ಅನ್ವೇಷಿಸಿ › ವಿಷಯಗಳು › ಮದುವೆ ಮತ್ತು ವಿವಾಹ ಜೀವನ
ದೈನಂದಿನ ಜೀವನ
ಬೈಬಲಿನಲ್ಲಿ ಮದುವೆ ಮತ್ತು ವಿವಾಹ ಜೀವನ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 53 ವಾಕ್ಯಭಾಗಗಳು, ಸಾಲು ಸಾಲಾಗಿ.
ಪದ್ಧತಿಗಳು
- ತಂದೆತಾಯಿಗಳು ತಮ್ಮ ಮಕ್ಕಳಿಗೆ ಹೆಂಡತಿಯರನ್ನು ಗೊತ್ತುಮಾಡುತ್ತಿದ್ದರುಆದಿ 21:21, ಆದಿ 24:3–4, ಆದಿ 28:1–2, ಯೆರೆ 29:6
ವಚನಗಳು
ಆದಿ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.
ಆದಿ 24:3–4ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ, ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
ಆದಿ 28:1–2ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು. ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
ಯೆರೆ 29:6ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
- ಸಂಸೋನನು ತನಗೆ ಫಿಲಿಷ್ಟಿಯ ಹೆಂಡತಿಯನ್ನು ತರಬೇಕೆಂದು ತಂದೆತಾಯಿಗಳನ್ನು ಕೇಳುತ್ತಾನೆನ್ಯಾಯ 14:2
ವಚನಗಳು
ನ್ಯಾಯ 14:2ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
- ರೆಬೆಕ್ಕಳನ್ನು ಕೇಳುತ್ತಾರೆ: “ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?”ಆದಿ 24:57–58
ವಚನಗಳು
ಆದಿ 24:57–58ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು. ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು.
- ಇಸಾಕನನ್ನು ಭೇಟಿಯಾದಾಗ ರೆಬೆಕ್ಕಳು ಮುಸುಕಿನಿಂದ ತನ್ನನ್ನು ಮುಚ್ಚಿಕೊಳ್ಳುತ್ತಾಳೆಆದಿ 24:65
ವಚನಗಳು
ಆದಿ 24:65ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
- ವಧುವಿಗೆ ಆಭರಣಗಳೂ ವಸ್ತ್ರಗಳೂ, ಅವಳ ಮನೆಯವರಿಗೆ ಉಡುಗೊರೆಗಳೂಆದಿ 24:53
ವಚನಗಳು
ಆದಿ 24:53ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
- ವಧುವಿನ ತಂದೆಗೆ ವಧುದಕ್ಷಿಣೆಯನ್ನು ಕೊಡಲಾಗುತ್ತಿತ್ತುಆದಿ 34:12, ವಿಮೋ 22:16–17
ವಚನಗಳು
ಆದಿ 34:12ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
ವಿಮೋ 22:16–17ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು. ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.
- ಲಾಬಾನನು: ಹಿರಿಯವಳಿಗಿಂತ ಮೊದಲು ಕಿರಿಯವಳಿಗೆ ಮದುವೆ ಮಾಡುವುದು ನಮ್ಮ ಪದ್ಧತಿಯಲ್ಲಆದಿ 29:26
ವಚನಗಳು
ಆದಿ 29:26ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.
- ಒಂದು ವಾರದ ಮದುವೆಯ ಉತ್ಸವಆದಿ 29:22, ಆದಿ 29:27–28
ವಚನಗಳು
ಆದಿ 29:22ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.
ಆದಿ 29:27–28ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
- ಮದುಮಗನು ಮೂವತ್ತು ಸಂಗಡಿಗರೊಂದಿಗೆ ಏಳು ದಿನಗಳ ಔತಣ ಮಾಡಿದನುನ್ಯಾಯ 14:10–12
ವಚನಗಳು
ನ್ಯಾಯ 14:10–12ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು. ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು. ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
- ವಧುವಿನ ಆಭರಣಗಳೂ ಮದುವೆಯ ನಡುಕಟ್ಟೂಯೆರೆ 2:32, ಯೆಶಾ 61:10
ವಚನಗಳು
ಯೆರೆ 2:32ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
ಯೆಶಾ 61:10ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
- ಚಿನ್ನದ ಕಸೂತಿಯ ಉಡುಪು ಧರಿಸಿದ ರಾಜಕುಮಾರಿ ತನ್ನ ಸಖಿಯರೊಂದಿಗೆಕೀರ್ತ 45:13–14
ವಚನಗಳು
ಕೀರ್ತ 45:13–14ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
- ಮದುವೆಯ ದಿನದಲ್ಲಿ ತಾಯಿ ಸೊಲೊಮೋನನಿಗೆ ತೊಡಿಸಿದ ಕಿರೀಟಪ.ಗೀ 3:11
ವಚನಗಳು
ಪ.ಗೀ 3:11ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!
- ಮದುಮಗಳ ಮತ್ತು ಮದುಮಗನ ಧ್ವನಿಗಳು ಬೀದಿಗಳಲ್ಲಿ ತುಂಬಿದ್ದವುಯೆರೆ 7:34
ವಚನಗಳು
ಯೆರೆ 7:34ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.
- ದೀಪಗಳನ್ನು ಹಿಡಿದ ಹತ್ತು ಕನ್ಯೆಯರು ಮದುಮಗನನ್ನು ಎದುರುಗೊಳ್ಳಲು ಹೊರಡುತ್ತಾರೆ (ಸಾಮ್ಯ)ಮತ್ತಾ 25:1–6
ವಚನಗಳು
ಮತ್ತಾ 25:1–6“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
- ಅತಿಥಿಗಳು ಮದುವೆಯ ಉಡುಪನ್ನು ಧರಿಸಬೇಕಾಗಿತ್ತು (ಸಾಮ್ಯ)ಮತ್ತಾ 22:11–12
ವಚನಗಳು
ಮತ್ತಾ 22:11–12ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
- ಪಟ್ಟಣದ ಬಾಗಿಲಲ್ಲಿ ಹಿರಿಯರ ಸಾಕ್ಷಿಯೊಂದಿಗೆ ಮದುವೆರೂತ 4:9–11
ವಚನಗಳು
ರೂತ 4:9–11ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ; ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು. ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
- ನಿಶ್ಚಿತಾರ್ಥ ಮಾತ್ರ ಆಗಿರುವಾಗಲೇ ಯೋಸೇಫನನ್ನು ಮರಿಯಳ ಗಂಡನೆಂದು ಕರೆಯಲಾಗಿದೆಮತ್ತಾ 1:18–19, ಲೂಕ 1:27
ವಚನಗಳು
ಮತ್ತಾ 1:18–19ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
ಲೂಕ 1:27ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.
ಧರ್ಮಶಾಸ್ತ್ರದಲ್ಲಿ
- ಹೊಸದಾಗಿ ಮದುವೆಯಾದವನು ಒಂದು ವರ್ಷ ಯುದ್ಧಕ್ಕೆ ಹೋಗಬೇಕಾಗಿಲ್ಲಧರ್ಮೋ 24:5
ವಚನಗಳು
ಧರ್ಮೋ 24:5ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
- ಮಕ್ಕಳಿಲ್ಲದೆ ವಿಧವೆಯಾದ ಅತ್ತಿಗೆಯನ್ನು ಮೈದುನನು ಮದುವೆಯಾಗುತ್ತಾನೆಧರ್ಮೋ 25:5–10, ಆದಿ 38:8, ಮಾರ್ಕ 12:19
ವಚನಗಳು
ಧರ್ಮೋ 25:5–10ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು. ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ. ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು. ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ, ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು. ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು.
ಆದಿ 38:8ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
ಮಾರ್ಕ 12:19ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
- ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ತಂದೆಯ ಕುಲದೊಳಗೆಯೇ ಮದುವೆಯಾಗಬೇಕುಅರಣ್ಯ 36:6–8
ವಚನಗಳು
ಅರಣ್ಯ 36:6–8ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ. ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು. ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
- ಯಾಜಕರು ಗಂಡನು ಬಿಟ್ಟ ಸ್ತ್ರೀಯನ್ನು ಮದುವೆಯಾಗಬಾರದುಯಾಜ 21:7, ಯಾಜ 21:13–14
ವಚನಗಳು
ಯಾಜ 21:7ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
ಯಾಜ 21:13–14ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು. ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
- ಸೆರೆಯಾಗಿ ತಂದ ಸ್ತ್ರೀಯು ಮೊದಲು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ದುಃಖಿಸುತ್ತಾಳೆಧರ್ಮೋ 21:10–13
ವಚನಗಳು
ಧರ್ಮೋ 21:10–13ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು. ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು. ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
- ಕಾನಾನಿನ ಜನಾಂಗಗಳೊಂದಿಗೆ ಬೀಗತನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞೆಧರ್ಮೋ 7:3
ವಚನಗಳು
ಧರ್ಮೋ 7:3ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
ಉದಾಹರಣೆಗಳು
- ಅಬ್ರಹಾಮನು ತನ್ನ ಮಲತಂಗಿಯಾದ ಸಾರಳನ್ನು ಮದುವೆಯಾದನುಆದಿ 11:29, ಆದಿ 20:12
- ಇಸಾಕನು ರೆಬೆಕ್ಕಳನ್ನು ಪ್ರೀತಿಸಿದನು, ತಾಯಿಯ ಮರಣದ ನಂತರ ಸಮಾಧಾನ ಹೊಂದಿದನುಆದಿ 24:67
ವಚನಗಳು
ಆದಿ 24:67ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
- ಯಾಕೋಬನು ರಾಹೇಲಳಿಗಾಗಿ ಏಳು ವರ್ಷ ದುಡಿಯುತ್ತಾನೆ; ಅವು ಕೆಲವು ದಿನಗಳಂತೆ ತೋರುತ್ತವೆಆದಿ 29:18–20
ವಚನಗಳು
ಆದಿ 29:18–20ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು, ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು. ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.
- ಯಾಕೋಬನಿಗೆ ಮೊದಲು ಲೇಯಳನ್ನು, ಆ ಮೇಲೆ ರಾಹೇಲಳನ್ನು ಕೊಡಲಾಗುತ್ತದೆಆದಿ 29:21–28
ವಚನಗಳು
ಆದಿ 29:21–28ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು. ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು. ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು. ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು. ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ. ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
- ಕಿರ್ಯತ್ಸೇಫೆರನ್ನು ಹಿಡಿಯುವವನಿಗೆ ಕಾಲೇಬನು ತನ್ನ ಮಗಳಾದ ಅಕ್ಷಳನ್ನು ಕೊಡುತ್ತಾನೆನ್ಯಾಯ 1:12–13
ವಚನಗಳು
ನ್ಯಾಯ 1:12–13ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು. ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
- ಗೊಲ್ಯಾತನನ್ನು ಕೊಲ್ಲುವವನಿಗೆ ಸೌಲನು ತನ್ನ ಮಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾನೆ1 ಸಮು 17:25, 1 ಸಮು 18:17
ವಚನಗಳು
1 ಸಮು 17:25ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.
1 ಸಮು 18:17ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.
- ಸೌಲನು ನೂರು ಫಿಲಿಷ್ಟಿಯರ ಮುಂದೊಗಲುಗಳನ್ನು ಕೇಳುತ್ತಾನೆ; ದಾವೀದನು ಇನ್ನೂರು ತರುತ್ತಾನೆ1 ಸಮು 18:25–27, 2 ಸಮು 3:14
ವಚನಗಳು
1 ಸಮು 18:25–27ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು. ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ, ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
2 ಸಮು 3:14ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
- ಬೋವಜನು ಸಾಕ್ಷಿಗಳ ಮುಂದೆ ರೂತಳನ್ನು ತನ್ನ ಹೆಂಡತಿಯಾಗಿ ಪಡೆದುಕೊಳ್ಳುತ್ತಾನೆರೂತ 4:5, ರೂತ 4:10
ವಚನಗಳು
ರೂತ 4:5ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.
ರೂತ 4:10ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
- ಬೆನ್ಯಾಮೀನ್ಯರು ಶೀಲೋವಿನ ನರ್ತಕಿಯರಲ್ಲಿ ಹೆಂಡತಿಯರನ್ನು ಹಿಡಿದುಕೊಳ್ಳುತ್ತಾರೆನ್ಯಾಯ 21:21–23
ವಚನಗಳು
ನ್ಯಾಯ 21:21–23ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ. ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು. ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.
- ಅಹಷ್ವೇರೋಷನು ಎಸ್ತೇರಳನ್ನು ರಾಣಿಯನ್ನಾಗಿ ಮಾಡಿ ಎಸ್ತೇರಳ ಔತಣವನ್ನು ಏರ್ಪಡಿಸುತ್ತಾನೆಎಸ್ತೇ 2:17–18
ವಚನಗಳು
ಎಸ್ತೇ 2:17–18ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು. ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
- ಹೋಶೇಯನು ಹದಿನೈದು ಬೆಳ್ಳಿ ಶೆಕೆಲುಗಳಿಗೂ ಜವೆಗೋದಿಗೂ ಒಬ್ಬ ಸ್ತ್ರೀಯನ್ನು ಕೊಂಡುಕೊಳ್ಳುತ್ತಾನೆಹೋಶೇ 3:2
ವಚನಗಳು
ಹೋಶೇ 3:2ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ ಮತ್ತು ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.
- ಯೇಸುವೂ ಆತನ ಶಿಷ್ಯರೂ ಕಾನಾ ಊರಿನ ಮದುವೆಯಲ್ಲಿಯೋಹಾ 2:1–10
ವಚನಗಳು
ಯೋಹಾ 2:1–10ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು. ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು. ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು. ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
- ಅಪೊಸ್ತಲರು ತಮ್ಮ ಪ್ರಯಾಣಗಳಲ್ಲಿ ತಮ್ಮ ಹೆಂಡತಿಯರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದರು1 ಕೊರಿ 9:5
ವಚನಗಳು
1 ಕೊರಿ 9:5ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
ಜ್ಞಾನೋಕ್ತಿಗಳ ನುಡಿಗಳು
- ಹೆಂಡತಿಯನ್ನು ಪಡೆದವನು ಒಳ್ಳೆಯದನ್ನು ಪಡೆದಿದ್ದಾನೆಜ್ಞಾನೋ 18:22
ವಚನಗಳು
ಜ್ಞಾನೋ 18:22ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
- ಜಗಳಗಂಟಿಯಾದ ಹೆಂಡತಿಯಿರುವ ಮನೆಗಿಂತ ಮಾಳಿಗೆಯ ಮೂಲೆ ಲೇಸುಜ್ಞಾನೋ 21:9, ಜ್ಞಾನೋ 21:19
ವಚನಗಳು
ಜ್ಞಾನೋ 21:9ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
ಜ್ಞಾನೋ 21:19ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು