ಪ್ರಕೃತಿ
ಬೈಬಲಿನಲ್ಲಿ ಸಿಂಹಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 31 ವಾಕ್ಯಭಾಗಗಳು, ಸಾಲು ಸಾಲಾಗಿ.
- ಸಿಂಹವು ತನ್ನ ಬೇಟೆಯ ಮೇಲೆ ಗರ್ಜಿಸುತ್ತದೆ; ಪ್ರಾಯದ ಸಿಂಹವು ತನ್ನ ಗುಹೆಯಲ್ಲಿ ಗುರುಗುಟ್ಟುತ್ತದೆಆಮೋ 3:4
ವಚನಗಳು
ಆಮೋ 3:4ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?
- ಹೆಣ್ಣು ಸಿಂಹಗಳೂ ಪ್ರಾಯದ ಸಿಂಹಗಳೂ ತಮ್ಮ ಗುಹೆಗಳಲ್ಲಿ ಮುದುರಿಕೊಂಡು ಪೊದೆಗಳಲ್ಲಿ ಹೊಂಚುಹಾಕುತ್ತವೆಯೋಬ 38:39–40
ವಚನಗಳು
ಯೋಬ 38:39–40ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ? ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ?
- ಸಿಂಹವು ತನ್ನ ಮರಿಗಳಿಗಾಗಿ ಬೇಟೆಯನ್ನು ಸೀಳಿ ತನ್ನ ಗುಹೆಗಳನ್ನು ಬೇಟೆಯಿಂದ ತುಂಬಿಸಿತುನಹೂ 2:11–12
ವಚನಗಳು
ನಹೂ 2:11–12ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ? ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
- ಮುದಿ ಸಿಂಹವು ಬೇಟೆಯಿಲ್ಲದೆ ನಾಶವಾಗುತ್ತದೆ; ಹೆಣ್ಣು ಸಿಂಹದ ಮರಿಗಳು ಚದರಿಹೋಗುತ್ತವೆಯೋಬ 4:10–11
ವಚನಗಳು
ಯೋಬ 4:10–11ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು. ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು.
- ಮೃಗಗಳಲ್ಲಿ ಬಲಿಷ್ಠವಾದದ್ದು, ಯಾವುದಕ್ಕೂ ಹಿಂಜರಿಯದುಜ್ಞಾನೋ 30:30
ವಚನಗಳು
ಜ್ಞಾನೋ 30:30ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
- ಯೊರ್ದನಿನ ದಟ್ಟಡವಿಯಲ್ಲಿ ಸಿಂಹಗಳು ವಾಸಿಸುತ್ತಿದ್ದವುಯೆರೆ 49:19, ಯೆರೆ 50:44, ಜೆಕ 11:3
ವಚನಗಳು
ಯೆರೆ 49:19ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
ಯೆರೆ 50:44ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
ಜೆಕ 11:3ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.
- ಕುರುಬನು ಸಿಂಹದ ಬಾಯಿಂದ ಎರಡು ಕಾಲುಗಳನ್ನೋ ಕಿವಿಯ ತುಂಡನ್ನೋ ಮಾತ್ರ ಕಿತ್ತುಕೊಳ್ಳಬಹುದುಆಮೋ 3:12
ವಚನಗಳು
ಆಮೋ 3:12ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”
- ಕುರುಬರ ಗುಂಪು ಕೂಗಿದರೂ ಸಿಂಹವನ್ನು ಅದರ ಬೇಟೆಯಿಂದ ಹೆದರಿಸಲಾಗಲಿಲ್ಲಯೆಶಾ 31:4
ವಚನಗಳು
ಯೆಶಾ 31:4ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
ಎದುರಾದ ಸಂದರ್ಭಗಳು
- ಸಂಸೋನನು ಬರಿಗೈಯಿಂದ ಪ್ರಾಯದ ಸಿಂಹವನ್ನು ಸೀಳಿಬಿಟ್ಟನುನ್ಯಾಯ 14:5–6
ವಚನಗಳು
ನ್ಯಾಯ 14:5–6ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು. ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
- ಆ ಮೇಲೆ ಅವನು ಸಿಂಹದ ಶವದಲ್ಲಿ ಜೇನುಹುಳುಗಳನ್ನೂ ಜೇನನ್ನೂ ಕಂಡನುನ್ಯಾಯ 14:8–9
ವಚನಗಳು
ನ್ಯಾಯ 14:8–9ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು, ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
- ಅವನ ಒಗಟು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು”ನ್ಯಾಯ 14:14, ನ್ಯಾಯ 14:18
ವಚನಗಳು
ನ್ಯಾಯ 14:14ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
ನ್ಯಾಯ 14:18ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
- ಕುರುಬ ಬಾಲಕನಾದ ದಾವೀದನು ಕುರಿಮರಿಗಳನ್ನು ಹಿಡಿದುಕೊಂಡು ಹೋದ ಸಿಂಹಗಳನ್ನೂ ಕರಡಿಗಳನ್ನೂ ಕೊಂದನು1 ಸಮು 17:34–36
ವಚನಗಳು
1 ಸಮು 17:34–36ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು. ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.
- ಹಿಮ ಬೀಳುತ್ತಿದ್ದ ದಿನದಲ್ಲಿ ಬೆನಾಯನು ಗುಂಡಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದನು2 ಸಮು 23:20
ವಚನಗಳು
2 ಸಮು 23:20ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
- ಸಿಂಹವು ದೇವರ ಮನುಷ್ಯನನ್ನು ಕೊಂದಿತು, ಆದರೆ ಅವನನ್ನು ತಿನ್ನಲಿಲ್ಲ, ಅವನ ಕತ್ತೆಯನ್ನು ಮುಟ್ಟಲಿಲ್ಲ1 ಅರಸು 13:24–28
ವಚನಗಳು
1 ಅರಸು 13:24–28ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು. ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು. ಅವನು, “ಕತ್ತೆಗೆ ತಡಿಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು. ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
- ಪ್ರವಾದಿಯನ್ನು ಹೊಡೆಯಲು ಒಪ್ಪದವನನ್ನು ಸಿಂಹವು ಕೊಂದಿತು1 ಅರಸು 20:35–36
ವಚನಗಳು
1 ಅರಸು 20:35–36ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ. ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.
- ಸಮಾರ್ಯದ ಪಟ್ಟಣಗಳಿಗೆ ತಂದು ನೆಲೆಗೊಳಿಸಲ್ಪಟ್ಟವರಲ್ಲಿ ಕೆಲವರನ್ನು ಸಿಂಹಗಳು ಕೊಂದವು2 ಅರಸು 17:25–26
ವಚನಗಳು
2 ಅರಸು 17:25–26ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು. ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
- ದಾನಿಯೇಲನನ್ನು ಸಿಂಹಗಳ ಗವಿಗೆ ಹಾಕಲಾಯಿತು, ಕಲ್ಲಿನಿಂದಲೂ ಅರಸನ ಉಂಗುರದಿಂದಲೂ ಮುದ್ರಿಸಲಾಯಿತುದಾನಿ 6:16–17
ವಚನಗಳು
ದಾನಿ 6:16–17ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು. ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
- ಬೆಳಗಾಗುತ್ತಲೇ ದಾನಿಯೇಲನನ್ನು ಯಾವ ಗಾಯವೂ ಇಲ್ಲದೆ ಮೇಲಕ್ಕೆ ಎತ್ತಲಾಯಿತುದಾನಿ 6:19–23
ವಚನಗಳು
ದಾನಿ 6:19–23ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು. ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
- ಅವನ ಮೇಲೆ ದೂರು ಹೇಳಿದವರನ್ನು ಒಳಗೆ ಹಾಕಲಾಯಿತು, ಅವರು ತಳ ಮುಟ್ಟುವ ಮೊದಲೇ ಸಿಂಹಗಳು ಅವರ ಮೇಲೆ ಬಿದ್ದವುದಾನಿ 6:24
ವಚನಗಳು
ದಾನಿ 6:24ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
ಕೆತ್ತನೆಯಲ್ಲಿ ಸಿಂಹಗಳು
- ಸೊಲೊಮೋನನ ಸಿಂಹಾಸನ: ಪ್ರತಿಯೊಂದು ಕೈಯೊರಗಿನ ಬಳಿ ಒಂದು ಸಿಂಹ, ಆರು ಮೆಟ್ಟಿಲುಗಳ ಮೇಲೆ ಹನ್ನೆರಡು ಸಿಂಹಗಳು1 ಅರಸು 10:19–20
ವಚನಗಳು
1 ಅರಸು 10:19–20ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು. ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
- ದೇವಾಲಯದ ತಾಮ್ರದ ಪೀಠಗಳ ಮೇಲೆ ಸಿಂಹಗಳು, ಎತ್ತುಗಳು ಮತ್ತು ಕೆರೂಬಿಗಳ ಅಲಂಕಾರ1 ಅರಸು 7:29, 1 ಅರಸು 7:36
ವಚನಗಳು
1 ಅರಸು 7:29ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
1 ಅರಸು 7:36ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.
ನುಡಿಗಳು
- “ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು”ಪ್ರಸ 9:4
ವಚನಗಳು
ಪ್ರಸ 9:4ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
- ಸೋಮಾರಿಯು ಹೇಳುತ್ತಾನೆ: “ಹೊರಗೆ ಸಿಂಹವಿದೆ”ಜ್ಞಾನೋ 22:13, ಜ್ಞಾನೋ 26:13
ವಚನಗಳು
ಜ್ಞಾನೋ 22:13“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
ಜ್ಞಾನೋ 26:13“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
- “ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು”ಜ್ಞಾನೋ 20:2
ವಚನಗಳು
ಜ್ಞಾನೋ 20:2ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
- ಸೌಲಯೋನಾತಾನರು “ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು”2 ಸಮು 1:23
ವಚನಗಳು
2 ಸಮು 1:23ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
- ಗಾದ್ಯ ಯುದ್ಧವೀರರು ಸಿಂಹಮುಖರೂ ಜಿಂಕೆಯಂತೆ ಚುರುಕು ಕಾಲಿನವರೂ ಆಗಿದ್ದರು1 ಪೂರ್ವ 12:8
ವಚನಗಳು
1 ಪೂರ್ವ 12:8ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು