Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ದೀಪಗಳು

ದೈನಂದಿನ ಜೀವನ

ಬೈಬಲಿನಲ್ಲಿ ದೀಪಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 28 ವಾಕ್ಯಭಾಗಗಳು, ಸಾಲು ಸಾಲಾಗಿ.

ದೇವದರ್ಶನದ ಗುಡಾರದಲ್ಲಿಯೂ ದೇವಾಲಯದಲ್ಲಿಯೂ

  • ನಕಾಸಿ ಕೆಲಸದ ಚಿನ್ನದ ದೀಪಸ್ತಂಭ, ಬಾದಾಮಿ ಹೂವಿನಾಕಾರದ ಬಟ್ಟಲುಗಳುಳ್ಳ ಆರು ಕೊಂಬೆಗಳುವಿಮೋ 25:31–36
    ವಚನಗಳು
    ವಿಮೋ 25:31–36“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು. ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು. ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು. ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು. ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು. ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.
  • ಏಳು ದೀಪಗಳು, ಚಿನ್ನದ ಕತ್ತರಿಗಳೂ ತಟ್ಟೆಗಳೂವಿಮೋ 25:37–38, ವಿಮೋ 37:23
    ವಚನಗಳು
    ವಿಮೋ 25:37–38ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು. ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.
    ವಿಮೋ 37:23ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
  • ಒಂದು ತಲಾಂತು ಅಪ್ಪಟ ಚಿನ್ನದಿಂದ ಮಾಡಲ್ಪಟ್ಟದ್ದುವಿಮೋ 25:39, ವಿಮೋ 37:24
    ವಚನಗಳು
    ವಿಮೋ 25:39ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.
    ವಿಮೋ 37:24ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
  • ಹಿಂಡಿದ ಎಣ್ಣೆಕಾಯಿಗಳ ಶುದ್ಧ ಎಣ್ಣೆಯು ದೀಪಗಳನ್ನು ಉರಿಸುತ್ತದೆವಿಮೋ 27:20, ಯಾಜ 24:2
    ವಚನಗಳು
    ವಿಮೋ 27:20ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
    ಯಾಜ 24:2“ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
  • ಆರೋನನು ಸಾಯಂಕಾಲದಿಂದ ಬೆಳಗಿನ ವರೆಗೆ ದೀಪಗಳನ್ನು ನೋಡಿಕೊಳ್ಳುತ್ತಾನೆವಿಮೋ 27:21, ಯಾಜ 24:3–4
    ವಚನಗಳು
    ವಿಮೋ 27:21ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
    ಯಾಜ 24:3–4ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ. ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.
  • ಬೆಳಿಗ್ಗೆಯೂ ಸಂಜೆಯೂ ದೀಪಗಳನ್ನು ಸರಿಪಡಿಸುವಾಗ ಧೂಪವನ್ನು ಸುಡಲಾಗುತ್ತದೆವಿಮೋ 30:7–8
    ವಚನಗಳು
    ವಿಮೋ 30:7–8“ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
  • ದೀಪಸ್ತಂಭದ ಮುಂಭಾಗಕ್ಕೆ ಬೆಳಕು ಬೀಳುವಂತೆ ದೀಪಗಳನ್ನು ಇಡಲಾಗುತ್ತದೆಅರಣ್ಯ 8:2–3
    ವಚನಗಳು
    ಅರಣ್ಯ 8:2–3“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
  • ದೀಪಸ್ತಂಭವು ಮೇಜಿನ ಎದುರಾಗಿ ದಕ್ಷಿಣ ಭಾಗದಲ್ಲಿ ನಿಂತಿದೆವಿಮೋ 40:24–25
    ವಚನಗಳು
    ವಿಮೋ 40:24–25ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
  • ಪ್ರಯಾಣದಲ್ಲಿ ಅದನ್ನು ನೀಲಿ ಬಟ್ಟೆಯಿಂದ ಮುಚ್ಚಲಾಗುತ್ತದೆಅರಣ್ಯ 4:9
    ವಚನಗಳು
    ಅರಣ್ಯ 4:9ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ
  • ದೇವರ ದೀಪವು ಆರಿಹೋಗುವ ಮೊದಲು ಸಮುವೇಲನು ಮಲಗಿಕೊಳ್ಳುತ್ತಾನೆ1 ಸಮು 3:3
    ವಚನಗಳು
    1 ಸಮು 3:3ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.
  • ಸೊಲೊಮೋನನು ಹತ್ತು ಚಿನ್ನದ ದೀಪಸ್ತಂಭಗಳನ್ನು ಮಾಡಿಸುತ್ತಾನೆ, ಎರಡೂ ಕಡೆ ಐದೈದು1 ಅರಸು 7:49, 2 ಪೂರ್ವ 4:7
    ವಚನಗಳು
    1 ಅರಸು 7:49ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,
    2 ಪೂರ್ವ 4:7ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.
  • ಚಿನ್ನದ ದೀಪಸ್ತಂಭದ ದೀಪಗಳನ್ನು ಪ್ರತಿ ಸಾಯಂಕಾಲ ಹಚ್ಚಲಾಗುತ್ತದೆ2 ಪೂರ್ವ 13:11
    ವಚನಗಳು
    2 ಪೂರ್ವ 13:11ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
  • ಹಿಜ್ಕೀಯನು: ನಮ್ಮ ಪಿತೃಗಳು ದೇವಾಲಯದ ಮಂಟಪವನ್ನು ಮುಚ್ಚಿ ದೀಪಗಳನ್ನು ಆರಿಸಿಬಿಟ್ಟರು2 ಪೂರ್ವ 29:6–7
    ವಚನಗಳು
    2 ಪೂರ್ವ 29:6–7ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು. ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
  • ಬಾಬಿಲೋನ್ಯರು ದೀಪಸ್ತಂಭಗಳನ್ನು ಕೊಂಡೊಯ್ಯುತ್ತಾರೆಯೆರೆ 52:19
    ವಚನಗಳು
    ಯೆರೆ 52:19ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.

ಮನೆಯಲ್ಲಿ

  • ಜನರು ದೀಪವನ್ನು ಕೊಳಗದ ಕೆಳಗಾಗಲಿ ಮಂಚದ ಕೆಳಗಾಗಲಿ ಅಲ್ಲ, ದೀಪಸ್ತಂಭದ ಮೇಲೆ ಇಡುತ್ತಾರೆಮತ್ತಾ 5:15, ಮಾರ್ಕ 4:21, ಲೂಕ 8:16, ಲೂಕ 11:33
    ವಚನಗಳು
    ಮತ್ತಾ 5:15ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
    ಮಾರ್ಕ 4:21ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
    ಲೂಕ 8:16“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
    ಲೂಕ 11:33“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
  • ಕಳೆದುಹೋದ ನಾಣ್ಯಕ್ಕಾಗಿ ಒಬ್ಬ ಸ್ತ್ರೀಯು ದೀಪ ಹಚ್ಚಿ ಮನೆಯನ್ನು ಗುಡಿಸುತ್ತಾಳೆಲೂಕ 15:8
    ವಚನಗಳು
    ಲೂಕ 15:8“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?
  • ಗುಣವತಿಯಾದ ಹೆಂಡತಿಯ ದೀಪವು ರಾತ್ರಿಯಲ್ಲಿ ಆರುವುದಿಲ್ಲಜ್ಞಾನೋ 31:18
    ವಚನಗಳು
    ಜ್ಞಾನೋ 31:18ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
  • ದೀಪಸ್ತಂಭದ ಬಳಿ ಅರಮನೆಯ ಗೋಡೆಯ ಮೇಲೆ ಬರಹವು ಕಾಣಿಸಿಕೊಳ್ಳುತ್ತದೆದಾನಿ 5:5
    ವಚನಗಳು
    ದಾನಿ 5:5ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.
  • ತ್ರೋವದಲ್ಲಿ ಮೇಲಂತಸ್ತಿನ ಕೋಣೆಯಲ್ಲಿ ಅನೇಕ ದೀಪಗಳುಅ. ಕೃ 20:8
    ವಚನಗಳು
    ಅ. ಕೃ 20:8ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
  • ದೀಪಗಳೊಂದಿಗೆ ಹತ್ತು ಕನ್ಯೆಯರು; ಐವರು ಹೆಚ್ಚಿನ ಎಣ್ಣೆಯನ್ನು ತರುವುದಿಲ್ಲ (ಸಾಮ್ಯ)ಮತ್ತಾ 25:1–8
    ವಚನಗಳು
    ಮತ್ತಾ 25:1–8“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು