Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಮಿಡತೆಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಮಿಡತೆಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 14 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಮಿಡತೆ, ಹುಲ್ಲುಮಿಡತೆ, ಜಿರಳೆಮಿಡತೆ ಮತ್ತು ಚಿಟ್ಟೆಮಿಡತೆಗಳನ್ನು ತಿನ್ನಲು ಅನುಮತಿಯಿತ್ತುಯಾಜ 11:22
    ವಚನಗಳು
    ಯಾಜ 11:22ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.
  • ಸ್ನಾನಿಕನಾದ ಯೋಹಾನನು ಮಿಡತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನುಮತ್ತಾ 3:4, ಮಾರ್ಕ 1:6
    ವಚನಗಳು
    ಮತ್ತಾ 3:4ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
    ಮಾರ್ಕ 1:6ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
  • ಮಿಡತೆಗಳಿಗೆ ಅರಸನಿಲ್ಲ, ಆದರೂ ಅವು ಸಾಲುಸಾಲಾಗಿ ಮುಂದೆ ಸಾಗುತ್ತವೆಜ್ಞಾನೋ 30:27
    ವಚನಗಳು
    ಜ್ಞಾನೋ 30:27ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
  • ಬರ, ಬಿಸಿಗಾಳಿ, ಬೂಷ್ಟು ಮತ್ತು ಮಿಡತೆಗಳ ಬಗ್ಗೆ ಸೊಲೊಮೋನನು ಪ್ರಾರ್ಥಿಸುತ್ತಾನೆ1 ಅರಸು 8:37
    ವಚನಗಳು
    1 ಅರಸು 8:37“ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
  • ನೀನು ಬಹಳ ಬೀಜವನ್ನು ಬಿತ್ತುವಿ, ಆದರೆ ಮಿಡತೆಗಳು ಅದನ್ನು ತಿಂದುಬಿಡುವವುಧರ್ಮೋ 28:38
    ವಚನಗಳು
    ಧರ್ಮೋ 28:38ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.

ಐಗುಪ್ತದಲ್ಲಿ ಬಾಧೆ

  • ದೇಶವನ್ನು ಮುಚ್ಚಿ ಮನೆಗಳನ್ನು ತುಂಬುವ ಮಿಡತೆಗಳ ಬಗ್ಗೆ ಮೋಶೆಯು ಎಚ್ಚರಿಸಿದನುವಿಮೋ 10:4–6
    ವಚನಗಳು
    ವಿಮೋ 10:4–6ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು. ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು. ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.
  • ಮೂಡಣ ಗಾಳಿಯು ಬೆಳಗಾಗುವಷ್ಟರಲ್ಲಿ ಅವುಗಳನ್ನು ತಂದಿತುವಿಮೋ 10:13
    ವಚನಗಳು
    ವಿಮೋ 10:13ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.
  • ದೇಶವು ಕಪ್ಪಾಯಿತು; ಹಸಿರಾದದ್ದು ಏನೂ ಉಳಿಯಲಿಲ್ಲವಿಮೋ 10:14–15
    ವಚನಗಳು
    ವಿಮೋ 10:14–15ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ. ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.
  • ಪಡುವಣ ಗಾಳಿಯು ಅವುಗಳನ್ನು ಕೆಂಪುಸಮುದ್ರಕ್ಕೆ ಬಡಿದುಕೊಂಡು ಹೋಯಿತುವಿಮೋ 10:19
    ವಚನಗಳು
    ವಿಮೋ 10:19ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.

ಹೋಲಿಕೆಗಳು

  • ಯೋವೇಲನು: ಒಂದು ಮಿಡತೆ ಬಿಟ್ಟದ್ದನ್ನು ಮತ್ತೊಂದು ತಿಂದುಬಿಟ್ಟಿತುಯೋವೇ 1:4
    ವಚನಗಳು
    ಯೋವೇ 1:4ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
  • ಮಿದ್ಯಾನ್ಯರು ಮಿಡತೆಗಳ ದಂಡಿನಂತೆ ಬಂದರುನ್ಯಾಯ 6:5, ನ್ಯಾಯ 7:12
    ವಚನಗಳು
    ನ್ಯಾಯ 6:5ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.
    ನ್ಯಾಯ 7:12ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
  • ಅನಾಕನ ವಂಶದವರ ಮುಂದೆ ಗೂಢಚಾರರಿಗೆ ತಾವು ಮಿಡತೆಗಳಂತೆ ಅನಿಸಿತುಅರಣ್ಯ 13:33
    ವಚನಗಳು
    ಅರಣ್ಯ 13:33ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು