Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಅತಿಥಿಸತ್ಕಾರ

ದೈನಂದಿನ ಜೀವನ

ಬೈಬಲಿನಲ್ಲಿ ಅತಿಥಿಸತ್ಕಾರ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 45 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಪರದೇಶಿಯನ್ನು ಪ್ರೀತಿಸಿರಿ, ನೀವೂ ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿವಿಮೋ 22:21, ವಿಮೋ 23:9, ಯಾಜ 19:33–34, ಧರ್ಮೋ 10:19
    ವಚನಗಳು
    ವಿಮೋ 22:21ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?
    ವಿಮೋ 23:9ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
    ಯಾಜ 19:33–34“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು. ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
    ಧರ್ಮೋ 10:19ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
  • ಬಡವರನ್ನೂ ಮನೆಯಿಲ್ಲದವರನ್ನೂ ನಿಮ್ಮ ಮನೆಗೆ ಸೇರಿಸಿಕೊಳ್ಳಿರಿಯೆಶಾ 58:7
    ವಚನಗಳು
    ಯೆಶಾ 58:7ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
  • ಔತಣಕ್ಕೆ ಬಡವರನ್ನೂ ಅಂಗಹೀನರನ್ನೂ ಕುಂಟರನ್ನೂ ಕುರುಡರನ್ನೂ ಕರೆಯಿರಿಲೂಕ 14:12–14
    ವಚನಗಳು
    ಲೂಕ 14:12–14ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
  • ಪ್ರತಿಯೊಂದು ತುತ್ತಿನ ಬೆಲೆಯನ್ನು ಲೆಕ್ಕಿಸುವ ಜಿಪುಣ ಆತಿಥೇಯನ ವಿಷಯದಲ್ಲಿ ಎಚ್ಚರಜ್ಞಾನೋ 23:6–8
    ವಚನಗಳು
    ಜ್ಞಾನೋ 23:6–8ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ. ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
  • “ಅತಿಥಿಸತ್ಕಾರವನ್ನು ಆಚರಿಸಿರಿ” — ಗೊಣಗುಟ್ಟದೆರೋಮಾ 12:13, 1 ಪೇತ್ರ 4:9
    ವಚನಗಳು
    ರೋಮಾ 12:13ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
    1 ಪೇತ್ರ 4:9ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
  • ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆಇಬ್ರಿ 13:2
    ವಚನಗಳು
    ಇಬ್ರಿ 13:2ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
  • ಸಭೆಯ ನಾಯಕರು ಅತಿಥಿಸತ್ಕಾರ ಮಾಡುವವರಾಗಿರಬೇಕು1 ತಿಮೊ 3:2, ತೀತ 1:8
    ವಚನಗಳು
    1 ತಿಮೊ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
    ತೀತ 1:8ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,
  • ಪರದೇಶಿಗಳನ್ನು ಸತ್ಕರಿಸಿ ಪಾದಗಳನ್ನು ತೊಳೆದದ್ದಕ್ಕಾಗಿ ಹೆಸರುವಾಸಿಯಾದ ವಿಧವೆ1 ತಿಮೊ 5:10
    ವಚನಗಳು
    1 ತಿಮೊ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.

ಉದಾಹರಣೆಗಳು

  • ಮೆಲ್ಕಿಜೆದೇಕನು ಅಬ್ರಾಮನಿಗೆ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತರುತ್ತಾನೆಆದಿ 14:18
    ವಚನಗಳು
    ಆದಿ 14:18ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
  • ಅಬ್ರಹಾಮನು ಮೂವರು ಅಪರಿಚಿತರನ್ನು ಎದುರುಗೊಳ್ಳಲು ಓಡಿಹೋಗಿ ಅವರಿಗೆ ಊಟ ಬಡಿಸುತ್ತಾನೆಆದಿ 18:1–8
    ವಚನಗಳು
    ಆದಿ 18:1–8ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು. ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ. ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ. ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
  • ಲೋಟನು ಸೊದೋಮಿನಲ್ಲಿ ಇಬ್ಬರು ಅತಿಥಿಗಳನ್ನು ತನ್ನ ಮನೆಗೆ ಸೇರಿಸಿಕೊಳ್ಳುತ್ತಾನೆಆದಿ 19:1–3
    ವಚನಗಳು
    ಆದಿ 19:1–3ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ, “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
  • ಅಬೀಮೆಲೆಕನು ಅಬ್ರಹಾಮನಿಗೆ: “ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು”ಆದಿ 20:14–15
    ವಚನಗಳು
    ಆದಿ 20:14–15ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ, “ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.
  • ಲಾಬಾನನು ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಪಡಿಸುತ್ತಾನೆಆದಿ 24:31–33
    ವಚನಗಳು
    ಆದಿ 24:31–33ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು. ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು. ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು.
  • ಲಾಬಾನನು ಯಾಕೋಬನನ್ನು ಎದುರುಗೊಳ್ಳಲು ಓಡಿಬಂದು ಅವನನ್ನು ಮನೆಗೆ ಕರೆತರುತ್ತಾನೆಆದಿ 29:13–14
    ವಚನಗಳು
    ಆದಿ 29:13–14ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.
  • ಇಸಾಕನು ಅಬೀಮೆಲೆಕನಿಗೂ ಅವನ ಜನರಿಗೂ ಔತಣವನ್ನು ಸಿದ್ಧಪಡಿಸುತ್ತಾನೆಆದಿ 26:26–30
    ವಚನಗಳು
    ಆದಿ 26:26–30ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು. ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು. ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.
  • ಯೋಸೇಫನು ಐಗುಪ್ತದಲ್ಲಿ ತನ್ನ ಅಣ್ಣಂದಿರೊಂದಿಗೆ ಊಟಮಾಡುತ್ತಾನೆಆದಿ 43:31–34
    ವಚನಗಳು
    ಆದಿ 43:31–34ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು. ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು. ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
  • ಫರೋಹನು ಯಾಕೋಬನ ಕುಟುಂಬಕ್ಕೆ ದೇಶದ ಉತ್ತಮ ಭಾಗವನ್ನು ಕೊಡುತ್ತಾನೆಆದಿ 45:17–20, ಆದಿ 47:11–12
    ವಚನಗಳು
    ಆದಿ 45:17–20ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ, ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ. ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
    ಆದಿ 47:11–12ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು. ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
  • ಇತ್ರೋ: “ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ”ವಿಮೋ 2:20
    ವಚನಗಳು
    ವಿಮೋ 2:20ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
  • ರಹಬಳು ಇಬ್ಬರು ಗೂಢಚಾರರನ್ನು ತನ್ನ ಮಾಳಿಗೆಯ ಮೇಲೆ ಅಡಗಿಸಿಡುತ್ತಾಳೆಯೆಹೋ 2:1–6
    ವಚನಗಳು
    ಯೆಹೋ 2:1–6ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು. ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು. ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ. ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು. ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.
  • ಗಿಬೆಯದ ಒಬ್ಬ ಮುದುಕನು ಪ್ರಯಾಣ ಮಾಡುತ್ತಿದ್ದ ಲೇವಿಯನನ್ನು ತನ್ನ ಮನೆಗೆ ಸೇರಿಸಿಕೊಳ್ಳುತ್ತಾನೆನ್ಯಾಯ 19:16–21
    ವಚನಗಳು
    ನ್ಯಾಯ 19:16–21ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು. ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ. ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು. ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ; ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
  • ಫರೋಹನು ಯುವಕನಾದ ಹದದನಿಗೆ ಮನೆಯನ್ನೂ ಭೂಮಿಯನ್ನೂ ಕೊಡುತ್ತಾನೆ1 ಅರಸು 11:17–19
    ವಚನಗಳು
    1 ಅರಸು 11:17–19ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು. ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು. ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು.
  • ಚಾರೆಪ್ತದ ವಿಧವೆಯು ತನ್ನ ಕೊನೆಯ ಹಿಟ್ಟನ್ನೂ ಎಣ್ಣೆಯನ್ನೂ ಎಲೀಯನೊಂದಿಗೆ ಹಂಚಿಕೊಳ್ಳುತ್ತಾಳೆ1 ಅರಸು 17:10–16
    ವಚನಗಳು
    1 ಅರಸು 17:10–16ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು. ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು. ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು. ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
  • ಶೂನೇಮಿನ ಒಬ್ಬ ಸ್ತ್ರೀಯು ಎಲೀಷನಿಗಾಗಿ ಒಂದು ಕೋಣೆಯನ್ನು ಕಟ್ಟಿಸುತ್ತಾಳೆ2 ಅರಸು 4:8–10
    ವಚನಗಳು
    2 ಅರಸು 4:8–10ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು. ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು. ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
  • ಸೆರೆಹಿಡಿದ ಅರಾಮ್ಯ ಸೈನಿಕರಿಗೆ ಎಲೀಷನು ಊಟಕೊಡಿಸಿ ಮನೆಗೆ ಕಳುಹಿಸುತ್ತಾನೆ2 ಅರಸು 6:22–23
    ವಚನಗಳು
    2 ಅರಸು 6:22–23ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು. ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.
  • ಯೋಬನು: “ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ”ಯೋಬ 31:32
    ವಚನಗಳು
    ಯೋಬ 31:32ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.
  • ಮಾರ್ಥಳು ಯೇಸುವನ್ನು ಸ್ವಾಗತಿಸುತ್ತಾಳೆ; ಬೇಥಾನ್ಯದಲ್ಲಿ ಆತನಿಗಾಗಿ ಔತಣಲೂಕ 10:38, ಯೋಹಾ 12:1–2
    ವಚನಗಳು
    ಲೂಕ 10:38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
    ಯೋಹಾ 12:1–2ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು. ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
  • ಒಬ್ಬ ಫರಿಸಾಯನು ಯೇಸುವನ್ನು ಊಟಕ್ಕೆ ಕರೆಯುತ್ತಾನೆಲೂಕ 11:37
    ವಚನಗಳು
    ಲೂಕ 11:37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
  • ಜಕ್ಕಾಯನು ಯೇಸುವನ್ನು ಸಂತೋಷದಿಂದ ಸ್ವಾಗತಿಸುತ್ತಾನೆಲೂಕ 19:5–6
    ವಚನಗಳು
    ಲೂಕ 19:5–6ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು, ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
  • ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಳ್ಳುತ್ತಾನೆಅ. ಕೃ 9:43, ಅ. ಕೃ 10:6
    ವಚನಗಳು
    ಅ. ಕೃ 9:43ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.
    ಅ. ಕೃ 10:6ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.
  • ಪೇತ್ರನು ಕೊರ್ನೆಲ್ಯನ ದೂತರನ್ನು ಒಳಗೆ ಕರೆದು ಅತಿಥಿಗಳಾಗಿ ಸತ್ಕರಿಸುತ್ತಾನೆಅ. ಕೃ 10:23
    ವಚನಗಳು
    ಅ. ಕೃ 10:23ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
  • ಲುದ್ಯಳು ಪೌಲನನ್ನೂ ಅವನ ಸಂಗಡಿಗರನ್ನೂ ತನ್ನ ಮನೆಯಲ್ಲಿ ಇಳಿದುಕೊಳ್ಳುವಂತೆ ಒತ್ತಾಯಿಸುತ್ತಾಳೆಅ. ಕೃ 16:15
    ವಚನಗಳು
    ಅ. ಕೃ 16:15ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
  • ಮೆಲೀತೆ: ದ್ವೀಪದವರು ಬೆಂಕಿ ಹೊತ್ತಿಸುತ್ತಾರೆ; ಪೊಪ್ಲಿಯನು ಮೂರು ದಿನ ಅವರನ್ನು ಸತ್ಕರಿಸುತ್ತಾನೆಅ. ಕೃ 28:2, ಅ. ಕೃ 28:7
    ವಚನಗಳು
    ಅ. ಕೃ 28:2ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
    ಅ. ಕೃ 28:7ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.
  • ಒನೇಸಿಪೊರನು ಅನೇಕಸಾರಿ ಪೌಲನನ್ನು ಉಪಚರಿಸಿದನು2 ತಿಮೊ 1:16
    ವಚನಗಳು
    2 ತಿಮೊ 1:16ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
  • ತನಗೆ ಅಪರಿಚಿತರಾಗಿದ್ದ ಪ್ರಯಾಣಿಕ ವಿಶ್ವಾಸಿಗಳನ್ನು ಗಾಯನು ಸ್ವಾಗತಿಸುತ್ತಾನೆ3 ಯೋಹಾ 1:1, 3 ಯೋಹಾ 1:5–8
    ವಚನಗಳು
    3 ಯೋಹಾ 1:1ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;
    3 ಯೋಹಾ 1:5–8ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ. ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. ಏಕೆಂದರೆ, ಅವರು ಕ್ರಿಸ್ತನ ಹೆಸರನ್ನು ಪ್ರಚುರಪಡಿಸುವ ನಿಮಿತ್ತವಾಗಿ ಹೊರಟಿದ್ದಾರೆ. ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
  • ವಾಗ್ದಾನ ಮಾಡಿದಂತೆ ಯೆರಿಕೋವಿನಲ್ಲಿ ರಹಬಳನ್ನೂ ಅವಳ ಕುಟುಂಬವನ್ನೂ ಉಳಿಸಲಾಗುತ್ತದೆಯೆಹೋ 6:22–25
    ವಚನಗಳು
    ಯೆಹೋ 6:22–25ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು. ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು. ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು