಪ್ತಕ್ಕೆ ಕಳುಹಿಸಿದನುಆದಿ 43:11
ವಚನಗಳು
ಆದಿ 43:11ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- ಸಂಸೋನನು ಸಿಂಹದ ಶವದಲ್ಲಿದ್ದ ಜೇನನ್ನು ತಿಂದನುನ್ಯಾಯ 14:8–9
ವಚನಗಳು
ನ್ಯಾಯ 14:8–9ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು, ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
- ಸೌಲನ ಪ್ರಮಾಣಕ್ಕೆ ವಿರುದ್ಧವಾಗಿ ಯೋನಾತಾನನು ಕಾಡಿನಲ್ಲಿ ಜೇನನ್ನು ರುಚಿನೋಡಿದನು1 ಸಮು 14:25–27, 1 ಸಮು 14:43
ವಚನಗಳು
1 ಸಮು 14:25–27ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು. ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ. ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
1 ಸಮು 14:43ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.
- ಸ್ವಲ್ಪ ಜೇನನ್ನು ರುಚಿನೋಡಿದ ನಂತರ ಅವನ ಕಣ್ಣುಗಳು ಪ್ರಕಾಶಿಸಿದವು1 ಸಮು 14:29
ವಚನಗಳು
1 ಸಮು 14:29ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.
- ಹಸಿದಿದ್ದ ದಾವೀದನ ಜನರಿಗೆ ಮಿತ್ರರು ಜೇನನ್ನು ತಂದರು2 ಸಮು 17:29
ವಚನಗಳು
2 ಸಮು 17:29ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
- ಯಾರೊಬ್ಬಾಮನ ಹೆಂಡತಿ ಪ್ರವಾದಿಯ ಬಳಿಗೆ ಒಂದು ಕುಡಿಕೆ ಜೇನನ್ನು ತೆಗೆದುಕೊಂಡು ಹೋದಳು1 ಅರಸು 14:3
ವಚನಗಳು
1 ಅರಸು 14:3ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.
- ಯೆಹೂದವು ತೂರಿನೊಂದಿಗೆ ಜೇನಿನ ವ್ಯಾಪಾರ ಮಾಡಿತುಯೆಹೆ 27:17
ವಚನಗಳು
ಯೆಹೆ 27:17“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
- ಯೋಹಾನನು ಮಿಡತೆಗಳನ್ನೂ ಕಾಡುಜೇನನ್ನೂ ತಿಂದನುಮತ್ತಾ 3:4
ವಚನಗಳು
ಮತ್ತಾ 3:4ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
ನುಡಿಗಳು
- ಮಗನೇ, ಜೇನನ್ನು ತಿನ್ನು, ಅದು ಒಳ್ಳೆಯದುಜ್ಞಾನೋ 24:13
ವಚನಗಳು
ಜ್ಞಾನೋ 24:13ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
- ಜೇನು ಸಿಕ್ಕಿದರೆ ನಿನಗೆ ಬೇಕಾದಷ್ಟನ್ನೇ ತಿನ್ನುಜ್ಞಾನೋ 25:16, ಜ್ಞಾನೋ 25:27
ವಚನಗಳು
ಜ್ಞಾನೋ 25:16ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
ಜ್ಞಾನೋ 25:27ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.
- ಹೊಟ್ಟೆ ತುಂಬಿದವನಿಗೆ ಜೇನು ಅಸಹ್ಯ; ಹಸಿದವನಿಗೆ ಕಹಿಯೂ ಸಿಹಿಜ್ಞಾನೋ 27:7
ವಚನಗಳು
ಜ್ಞಾನೋ 27:7ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.
- ಜೇನುಗೂಡಿನ ಜೇನಿಗಿಂತಲೂ ಸಿಹಿಕೀರ್ತ 19:10
ವಚನಗಳು
ಕೀರ್ತ 19:10ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
- ನನ್ನ ವಧುವೇ, ನಿನ್ನ ತುಟಿಗಳು ಜೇನುಗೂಡಿನಂತೆ ಮಾಧುರ್ಯವನ್ನು ಸುರಿಸುತ್ತವೆಪ.ಗೀ 4:11
ವಚನಗಳು
ಪ.ಗೀ 4:11ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು