ದೈನಂದಿನ ಜೀವನ
ಬೈಬಲಿನಲ್ಲಿ ಮನೆಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 38 ವಾಕ್ಯಭಾಗಗಳು, ಸಾಲು ಸಾಲಾಗಿ.
- ದೇವದಾರು ತೊಲೆಗಳೂ ತುರಾಯಿ ಮರದ ಜಂತಿಗಳೂ ಇರುವ ಕಲ್ಲಿನ ಮನೆಗಳುಆಮೋ 5:11, ಪ.ಗೀ 1:17
- ಗೋಡೆಗಳಿಗೆ ಗಾರೆ ಮೆತ್ತುತ್ತಿದ್ದರುಯಾಜ 14:42, ದಾನಿ 5:5
- ಹತ್ತು ಮತ್ತು ಎಂಟು ಮೊಳ ಉದ್ದದ ದೊಡ್ಡ ಬೆಲೆಬಾಳುವ ಕಲ್ಲುಗಳ ಅಸ್ತಿವಾರ1 ಅರಸು 7:9–10
ವಚನಗಳು
1 ಅರಸು 7:9–10ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.
- ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟುತ್ತಾನೆ1 ಅರಸು 7:1
ವಚನಗಳು
1 ಅರಸು 7:1ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.
- ದಾವೀದನು ದೇವದಾರು ಮನೆಯಲ್ಲಿ ವಾಸಿಸುತ್ತಾನೆ2 ಸಮು 7:2
ವಚನಗಳು
2 ಸಮು 7:2ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.
- ಹಲಗೆಹೊದಿಸಿದ ಮನೆಗಳುಹಗ್ಗಾ 1:4
ವಚನಗಳು
ಹಗ್ಗಾ 1:4“ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
- ರಹಬಳ ಮನೆಯು ಪಟ್ಟಣದ ಗೋಡೆಯಲ್ಲೇ ಕಟ್ಟಲ್ಪಟ್ಟಿದೆಯೆಹೋ 2:15
ವಚನಗಳು
ಯೆಹೋ 2:15ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ
- ಸಭೆಗಳು ವಿಶ್ವಾಸಿಗಳ ಮನೆಗಳಲ್ಲಿ ಕೂಡಿಬರುತ್ತಿದ್ದವುಅ. ಕೃ 12:12, ರೋಮಾ 16:5, ಕೊಲೊ 4:15, ಫಿಲೆ 1:2
ವಚನಗಳು
ಅ. ಕೃ 12:12ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.
ರೋಮಾ 16:5ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.
ಕೊಲೊ 4:15ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.
ಫಿಲೆ 1:2ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:
ಮಾಳಿಗೆಗಳು
- ರಹಬಳು ಗೂಢಚಾರರನ್ನು ತನ್ನ ಮಾಳಿಗೆಯ ಮೇಲೆ ಹರಡಿದ್ದ ಅಗಸೆಯ ದಂಟುಗಳ ಕೆಳಗೆ ಅಡಗಿಸುತ್ತಾಳೆಯೆಹೋ 2:6
ವಚನಗಳು
ಯೆಹೋ 2:6ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.
- ಸಮುವೇಲನು ಮಾಳಿಗೆಯ ಮೇಲೆ ಸೌಲನೊಂದಿಗೆ ಮಾತನಾಡುತ್ತಾನೆ, ಸೌಲನು ಅಲ್ಲೇ ಮಲಗುತ್ತಾನೆ1 ಸಮು 9:25–26
ವಚನಗಳು
1 ಸಮು 9:25–26ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು. ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
- ಸಾಯಂಕಾಲ ದಾವೀದನು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಾನೆ2 ಸಮು 11:2
ವಚನಗಳು
2 ಸಮು 11:2ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.
- ಹಬ್ಬಕ್ಕಾಗಿ ಮಾಳಿಗೆಗಳ ಮೇಲೂ ಅಂಗಳಗಳಲ್ಲೂ ಚಪ್ಪರಗಳನ್ನು ಕಟ್ಟಲಾಗುತ್ತದೆನೆಹೆ 8:16
ವಚನಗಳು
ನೆಹೆ 8:16ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.
- ಫಿಲಿಷ್ಟಿಯರ ಗುಡಿಯ ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಜನರುನ್ಯಾಯ 16:27
ವಚನಗಳು
ನ್ಯಾಯ 16:27ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
- ಮಿತ್ರರು ಮಾಳಿಗೆಯನ್ನು ತೆರೆದು ಹೆಂಚುಗಳ ಮೂಲಕ ಪಾರ್ಶ್ವವಾಯು ರೋಗಿಯನ್ನು ಇಳಿಸುತ್ತಾರೆಮಾರ್ಕ 2:4, ಲೂಕ 5:19
ವಚನಗಳು
ಮಾರ್ಕ 2:4ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
ಲೂಕ 5:19ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
- ಒಳಕೋಣೆಗಳಲ್ಲಿ ಕಿವಿಯಲ್ಲಿ ಹೇಳಿದ್ದನ್ನು ಮಾಳಿಗೆಗಳ ಮೇಲೆ ಸಾರಲಾಗುವುದುಲೂಕ 12:3
ವಚನಗಳು
ಲೂಕ 12:3ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
ಕೋಣೆಗಳು, ಬಾಗಿಲುಗಳು ಮತ್ತು ಕಿಟಿಕಿಗಳು
- ಅರಸನಾದ ಎಗ್ಲೋನನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತಿರುತ್ತಾನೆನ್ಯಾಯ 3:20
ವಚನಗಳು
ನ್ಯಾಯ 3:20ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
- ಎಲೀಯನು ವಿಧವೆಯ ಮನೆಯ ಮೇಲಂತಸ್ತಿನ ಕೋಣೆಯಲ್ಲಿ ವಾಸಿಸುತ್ತಾನೆ1 ಅರಸು 17:19
ವಚನಗಳು
1 ಅರಸು 17:19ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
- ಪಸ್ಕಕ್ಕಾಗಿ ಅಲಂಕೃತವಾಗಿ ಸಿದ್ಧವಾಗಿರುವ ಮೇಲ್ಮಾಳಿಗೆಯ ದೊಡ್ಡ ಕೊಠಡಿಮಾರ್ಕ 14:14–15
ವಚನಗಳು
ಮಾರ್ಕ 14:14–15ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ. “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
- ಅಳುವುದಕ್ಕಾಗಿ ಯೋಸೇಫನು ಏಕಾಂತ ಕೋಣೆಗೆ ಹೋಗುತ್ತಾನೆಆದಿ 43:30
ವಚನಗಳು
ಆದಿ 43:30ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- ಅಹಜ್ಯನು ತನ್ನ ಮೇಲುಪ್ಪರಿಗೆಯ ಕಿಟಿಕಿಯ ಜಾಲರಿಯಿಂದ ಕೆಳಗೆ ಬೀಳುತ್ತಾನೆ2 ಅರಸು 1:2
ವಚನಗಳು
2 ಅರಸು 1:2ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
- ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ನೋಡುತ್ತಾಳೆನ್ಯಾಯ 5:28
ವಚನಗಳು
ನ್ಯಾಯ 5:28“ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.
- ಯೂತಿಖನು ಕಿಟಿಕಿಯಲ್ಲಿ ನಿದ್ರೆಹೋಗಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬೀಳುತ್ತಾನೆಅ. ಕೃ 20:9
ವಚನಗಳು
ಅ. ಕೃ 20:9ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
ಧರ್ಮಶಾಸ್ತ್ರದಲ್ಲಿ
- ಹೊಸ ಮನೆಯ ಮಾಳಿಗೆಗೆ ಸುತ್ತಲೂ ಕೈಪಿಡಿಗೋಡೆ ಬೇಕುಧರ್ಮೋ 22:8
ವಚನಗಳು
ಧರ್ಮೋ 22:8ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
- ಧರ್ಮಶಾಸ್ತ್ರದ ಮಾತುಗಳನ್ನು ನಿಲುವುಪಟ್ಟಿಗಳ ಮೇಲೆಯೂ ಬಾಗಿಲುಗಳ ಮೇಲೆಯೂ ಬರೆಯುವುದುಧರ್ಮೋ 6:9
ವಚನಗಳು
ಧರ್ಮೋ 6:9ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.
- ಮನೆಯಲ್ಲಿ ಬೂಷ್ಟು: ಕಲ್ಲುಗಳನ್ನು ಬದಲಾಯಿಸಿ, ಗೋಡೆಗಳನ್ನು ಕೆರೆದು ಮತ್ತೆ ಗಿಲಾವು ಮಾಡಲಾಗುತ್ತದೆಯಾಜ 14:40–45
ವಚನಗಳು
ಯಾಜ 14:40–45ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು. ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು. ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು. “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು. ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು. ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
- ಗೋಡೆಯುಳ್ಳ ಪಟ್ಟಣದಲ್ಲಿ ಮಾರಿದ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಿಕೊಳ್ಳಬಹುದಿತ್ತುಯಾಜ 25:29–30
ವಚನಗಳು
ಯಾಜ 25:29–30“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು. ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
- ಗೋಡೆಯಿಲ್ಲದ ಹಳ್ಳಿಗಳಲ್ಲಿನ ಮನೆಗಳು ಜೂಬಿಲಿ ವರ್ಷದಲ್ಲಿ ತಮ್ಮ ಯಜಮಾನರಿಗೆ ಹಿಂದಿರುಗುತ್ತವೆಯಾಜ 25:31
ವಚನಗಳು
ಯಾಜ 25:31ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
- ಹೊಸ ಮನೆ ಕಟ್ಟಿ ಇನ್ನೂ ಪ್ರತಿಷ್ಠೆ ಮಾಡದವನನ್ನು ಯುದ್ಧದಿಂದ ಮನೆಗೆ ಕಳುಹಿಸಲಾಗುತ್ತದೆಧರ್ಮೋ 20:5
ವಚನಗಳು
ಧರ್ಮೋ 20:5ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
ನುಡಿಗಳು
- ಜ್ಞಾನಿಯು ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟುತ್ತಾನೆ (ಸಾಮ್ಯ)ಮತ್ತಾ 7:24–27, ಲೂಕ 6:48
ವಚನಗಳು
ಮತ್ತಾ 7:24–27“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
ಲೂಕ 6:48ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
- ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆಜ್ಞಾನೋ 24:3
ವಚನಗಳು
ಜ್ಞಾನೋ 24:3ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
- ಜ್ಞಾನವುಳ್ಳ ಪ್ರತಿಯೊಬ್ಬ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆಜ್ಞಾನೋ 14:1
ವಚನಗಳು
ಜ್ಞಾನೋ 14:1ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು