Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕುಷ್ಠ

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಕುಷ್ಠ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 25 ವಾಕ್ಯಭಾಗಗಳು, ಸಾಲು ಸಾಲಾಗಿ.

ಧರ್ಮಶಾಸ್ತ್ರದಲ್ಲಿ

  • ಚರ್ಮದ ಮೇಲಿನ ಯಾವುದೇ ಬಾವು, ಗುಳ್ಳೆ ಅಥವಾ ಹೊಳೆಯುವ ಮಚ್ಚೆಯನ್ನು ಯಾಜಕನು ಪರೀಕ್ಷಿಸುತ್ತಿದ್ದನುಯಾಜ 13:2–3
    ವಚನಗಳು
    ಯಾಜ 13:2–3“ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು. ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
  • ರೋಗಿಯು ಹರಿದ ಬಟ್ಟೆಗಳನ್ನು ಧರಿಸಿ ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗುತ್ತಿದ್ದನುಯಾಜ 13:45
    ವಚನಗಳು
    ಯಾಜ 13:45“ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.
  • ಅವನು ಪಾಳೆಯದ ಹೊರಗೆ ಒಬ್ಬನೇ ವಾಸಿಸಬೇಕಾಗಿತ್ತುಯಾಜ 13:46, ಅರಣ್ಯ 5:2
    ವಚನಗಳು
    ಯಾಜ 13:46ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.
    ಅರಣ್ಯ 5:2“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
  • ಅದೇ ನಿಯಮವು ಬಟ್ಟೆಗಳಲ್ಲಿಯೂ ಮನೆಗಳಲ್ಲಿಯೂ ಇರುವ ಬೂಷ್ಟಿಗೂ ಅನ್ವಯಿಸುತ್ತಿತ್ತುಯಾಜ 13:47, ಯಾಜ 14:34
    ವಚನಗಳು
    ಯಾಜ 13:47“ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
    ಯಾಜ 14:34“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
  • ಶುದ್ಧೀಕರಣ: ಎರಡು ಪಕ್ಷಿಗಳು, ದೇವದಾರು ಮರ, ರಕ್ತವರ್ಣದ ನೂಲು ಮತ್ತು ಹಿಸ್ಸೋಪ್ಯಾಜ 14:4
    ವಚನಗಳು
    ಯಾಜ 14:4ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
  • ಶುದ್ಧನಾದವನು ತನ್ನ ಕೂದಲನ್ನೆಲ್ಲಾ ಕ್ಷೌರಮಾಡಿಕೊಂಡು ಸ್ನಾನಮಾಡುತ್ತಿದ್ದನುಯಾಜ 14:8–9
    ವಚನಗಳು
    ಯಾಜ 14:8–9ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು. ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.

ಉದಾಹರಣೆಗಳು

  • ಮೋಶೆಯ ಕೈ ಕುಷ್ಠದಿಂದ ಹಿಮದಂತೆ ಬೆಳ್ಳಗಾಯಿತುವಿಮೋ 4:6
    ವಚನಗಳು
    ವಿಮೋ 4:6ಯೆಹೋವನು ತಿರುಗಿ ಅವನಿಗೆ, “ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ” ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.
  • ಮಿರ್ಯಾಮಳು ಕುಷ್ಠರೋಗಿಯಾಗಿ ಏಳು ದಿನ ಪಾಳೆಯದ ಹೊರಗೆ ಇರಿಸಲ್ಪಟ್ಟಳುಅರಣ್ಯ 12:10, ಅರಣ್ಯ 12:15
    ವಚನಗಳು
    ಅರಣ್ಯ 12:10ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.
    ಅರಣ್ಯ 12:15ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.
  • ಅರಾಮ್ಯ ಸೇನಾಪತಿಯಾದ ನಾಮಾನನು ಕುಷ್ಠರೋಗಿಯಾಗಿದ್ದನು2 ಅರಸು 5:1
    ವಚನಗಳು
    2 ಅರಸು 5:1ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.
  • ಅವನು ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು, ಅವನ ಚರ್ಮವು ಮೊದಲಿನಂತಾಯಿತು2 ಅರಸು 5:14
    ವಚನಗಳು
    2 ಅರಸು 5:14ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
  • ಗೇಹಜಿಯು ಹಿಮದಂತೆ ಬೆಳ್ಳಗಾದ ಕುಷ್ಠರೋಗಿಯಾಗಿ ಎಲೀಷನ ಬಳಿಯಿಂದ ಹೊರಟುಹೋದನು2 ಅರಸು 5:27
    ವಚನಗಳು
    2 ಅರಸು 5:27ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.
  • ಸಮಾರ್ಯದ ಬಾಗಿಲ ಬಳಿಯಿದ್ದ ನಾಲ್ಕು ಮಂದಿ ಕುಷ್ಠರೋಗಿಗಳು ಅರಾಮ್ಯರ ಪಾಳೆಯವನ್ನು ಬರಿದಾಗಿ ಕಂಡರು2 ಅರಸು 7:3–8
    ವಚನಗಳು
    2 ಅರಸು 7:3–8ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ? ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು. ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ. ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು, ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು. ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
  • ದೇವಾಲಯದಲ್ಲಿ ಅರಸನಾದ ಉಜ್ಜೀಯನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು2 ಪೂರ್ವ 26:19–20
    ವಚನಗಳು
    2 ಪೂರ್ವ 26:19–20ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು. ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
  • ಉಜ್ಜೀಯನು ಸಾಯುವ ತನಕ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು2 ಅರಸು 15:5, 2 ಪೂರ್ವ 26:21
    ವಚನಗಳು
    2 ಅರಸು 15:5ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
    2 ಪೂರ್ವ 26:21ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
  • ಅವನನ್ನು ಅರಸರ ಸಮಾಧಿಗಳ ಬಳಿಯ ಹೊಲದಲ್ಲಿ ಹೂಣಿಟ್ಟರು2 ಪೂರ್ವ 26:23
    ವಚನಗಳು
    2 ಪೂರ್ವ 26:23ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
  • ಯೇಸು ಒಬ್ಬ ಕುಷ್ಠರೋಗಿಯನ್ನು ಮುಟ್ಟಿದನು, ಅವನು ಶುದ್ಧನಾದನುಮಾರ್ಕ 1:40–42
    ವಚನಗಳು
    ಮಾರ್ಕ 1:40–42ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
  • ಯಾಜಕನಿಗೆ ತನ್ನನ್ನು ತೋರಿಸಿಕೊಳ್ಳುವಂತೆ ಆತನು ಅವನನ್ನು ಕಳುಹಿಸಿದನುಮತ್ತಾ 8:4, ಲೂಕ 5:14
    ವಚನಗಳು
    ಮತ್ತಾ 8:4ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.
    ಲೂಕ 5:14ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
  • ವಾಸಿಯಾದ ಹತ್ತು ಮಂದಿ ಕುಷ್ಠರೋಗಿಗಳಲ್ಲಿ ಒಬ್ಬ ಸಮಾರ್ಯದವನು ಮಾತ್ರ ಕೃತಜ್ಞತೆ ಸಲ್ಲಿಸಲು ಹಿಂದಿರುಗಿದನುಲೂಕ 17:12–16
    ವಚನಗಳು
    ಲೂಕ 17:12–16ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, “ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು. ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
  • ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಮಾಡಿದನುಮತ್ತಾ 26:6, ಮಾರ್ಕ 14:3
    ವಚನಗಳು
    ಮತ್ತಾ 26:6ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು
    ಮಾರ್ಕ 14:3ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು