Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಮಾಟ ಮತ್ತು ಶಕುನಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಮಾಟ ಮತ್ತು ಶಕುನಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 32 ವಾಕ್ಯಭಾಗಗಳು, ಸಾಲು ಸಾಲಾಗಿ.

ಧರ್ಮಶಾಸ್ತ್ರದಲ್ಲಿ

  • ಕಣಿಹೇಳುವುದು, ಶಕುನ, ಮಂತ್ರ, ಯಕ್ಷಿಣಿಗಾರರು ಮತ್ತು ಸತ್ತವರಲ್ಲಿ ವಿಚಾರಿಸುವುದು ನಿಷಿದ್ಧಯಾಜ 19:26, ಯಾಜ 19:31, ಧರ್ಮೋ 18:10–11
    ವಚನಗಳು
    ಯಾಜ 19:26“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
    ಯಾಜ 19:31“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
    ಧರ್ಮೋ 18:10–11ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು, ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
  • ಮಾಟಗಾತಿಯನ್ನು ಬದುಕಗೊಡಬಾರದುವಿಮೋ 22:18
    ವಚನಗಳು
    ವಿಮೋ 22:18ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.
  • ಯಕ್ಷಿಣಿಗಾರನನ್ನಾಗಲಿ ಭೂತಪ್ರೇತಗಳನ್ನು ವಿಚಾರಿಸುವವನನ್ನಾಗಲಿ ಕಲ್ಲೆಸೆದು ಕೊಲ್ಲಬೇಕಿತ್ತುಯಾಜ 20:27
    ವಚನಗಳು
    ಯಾಜ 20:27“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

ಆಚರಿಸಲ್ಪಟ್ಟದ್ದು

  • ತಾನು ಶಕುನದಿಂದ ತಿಳಿದುಕೊಂಡೆನೆಂದು ಲಾಬಾನನು ಹೇಳುತ್ತಾನೆಆದಿ 30:27
    ವಚನಗಳು
    ಆದಿ 30:27ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
  • ಕಣಿಹೇಳಲು ಉಪಯೋಗಿಸಲಾಗುತ್ತದೆಂದು ಹೇಳಲಾದ ಯೋಸೇಫನ ಬೆಳ್ಳಿಯ ಬಟ್ಟಲುಆದಿ 44:5
    ವಚನಗಳು
    ಆದಿ 44:5ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.
  • ಫರೋಹನ ಮಂತ್ರಗಾರರು ತಮ್ಮ ಮಂತ್ರವಿದ್ಯೆಯಿಂದ ಸೂಚಕಕಾರ್ಯಗಳನ್ನು ಅನುಕರಿಸಿದರು, ಆದರೆ ಹೇನುಗಳನ್ನು ಅಲ್ಲವಿಮೋ 7:11, ವಿಮೋ 7:22, ವಿಮೋ 8:7, ವಿಮೋ 8:18
    ವಚನಗಳು
    ವಿಮೋ 7:11ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
    ವಿಮೋ 7:22ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
    ವಿಮೋ 8:7ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
    ವಿಮೋ 8:18ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.
  • ಮೋವಾಬ್ಯ ಹಿರಿಯರು ಕಣಿಹೇಳುವುದಕ್ಕೆ ದಕ್ಷಿಣೆಯನ್ನು ಬಿಳಾಮನ ಬಳಿಗೆ ತಂದರುಅರಣ್ಯ 22:7
    ವಚನಗಳು
    ಅರಣ್ಯ 22:7ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
  • ಸೌಲನು ಯಕ್ಷಿಣಿಗಾರರನ್ನು ಹೊರಡಿಸಿದನು, ಆ ಮೇಲೆ ವೇಷಮರೆಸಿಕೊಂಡು ಏಂದೋರಿನಲ್ಲಿ ಒಬ್ಬಳನ್ನು ವಿಚಾರಿಸಿದನು1 ಸಮು 28:3, 1 ಸಮು 28:7–8
    ವಚನಗಳು
    1 ಸಮು 28:3ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
    1 ಸಮು 28:7–8ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು. ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು
  • ಯಕ್ಷಿಣಿಗಾತಿಯು ಸಮುವೇಲನನ್ನು ಕಂಡು ಸೌಲನನ್ನು ಗುರುತಿಸುತ್ತಾಳೆ1 ಸಮು 28:11–14
    ವಚನಗಳು
    1 ಸಮು 28:11–14ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು. ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು. ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು. ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
  • ಪೂರ್ವಕಾಲವೃತ್ತಾಂತ: ಇತರ ಕಾರಣಗಳೊಂದಿಗೆ ಯಕ್ಷಿಣಿಗಾತಿಯನ್ನು ವಿಚಾರಿಸಿದ್ದಕ್ಕಾಗಿ ಸೌಲನು ಸತ್ತನು1 ಪೂರ್ವ 10:13
    ವಚನಗಳು
    1 ಪೂರ್ವ 10:13ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
  • ಈಜೆಬೆಲಳ ಅನೇಕ ಮಾಟಮಂತ್ರಗಳ ಬಗ್ಗೆ ಯೇಹುವು ಮಾತನಾಡುತ್ತಾನೆ2 ಅರಸು 9:22
    ವಚನಗಳು
    2 ಅರಸು 9:22ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
  • ಅರಸನಾದ ಮನಸ್ಸೆಯು ಮಾಟವನ್ನು ಆಚರಿಸಿ ಯಕ್ಷಿಣಿಗಾರರನ್ನು ವಿಚಾರಿಸಿದನು2 ಅರಸು 21:6, 2 ಪೂರ್ವ 33:6
    ವಚನಗಳು
    2 ಅರಸು 21:6ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
    2 ಪೂರ್ವ 33:6ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
  • ಅರಸನಾದ ಯೋಷೀಯನು ಯಕ್ಷಿಣಿಗಾರರನ್ನೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ ತೆಗೆದುಹಾಕಿದನು2 ಅರಸು 23:24
    ವಚನಗಳು
    2 ಅರಸು 23:24ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
  • ಬಾಬಿಲೋನಿನ ಅರಸನು ಶಕುನವನ್ನು ಹುಡುಕುತ್ತಾನೆ: ಬಾಣಗಳು, ವಿಗ್ರಹಗಳು, ಈಲಿಯೆಹೆ 21:21
    ವಚನಗಳು
    ಯೆಹೆ 21:21“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.
  • ಬಾಬಿಲೋನಿನ ಜೋಯಿಸರು ನಕ್ಷತ್ರಗಳನ್ನು ನೋಡಿ ತಿಂಗಳು ತಿಂಗಳಿಗೂ ಮುಂದಿನದನ್ನು ಹೇಳುತ್ತಾರೆಯೆಶಾ 47:13
    ವಚನಗಳು
    ಯೆಶಾ 47:13ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
  • ನೆಬೂಕದ್ನೆಚ್ಚರನ ಮಂತ್ರಗಾರರು, ಮಾಟಗಾರರು, ಯಕ್ಷಿಣಿಗಾರರು ಮತ್ತು ಜೋಯಿಸರು ಅವನ ಕನಸನ್ನು ವಿವರಿಸಲಾರದೆ ಹೋಗುತ್ತಾರೆದಾನಿ 2:2, ದಾನಿ 2:10, ದಾನಿ 4:7
    ವಚನಗಳು
    ದಾನಿ 2:2ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.
    ದಾನಿ 2:10ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.
    ದಾನಿ 4:7“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
  • ಬೇಲ್ಶಚ್ಚರನ ಜ್ಞಾನಿಗಳು ಗೋಡೆಯ ಮೇಲಿನ ಬರಹವನ್ನು ಓದಲಾರರುದಾನಿ 5:7–8, ದಾನಿ 5:15
    ವಚನಗಳು
    ದಾನಿ 5:7–8ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
    ದಾನಿ 5:15“ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
  • ಸಮಾರ್ಯದ ಸೀಮೋನನು ತನ್ನ ಮಾಟದಿಂದ ಜನರನ್ನು ಬೆರಗುಗೊಳಿಸಿದನುಅ. ಕೃ 8:9–11
    ವಚನಗಳು
    ಅ. ಕೃ 8:9–11ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
  • ಪಾಫೋಸಿನಲ್ಲಿದ್ದ ಮಾಟಗಾರನಾದ ಎಲುಮ, ಅಂದರೆ ಬರ್ಯೇಸುಅ. ಕೃ 13:6–8
    ವಚನಗಳು
    ಅ. ಕೃ 13:6–8ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು. ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
  • ಫಿಲಿಪ್ಪಿಯಲ್ಲಿ ಒಬ್ಬ ದಾಸಿಯು ಕಣಿಹೇಳುವುದರಿಂದ ತನ್ನ ಯಜಮಾನರಿಗೆ ಹಣ ಸಂಪಾದಿಸುತ್ತಿದ್ದಳುಅ. ಕೃ 16:16–19
    ವಚನಗಳು
    ಅ. ಕೃ 16:16–19ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು. ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು. ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು. ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
  • ಸ್ಕೇವನ ಏಳು ಮಂದಿ ಮಕ್ಕಳು ದೆವ್ವಗಳನ್ನು ಬಿಡಿಸಲು ಪ್ರಯತ್ನಿಸುತ್ತಾರೆಅ. ಕೃ 19:13–16
    ವಚನಗಳು
    ಅ. ಕೃ 19:13–16ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು. ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು. ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು; ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
  • ಎಫೆಸದಲ್ಲಿ ಐವತ್ತು ಸಾವಿರ ದ್ರಾಕ್ಮಾ ಬೆಲೆಯ ಮಾಟದ ಪುಸ್ತಕಗಳನ್ನು ಸುಡಲಾಯಿತುಅ. ಕೃ 19:19
    ವಚನಗಳು
    ಅ. ಕೃ 19:19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು