Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಹಣ

ದೈನಂದಿನ ಜೀವನ

ಬೈಬಲಿನಲ್ಲಿ ಹಣ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 41 ವಾಕ್ಯಭಾಗಗಳು, ಸಾಲು ಸಾಲಾಗಿ.

ತೂಕಮಾಡಿ ಕೊಟ್ಟ ಬೆಳ್ಳಿ

  • ಮಕ್ಪೇಲದ ಗವಿಗಾಗಿ ಅಬ್ರಹಾಮನು 400 ಶೆಕೆಲ್ ಬೆಳ್ಳಿಯನ್ನು ತೂಕಮಾಡಿ ಕೊಡುತ್ತಾನೆಆದಿ 23:15–16
    ವಚನಗಳು
    ಆದಿ 23:15–16“ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
  • ಯಾಕೋಬನು ನೂರು ಬೆಳ್ಳಿ ನಾಣ್ಯಗಳಿಗೆ ಶೆಕೆಮಿನಲ್ಲಿ ಒಂದು ಹೊಲವನ್ನು ಕೊಂಡುಕೊಳ್ಳುತ್ತಾನೆಆದಿ 33:19
    ವಚನಗಳು
    ಆದಿ 33:19ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
  • ಯೋಸೇಫನನ್ನು ಇಪ್ಪತ್ತು ಶೆಕೆಲ್ ಬೆಳ್ಳಿಗೆ ಮಾರಲಾಗುತ್ತದೆಆದಿ 37:28
    ವಚನಗಳು
    ಆದಿ 37:28ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
  • ಅಣ್ಣಂದಿರು ತಮ್ಮ ಬೆಳ್ಳಿಯು ತಮ್ಮ ಚೀಲಗಳಲ್ಲಿಯೇ ಹಿಂದಿರುಗಿ ಬಂದಿರುವುದನ್ನು ಕಾಣುತ್ತಾರೆಆದಿ 42:25, ಆದಿ 42:35, ಆದಿ 43:21
    ವಚನಗಳು
    ಆದಿ 42:25ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
    ಆದಿ 42:35ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
    ಆದಿ 43:21ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
  • ಧಾನ್ಯಕ್ಕೆ ಬದಲಾಗಿ ಯೋಸೇಫನು ಐಗುಪ್ತದ ಮತ್ತು ಕಾನಾನಿನ ಹಣವನ್ನೆಲ್ಲಾ ಕೂಡಿಸುತ್ತಾನೆಆದಿ 47:14–16
    ವಚನಗಳು
    ಆದಿ 47:14–16ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು.
  • ಸಂಸೋನನ ಬಲದ ರಹಸ್ಯಕ್ಕಾಗಿ ಫಿಲಿಷ್ಟಿಯರ ಪ್ರತಿಯೊಬ್ಬ ಅಧಿಪತಿಯೂ ದೆಲೀಲಳಿಗೆ ಬೆಳ್ಳಿಯನ್ನು ಕೊಡುವುದಾಗಿ ಹೇಳುತ್ತಾನೆನ್ಯಾಯ 16:5
    ವಚನಗಳು
    ನ್ಯಾಯ 16:5ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
  • ಮೀಕನು ತನ್ನ ತಾಯಿಯಿಂದ ತೆಗೆದುಕೊಂಡಿದ್ದ 1,100 ಶೆಕೆಲುಗಳನ್ನು ಹಿಂದಿರುಗಿಸುತ್ತಾನೆನ್ಯಾಯ 17:2–4
    ವಚನಗಳು
    ನ್ಯಾಯ 17:2–4ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು. ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ, ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.
  • ಅಹಾಬನು ನಾಬೋತನ ದ್ರಾಕ್ಷಿತೋಟಕ್ಕಾಗಿ ಬೆಳ್ಳಿಯನ್ನು ಕೊಡುವುದಾಗಿ ಹೇಳುತ್ತಾನೆ1 ಅರಸು 21:2
    ವಚನಗಳು
    1 ಅರಸು 21:2ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ” ಎಂದು ಹೇಳಿದನು.
  • ನಾಮಾನನು ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿ ಗೇಹಜಿಗೆ ಕೊಡುತ್ತಾನೆ2 ಅರಸು 5:23
    ವಚನಗಳು
    2 ಅರಸು 5:23ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
  • ಮುಚ್ಚಳದಲ್ಲಿ ತೂತಿರುವ ಪೆಟ್ಟಿಗೆಯು ದೇವಾಲಯದ ಹಣವನ್ನು ಕೂಡಿಸುತ್ತದೆ2 ಅರಸು 12:9–11
    ವಚನಗಳು
    2 ಅರಸು 12:9–11ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು. ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು. ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.
  • ಅಶ್ಶೂರಕ್ಕಾಗಿ ಮೆನಹೇಮನು ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಶೆಕೆಲುಗಳನ್ನು ವಸೂಲಿಮಾಡುತ್ತಾನೆ2 ಅರಸು 15:20
    ವಚನಗಳು
    2 ಅರಸು 15:20ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.
  • ಆ ಸ್ಥಳಕ್ಕಾಗಿ ದಾವೀದನು ಒರ್ನಾನನಿಗೆ 600 ಶೆಕೆಲ್ ಬಂಗಾರವನ್ನು ಕೊಡುತ್ತಾನೆ1 ಪೂರ್ವ 21:25
    ವಚನಗಳು
    1 ಪೂರ್ವ 21:25ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
  • ಯೆರೆಮೀಯನು ಹದಿನೇಳು ಶೆಕೆಲುಗಳನ್ನು ತೂಕಮಾಡಿ ಕೊಟ್ಟು ಮುದ್ರೆಹಾಕಿದ ಕ್ರಯಪತ್ರಕ್ಕೆ ಸಹಿಮಾಡುತ್ತಾನೆಯೆರೆ 32:9–10
    ವಚನಗಳು
    ಯೆರೆ 32:9–10ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು. ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.
  • ವ್ಯಾಪಾರಿಗಳು ಏಫಾವನ್ನು ಚಿಕ್ಕದಾಗಿಯೂ ಶೆಕೆಲನ್ನು ದೊಡ್ಡದಾಗಿಯೂ ಮಾಡುತ್ತಾರೆಆಮೋ 8:5
    ವಚನಗಳು
    ಆಮೋ 8:5ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
  • ಕೂಲಿಯಾಗಿ ತೂಕಮಾಡಿ ಕೊಟ್ಟ ಮೂವತ್ತು ಬೆಳ್ಳಿ ನಾಣ್ಯಗಳುಜೆಕ 11:12–13
    ವಚನಗಳು
    ಜೆಕ 11:12–13ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.

ಧರ್ಮಶಾಸ್ತ್ರದಲ್ಲಿ

  • ಸೇವಕನನ್ನು ಹಾಯುವ ಎತ್ತು: ಮೂವತ್ತು ಶೆಕೆಲ್ ಬೆಳ್ಳಿವಿಮೋ 21:32
    ವಚನಗಳು
    ವಿಮೋ 21:32ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
  • ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ಅರ್ಧ ಶೆಕೆಲನ್ನು ಕೊಡುತ್ತಾನೆವಿಮೋ 30:13–16
    ವಚನಗಳು
    ವಿಮೋ 30:13–16ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
  • ಬಡವನಾದ ಸ್ವದೇಶದವನಿಗೆ ಬಡ್ಡಿಗೆ ಬೆಳ್ಳಿಯನ್ನು ಸಾಲಕೊಡಬಾರದುಯಾಜ 25:37
    ವಚನಗಳು
    ಯಾಜ 25:37ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
  • ದಶಮಾಂಶವನ್ನು ಹಣಕ್ಕೆ ಬದಲಾಯಿಸಿ ಹಬ್ಬದಲ್ಲಿ ಖರ್ಚುಮಾಡಲಾಗುತ್ತದೆಧರ್ಮೋ 14:25–26
    ವಚನಗಳು
    ಧರ್ಮೋ 14:25–26ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ. ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.

ಸುವಾರ್ತೆಗಳಲ್ಲಿಯೂ ಅಪೊಸ್ತಲರ ಕೃತ್ಯಗಳಲ್ಲಿಯೂ

  • ದ್ರಾಕ್ಷಿತೋಟದಲ್ಲಿ ಒಂದು ದಿನದ ಕೆಲಸಕ್ಕೆ ಒಂದು ದಿನಾರಿಮತ್ತಾ 20:2
    ವಚನಗಳು
    ಮತ್ತಾ 20:2ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
  • ಸುಂಕದ ನಾಣ್ಯದ ಮೇಲೆ ಕೈಸರನ ಸ್ವರೂಪವಿದೆಮತ್ತಾ 22:19–21
    ವಚನಗಳು
    ಮತ್ತಾ 22:19–21ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
  • ಮೀನಿನ ಬಾಯಲ್ಲಿ ಒಂದು ನಾಣ್ಯಮತ್ತಾ 17:27
    ವಚನಗಳು
    ಮತ್ತಾ 17:27ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
  • ಒಬ್ಬ ಆಳು ತನ್ನ ಯಜಮಾನನ ಹಣವನ್ನು ನೆಲದಲ್ಲಿ ಹೂಳಿಡುತ್ತಾನೆಮತ್ತಾ 25:18, ಮತ್ತಾ 25:27, ಲೂಕ 19:23
    ವಚನಗಳು
    ಮತ್ತಾ 25:18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
    ಮತ್ತಾ 25:27ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
    ಲೂಕ 19:23ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,
  • ಹತ್ತು ಬೆಳ್ಳಿ ನಾಣ್ಯಗಳಲ್ಲಿ ಒಂದಕ್ಕಾಗಿ ಒಬ್ಬ ಸ್ತ್ರೀಯು ಮನೆಯನ್ನು ಗುಡಿಸುತ್ತಾಳೆಲೂಕ 15:8–9
    ವಚನಗಳು
    ಲೂಕ 15:8–9“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
  • ಯೇಸು ಚಿನಿವಾರರ ಮೇಜುಗಳನ್ನು ಕೆಡವಿಹಾಕುತ್ತಾನೆಮತ್ತಾ 21:12, ಯೋಹಾ 2:14–15
    ವಚನಗಳು
    ಮತ್ತಾ 21:12ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
    ಯೋಹಾ 2:14–15ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
  • ಶಿಷ್ಯರನ್ನು ನಡುಕಟ್ಟಿನಲ್ಲಿ ಹಣವಿಲ್ಲದೆ ಕಳುಹಿಸಲಾಗುತ್ತದೆಮತ್ತಾ 10:9, ಮಾರ್ಕ 6:8
    ವಚನಗಳು
    ಮತ್ತಾ 10:9ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,
    ಮಾರ್ಕ 6:8“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.
  • ಬಡ ವಿಧವೆಯ ಎರಡು ಚಿಕ್ಕ ತಾಮ್ರದ ನಾಣ್ಯಗಳುಮಾರ್ಕ 12:41–42
    ವಚನಗಳು
    ಮಾರ್ಕ 12:41–42ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
  • ಯೂದನು ಮೂವತ್ತು ಬೆಳ್ಳಿ ನಾಣ್ಯಗಳನ್ನು ಹಿಂದಿರುಗಿಸುತ್ತಾನೆ; ಒಂದು ಹೊಲವನ್ನು ಕೊಂಡುಕೊಳ್ಳಲಾಗುತ್ತದೆಮತ್ತಾ 27:3–7
    ವಚನಗಳು
    ಮತ್ತಾ 27:3–7ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
  • ಸೈನಿಕರಿಗೆ ಬಹಳ ಹಣವನ್ನು ಕೊಡಲಾಗುತ್ತದೆಮತ್ತಾ 28:12
    ವಚನಗಳು
    ಮತ್ತಾ 28:12ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
  • ಪೇತ್ರನು: “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ”ಅ. ಕೃ 3:6
    ವಚನಗಳು
    ಅ. ಕೃ 3:6ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
  • ಮಾಟಗಾರನಾದ ಸೀಮೋನನು ಅಪೊಸ್ತಲರಿಗೆ ಹಣ ಕೊಡಲು ಮುಂದಾಗುತ್ತಾನೆಅ. ಕೃ 8:18–20
    ವಚನಗಳು
    ಅ. ಕೃ 8:18–20ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು, “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು. ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ನುಡಿಗಳು

  • “ಧನವು ಎಲ್ಲವನ್ನೂ ಒದಗಿಸಿಕೊಡುವುದು”ಪ್ರಸ 10:19
    ವಚನಗಳು
    ಪ್ರಸ 10:19ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
  • ಹಣವನ್ನು ಪ್ರೀತಿಸುವವನಿಗೆ ಹಣದಿಂದ ಎಂದಿಗೂ ತೃಪ್ತಿಯಾಗುವುದಿಲ್ಲಪ್ರಸ 5:10
    ವಚನಗಳು
    ಪ್ರಸ 5:10ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
  • ಹಣದಂತೆಯೇ ಜ್ಞಾನವೂ ಆಶ್ರಯಪ್ರಸ 7:12
    ವಚನಗಳು
    ಪ್ರಸ 7:12ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
  • ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲ1 ತಿಮೊ 6:10
    ವಚನಗಳು
    1 ತಿಮೊ 6:10ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು