ಅನ್ವೇಷಿಸಿ › ವಿಷಯಗಳು › ಸ್ವಾಸ್ತ್ಯ ಮತ್ತು ಉಯಿಲು
ದೈನಂದಿನ ಜೀವನ
ಬೈಬಲಿನಲ್ಲಿ ಸ್ವಾಸ್ತ್ಯ ಮತ್ತು ಉಯಿಲು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 39 ವಾಕ್ಯಭಾಗಗಳು, ಸಾಲು ಸಾಲಾಗಿ.
ಉದಾಹರಣೆಗಳು
- ಮಕ್ಕಳಿಲ್ಲದ ಅಬ್ರಾಮನು: ದಮಸ್ಕದ ಎಲೀಯೆಜೆರನೆಂಬ ಸೇವಕನೇ ನನ್ನ ಬಾಧ್ಯನಾಗುವನುಆದಿ 15:2–3
ವಚನಗಳು
ಆದಿ 15:2–3ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. ಪುನಃ ಅಬ್ರಾಮನು ಹೇಳಿದ್ದೇನೆಂದರೆ, “ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು” ಎಂದು ಹೇಳಿದನು.
- ಸಾರಳು: ದಾಸಿಯ ಮಗನು ಇಸಾಕನ ಸ್ವಾಸ್ತ್ಯದಲ್ಲಿ ಪಾಲುಗಾರನಾಗಬಾರದುಆದಿ 21:10
ವಚನಗಳು
ಆದಿ 21:10ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
- ಅಬ್ರಹಾಮನು ಎಲ್ಲವನ್ನೂ ಇಸಾಕನಿಗೆ ಕೊಟ್ಟು ತನ್ನ ಉಪಪತ್ನಿಯರ ಮಕ್ಕಳನ್ನು ಉಡುಗೊರೆಗಳೊಂದಿಗೆ ಕಳುಹಿಸಿಬಿಡುತ್ತಾನೆಆದಿ 24:36, ಆದಿ 25:5–6
ವಚನಗಳು
ಆದಿ 24:36ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.
ಆದಿ 25:5–6ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು. ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
- ರಾಹೇಲಳೂ ಲೇಯಳೂ: “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?”ಆದಿ 31:14–16
ವಚನಗಳು
ಆದಿ 31:14–16ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ? ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ. ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.
- ಯಾಕೋಬನು ಯೋಸೇಫನಿಗೆ ಅವನ ಅಣ್ಣಂದಿರಿಗಿಂತ ಹೆಚ್ಚಾಗಿ ಒಂದು ಭೂಭಾಗವನ್ನು ಕೊಡುತ್ತಾನೆಆದಿ 48:21–22
ವಚನಗಳು
ಆದಿ 48:21–22ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು. ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.
- ರೂಬೇನನ ಚೊಚ್ಚಲತನದ ಹಕ್ಕು ಯೋಸೇಫನ ಮಕ್ಕಳಿಗೆ ಹೋಗುತ್ತದೆ1 ಪೂರ್ವ 5:1–2
ವಚನಗಳು
1 ಪೂರ್ವ 5:1–2ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು. ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.
- ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ತಂದೆಯ ಸಹೋದರರ ನಡುವೆ ಭೂಮಿಯನ್ನು ಪಡೆಯುತ್ತಾರೆಅರಣ್ಯ 27:1–4, ಯೆಹೋ 17:3–4
ವಚನಗಳು
ಅರಣ್ಯ 27:1–4ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು. ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ. ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.
ಯೆಹೋ 17:3–4ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು. ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
- ಬೇರೊಬ್ಬ ಸ್ತ್ರೀಯ ಮಗನೆಂದು ಯೆಪ್ತಾಹನಿಗೆ ಸ್ವಾಸ್ತ್ಯವನ್ನು ನಿರಾಕರಿಸಲಾಗುತ್ತದೆನ್ಯಾಯ 11:2
ವಚನಗಳು
ನ್ಯಾಯ 11:2ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- ಸತ್ತವನ ಹೆಸರನ್ನು ಉಳಿಸಲು ಬೋವಜನು ಎಲೀಮೆಲೆಕನ ಭೂಮಿಯನ್ನು ಕೊಂಡುಕೊಳ್ಳುತ್ತಾನೆರೂತ 4:5–6, ರೂತ 4:9–10
ವಚನಗಳು
ರೂತ 4:5–6ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು. ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.
ರೂತ 4:9–10ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ; ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
- ನಾಬೋತನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಮಾರಲು ಒಪ್ಪುವುದಿಲ್ಲ1 ಅರಸು 21:2–3
ವಚನಗಳು
1 ಅರಸು 21:2–3ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು. ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.
- ಯೆಹೋಷಾಫಾಟನು ತನ್ನ ಮಕ್ಕಳಿಗೆ ಉಡುಗೊರೆಗಳನ್ನೂ ಪಟ್ಟಣಗಳನ್ನೂ, ಚೊಚ್ಚಲ ಮಗನಿಗೆ ರಾಜ್ಯವನ್ನೂ ಕೊಡುತ್ತಾನೆ2 ಪೂರ್ವ 21:3
ವಚನಗಳು
2 ಪೂರ್ವ 21:3ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
- ಯೋಬನು ತನ್ನ ಹೆಣ್ಣುಮಕ್ಕಳಿಗೆ ಅವರ ಅಣ್ಣತಮ್ಮಂದಿರ ನಡುವೆ ಸ್ವಾಸ್ತ್ಯವನ್ನು ಕೊಡುತ್ತಾನೆಯೋಬ 42:15
ವಚನಗಳು
ಯೋಬ 42:15ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.
- ಯೆರೆಮೀಯನು ಬಿಡಿಸಿಕೊಳ್ಳುವ ಹಕ್ಕಿನಿಂದ ತನ್ನ ಸೋದರಸಂಬಂಧಿಯ ಹೊಲವನ್ನು ಕೊಂಡುಕೊಳ್ಳುತ್ತಾನೆಯೆರೆ 32:7–8
ವಚನಗಳು
ಯೆರೆ 32:7–8ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು. ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.
- “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು”ಲೂಕ 12:13
ವಚನಗಳು
ಲೂಕ 12:13ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
- ಕಿರಿಯ ಮಗನು ಆಸ್ತಿಯಲ್ಲಿ ತನ್ನ ಪಾಲನ್ನು ಕೇಳುತ್ತಾನೆ (ಸಾಮ್ಯ)ಲೂಕ 15:12–13
ವಚನಗಳು
ಲೂಕ 15:12–13ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.
- ಗೇಣಿದಾರರು ಬಾಧ್ಯನನ್ನು ಕೊಂದು ಸ್ವಾಸ್ತ್ಯವನ್ನು ತೆಗೆದುಕೊಳ್ಳಲು ಸಂಚುಮಾಡುತ್ತಾರೆ (ಸಾಮ್ಯ)ಮಾರ್ಕ 12:7
ವಚನಗಳು
ಮಾರ್ಕ 12:7ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
ಧರ್ಮಶಾಸ್ತ್ರದಲ್ಲಿ
- ಮಗನಿಲ್ಲದಿದ್ದರೆ: ಮಗಳಿಗೆ, ಆ ಮೇಲೆ ಸಹೋದರರಿಗೆ, ಚಿಕ್ಕಪ್ಪಂದಿರಿಗೆ, ಹತ್ತಿರದ ಬಂಧುವಿಗೆಅರಣ್ಯ 27:8–11
ವಚನಗಳು
ಅರಣ್ಯ 27:8–11“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು. ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು. ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
- ಪ್ರೀತಿಸಲ್ಪಡದ ಹೆಂಡತಿಯ ಚೊಚ್ಚಲ ಮಗನಿಗೂ ಎರಡು ಪಾಲು ಸಿಗುತ್ತದೆಧರ್ಮೋ 21:15–17
ವಚನಗಳು
ಧರ್ಮೋ 21:15–17ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ, ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು. ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
- ಸ್ವಾಸ್ತ್ಯವಾಗಿ ಬಂದ ಭೂಮಿಯು ಒಂದು ಕುಲದಿಂದ ಇನ್ನೊಂದು ಕುಲಕ್ಕೆ ಹೋಗಬಾರದುಅರಣ್ಯ 36:7–9
ವಚನಗಳು
ಅರಣ್ಯ 36:7–9ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು. ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು. ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
- ಚೀಟು ಹಾಕಿ ದೇಶವನ್ನು ಹಂಚಲಾಗುತ್ತದೆ, ದೊಡ್ಡ ಕುಲಗಳಿಗೆ ಹೆಚ್ಚುಅರಣ್ಯ 26:53–55
ವಚನಗಳು
ಅರಣ್ಯ 26:53–55“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು. ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
- ದೇಶದಲ್ಲಿ ನಿನಗೆ ಸ್ವಾಸ್ತ್ಯವಿರುವುದಿಲ್ಲವೆಂದು ಆರೋನನಿಗೆ ಹೇಳಲಾಗುತ್ತದೆಅರಣ್ಯ 18:20
ವಚನಗಳು
ಅರಣ್ಯ 18:20ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.
- ಪ್ರಭುವು ಸೇವಕನಿಗೆ ಕೊಟ್ಟ ಉಡುಗೊರೆಯು ಬಿಡುಗಡೆಯ ವರ್ಷದಲ್ಲಿ ಹಿಂದಿರುಗುತ್ತದೆಯೆಹೆ 46:16–17
ವಚನಗಳು
ಯೆಹೆ 46:16–17ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ. ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.
ಕೊನೆಯ ಆಸೆಗಳು
- ಯಾಕೋಬನು ಕೈಗಳನ್ನು ಅಡ್ಡವಾಗಿಟ್ಟು ಎಫ್ರಾಯೀಮನನ್ನು ಮನಸ್ಸೆಗಿಂತ ಮುಂದಿಡುತ್ತಾನೆಆದಿ 48:13–14, ಆದಿ 48:19–20
ವಚನಗಳು
ಆದಿ 48:13–14ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು. ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.
ಆದಿ 48:19–20ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು. ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- ಸಾಯುವ ಮೊದಲು ಯಾಕೋಬನು ತನ್ನ ಮಕ್ಕಳನ್ನು ಕೂಡಿಸಿ ಪ್ರತಿಯೊಬ್ಬನನ್ನೂ ಆಶೀರ್ವದಿಸುತ್ತಾನೆಆದಿ 49:1, ಆದಿ 49:28, ಆದಿ 49:33
ವಚನಗಳು
ಆದಿ 49:1ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
ಆದಿ 49:28ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.
ಆದಿ 49:33ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.
- ಸೊಲೊಮೋನನಿಗೆ ದಾವೀದನ ಕೊನೆಯ ಆಜ್ಞೆ1 ಅರಸು 2:1–3
ವಚನಗಳು
1 ಅರಸು 2:1–3ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು. ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
- ಯೆಶಾಯನು ಹಿಜ್ಕೀಯನಿಗೆ: “ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ”2 ಅರಸು 20:1
ವಚನಗಳು
2 ಅರಸು 20:1ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.
- ಉಯಿಲು ಬರೆದವನು ಸತ್ತ ಮೇಲೆಯೇ ಅದು ಜಾರಿಗೆ ಬರುತ್ತದೆಇಬ್ರಿ 9:16–17
ವಚನಗಳು
ಇಬ್ರಿ 9:16–17ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ. ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ.
- ದೃಢಪಡಿಸಿದ ಮನುಷ್ಯರ ಒಡಂಬಡಿಕೆಯನ್ನು ರದ್ದುಮಾಡಲಾಗದು, ಅದಕ್ಕೆ ಏನನ್ನೂ ಸೇರಿಸಲಾಗದುಗಲಾ 3:15
ವಚನಗಳು
ಗಲಾ 3:15ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
- ಬಾಲಕನಾದ ಬಾಧ್ಯನು ಪಾಲಕರ ಮತ್ತು ಮೇಲ್ವಿಚಾರಕರ ಅಧೀನದಲ್ಲಿರುತ್ತಾನೆಗಲಾ 4:1–2
ವಚನಗಳು
ಗಲಾ 4:1–2ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.
ನುಡಿಗಳು
- ಜ್ಞಾನಿಯಾದ ಸೇವಕನು ಸಹೋದರರಲ್ಲಿ ಒಬ್ಬನಂತೆ ಸ್ವಾಸ್ತ್ಯದಲ್ಲಿ ಪಾಲು ಪಡೆಯುವನುಜ್ಞಾನೋ 17:2
ವಚನಗಳು
ಜ್ಞಾನೋ 17:2ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.
- ಕೆಟ್ಟುಹೋದ ಉದ್ಯಮದಲ್ಲಿ ಕಳೆದುಹೋದ ಐಶ್ವರ್ಯವು ಮಗನಿಗೆ ಏನನ್ನೂ ಉಳಿಸುವುದಿಲ್ಲಪ್ರಸ 5:13–14
ವಚನಗಳು
ಪ್ರಸ 5:13–14ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು. ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
- ಮನೆಯೂ ಐಶ್ವರ್ಯವೂ ಪಿತೃಗಳಿಂದ ಸ್ವಾಸ್ತ್ಯವಾಗಿ ಬರುತ್ತವೆಜ್ಞಾನೋ 19:14
ವಚನಗಳು
ಜ್ಞಾನೋ 19:14ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
- ನನ್ನ ಬಾಧ್ಯನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು?ಪ್ರಸ 2:18–19
ವಚನಗಳು
ಪ್ರಸ 2:18–19ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು. ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು