Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಪರ್ವತಗಳು

ಪ್ರಕೃತಿ

ಬೈಬಲಿನಲ್ಲಿ ಪರ್ವತಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 41 ವಾಕ್ಯಭಾಗಗಳು, ಸಾಲು ಸಾಲಾಗಿ.

  • “ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ” ಆಶ್ರಯಕೀರ್ತ 104:18
    ವಚನಗಳು
    ಕೀರ್ತ 104:18ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
  • ಯೆರೂಸಲೇಮಿನ ಸುತ್ತಲೂ ಪರ್ವತಗಳಿವೆಕೀರ್ತ 125:2
    ವಚನಗಳು
    ಕೀರ್ತ 125:2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
  • ಬೆಟ್ಟಗಳಿಂದ ತಾಮ್ರವನ್ನು ಅಗೆದು ತೆಗೆಯಬಹುದಾದ ದೇಶಧರ್ಮೋ 8:9
    ವಚನಗಳು
    ಧರ್ಮೋ 8:9ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
  • ಗಣಿಗಾರನು ಚಕಮಕಿ ಕಲ್ಲನ್ನು ಒಡೆದು ಬೆಟ್ಟಗಳನ್ನು ಬುಡಸಮೇತ ಕೆಡವುತ್ತಾನೆಯೋಬ 28:9
    ವಚನಗಳು
    ಯೋಬ 28:9ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.
  • ಬೆಟ್ಟವು ಸವೆದು ಕುಸಿಯುತ್ತದೆಯೋಬ 14:18
    ವಚನಗಳು
    ಯೋಬ 14:18ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,
  • ಲೆಬನೋನಿನ ಶಿಖರಗಳು: ಅಮಾನ, ಶೆನೀರ್, ಹೆರ್ಮೋನ್, ಸಿಂಹಗಳ ಮತ್ತು ಚಿರತೆಗಳ ಗುಹೆಗಳುಪ.ಗೀ 4:8
    ವಚನಗಳು
    ಪ.ಗೀ 4:8ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.
  • ಸೊಲೊಮೋನನಿಗೆ ಬೆಟ್ಟಗಳಲ್ಲಿ 80,000 ಕಲ್ಲುಕುಟಿಗರಿದ್ದರು1 ಅರಸು 5:15
    ವಚನಗಳು
    1 ಅರಸು 5:15ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
  • ಮಿದ್ಯಾನ್ಯರ ಭಯದಿಂದ ಇಸ್ರಾಯೇಲರು ಬೆಟ್ಟಗಳಲ್ಲಿಯೂ ಗವಿಗಳಲ್ಲಿಯೂ ಆಶ್ರಯಸ್ಥಳಗಳನ್ನು ಮಾಡಿಕೊಂಡರುನ್ಯಾಯ 6:2
    ವಚನಗಳು
    ನ್ಯಾಯ 6:2ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.
  • ಬೋಳುಗುಡ್ಡದ ಮೇಲೆ ಎತ್ತಿದ ಧ್ವಜವು ಸಂಕೇತವಾಗಿತ್ತುಯೆಶಾ 13:2, ಯೆಶಾ 18:3
    ವಚನಗಳು
    ಯೆಶಾ 13:2ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.
    ಯೆಶಾ 18:3ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
  • “ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ”ಮತ್ತಾ 24:16
    ವಚನಗಳು
    ಮತ್ತಾ 24:16ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
  • ನೆರಳುಳ್ಳ ಮರಗಳ ಕೆಳಗೆ ಗುಡ್ಡಗಳ ಮೇಲಿನ ಪೂಜಾಸ್ಥಳಗಳುಹೋಶೇ 4:13, ಧರ್ಮೋ 12:2
    ವಚನಗಳು
    ಹೋಶೇ 4:13ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?
    ಧರ್ಮೋ 12:2ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.

ಕಥೆಗಳಲ್ಲಿ ಪರ್ವತಗಳು

  • ನಾವೆಯು ಅರರಾಟ್ ಪರ್ವತಗಳ ಮೇಲೆ ನಿಂತಿತುಆದಿ 8:4
    ವಚನಗಳು
    ಆದಿ 8:4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.
  • ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಪರ್ವತಗಳ ಶಿಖರಗಳು ಕಾಣಿಸಿಕೊಂಡವುಆದಿ 8:5
    ವಚನಗಳು
    ಆದಿ 8:5ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.
  • ಅಬ್ರಹಾಮನನ್ನು ಮೊರೀಯ ದೇಶದಲ್ಲಿನ ಒಂದು ಬೆಟ್ಟಕ್ಕೆ ಕಳುಹಿಸಲಾಯಿತುಆದಿ 22:2
    ವಚನಗಳು
    ಆದಿ 22:2ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
  • ಮೋಶೆಯು ಮಂದೆಯೊಂದಿಗೆ ದೇವರ ಬೆಟ್ಟವಾದ ಹೋರೇಬಿಗೆ ಬಂದನುವಿಮೋ 3:1
    ವಚನಗಳು
    ವಿಮೋ 3:1ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
  • ಜನರು ಸೀನಾಯಿ ಬೆಟ್ಟವನ್ನು ಮುಟ್ಟದಂತೆ ಒಂದು ಮೇರೆಯನ್ನು ಗೊತ್ತುಮಾಡಲಾಯಿತುವಿಮೋ 19:12
    ವಚನಗಳು
    ವಿಮೋ 19:12ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
  • ಸೀನಾಯಿ ಬೆಟ್ಟವು ಕುಲುಮೆಯಂತೆ ಹೊಗೆಯಾಡಿ ಬಹಳವಾಗಿ ಕಂಪಿಸಿತುವಿಮೋ 19:18
    ವಚನಗಳು
    ವಿಮೋ 19:18ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
  • ಮೋಶೆಯು ನಾಲ್ವತ್ತು ದಿನ ಹಗಲೂ ನಾಲ್ವತ್ತು ರಾತ್ರಿಯೂ ಬೆಟ್ಟದ ಮೇಲೆ ಇದ್ದನುವಿಮೋ 24:18
    ವಚನಗಳು
    ವಿಮೋ 24:18ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
  • ಆರೋನನು ಹೋರ್ ಬೆಟ್ಟದ ತುದಿಯಲ್ಲಿ ಸತ್ತನುಅರಣ್ಯ 20:27–28
    ವಚನಗಳು
    ಅರಣ್ಯ 20:27–28ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು. ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
  • ಪಿಸ್ಗಾ ಶಿಖರದಲ್ಲಿರುವ ನೆಬೋ ಬೆಟ್ಟದಿಂದ ಮೋಶೆಯು ದೇಶವನ್ನು ನೋಡಿದನುಧರ್ಮೋ 34:1
    ವಚನಗಳು
    ಧರ್ಮೋ 34:1ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,
  • ಆರು ಕುಲಗಳು ಗೆರಿಜ್ಜೀಮ್ ಬೆಟ್ಟದ ಮೇಲೆಯೂ ಆರು ಕುಲಗಳು ಏಬಾಲ್ ಬೆಟ್ಟದ ಮೇಲೆಯೂ ನಿಂತವುಧರ್ಮೋ 27:12–13
    ವಚನಗಳು
    ಧರ್ಮೋ 27:12–13“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು. ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.
  • ಯೋತಾಮನು ಗೆರಿಜ್ಜೀಮ್ ಬೆಟ್ಟದ ತುದಿಯಿಂದ ತನ್ನ ನೀತಿಕಥೆಯನ್ನು ಕೂಗಿ ಹೇಳಿದನುನ್ಯಾಯ 9:7
    ವಚನಗಳು
    ನ್ಯಾಯ 9:7ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.
  • ಬಾರಾಕನು ತಾಬೋರ್ ಬೆಟ್ಟದಲ್ಲಿ ಹತ್ತು ಸಾವಿರ ಜನರನ್ನು ಕೂಡಿಸಿದನುನ್ಯಾಯ 4:6
    ವಚನಗಳು
    ನ್ಯಾಯ 4:6ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
  • ಸೌಲನೂ ದಾವೀದನೂ ಒಂದೇ ಬೆಟ್ಟದ ಎರಡು ಪಕ್ಕಗಳಲ್ಲಿ1 ಸಮು 23:26
    ವಚನಗಳು
    1 ಸಮು 23:26ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.
  • ಸೌಲನೂ ಅವನ ಮೂವರು ಮಕ್ಕಳೂ ಗಿಲ್ಬೋವ ಬೆಟ್ಟದ ಮೇಲೆ ಹತರಾದರು1 ಸಮು 31:8
    ವಚನಗಳು
    1 ಸಮು 31:8ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
  • ಎಲೀಯನು ಇಸ್ರಾಯೇಲರನ್ನೂ ಬಾಳನ ಪ್ರವಾದಿಗಳನ್ನೂ ಕರ್ಮೆಲ್ ಬೆಟ್ಟದ ಮೇಲೆ ಕೂಡಿಸಿದನು1 ಅರಸು 18:19–20
    ವಚನಗಳು
    1 ಅರಸು 18:19–20ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು. ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
  • ಕರ್ಮೆಲಿನ ತುದಿಯಲ್ಲಿ ಎಲೀಯನು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಇಟ್ಟುಕೊಂಡನು1 ಅರಸು 18:42
    ವಚನಗಳು
    1 ಅರಸು 18:42ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
  • ಸಮಾರ್ಯದ ಸ್ತ್ರೀ: “ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು”ಯೋಹಾ 4:20
    ವಚನಗಳು
    ಯೋಹಾ 4:20ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.
  • ಯೇಸು ಬೆಟ್ಟವನ್ನು ಹತ್ತಿ ಬೋಧಿಸಲು ಕುಳಿತುಕೊಂಡನುಮತ್ತಾ 5:1
    ವಚನಗಳು
    ಮತ್ತಾ 5:1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
  • ಯೇಸು ಪ್ರಾರ್ಥಿಸಲು ಒಬ್ಬನೇ ಬೆಟ್ಟವನ್ನು ಹತ್ತಿದನುಮತ್ತಾ 14:23, ಲೂಕ 6:12
    ವಚನಗಳು
    ಮತ್ತಾ 14:23ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
    ಲೂಕ 6:12ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
  • ಎತ್ತರವಾದ ಬೆಟ್ಟದ ಮೇಲೆ ಯೇಸುವಿನ ರೂಪಾಂತರವಾಯಿತುಮತ್ತಾ 17:1–2
    ವಚನಗಳು
    ಮತ್ತಾ 17:1–2ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
  • ನಜರೇತ್ ಗುಡ್ಡದ ಮೇಲಿತ್ತು, ಅದರ ಅಂಚಿನಲ್ಲಿ ಕಡಿದಾದ ಸ್ಥಳವಿತ್ತುಲೂಕ 4:29
    ವಚನಗಳು
    ಲೂಕ 4:29ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
  • ಯೇಸು ತನ್ನ ಸಂಜೆಗಳನ್ನು ಎಣ್ಣೆಮರಗಳ ಗುಡ್ಡದಲ್ಲಿ ಕಳೆಯುತ್ತಿದ್ದನುಲೂಕ 21:37
    ವಚನಗಳು
    ಲೂಕ 21:37ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
  • ಎಣ್ಣೆಮರಗಳ ಗುಡ್ಡ: ಯೆರೂಸಲೇಮಿನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರಅ. ಕೃ 1:12
    ವಚನಗಳು
    ಅ. ಕೃ 1:12ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.

ನುಡಿಗಳು

  • “ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ”ಯೆರೆ 46:18
    ವಚನಗಳು
    ಯೆರೆ 46:18ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
  • ಈ ಬೆಟ್ಟಕ್ಕೆ ಕದಲು ಎಂದು ಹೇಳಬಲ್ಲ ನಂಬಿಕೆಮತ್ತಾ 17:20, ಮತ್ತಾ 21:21
    ವಚನಗಳು
    ಮತ್ತಾ 17:20ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
    ಮತ್ತಾ 21:21ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
  • “ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ”ಕೀರ್ತ 121:1
    ವಚನಗಳು
    ಕೀರ್ತ 121:1ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು