Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಬೇಟೆ ಮತ್ತು ಬಲೆ

ದೈನಂದಿನ ಜೀವನ

ಬೈಬಲಿನಲ್ಲಿ ಬೇಟೆ ಮತ್ತು ಬಲೆ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 14 ವಾಕ್ಯಭಾಗಗಳು, ಸಾಲು ಸಾಲಾಗಿ.

  • “ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು”ಆದಿ 10:9
    ವಚನಗಳು
    ಆದಿ 10:9ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
  • ಇಷ್ಮಾಯೇಲನು ಅರಣ್ಯದಲ್ಲಿ ಬೆಳೆದು ದೊಡ್ಡ ಬಿಲ್ಲುಗಾರನಾಗುತ್ತಾನೆಆದಿ 21:20
    ವಚನಗಳು
    ಆದಿ 21:20ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
  • ಏಸಾವನು ಕುಶಲ ಬೇಟೆಗಾರನೂ ಹೊಲದಲ್ಲಿ ತಿರುಗಾಡುವವನೂ ಆಗುತ್ತಾನೆಆದಿ 25:27
    ವಚನಗಳು
    ಆದಿ 25:27ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
  • ಬೇಟೆಯ ಮಾಂಸದಲ್ಲಿ ರುಚಿಯಿದ್ದ ಇಸಾಕನು ಏಸಾವನನ್ನು ಪ್ರೀತಿಸುತ್ತಾನೆಆದಿ 25:28
    ವಚನಗಳು
    ಆದಿ 25:28ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
  • ಇಸಾಕನು ಬತ್ತಳಿಕೆ ಮತ್ತು ಬಿಲ್ಲಿನೊಂದಿಗೆ ಏಸಾವನನ್ನು ಬೇಟೆಗೆ ಕಳುಹಿಸುತ್ತಾನೆಆದಿ 27:3–5
    ವಚನಗಳು
    ಆದಿ 27:3–5ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು. ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
  • ಆಶೀರ್ವಾದಕ್ಕೆ ತಡವಾಗಿ ಏಸಾವನು ಬೇಟೆಯಿಂದ ಹಿಂದಿರುಗುತ್ತಾನೆಆದಿ 27:30–33
    ವಚನಗಳು
    ಆದಿ 27:30–33ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು. ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು. ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.

ಧರ್ಮಶಾಸ್ತ್ರದಲ್ಲಿ

  • ಬೇಟೆಯಾಡಿದ ಪ್ರಾಣಿಯ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಲಾಗುತ್ತದೆಯಾಜ 17:13
    ವಚನಗಳು
    ಯಾಜ 17:13“‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.

ಉರುಲುಗಳು ಮತ್ತು ಬಲೆಗಳು

  • ಬಲೆ, ಜಾಲ, ಉರುಲು, ಪಾಶ ಮತ್ತು ನೆಲದಲ್ಲಿ ಅಡಗಿಸಿಟ್ಟ ಕುಣಿಕೆಯೋಬ 18:8–10
    ವಚನಗಳು
    ಯೋಬ 18:8–10ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು. ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು. ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.
  • ಬಲೆಯಲ್ಲಿ ಸಿಕ್ಕಿಬಿದ್ದ ಜಿಂಕೆಯೆಶಾ 51:20
    ವಚನಗಳು
    ಯೆಶಾ 51:20ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.
  • ಪಕ್ಷಿಹಿಡುಕರು ಹೊಂಚುಹಾಕಿ ಉರುಲುಗಳನ್ನು ಒಡ್ಡುತ್ತಾರೆಯೆರೆ 5:26
    ವಚನಗಳು
    ಯೆರೆ 5:26ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
  • ದಾರಿಯುದ್ದಕ್ಕೂ ಹರಡಿದ ಬಲೆಯ ಹಗ್ಗಗಳು, ಇಟ್ಟ ಆಮಿಷಗಳುಕೀರ್ತ 140:5
    ವಚನಗಳು
    ಕೀರ್ತ 140:5ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ

ಹೋಲಿಕೆಗಳು

  • ದಾವೀದನು: ಬೆಟ್ಟಗಳಲ್ಲಿ ಕಾಡುಕೋಳಿಯನ್ನು ಬೇಟೆಯಾಡುವವನಂತೆ1 ಸಮು 26:20
    ವಚನಗಳು
    1 ಸಮು 26:20ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.
  • “ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು”ಪ್ರಲಾ 3:52
    ವಚನಗಳು
    ಪ್ರಲಾ 3:52ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.
  • “ಬೇಟೆಗಾರನ ಬಲೆಯಿಂದಲೂ” ತಪ್ಪಿಸಲ್ಪಟ್ಟುಕೀರ್ತ 91:3
    ವಚನಗಳು
    ಕೀರ್ತ 91:3ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು