ಅನ್ವೇಷಿಸಿ › ವಿಷಯಗಳು › ಬೀಸುವ ಕಲ್ಲುಗಳು, ಒಲೆಗಳು ಮತ್ತು ರೊಟ್ಟಿ ಸುಡುವುದು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಬೀಸುವ ಕಲ್ಲುಗಳು, ಒಲೆಗಳು ಮತ್ತು ರೊಟ್ಟಿ ಸುಡುವುದು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 32 ವಾಕ್ಯಭಾಗಗಳು, ಸಾಲು ಸಾಲಾಗಿ.
ಬೀಸುವ ಕಲ್ಲುಗಳು ಮತ್ತು ಬೀಸುವುದು
- ಬೀಸುವ ಕಲ್ಲುಗಳನ್ನು ಸಾಲಕ್ಕೆ ಒತ್ತೆಯಾಗಿ ತೆಗೆದುಕೊಳ್ಳಬಾರದುಧರ್ಮೋ 24:6
ವಚನಗಳು
ಧರ್ಮೋ 24:6ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.
- ಐಗುಪ್ತದಲ್ಲಿ ಅತಿ ಕೀಳಾದ ದಾಸಿಯು ಬೀಸುವ ಕಲ್ಲಿನ ಹಿಂದೆ ಕೆಲಸಮಾಡುತ್ತಿದ್ದಳುವಿಮೋ 11:5
ವಚನಗಳು
ವಿಮೋ 11:5ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
- ಮನ್ನವನ್ನು ಬೀಸುವ ಕಲ್ಲಿನಲ್ಲಿ ಬೀಸುತ್ತಿದ್ದರು ಅಥವಾ ಒರಳಿನಲ್ಲಿ ಕುಟ್ಟುತ್ತಿದ್ದರುಅರಣ್ಯ 11:8
ವಚನಗಳು
ಅರಣ್ಯ 11:8ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
- ತೇಬೇಚಿನಲ್ಲಿ ಒಬ್ಬ ಸ್ತ್ರೀಯು ಬೀಸುವ ಕಲ್ಲಿನ ಮೇಲಿನ ಕಲ್ಲನ್ನು ಅಬೀಮೆಲೆಕನ ಮೇಲೆ ಹಾಕಿದಳುನ್ಯಾಯ 9:53, 2 ಸಮು 11:21
ವಚನಗಳು
ನ್ಯಾಯ 9:53ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
2 ಸಮು 11:21ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.
- ಕುರುಡನಾಗಿಸಲ್ಪಟ್ಟು ಸಂಕೋಲೆ ಹಾಕಲ್ಪಟ್ಟ ಸಂಸೋನನು ಗಾಜಾದ ಸೆರೆಮನೆಯಲ್ಲಿ ಧಾನ್ಯವನ್ನು ಬೀಸಿದನುನ್ಯಾಯ 16:21
ವಚನಗಳು
ನ್ಯಾಯ 16:21ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
- ಒಟ್ಟಿಗೆ ಬೀಸುತ್ತಿರುವ ಇಬ್ಬರು ಸ್ತ್ರೀಯರ ಬಗ್ಗೆ ಯೇಸು ಹೇಳುತ್ತಾನೆಮತ್ತಾ 24:41, ಲೂಕ 17:35
ವಚನಗಳು
ಮತ್ತಾ 24:41ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
ಲೂಕ 17:35ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
- ಯೇಸು: ಕುತ್ತಿಗೆಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿಕೊಂಡು ಮುಳುಗುವುದೇ ಲೇಸುಮತ್ತಾ 18:6
ವಚನಗಳು
ಮತ್ತಾ 18:6ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
- ಯೆರೆಮೀಯನು ಮದುಮಗನ ಮತ್ತು ಮದುಮಗಳ ಧ್ವನಿಗಳೊಂದಿಗೆ ಬೀಸುವ ಕಲ್ಲಿನ ಶಬ್ದವನ್ನು ಉಲ್ಲೇಖಿಸುತ್ತಾನೆಯೆರೆ 25:10
ವಚನಗಳು
ಯೆರೆ 25:10ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
- ಪ್ರಲಾಪಗಳು: ಯುವಕರು ಬೀಸುವ ಕಲ್ಲುಗಳ ಬಳಿ ದುಡಿಯುತ್ತಾರೆಪ್ರಲಾ 5:13
ವಚನಗಳು
ಪ್ರಲಾ 5:13ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.
ಒಲೆಗಳು ಮತ್ತು ರೊಟ್ಟಿ ಸುಡುವುದು
- ಕಪ್ಪೆಗಳು ಐಗುಪ್ತದ ಒಲೆಗಳೊಳಗೂ ಹಿಟ್ಟು ನಾದುವ ಪಾತ್ರೆಗಳೊಳಗೂ ಬರುವವುವಿಮೋ 8:3
ವಚನಗಳು
ವಿಮೋ 8:3ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.
- ಧಾನ್ಯನೈವೇದ್ಯಗಳನ್ನು ಒಲೆಯಲ್ಲಿ ಸುಡಬಹುದಿತ್ತು ಅಥವಾ ಕಾವಲಿಯಲ್ಲಿ ಬೇಯಿಸಬಹುದಿತ್ತುಯಾಜ 2:4, ಯಾಜ 7:9
- ಅಶುದ್ಧವಾದ ಶವವು ತಗಲಿದ ಒಲೆಯನ್ನು ಒಡೆದುಹಾಕಬೇಕಾಗಿತ್ತುಯಾಜ 11:35
ವಚನಗಳು
ಯಾಜ 11:35ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.
- ಧರ್ಮಶಾಸ್ತ್ರದಲ್ಲಿನ ಒಂದು ಶಾಪ: ಹತ್ತು ಸ್ತ್ರೀಯರು ಒಂದೇ ಒಲೆಯಲ್ಲಿ ರೊಟ್ಟಿ ಸುಡುವರುಯಾಜ 26:26
ವಚನಗಳು
ಯಾಜ 26:26ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.
- ಸಾರಳು ಮೂರು ಸೆಯಾ ನಯವಾದ ಹಿಟ್ಟನ್ನು ನಾದಿ ರೊಟ್ಟಿ ಸುಡಬೇಕುಆದಿ 18:6
ವಚನಗಳು
ಆದಿ 18:6ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
- ಲೋಟನು ತನ್ನ ಅತಿಥಿಗಳಿಗಾಗಿ ಹುಳಿಯಿಲ್ಲದ ರೊಟ್ಟಿಯನ್ನು ಸುಟ್ಟನುಆದಿ 19:3
ವಚನಗಳು
ಆದಿ 19:3ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
- ಫರೋಹನ ಮುಖ್ಯ ರೊಟ್ಟಿಗಾರನು ತನ್ನ ತಲೆಯ ಮೇಲೆ ಮೂರು ರೊಟ್ಟಿಯ ಬುಟ್ಟಿಗಳ ಕನಸು ಕಂಡನುಆದಿ 40:16–17
ವಚನಗಳು
ಆದಿ 40:16–17ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.
- ಐಗುಪ್ತವನ್ನು ಬಿಟ್ಟು ಹೊರಡುವಾಗ ಇಸ್ರಾಯೇಲರು ತಾವು ತಂದ ಕಣಕದಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟರುವಿಮೋ 12:34, ವಿಮೋ 12:39
ವಚನಗಳು
ವಿಮೋ 12:34ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.
ವಿಮೋ 12:39ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.
- ಸಬ್ಬತ್ ದಿನಕ್ಕೆ ಮೊದಲು: ‘ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ’ವಿಮೋ 16:23
ವಚನಗಳು
ವಿಮೋ 16:23ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.
- ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿಗಾಗಿ ಹನ್ನೆರಡು ರೊಟ್ಟಿಗಳನ್ನು ಸುಡಲಾಗುತ್ತಿತ್ತುಯಾಜ 24:5–6
ವಚನಗಳು
ಯಾಜ 24:5–6“ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
- ಸಮುವೇಲನು: ಅರಸನು ನಿಮ್ಮ ಹೆಣ್ಣುಮಕ್ಕಳನ್ನು ಅಡಿಗೆಯವರನ್ನಾಗಿಯೂ ರೊಟ್ಟಿ ಸುಡುವವರನ್ನಾಗಿಯೂ ತೆಗೆದುಕೊಳ್ಳುವನು1 ಸಮು 8:13
ವಚನಗಳು
1 ಸಮು 8:13ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
- ಏಂದೋರಿನ ಯಕ್ಷಿಣಿಗಾತಿಯು ಸೌಲನಿಗಾಗಿ ಹಿಟ್ಟು ನಾದಿ ಹುಳಿಯಿಲ್ಲದ ರೊಟ್ಟಿಯನ್ನು ಸುಟ್ಟಳು1 ಸಮು 28:24
ವಚನಗಳು
1 ಸಮು 28:24ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
- ತಾಮಾರಳು ಹಿಟ್ಟು ನಾದಿ ಅಮ್ನೋನನಿಗಾಗಿ ಹೋಳಿಗೆಗಳನ್ನು ಮಾಡಿದಳು2 ಸಮು 13:8
ವಚನಗಳು
2 ಸಮು 13:8ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.
- ಎಲೀಯನು ಎಚ್ಚರಗೊಂಡಾಗ ಕೆಂಡದ ಮೇಲೆ ಸುಟ್ಟ ರೊಟ್ಟಿಯಿತ್ತು1 ಅರಸು 19:6
ವಚನಗಳು
1 ಅರಸು 19:6ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
- ಯೆಶಾಯನು: ಮರದ ಒಂದು ಭಾಗದಿಂದ ರೊಟ್ಟಿ ಸುಡುತ್ತಾರೆ, ಉಳಿದದ್ದು ವಿಗ್ರಹವಾಗುತ್ತದೆಯೆಶಾ 44:15, ಯೆಶಾ 44:19
ವಚನಗಳು
ಯೆಶಾ 44:15ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.
ಯೆಶಾ 44:19“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
- ರೊಟ್ಟಿಗಾರರ ಬೀದಿಯಿಂದ ಯೆರೆಮೀಯನಿಗೆ ದಿನಕ್ಕೊಂದು ರೊಟ್ಟಿ ಸಿಗುತ್ತಿತ್ತುಯೆರೆ 37:21
ವಚನಗಳು
ಯೆರೆ 37:21ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
- ಯೆರೂಸಲೇಮಿನ ಗೋಡೆಗೆ ಒಲೆಬುರುಜು ಇತ್ತುನೆಹೆ 3:11, ನೆಹೆ 12:38
ವಚನಗಳು
ನೆಹೆ 3:11ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.
ನೆಹೆ 12:38ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು