Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಮೇಜುಗಳು ಮತ್ತು ಊಟ

ದೈನಂದಿನ ಜೀವನ

ಬೈಬಲಿನಲ್ಲಿ ಮೇಜುಗಳು ಮತ್ತು ಊಟ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 36 ವಾಕ್ಯಭಾಗಗಳು, ಸಾಲು ಸಾಲಾಗಿ.

ಮೇಜುಗಳು

  • ಎಲೀಷನ ಚಿಕ್ಕ ಕೋಣೆಯಲ್ಲಿ ಮಂಚ, ಮೇಜು, ಕುರ್ಚಿ ಮತ್ತು ದೀಪ2 ಅರಸು 4:10
    ವಚನಗಳು
    2 ಅರಸು 4:10ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
  • ಎಪ್ಪತ್ತು ಅರಸರು ಅದೋನೀಬೆಜೆಕನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಳ್ಳುತ್ತಿದ್ದರುನ್ಯಾಯ 1:7
    ವಚನಗಳು
    ನ್ಯಾಯ 1:7ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
  • ದೇವದರ್ಶನದ ಗುಡಾರದ ಮೇಜು: ಚಿನ್ನ ಹೊದಿಸಿದ ಜಾಲೀಮರ, ಹೊರುವ ಕೋಲುಗಳೊಂದಿಗೆವಿಮೋ 25:23–28
    ವಚನಗಳು
    ವಿಮೋ 25:23–28“ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು. ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು. ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು. ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.
  • ಪ್ರತಿ ಸಬ್ಬತ್ ದಿನವೂ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಹನ್ನೆರಡು ರೊಟ್ಟಿಗಳುಯಾಜ 24:5–8
    ವಚನಗಳು
    ಯಾಜ 24:5–8“ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು. ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು. ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
  • ದೇವಾಲಯಕ್ಕಾಗಿ ಚಿನ್ನದ ಮೇಜುಗಳೂ ಬೆಳ್ಳಿಯ ಮೇಜುಗಳೂ1 ಪೂರ್ವ 28:16
    ವಚನಗಳು
    1 ಪೂರ್ವ 28:16ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,
  • ಯೇಸು ಚಿನಿವಾರರ ಮೇಜುಗಳನ್ನು ಕೆಡವಿಹಾಕುತ್ತಾನೆಯೋಹಾ 2:15
    ವಚನಗಳು
    ಯೋಹಾ 2:15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
  • ಮೇಜಿನ ಕೆಳಗಿರುವ ನಾಯಿಗಳು ಮಕ್ಕಳ ರೊಟ್ಟಿಯ ತುಂಡುಗಳನ್ನು ತಿನ್ನುತ್ತವೆಮತ್ತಾ 15:27, ಮಾರ್ಕ 7:28
    ವಚನಗಳು
    ಮತ್ತಾ 15:27ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
    ಮಾರ್ಕ 7:28ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
  • ಐಶ್ವರ್ಯವಂತನ ಮೇಜಿನಿಂದ ಬೀಳುವ ತುಂಡುಗಳಿಗಾಗಿ ಲಾಜರನು ಹಂಬಲಿಸುತ್ತಾನೆ (ಸಾಮ್ಯ)ಲೂಕ 16:21
    ವಚನಗಳು
    ಲೂಕ 16:21ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
  • ನಿನ್ನ ಮೇಜಿನ ಸುತ್ತಲೂ ಎಣ್ಣೆಮರದ ಸಸಿಗಳಂತೆ ನಿನ್ನ ಮಕ್ಕಳುಕೀರ್ತ 128:3
    ವಚನಗಳು
    ಕೀರ್ತ 128:3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.

ಕುಳಿತುಕೊಳ್ಳುವುದು ಮತ್ತು ಒರಗಿಕೊಳ್ಳುವುದು

  • ಅತಿಥಿಗಳು ಊಟಮಾಡುತ್ತಿರುವಾಗ ಅಬ್ರಹಾಮನು ಮರದ ಕೆಳಗೆ ಅವರ ಬಳಿ ನಿಂತುಕೊಳ್ಳುತ್ತಾನೆಆದಿ 18:8
    ವಚನಗಳು
    ಆದಿ 18:8ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
  • ಊಟದ ಸಮಯದಲ್ಲಿ ರೂತಳು ಕೊಯ್ಯುವವರ ಪಕ್ಕದಲ್ಲಿ ಕುಳಿತುಕೊಳ್ಳುತ್ತಾಳೆರೂತ 2:14
    ವಚನಗಳು
    ರೂತ 2:14ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
  • ರಾಣಿಯಾದ ಎಸ್ತೇರಳು ಒರಗಿಕೊಂಡಿದ್ದ ಮಂಚದ ಮೇಲೆ ಹಾಮಾನನು ಬೀಳುತ್ತಾನೆಎಸ್ತೇ 7:8
    ವಚನಗಳು
    ಎಸ್ತೇ 7:8ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.
  • ಯೇಸು ಹನ್ನೆರಡು ಮಂದಿಯೊಂದಿಗೆ ಊಟಕ್ಕೆ ಒರಗಿಕೊಳ್ಳುತ್ತಾನೆಮತ್ತಾ 26:20
    ವಚನಗಳು
    ಮತ್ತಾ 26:20ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.
  • ಯೇಸುವಿನ ಪಕ್ಕದಲ್ಲಿ ಒರಗಿಕೊಂಡಿದ್ದ ಒಬ್ಬ ಶಿಷ್ಯನು ಹಿಂದಕ್ಕೆ ಬಾಗಿ ಆತನನ್ನು ಕೇಳುತ್ತಾನೆಯೋಹಾ 13:23–25
    ವಚನಗಳು
    ಯೋಹಾ 13:23–25ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು. ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು. ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
  • ಒಬ್ಬ ಫರಿಸಾಯನು ಯೇಸುವನ್ನು ಊಟಕ್ಕೆ ಕರೆಯುತ್ತಾನೆ, ಆತನು ಊಟಕ್ಕೆ ಒರಗಿಕೊಳ್ಳುತ್ತಾನೆಲೂಕ 7:36
    ವಚನಗಳು
    ಲೂಕ 7:36ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.
  • ಮಾರ್ಥಳು ಉಪಚಾರ ಮಾಡುತ್ತಾಳೆ, ಲಾಜರನು ಯೇಸುವಿನೊಂದಿಗೆ ಊಟಕ್ಕೆ ಒರಗಿಕೊಂಡಿದ್ದಾನೆಯೋಹಾ 12:2
    ವಚನಗಳು
    ಯೋಹಾ 12:2ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
  • ಐದು ಸಾವಿರ ಜನರು ನೂರು ನೂರು, ಐವತ್ತು ಐವತ್ತು ಮಂದಿಯ ಪಂಕ್ತಿಗಳಾಗಿ ಹುಲ್ಲಿನ ಮೇಲೆ ಕುಳಿತುಕೊಳ್ಳುತ್ತಾರೆಮಾರ್ಕ 6:39–40, ಲೂಕ 9:14
    ವಚನಗಳು
    ಮಾರ್ಕ 6:39–40ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ, ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
    ಲೂಕ 9:14ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,

ಯಾರು ಯಾರೊಂದಿಗೆ ಊಟಮಾಡಿದರು

  • ದಾವೀದನು ಸೌಲನ ಮೇಜಿಗೆ ಬರುವುದಿಲ್ಲ; ಯೋನಾತಾನನು ಕೋಪದಿಂದ ಅದನ್ನು ಬಿಟ್ಟು ಎದ್ದುಹೋಗುತ್ತಾನೆ1 ಸಮು 20:29, 1 ಸಮು 20:34
    ವಚನಗಳು
    1 ಸಮು 20:29ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.
    1 ಸಮು 20:34ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
  • ಸೊಲೊಮೋನನ ಮೇಜಿಗೆ ಬರುವ ಎಲ್ಲರಿಗೂ ಅಧಿಕಾರಿಗಳು ಆಹಾರವನ್ನು ಒದಗಿಸುತ್ತಾರೆ1 ಅರಸು 4:27
    ವಚನಗಳು
    1 ಅರಸು 4:27ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
  • ಸೊಲೊಮೋನನ ಮೇಜೂ ಅವನ ಸೇವಕರು ಕುಳಿತುಕೊಳ್ಳುವ ರೀತಿಯೂ ಶೆಬದ ರಾಣಿಯನ್ನು ಬೆರಗುಗೊಳಿಸುತ್ತವೆ1 ಅರಸು 10:4–5
    ವಚನಗಳು
    1 ಅರಸು 10:4–5ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
  • ಅತಿಥಿಗಳಲ್ಲದೆ ಅನೇಕ ಯೆಹೂದ್ಯರೂ ಅಧಿಕಾರಿಗಳೂ ನೆಹೆಮೀಯನ ಮೇಜಿನಲ್ಲಿ ಊಟಮಾಡುತ್ತಾರೆನೆಹೆ 5:17
    ವಚನಗಳು
    ನೆಹೆ 5:17ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
  • ಯೆಹೋಯಾಖೀನನು ಜೀವಮಾನವೆಲ್ಲಾ ಬಾಬಿಲೋನಿನ ಅರಸನ ಮೇಜಿನಲ್ಲಿ ಊಟಮಾಡುತ್ತಾನೆ2 ಅರಸು 25:29
    ವಚನಗಳು
    2 ಅರಸು 25:29ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
  • ಮತ್ತಾಯನ ಮನೆಯಲ್ಲಿ ಯೇಸು ಸುಂಕದವರೊಂದಿಗೂ ಪಾಪಿಗಳೊಂದಿಗೂ ಊಟಮಾಡುತ್ತಾನೆಮತ್ತಾ 9:10–11, ಮಾರ್ಕ 2:15–16, ಲೂಕ 15:2
    ವಚನಗಳು
    ಮತ್ತಾ 9:10–11ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
    ಮಾರ್ಕ 2:15–16ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
    ಲೂಕ 15:2ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.
  • “ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ”ಲೂಕ 22:21
    ವಚನಗಳು
    ಲೂಕ 22:21“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.
  • ಪುನರುತ್ಥಾನನಾದ ಯೇಸು: “ಬಂದು ಊಟ ಮಾಡಿರಿ”ಯೋಹಾ 21:12
    ವಚನಗಳು
    ಯೋಹಾ 21:12ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
  • ಮೊದಲ ವಿಶ್ವಾಸಿಗಳು ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾರೆಅ. ಕೃ 2:46
    ವಚನಗಳು
    ಅ. ಕೃ 2:46ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
  • ಊಟದ ಉಪಚಾರಕ್ಕಾಗಿ ವಾಕ್ಯಬೋಧನೆಯನ್ನು ಬಿಡಲು ಹನ್ನೆರಡು ಮಂದಿ ಬಯಸುವುದಿಲ್ಲಅ. ಕೃ 6:2
    ವಚನಗಳು
    ಅ. ಕೃ 6:2ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.
  • ಸುನ್ನತಿಯಿಲ್ಲದವರೊಂದಿಗೆ ಊಟಮಾಡಿದ್ದಕ್ಕಾಗಿ ಪೇತ್ರನನ್ನು ಆಕ್ಷೇಪಿಸಲಾಗುತ್ತದೆಅ. ಕೃ 11:3
    ವಚನಗಳು
    ಅ. ಕೃ 11:3“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
  • ಅಂತಿಯೋಕ್ಯದಲ್ಲಿ ಅನ್ಯಜನರೊಂದಿಗೆ ಊಟಮಾಡುವುದರಿಂದ ಪೇತ್ರನು ಹಿಂದೆಸರಿಯುತ್ತಾನೆಗಲಾ 2:12
    ವಚನಗಳು
    ಗಲಾ 2:12ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.
  • ಸೆರೆಮನೆಯ ಯಜಮಾನನು ಪೌಲನಿಗೂ ಸೀಲನಿಗೂ ಊಟವನ್ನು ಬಡಿಸುತ್ತಾನೆಅ. ಕೃ 16:34
    ವಚನಗಳು
    ಅ. ಕೃ 16:34ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
  • ಅವಿಶ್ವಾಸಿಯು ಊಟಕ್ಕೆ ಕರೆದನೋ? ನಿಮ್ಮ ಮುಂದೆ ಇಟ್ಟದ್ದನ್ನೆಲ್ಲಾ ತಿನ್ನಿರಿ1 ಕೊರಿ 10:27
    ವಚನಗಳು
    1 ಕೊರಿ 10:27ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು