ಅನ್ವೇಷಿಸಿ › ವಿಷಯಗಳು › ಶೋಕದ ಪದ್ಧತಿಗಳು
ದೈನಂದಿನ ಜೀವನ
ಬೈಬಲಿನಲ್ಲಿ ಶೋಕದ ಪದ್ಧತಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 55 ವಾಕ್ಯಭಾಗಗಳು, ಸಾಲು ಸಾಲಾಗಿ.
- ಕೆಟ್ಟ ಸುದ್ದಿಯನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಳ್ಳುವುದುಆದಿ 37:29, ಆದಿ 37:34, ಆದಿ 44:13, 2 ಸಮು 1:11, 2 ಸಮು 13:31, ಯೋಬ 1:20, 2 ಅರಸು 2:12
ವಚನಗಳು
ಆದಿ 37:29ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
ಆದಿ 37:34ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
ಆದಿ 44:13ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.
2 ಸಮು 1:11ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ
2 ಸಮು 13:31ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
ಯೋಬ 1:20ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
2 ಅರಸು 2:12ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
- ಸೊಂಟಕ್ಕೆ ಗೋಣಿತಟ್ಟುಆದಿ 37:34, 1 ಅರಸು 21:27, ಎಸ್ತೇ 4:1
ವಚನಗಳು
ಆದಿ 37:34ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
1 ಅರಸು 21:27ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.
ಎಸ್ತೇ 4:1ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
- ತಲೆಯ ಮೇಲೆ ಧೂಳು ಅಥವಾ ಬೂದಿಯೆಹೋ 7:6, 2 ಸಮು 13:19, 2 ಸಮು 15:32, ಯೋಬ 2:12
ವಚನಗಳು
ಯೆಹೋ 7:6ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.
2 ಸಮು 13:19ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.
2 ಸಮು 15:32ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.
ಯೋಬ 2:12ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
- ಗೋಣಿತಟ್ಟು ಮತ್ತು ಬೂದಿಯಲ್ಲಿ ಮಲಗುವುದುಎಸ್ತೇ 4:3, ಯೋನ 3:6
ವಚನಗಳು
ಎಸ್ತೇ 4:3ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
ಯೋನ 3:6ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
- ನೆಲದ ಮೇಲೆ ಬಿದ್ದುಕೊಳ್ಳುವುದು2 ಸಮು 12:16, 2 ಸಮು 13:31
ವಚನಗಳು
2 ಸಮು 12:16ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
2 ಸಮು 13:31ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
- ತಲೆಯನ್ನು ಮುಚ್ಚಿಕೊಂಡು ಬರಿಗಾಲಿನಲ್ಲಿ2 ಸಮು 15:30
ವಚನಗಳು
2 ಸಮು 15:30ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
- ಮುಖವನ್ನು ಮುಚ್ಚಿಕೊಳ್ಳುವುದು2 ಸಮು 19:4, ಎಸ್ತೇ 6:12
ವಚನಗಳು
2 ಸಮು 19:4ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
ಎಸ್ತೇ 6:12ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
- ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತುಕೊಳ್ಳುವುದುಎಜ್ರ 9:3
ವಚನಗಳು
ಎಜ್ರ 9:3ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.
- ತಲೆಬೋಳಿಸಿಕೊಳ್ಳುವುದುಯೋಬ 1:20, ಯೆಹೆ 27:31
ವಚನಗಳು
ಯೋಬ 1:20ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
ಯೆಹೆ 27:31ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- ಆಭರಣಗಳನ್ನು ತೆಗೆದಿಡುವುದುವಿಮೋ 33:4–6
ವಚನಗಳು
ವಿಮೋ 33:4–6ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು. ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
- ಎಣ್ಣೆ ಹಚ್ಚಿಕೊಳ್ಳದಿರುವುದು ಮತ್ತು ಶೋಕದ ಉಡುಪು2 ಸಮು 14:2, ದಾನಿ 10:3
ವಚನಗಳು
2 ಸಮು 14:2ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
ದಾನಿ 10:3ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
- ಗೋಳಾಡುವವರು ಬೀದಿಗಳಲ್ಲಿ ತಿರುಗಾಡುತ್ತಾರೆಪ್ರಸ 12:5
ವಚನಗಳು
ಪ್ರಸ 12:5ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
- ಪ್ರಲಾಪಿಸಲು ಗೋಳಾಟದಲ್ಲಿ ನಿಪುಣರಾದ ಸ್ತ್ರೀಯರನ್ನು ಕರೆಯಿಸುತ್ತಿದ್ದರುಯೆರೆ 9:17–18
ವಚನಗಳು
ಯೆರೆ 9:17–18ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ. ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.
- ಸತ್ತ ಹುಡುಗಿಯ ಮನೆಯಲ್ಲಿ ಕೊಳಲು ಊದುವವರೂ ಗದ್ದಲ ಮಾಡುವ ಜನರ ಗುಂಪೂಮತ್ತಾ 9:23
ವಚನಗಳು
ಮತ್ತಾ 9:23ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,
- ಕುಟುಂಬವನ್ನು ಸಂತೈಸಲು ಮಿತ್ರರು ಬರುತ್ತಾರೆಯೋಹಾ 11:19, ಯೋಹಾ 11:31
ವಚನಗಳು
ಯೋಹಾ 11:19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
ಯೋಹಾ 11:31ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
ಧರ್ಮಶಾಸ್ತ್ರದಲ್ಲಿ
- ಸತ್ತವರಿಗಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು, ಹಣೆಯನ್ನು ಬೋಳಿಸಿಕೊಳ್ಳಬಾರದುಯಾಜ 19:28, ಧರ್ಮೋ 14:1
ವಚನಗಳು
ಯಾಜ 19:28“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
ಧರ್ಮೋ 14:1ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.
- ಶವವನ್ನು ಮುಟ್ಟಿದವನು ಏಳು ದಿನ ಅಶುದ್ಧನಾಗಿರುತ್ತಿದ್ದನುಅರಣ್ಯ 19:11, ಅರಣ್ಯ 19:16
ವಚನಗಳು
ಅರಣ್ಯ 19:11“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಅರಣ್ಯ 19:16ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
- ಯಾಜಕರು ಹತ್ತಿರದ ಬಂಧುಗಳಿಗಾಗಿ ಮಾತ್ರ ತಮ್ಮನ್ನು ಅಶುದ್ಧಮಾಡಿಕೊಳ್ಳಬಹುದುಯಾಜ 21:1–3
ವಚನಗಳು
ಯಾಜ 21:1–3ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು. ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ. ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
- ಮಹಾಯಾಜಕನು ತನ್ನ ವಸ್ತ್ರಗಳನ್ನು ಹರಿದುಕೊಳ್ಳಬಾರದು, ಶವದ ಬಳಿಗೆ ಹೋಗಬಾರದುಯಾಜ 21:10–11
ವಚನಗಳು
ಯಾಜ 21:10–11“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು. ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
- ಆರೋನನೂ ಅವನ ಮಕ್ಕಳೂ ನಾದಾಬ್ ಅಬೀಹೂವಿಗಾಗಿ ಶೋಕಿಸಬಾರದುಯಾಜ 10:6
ವಚನಗಳು
ಯಾಜ 10:6ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
- ಶೋಕದಲ್ಲಿರುವಾಗ ದಶಮಾಂಶದಲ್ಲಿ ಯಾವುದನ್ನೂ ತಿನ್ನಬಾರದಿತ್ತುಧರ್ಮೋ 26:14
ವಚನಗಳು
ಧರ್ಮೋ 26:14ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
ಉದಾಹರಣೆಗಳು
- ಅಬ್ರಹಾಮನು ಸಾರಳಿಗಾಗಿ ಗೋಳಾಡಿ ಅಳುತ್ತಾನೆಆದಿ 23:2
ವಚನಗಳು
ಆದಿ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.
- ಯೋಸೇಫನಿಗಾಗಿ ಯಾಕೋಬನು ಸಮಾಧಾನಹೊಂದಲು ಒಪ್ಪುವುದಿಲ್ಲಆದಿ 37:34–35
ವಚನಗಳು
ಆದಿ 37:34–35ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು. ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.
- ಐಗುಪ್ತವು ಯಾಕೋಬನಿಗಾಗಿ ಎಪ್ಪತ್ತು ದಿನ ಗೋಳಾಡುತ್ತದೆ; ಯೋಸೇಫನು ಆಟಾದಿನಲ್ಲಿ ಏಳು ದಿನ ಗೋಳಾಡುತ್ತಾನೆಆದಿ 50:3, ಆದಿ 50:10–11
ವಚನಗಳು
ಆದಿ 50:3ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
ಆದಿ 50:10–11ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು. ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
- ಇಸ್ರಾಯೇಲರು ಆರೋನನಿಗಾಗಿ ಮೂವತ್ತು ದಿನ, ಮೋಶೆಗಾಗಿ ಮೂವತ್ತು ದಿನ ಗೋಳಾಡುತ್ತಾರೆಅರಣ್ಯ 20:28–29, ಧರ್ಮೋ 34:8
ವಚನಗಳು
ಅರಣ್ಯ 20:28–29ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು. ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
ಧರ್ಮೋ 34:8ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.
- ಐಗುಪ್ತದಲ್ಲಿ ಮಹಾ ಗೋಳಾಟ: ಸತ್ತವನಿಲ್ಲದ ಮನೆಯೇ ಇಲ್ಲವಿಮೋ 12:30
ವಚನಗಳು
ವಿಮೋ 12:30ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.
- ದಾವೀದನೂ ಅವನ ಜನರೂ ಶಕ್ತಿಯೆಲ್ಲಾ ಕುಂದುವ ತನಕ ಅಳುತ್ತಾರೆ1 ಸಮು 30:4
ವಚನಗಳು
1 ಸಮು 30:4ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.
- ಸೌಲ ಯೋನಾತಾನರಿಗಾಗಿ ದಾವೀದನ ಶೋಕಗೀತೆ: “ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ”2 ಸಮು 1:17–19
ವಚನಗಳು
2 ಸಮು 1:17–19ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ, ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ. “ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.
- ಅಬ್ನೇರನಿಗಾಗಿ ದಾವೀದನ ಶೋಕಗೀತೆ2 ಸಮು 3:33–34
ವಚನಗಳು
2 ಸಮು 3:33–34ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
- “ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!”2 ಸಮು 18:33, 2 ಸಮು 19:4
ವಚನಗಳು
2 ಸಮು 18:33ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
2 ಸಮು 19:4ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
- ಬತ್ಷೆಬೆಯು ಊರೀಯನಿಗಾಗಿ ಗೋಳಾಡುತ್ತಾಳೆ2 ಸಮು 11:26–27
ವಚನಗಳು
2 ಸಮು 11:26–27ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು. ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
- ಪುರುಷರ ಮತ್ತು ಸ್ತ್ರೀಯರ ಗಾಯಕವೃಂದಗಳು ಯೋಷೀಯನಿಗಾಗಿ ಶೋಕಗೀತೆಗಳನ್ನು ಹಾಡುತ್ತವೆ2 ಪೂರ್ವ 35:24–25
ವಚನಗಳು
2 ಪೂರ್ವ 35:24–25ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು. ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.
- ಮೊರ್ದೆಕೈ ಗೋಣಿತಟ್ಟು ಧರಿಸಿ ಗೋಳಾಡುತ್ತಾನೆ; ಗೋಣಿತಟ್ಟು ಧರಿಸಿದವರಿಗೆ ಅರಮನೆಯ ಬಾಗಿಲೊಳಗೆ ಪ್ರವೇಶವಿರಲಿಲ್ಲಎಸ್ತೇ 4:1–2
ವಚನಗಳು
ಎಸ್ತೇ 4:1–2ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು. ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು