ದೈನಂದಿನ ಜೀವನ
ಬೈಬಲಿನಲ್ಲಿ ಪತ್ರಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 38 ವಾಕ್ಯಭಾಗಗಳು, ಸಾಲು ಸಾಲಾಗಿ.
ಅರಸರೂ ಅಧಿಕಾರಿಗಳೂ
- ಊರೀಯನ ಮರಣವನ್ನು ಆಜ್ಞಾಪಿಸುವ ಪತ್ರವನ್ನು ಅವನ ಕೈಯಲ್ಲೇ ಕೊಟ್ಟು ದಾವೀದನು ಅವನನ್ನು ಕಳುಹಿಸುತ್ತಾನೆ2 ಸಮು 11:14–15
ವಚನಗಳು
2 ಸಮು 11:14–15ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು. ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.
- ಈಜೆಬೆಲಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವನ ಮುದ್ರೆಯಿಂದ ಮುದ್ರಿಸುತ್ತಾಳೆ1 ಅರಸು 21:8–11
ವಚನಗಳು
1 ಅರಸು 21:8–11ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ, ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು. ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.
- ಅರಾಮಿನ ಅರಸನು ಪತ್ರದೊಂದಿಗೆ ನಾಮಾನನನ್ನು ಕಳುಹಿಸುತ್ತಾನೆ2 ಅರಸು 5:5–7
ವಚನಗಳು
2 ಅರಸು 5:5–7ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ, ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು. ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.
- ಅಹಾಬನ ಎಪ್ಪತ್ತು ಮಕ್ಕಳ ಪಾಲಕರಿಗೆ ಯೇಹುವು ಪತ್ರ ಬರೆಯುತ್ತಾನೆ2 ಅರಸು 10:1–7
ವಚನಗಳು
2 ಅರಸು 10:1–7ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು. ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ. ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು. ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು. ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು. ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು. ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
- ಹಿಜ್ಕೀಯನು ಅಶ್ಶೂರದ ಅರಸನ ಪತ್ರವನ್ನು ಯೆಹೋವನ ಮುಂದೆ ಹರಡುತ್ತಾನೆ2 ಅರಸು 19:14, ಯೆಶಾ 37:14
ವಚನಗಳು
2 ಅರಸು 19:14ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
ಯೆಶಾ 37:14ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
- ಬಾಬಿಲೋನಿನ ಅರಸನು ಹಿಜ್ಕೀಯನಿಗೆ ಪತ್ರಗಳನ್ನೂ ಕಾಣಿಕೆಯನ್ನೂ ಕಳುಹಿಸುತ್ತಾನೆ2 ಅರಸು 20:12, ಯೆಶಾ 39:1
ವಚನಗಳು
2 ಅರಸು 20:12ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
ಯೆಶಾ 39:1ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
- ಎಲೀಯನಿಂದ ಬಂದ ಪತ್ರವು ಅರಸನಾದ ಯೆಹೋರಾಮನಿಗೆ ತಲುಪುತ್ತದೆ2 ಪೂರ್ವ 21:12
ವಚನಗಳು
2 ಪೂರ್ವ 21:12ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;
- ಹಿಜ್ಕೀಯನ ಪಸ್ಕದ ಆಮಂತ್ರಣವನ್ನು ಅಂಚೆಯವರು ಇಸ್ರಾಯೇಲಿನಲ್ಲೆಲ್ಲಾ ಒಯ್ಯುತ್ತಾರೆ2 ಪೂರ್ವ 30:1, 2 ಪೂರ್ವ 30:6
ವಚನಗಳು
2 ಪೂರ್ವ 30:1ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
2 ಪೂರ್ವ 30:6ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
- ಯೆರೂಸಲೇಮಿಗೆ ವಿರುದ್ಧವಾಗಿ ಅರಾಮ್ಯ ಭಾಷೆಯಲ್ಲಿ ಬರೆದ ಪತ್ರವು ಅರ್ತಷಸ್ತನಿಗೆಎಜ್ರ 4:7–8, ಎಜ್ರ 4:11
ವಚನಗಳು
ಎಜ್ರ 4:7–8ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು. ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
ಎಜ್ರ 4:11ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
- ದೇಶಾಧಿಪತಿಯಾದ ತತ್ತೆನೈ ಅರಸನಾದ ದಾರ್ಯಾವೆಷನಿಗೆ ಬರೆದ ವರದಿಎಜ್ರ 5:6–7
ವಚನಗಳು
ಎಜ್ರ 5:6–7ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು. ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.
- ನೆಹೆಮೀಯನು ಸುರಕ್ಷಿತವಾಗಿ ಹಾದುಹೋಗಲು ಪತ್ರಗಳನ್ನೂ ಮರವನ್ನೂ ಕೇಳುತ್ತಾನೆನೆಹೆ 2:7–9
ವಚನಗಳು
ನೆಹೆ 2:7–9ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು. ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
- ಸನ್ಬಲ್ಲಟನು ನೆಹೆಮೀಯನಿಗೆ ಮುದ್ರೆಯಿಲ್ಲದ ಪತ್ರವನ್ನು ಕಳುಹಿಸುತ್ತಾನೆನೆಹೆ 6:5–7
ವಚನಗಳು
ನೆಹೆ 6:5–7ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು. ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ. ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
- ಹಾಮಾನನ ಪತ್ರಗಳು ಅಂಚೆಯವರ ಮೂಲಕ ಪ್ರತಿಯೊಂದು ಸಂಸ್ಥಾನಕ್ಕೂ ಹೋಗುತ್ತವೆಎಸ್ತೇ 3:13
ವಚನಗಳು
ಎಸ್ತೇ 3:13ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
- ಮೊರ್ದೆಕೈ ಅರಸನ ಮುದ್ರೆಯುಂಗುರದಿಂದ ಪತ್ರಗಳಿಗೆ ಮುದ್ರೆಹಾಕುತ್ತಾನೆ; ಅಂಚೆಯವರು ವೇಗವಾದ ಕುದುರೆಗಳ ಮೇಲೆ ಹೋಗುತ್ತಾರೆಎಸ್ತೇ 8:10
ವಚನಗಳು
ಎಸ್ತೇ 8:10ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
- ಹತ್ತಿರದಲ್ಲಿಯೂ ದೂರದಲ್ಲಿಯೂ ಇರುವ ಯೆಹೂದ್ಯರಿಗೆ ಪೂರೀಮ್ ಕುರಿತು ಮೊರ್ದೆಕೈ ಬರೆದ ಪತ್ರಗಳುಎಸ್ತೇ 9:20
ವಚನಗಳು
ಎಸ್ತೇ 9:20ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
- ಬಾಬಿಲೋನಿನಲ್ಲಿರುವ ಸೆರೆಯವರಿಗೆ ಯೆರೆಮೀಯನ ಪತ್ರಯೆರೆ 29:1
ವಚನಗಳು
ಯೆರೆ 29:1ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
- ಸಹಸ್ರಾಧಿಪತಿಯಾದ ಕ್ಲೌದ್ಯ ಲೂಸ್ಯನು ದೇಶಾಧಿಪತಿಯಾದ ಫೇಲಿಕ್ಸನಿಗೆ ಬರೆಯುತ್ತಾನೆಅ. ಕೃ 23:25–30
ವಚನಗಳು
ಅ. ಕೃ 23:25–30ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ; “ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ. ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು. ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು. ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು. ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
ಆದಿ ಸಭೆಯಲ್ಲಿ
- ಲೂಕನು ಥೆಯೊಫಿಲನಿಗಾಗಿ ಕ್ರಮಬದ್ಧವಾದ ವೃತ್ತಾಂತವನ್ನು ಬರೆಯುತ್ತಾನೆಲೂಕ 1:3, ಅ. ಕೃ 1:1
- ದಮಸ್ಕದ ಸಭಾಮಂದಿರಗಳಿಗೆ ಪತ್ರಗಳನ್ನು ಕೊಡಬೇಕೆಂದು ಸೌಲನು ಕೇಳುತ್ತಾನೆಅ. ಕೃ 9:2
ವಚನಗಳು
ಅ. ಕೃ 9:2ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
- ಯೆರೂಸಲೇಮಿನ ಸಭೆಕೂಟದ ಪತ್ರವನ್ನು ಅಂತಿಯೋಕ್ಯದಲ್ಲಿ ಓದಲಾಗುತ್ತದೆಅ. ಕೃ 15:23, ಅ. ಕೃ 15:30
ವಚನಗಳು
ಅ. ಕೃ 15:23ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
ಅ. ಕೃ 15:30ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
- ಅಖಾಯದಲ್ಲಿ ಅಪೊಲ್ಲೋಸನನ್ನು ಸ್ವಾಗತಿಸುವಂತೆ ಸಹೋದರರು ಬರೆಯುತ್ತಾರೆಅ. ಕೃ 18:27
ವಚನಗಳು
ಅ. ಕೃ 18:27ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
- ರೋಮಿನ ಯೆಹೂದ್ಯ ಮುಖಂಡರು: “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ”ಅ. ಕೃ 28:21
ವಚನಗಳು
ಅ. ಕೃ 28:21ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.
- ರೋಮಾಪುರದವರಿಗೆ ಬರೆದ ಪತ್ರವನ್ನು ತೆರ್ತ್ಯನು ಬರೆದನುರೋಮಾ 16:22
ವಚನಗಳು
ರೋಮಾ 16:22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
- ಕೊರಿಂಥಕ್ಕೆ ಮೊದಲು ಬರೆದ ಒಂದು ಪತ್ರವನ್ನು ಪೌಲನು ಉಲ್ಲೇಖಿಸುತ್ತಾನೆ1 ಕೊರಿ 5:9
ವಚನಗಳು
1 ಕೊರಿ 5:9ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
- ಶಿಫಾರಸು ಪತ್ರಗಳು2 ಕೊರಿ 3:1
ವಚನಗಳು
2 ಕೊರಿ 3:1ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?
- “ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ”ಗಲಾ 6:11
ವಚನಗಳು
ಗಲಾ 6:11ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.
- ಪೌಲನ ಸ್ವಂತ ಕೈಬರಹದ ವಂದನೆಯು ಪ್ರತಿಯೊಂದು ಪತ್ರದ ಗುರುತು2 ಥೆಸ 3:17
ವಚನಗಳು
2 ಥೆಸ 3:17ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
- ನಮ್ಮಿಂದ ಬಂದಂತೆ ತೋರುವ ಪತ್ರದ ವಿಷಯದಲ್ಲಿ ಎಚ್ಚರಿಕೆ2 ಥೆಸ 2:2
ವಚನಗಳು
2 ಥೆಸ 2:2ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
- ಕೊಲೊಸ್ಸೆ ಮತ್ತು ಲವೊದಿಕೀಯದವರು ಪತ್ರಗಳನ್ನು ಬದಲಾಯಿಸಿಕೊಳ್ಳಬೇಕುಕೊಲೊ 4:16
ವಚನಗಳು
ಕೊಲೊ 4:16ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.
- ಪೌಲನು ಓನೇಸಿಮನ ಕುರಿತು ಫಿಲೆಮೋನನಿಗೆ ಬರೆಯುತ್ತಾನೆಫಿಲೆ 1:1, ಫಿಲೆ 1:10
- ಪೇತ್ರನು: ಪೌಲನ ಪತ್ರಗಳ ಕೆಲವು ಭಾಗಗಳು ತಿಳಿಯಲು ಕಷ್ಟಕರ2 ಪೇತ್ರ 3:16
ವಚನಗಳು
2 ಪೇತ್ರ 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು