ಅನ್ವೇಷಿಸಿ › ವಿಷಯಗಳು › ತಾವರೆಗಳು ಮತ್ತು ಹುಲ್ಲು
ಪ್ರಕೃತಿ
ಬೈಬಲಿನಲ್ಲಿ ತಾವರೆಗಳು ಮತ್ತು ಹುಲ್ಲು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 35 ವಾಕ್ಯಭಾಗಗಳು, ಸಾಲು ಸಾಲಾಗಿ.
ತಾವರೆಗಳು
- ದೇವಾಲಯದ ಮಂಟಪದ ಕಂಬಗಳ ಬೋದಿಗೆಗಳು ತಾವರೆಯ ಆಕಾರದಲ್ಲಿದ್ದವು1 ಅರಸು 7:19, 1 ಅರಸು 7:22
ವಚನಗಳು
1 ಅರಸು 7:19ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.
1 ಅರಸು 7:22ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.
- ತಾಮ್ರದ ಸಮುದ್ರದ ಅಂಚು ತಾವರೆಯ ಹೂವಿನಂತಿತ್ತು1 ಅರಸು 7:26, 2 ಪೂರ್ವ 4:5
ವಚನಗಳು
1 ಅರಸು 7:26ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
2 ಪೂರ್ವ 4:5ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.
- “ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ”ಮತ್ತಾ 6:28, ಲೂಕ 12:27
ವಚನಗಳು
ಮತ್ತಾ 6:28ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
ಲೂಕ 12:27ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿ ಇವುಗಳಲ್ಲಿ ಒಂದರಂತೆಯೂ ಅಲಂಕರಿಸಿಕೊಂಡಿರಲಿಲ್ಲಮತ್ತಾ 6:29
ವಚನಗಳು
ಮತ್ತಾ 6:29ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
- ಕುರುಬನು ತಾವರೆಗಳ ನಡುವೆ ತನ್ನ ಮಂದೆಯನ್ನು ಮೇಯಿಸುತ್ತಾನೆಪ.ಗೀ 2:16, ಪ.ಗೀ 6:3
- ತಾವರೆಗಳನ್ನು ಕೊಯ್ಯಲು ಪ್ರಿಯನು ತನ್ನ ತೋಟಕ್ಕೆ ಇಳಿದುಹೋಗುತ್ತಾನೆಪ.ಗೀ 6:2
ವಚನಗಳು
ಪ.ಗೀ 6:2ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.
- “ತಗ್ಗಿನ ತಾವರೆ” … “ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು”ಪ.ಗೀ 2:1–2
ವಚನಗಳು
ಪ.ಗೀ 2:1–2ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ. ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
- “ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ”ಪ.ಗೀ 5:13
ವಚನಗಳು
ಪ.ಗೀ 5:13ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
- ತಾವರೆಗಳ ನಡುವೆ ಮೇಯುವ ಅವಳಿ ಜಿಂಕೆಮರಿಗಳುಪ.ಗೀ 4:5
ವಚನಗಳು
ಪ.ಗೀ 4:5ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.
ಹುಲ್ಲು
- ಪಶುಗಳಿಗಾಗಿಯೂ ಬೆಟ್ಟಗಳ ಮೇಲೂ ಹುಲ್ಲು ಬೆಳೆಯುತ್ತದೆಕೀರ್ತ 104:14, ಕೀರ್ತ 147:8, ಧರ್ಮೋ 11:15
ವಚನಗಳು
ಕೀರ್ತ 104:14ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,
ಕೀರ್ತ 147:8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಧರ್ಮೋ 11:15ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.
- ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಕೀರ್ತ 72:6
ವಚನಗಳು
ಕೀರ್ತ 72:6ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
- ಮಾಳಿಗೆಗಳ ಮೇಲಿನ ಹುಲ್ಲು ಬೆಳೆಯುವ ಮೊದಲೇ ಒಣಗುತ್ತದೆಕೀರ್ತ 129:6–7, 2 ಅರಸು 19:26
ವಚನಗಳು
ಕೀರ್ತ 129:6–7ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
2 ಅರಸು 19:26ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
- ಹೊಲದ ಹುಲ್ಲು: ಈ ಹೊತ್ತು ಇದೆ, ನಾಳೆ ಒಲೆಯಲ್ಲಿ ಹಾಕಲ್ಪಡುತ್ತದೆಮತ್ತಾ 6:30, ಲೂಕ 12:28
ವಚನಗಳು
ಮತ್ತಾ 6:30ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!
ಲೂಕ 12:28ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
- ಒಣಹುಲ್ಲನ್ನು ತೆಗೆದಾಗ ಹೊಸ ಚಿಗುರು ಕಾಣಿಸಿಕೊಳ್ಳುತ್ತದೆಜ್ಞಾನೋ 27:25
ವಚನಗಳು
ಜ್ಞಾನೋ 27:25ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.
- ಸುಡುವ ಬಿಸಿಲು ಗಿಡವನ್ನು ಒಣಗಿಸುತ್ತದೆ, ಅದರ ಹೂವು ಉದುರುತ್ತದೆಯಾಕೋ 1:11
ವಚನಗಳು
ಯಾಕೋ 1:11ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
- ಬರದಲ್ಲಿ ಅಹಾಬನು ಕುದುರೆಗಳಿಗೆ ಹುಲ್ಲಿಗಾಗಿ ಪ್ರತಿಯೊಂದು ಬುಗ್ಗೆಯನ್ನೂ ತಗ್ಗನ್ನೂ ಹುಡುಕಿದನು1 ಅರಸು 18:5
ವಚನಗಳು
1 ಅರಸು 18:5ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
- ನಿಮ್ರೀಮಿನ ನೀರು ಬತ್ತಿಹೋಯಿತು, ಹುಲ್ಲು ಬಾಡಿತುಯೆಶಾ 15:6
ವಚನಗಳು
ಯೆಶಾ 15:6ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.
- ನೀರಾನೆಯು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆಯೋಬ 40:15
ವಚನಗಳು
ಯೋಬ 40:15ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.
- ನೆಬೂಕದ್ನೆಚ್ಚರನು ಎತ್ತಿನಂತೆ ಹುಲ್ಲು ತಿಂದನುದಾನಿ 4:33
ವಚನಗಳು
ದಾನಿ 4:33ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
- “ಕಾಡುಕತ್ತೆಗೆ ಹುಲ್ಲಿರಲು ಅರಚೀತೇ?”ಯೋಬ 6:5
ವಚನಗಳು
ಯೋಬ 6:5ಕಾಡುಕತ್ತೆಗೆ ಹುಲ್ಲಿರಲು ಅರಚೀತೇ? ಎತ್ತಿಗೆ ಮೇವಿರಲು ಕೂಗೀತೇ?
- ಐದು ಸಾವಿರ ಜನರು ಹಸಿರು ಹುಲ್ಲಿನ ಮೇಲೆ ಕುಳಿತುಕೊಂಡರುಯೋಹಾ 6:10, ಮಾರ್ಕ 6:39
ವಚನಗಳು
ಯೋಹಾ 6:10ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
ಮಾರ್ಕ 6:39ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
ನುಡಿಗಳು
- “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ” … “ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು”ಯೆಶಾ 40:6–8, 1 ಪೇತ್ರ 1:24
ವಚನಗಳು
ಯೆಶಾ 40:6–8ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ. ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು! ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
1 ಪೇತ್ರ 1:24ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
- ಹೊಸ ಹುಲ್ಲು ಬೆಳಿಗ್ಗೆ ಚಿಗುರುತ್ತದೆ, ಸಾಯಂಕಾಲಕ್ಕೆ ಬಾಡಿಹೋಗುತ್ತದೆಕೀರ್ತ 90:5–6
ವಚನಗಳು
ಕೀರ್ತ 90:5–6ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ. ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
- ಮನುಷ್ಯನ ದಿನಗಳು ಹುಲ್ಲಿನಂತೆ; ಗಾಳಿ ಬೀಸಿದರೆ ಅದು ಇಲ್ಲವಾಗುತ್ತದೆಕೀರ್ತ 103:15–16
ವಚನಗಳು
ಕೀರ್ತ 103:15–16ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
- ಇಬ್ಬನಿಯಂತೆ, ಹೊಸ ಹುಲ್ಲಿನ ಮೇಲೆ ಸಣ್ಣ ಮಳೆಯಂತೆ ಇಳಿಯುವ ಮಾತುಧರ್ಮೋ 32:2
ವಚನಗಳು
ಧರ್ಮೋ 32:2ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು