ಅನ್ವೇಷಿಸಿ › ವಿಷಯಗಳು › ಕುದುರೆಗಳು
ಪ್ರಕೃತಿ
ಬೈಬಲಿನಲ್ಲಿ ಕುದುರೆಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 37 ವಾಕ್ಯಭಾಗಗಳು, ಸಾಲು ಸಾಲಾಗಿ.
- ಯೋಬನು: ಕುದುರೆಯು ತಗ್ಗಿನಲ್ಲಿ ಕಾಲಿನಿಂದ ಕೆರೆಯುತ್ತದೆ, ತನ್ನ ಬಲದಲ್ಲಿ ಉಲ್ಲಾಸಿಸಿ ಯುದ್ಧಕ್ಕೆ ನುಗ್ಗುತ್ತದೆಯೋಬ 39:19–21
ವಚನಗಳು
ಯೋಬ 39:19–21ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ? ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ. ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.
- ಅದು ಭಯವನ್ನು ಹಾಸ್ಯಮಾಡುತ್ತದೆ, ಕತ್ತಿಗೆ ಹಿಂದಿರುಗುವುದಿಲ್ಲಯೋಬ 39:22–23
ವಚನಗಳು
ಯೋಬ 39:22–23ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು. ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.
- ಟಗರಿನ ಕೊಂಬಿನ ಧ್ವನಿಗೆ ಅದು ಸುಮ್ಮನೆ ನಿಲ್ಲಲಾರದು; ಯುದ್ಧದ ವಾಸನೆಯನ್ನು ಗ್ರಹಿಸುತ್ತದೆಯೋಬ 39:24–25
ವಚನಗಳು
ಯೋಬ 39:24–25ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು. ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು.
- ಯುದ್ಧದ ಕುದುರೆಗಳ ಸುಸುಕುವಿಕೆಯೂ ಕೆನೆತವೂ ದೂರದಿಂದಲೇ ಕೇಳಿಸುತ್ತಿತ್ತುಯೆರೆ 8:16
ವಚನಗಳು
ಯೆರೆ 8:16ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
- ಬಾಯಿಗೆ ಹಾಕಿದ ಕಡಿವಾಣಗಳಿಂದ ಸವಾರರು ಇಡೀ ಪ್ರಾಣಿಯನ್ನು ನಡೆಸುತ್ತಾರೆಯಾಕೋ 3:3
ವಚನಗಳು
ಯಾಕೋ 3:3ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
- ಕುದುರೆಗಳನ್ನೂ ಹೇಸರಗತ್ತೆಗಳನ್ನೂ ಕಡಿವಾಣ ಮತ್ತು ಲಗಾಮಿನಿಂದ ಹತೋಟಿಯಲ್ಲಿಡಬೇಕುಕೀರ್ತ 32:9
ವಚನಗಳು
ಕೀರ್ತ 32:9ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
- ರಥದ ಕುದುರೆಗಳಿಗಾಗಿ ಜವೆಗೋದಿಯನ್ನೂ ಹುಲ್ಲನ್ನೂ ತರಲಾಗುತ್ತಿತ್ತು1 ಅರಸು 4:28
ವಚನಗಳು
1 ಅರಸು 4:28ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.
- ಬಂಡಿಯ ಚಕ್ರಗಳೂ ಕುದುರೆಗಳೂ ಧಾನ್ಯವನ್ನು ಜಜ್ಜದೆ ಅದರ ಮೇಲೆ ಹಾಯುತ್ತಿದ್ದವುಯೆಶಾ 28:28
ವಚನಗಳು
ಯೆಶಾ 28:28ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
ಯುದ್ಧದಲ್ಲಿ
- ಫರೋಹನ ಕುದುರೆಗಳೂ ರಥಗಳೂ ಸಮುದ್ರದ ವರೆಗೆ ಇಸ್ರಾಯೇಲರನ್ನು ಹಿಂದಟ್ಟಿದವುವಿಮೋ 14:9, ವಿಮೋ 15:19
ವಚನಗಳು
ವಿಮೋ 14:9ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
ವಿಮೋ 15:19ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.
- ಯೆಹೋಶುವನು ಶತ್ರುಗಳ ಕುದುರೆಗಳ ಕಾಲುನರ ಕಡಿದು ಅವರ ರಥಗಳನ್ನು ಸುಟ್ಟನುಯೆಹೋ 11:6, ಯೆಹೋ 11:9
ವಚನಗಳು
ಯೆಹೋ 11:6ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.
ಯೆಹೋ 11:9ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.
- ದಾವೀದನು ನೂರು ಹೊರತು ಎಲ್ಲಾ ರಥದ ಕುದುರೆಗಳ ಕಾಲುನರ ಕಡಿದನು2 ಸಮು 8:4
ವಚನಗಳು
2 ಸಮು 8:4ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
- ಅರಸನಾದ ಯೆಹೋಷಾಫಾಟನು ಅಹಾಬನಿಗೆ: “ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?”1 ಅರಸು 22:4
ವಚನಗಳು
1 ಅರಸು 22:4ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
- ಅಶ್ಶೂರ್ಯರ ಕುಚೋದ್ಯ: ಸವಾರರನ್ನು ಹತ್ತಿಸಲು ಸಾಧ್ಯವಾದರೆ ಎರಡು ಸಾವಿರ ಕುದುರೆಗಳು2 ಅರಸು 18:23
ವಚನಗಳು
2 ಅರಸು 18:23ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.
- ಅರಾಮ್ಯರನ್ನು ಹಿಂಬಾಲಿಸಲು ಸಮಾರ್ಯದ ಬೇಹುಗಾರರು ಕುದುರೆಗಳೊಂದಿಗೆ ಎರಡು ರಥಗಳನ್ನು ತೆಗೆದುಕೊಂಡರು2 ಅರಸು 7:13–14
ವಚನಗಳು
2 ಅರಸು 7:13–14ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು. ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
- “ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ”ಯೆರೆ 46:4
ವಚನಗಳು
ಯೆರೆ 46:4ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
- ಓಡುವ ಕುದುರೆಗಳ ಗೊರಸುಗಳ ಸದ್ದು ಮತ್ತು ರಥಗಳ ಗಡಗಡಯೆರೆ 47:3
ವಚನಗಳು
ಯೆರೆ 47:3ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
ಅರಸರು ಮತ್ತು ವ್ಯಾಪಾರ
- ಧರ್ಮಶಾಸ್ತ್ರ: ಅರಸನು ಅನೇಕ ಕುದುರೆಗಳನ್ನು ಕೂಡಿಸಿಕೊಳ್ಳಬಾರದುಧರ್ಮೋ 17:16
ವಚನಗಳು
ಧರ್ಮೋ 17:16ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
- ಸೊಲೊಮೋನನ ರಥದ ಕುದುರೆಗಳ ಲಾಯಗಳು, ಮತ್ತು ಅವನ ರಾಹುತರು1 ಅರಸು 4:26, 2 ಪೂರ್ವ 9:25
ವಚನಗಳು
1 ಅರಸು 4:26ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.
2 ಪೂರ್ವ 9:25ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.
- ಐಗುಪ್ತದ ಒಂದು ಕುದುರೆಗೆ 150 ಶೆಕೆಲ್ ಬೆಳ್ಳಿ, ಒಂದು ರಥಕ್ಕೆ 6001 ಅರಸು 10:28–29
ವಚನಗಳು
1 ಅರಸು 10:28–29ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು. ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.
- ಸೊಲೊಮೋನನ ಕುದುರೆಗಳು ಐಗುಪ್ತದಿಂದಲೂ ಕುವೆಯಿಂದಲೂ ಇತರ ದೇಶಗಳಿಂದಲೂ ಬಂದವು1 ಅರಸು 10:28, 2 ಪೂರ್ವ 9:28
ವಚನಗಳು
1 ಅರಸು 10:28ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
2 ಪೂರ್ವ 9:28ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.
- ತೋಗರ್ಮ ವಂಶದವರು ತೂರಿನೊಂದಿಗೆ ಕುದುರೆಗಳು, ಯುದ್ಧದ ಕುದುರೆಗಳು ಮತ್ತು ಹೇಸರಗತ್ತೆಗಳ ವ್ಯಾಪಾರ ಮಾಡಿದರುಯೆಹೆ 27:14
ವಚನಗಳು
ಯೆಹೆ 27:14“ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
- ಬಾಬಿಲೋನಿನಿಂದ ಹಿಂದಿರುಗಿದವರ ಬಳಿ 736 ಕುದುರೆಗಳೂ 245 ಹೇಸರಗತ್ತೆಗಳೂ ಇದ್ದವುಎಜ್ರ 2:66
ವಚನಗಳು
ಎಜ್ರ 2:66ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,
- ಯೆಹೂದದ ಕೆಲವರು ಐಗುಪ್ತದ ಕುದುರೆಗಳನ್ನೂ ರಥಗಳನ್ನೂ ಆಶ್ರಯಿಸಲು ಅಲ್ಲಿಗೆ ಹೋದರುಯೆಶಾ 31:1
ವಚನಗಳು
ಯೆಶಾ 31:1ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
- ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠಿಸಿದ್ದ ಕುದುರೆಗಳನ್ನು ಯೋಷೀಯನು ತೆಗೆದುಹಾಕಿದನು2 ಅರಸು 23:11
ವಚನಗಳು
2 ಅರಸು 23:11ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
- ಮೊರ್ದೆಕೈಯನ್ನು ಅರಸನ ಸ್ವಂತ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತುಎಸ್ತೇ 6:8–11
ವಚನಗಳು
ಎಸ್ತೇ 6:8–11ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು. ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು. ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು. ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.
- ಅಗ್ನಿಯ ಕುದುರೆಗಳುಳ್ಳ ಅಗ್ನಿರಥವು ಎಲೀಯನನ್ನು ಎಲೀಷನಿಂದ ಅಗಲಿಸಿತು2 ಅರಸು 2:11
ವಚನಗಳು
2 ಅರಸು 2:11ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
ನುಡಿಗಳು
- “ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ”ಯೆರೆ 4:13
ವಚನಗಳು
ಯೆರೆ 4:13ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
- “ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ”ಹಬ 1:8
ವಚನಗಳು
ಹಬ 1:8ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
- “ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ”ಜ್ಞಾನೋ 21:31
ವಚನಗಳು
ಜ್ಞಾನೋ 21:31ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.
- ಒಂದು ಕೀರ್ತನೆ: ಕುದುರೆಯ ಮಹಾ ಬಲವೂ ರಕ್ಷಿಸಲಾರದುಕೀರ್ತ 33:17
ವಚನಗಳು
ಕೀರ್ತ 33:17ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
- “ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ”ಜ್ಞಾನೋ 26:3
ವಚನಗಳು
ಜ್ಞಾನೋ 26:3ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
- “ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ?”ಆಮೋ 6:12
ವಚನಗಳು
ಆಮೋ 6:12ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.
- “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ?”ಯೆರೆ 12:5
ವಚನಗಳು
ಯೆರೆ 12:5ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು