ಅನ್ವೇಷಿಸಿ › ವಿಷಯಗಳು › ನುಸಿಗಳು ಮತ್ತು ಹುಳಗಳು
ಪ್ರಕೃತಿ
ಬೈಬಲಿನಲ್ಲಿ ನುಸಿಗಳು ಮತ್ತು ಹುಳಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 18 ವಾಕ್ಯಭಾಗಗಳು, ಸಾಲು ಸಾಲಾಗಿ.
ನುಸಿಗಳು
- ನುಸಿಗಳು ಬಟ್ಟೆಗಳನ್ನು ತಿನ್ನುತ್ತವೆಯಾಕೋ 5:2
ವಚನಗಳು
ಯಾಕೋ 5:2ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
- ಭೂಲೋಕದ ಸಂಪತ್ತನ್ನು ನುಸಿಯೂ ತುಕ್ಕೂ ಕೆಡಿಸುತ್ತವೆಮತ್ತಾ 6:19–20
ವಚನಗಳು
ಮತ್ತಾ 6:19–20“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
- ನುಸಿಯು ಕೆಡಿಸದ ಪರಲೋಕದಲ್ಲಿನ ಸಂಪತ್ತುಲೂಕ 12:33
ವಚನಗಳು
ಲೂಕ 12:33ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
- “ನುಸಿ ಹಿಡಿದ ಬಟ್ಟೆಯ ಹಾಗೂ”ಯೋಬ 13:28
ವಚನಗಳು
ಯೋಬ 13:28ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.
- “ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು”ಯೆಶಾ 50:9, ಯೆಶಾ 51:8
ವಚನಗಳು
ಯೆಶಾ 50:9ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
ಯೆಶಾ 51:8ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”
- “ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ”ಯೋಬ 27:18
ವಚನಗಳು
ಯೋಬ 27:18ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು.
- ಮಣ್ಣಿನ ಮನೆಗಳಲ್ಲಿ ವಾಸಿಸುವವರು ನುಸಿಯಂತೆ ಜಜ್ಜಲ್ಪಡುತ್ತಾರೆಯೋಬ 4:19
ವಚನಗಳು
ಯೋಬ 4:19ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.
ಹುಳಗಳು
- ರಾತ್ರಿಯೆಲ್ಲಾ ಇಟ್ಟ ಮನ್ನದಲ್ಲಿ ಹುಳಬಿದ್ದು ನಾರಲಾರಂಭಿಸಿತುವಿಮೋ 16:20
ವಚನಗಳು
ವಿಮೋ 16:20ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
- ಸಬ್ಬತ್ತಿಗಾಗಿ ಇಟ್ಟ ಪಾಲಿನಲ್ಲಿ ಹುಳ ಬೀಳಲಿಲ್ಲವಿಮೋ 16:24
ವಚನಗಳು
ವಿಮೋ 16:24ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.
- ಬೆಳಗಾಗುವಾಗ ಒಂದು ಹುಳವು ಯೋನನ ಗಿಡವನ್ನು ಕಡಿಯಿತು, ಅದು ಒಣಗಿಹೋಯಿತುಯೋನ 4:7
ವಚನಗಳು
ಯೋನ 4:7ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.
- ಹೆರೋದನು ಹುಳಬಿದ್ದು ಸತ್ತನುಅ. ಕೃ 12:21–23
ವಚನಗಳು
ಅ. ಕೃ 12:21–23ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು. ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು. ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
- ಹುಳಗಳು ದ್ರಾಕ್ಷಿಗಳನ್ನು ತಿನ್ನುತ್ತವೆ, ಆದ್ದರಿಂದ ಯಾರೂ ಅವುಗಳನ್ನು ಕೂಡಿಸುವುದಿಲ್ಲಧರ್ಮೋ 28:39
ವಚನಗಳು
ಧರ್ಮೋ 28:39ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
- ಯೋಬನು: “ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ”ಯೋಬ 7:5
ವಚನಗಳು
ಯೋಬ 7:5ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.
- ಸಮಾಧಿಯಲ್ಲಿ ಸುಖವಾಗಿದ್ದವರನ್ನೂ ಕಹಿಮನಸ್ಸಿನವರನ್ನೂ ಹುಳಗಳು ಒಂದೇ ರೀತಿ ಮುಚ್ಚುತ್ತವೆಯೋಬ 21:23–26
ವಚನಗಳು
ಯೋಬ 21:23–26ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು. ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು. ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು. ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.
- “ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು”ಯೆಶಾ 51:8
ವಚನಗಳು
ಯೆಶಾ 51:8ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”
- “ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು”ಯೆಶಾ 14:11
ವಚನಗಳು
ಯೆಶಾ 14:11ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.
- ಒಂದು ಕೀರ್ತನೆ: “ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ”ಕೀರ್ತ 22:6
ವಚನಗಳು
ಕೀರ್ತ 22:6ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು