ಅನ್ವೇಷಿಸಿ › ವಿಷಯಗಳು › ನಾಜೀರರು ಮತ್ತು ಅವರ ಹರಕೆ
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ನಾಜೀರರು ಮತ್ತು ಅವರ ಹರಕೆ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 27 ವಾಕ್ಯಭಾಗಗಳು, ಸಾಲು ಸಾಲಾಗಿ.
ಧರ್ಮಶಾಸ್ತ್ರದಲ್ಲಿ
- ಪುರುಷನಾಗಲಿ ಸ್ತ್ರೀಯಾಗಲಿ ನಾಜೀರನ ವಿಶೇಷ ಹರಕೆಯನ್ನು ಮಾಡಬಹುದಿತ್ತುಅರಣ್ಯ 6:2
ವಚನಗಳು
ಅರಣ್ಯ 6:2“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
- ದ್ರಾಕ್ಷಾರಸ, ಮದ್ಯ, ಹುಳಿ, ದ್ರಾಕ್ಷಿರಸ, ದ್ರಾಕ್ಷಿ, ಒಣದ್ರಾಕ್ಷಿ ಯಾವುದೂ ಬೇಡಅರಣ್ಯ 6:3
ವಚನಗಳು
ಅರಣ್ಯ 6:3ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
- ದ್ರಾಕ್ಷಿಬಳ್ಳಿಯಿಂದ ಬರುವ ಯಾವುದೂ ಬೇಡ, ಬೀಜವಾಗಲಿ ಸಿಪ್ಪೆಯಾಗಲಿ ಸಹಅರಣ್ಯ 6:4
ವಚನಗಳು
ಅರಣ್ಯ 6:4ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
- ತಲೆಯ ಮೇಲೆ ಕ್ಷೌರಕತ್ತಿ ಬೇಡ: ಕೂದಲು ಉದ್ದವಾಗಿ ಬೆಳೆಯಬೇಕುಅರಣ್ಯ 6:5
ವಚನಗಳು
ಅರಣ್ಯ 6:5“ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
- ಶವದ ಬಳಿಗೆ ಹೋಗಬಾರದು, ತಂದೆಯದಾಗಲಿ ತಾಯಿಯದಾಗಲಿ ಸಹಅರಣ್ಯ 6:6–7
ವಚನಗಳು
ಅರಣ್ಯ 6:6–7ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು. ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
- ಹತ್ತಿರದಲ್ಲಿ ಯಾರಾದರೂ ಫಕ್ಕನೆ ಸತ್ತರೆ: ಏಳನೆಯ ದಿನದಲ್ಲಿ ತಲೆಬೋಳಿಸಿಕೊಳ್ಳಬೇಕುಅರಣ್ಯ 6:9
ವಚನಗಳು
ಅರಣ್ಯ 6:9ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
- ಎಂಟನೆಯ ದಿನದಲ್ಲಿ: ಎರಡು ಬೆಳವಕ್ಕಿಗಳು ಅಥವಾ ಎರಡು ಪಾರಿವಾಳದ ಮರಿಗಳುಅರಣ್ಯ 6:10
ವಚನಗಳು
ಅರಣ್ಯ 6:10ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
- ಹಿಂದಿನ ದಿನಗಳು ಲೆಕ್ಕಕ್ಕೆ ಬರಲಿಲ್ಲ; ಹರಕೆ ಮತ್ತೆ ಆರಂಭವಾಯಿತುಅರಣ್ಯ 6:12
ವಚನಗಳು
ಅರಣ್ಯ 6:12ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
- ಕೊನೆಯಲ್ಲಿ: ಒಂದು ಗಂಡು ಕುರಿಮರಿ, ಒಂದು ಹೆಣ್ಣು ಕುರಿಮರಿ, ಒಂದು ಟಗರು ಮತ್ತು ಹುಳಿಯಿಲ್ಲದ ರೊಟ್ಟಿಅರಣ್ಯ 6:13–15
ವಚನಗಳು
ಅರಣ್ಯ 6:13–15ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು. ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು. ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
- ನಾಜೀರನು ತಲೆಬೋಳಿಸಿಕೊಂಡು ಕೂದಲನ್ನು ಬೆಂಕಿಯ ಮೇಲೆ ಹಾಕುತ್ತಿದ್ದನುಅರಣ್ಯ 6:18
ವಚನಗಳು
ಅರಣ್ಯ 6:18ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
- ಅದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದುಅರಣ್ಯ 6:20
ವಚನಗಳು
ಅರಣ್ಯ 6:20ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
ಹೆಸರಿಸಲಾದ ನಾಜೀರರು
- ಸಂಸೋನನ ತಾಯಿ ದ್ರಾಕ್ಷಾರಸವನ್ನು ಕುಡಿಯಬಾರದು, ಅಶುದ್ಧವಾದದ್ದನ್ನು ತಿನ್ನಬಾರದುನ್ಯಾಯ 13:4, ನ್ಯಾಯ 13:7, ನ್ಯಾಯ 13:14
ವಚನಗಳು
ನ್ಯಾಯ 13:4ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.
ನ್ಯಾಯ 13:7ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.
ನ್ಯಾಯ 13:14ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು.
- ಸಂಸೋನನು ಗರ್ಭದಿಂದಲೇ ನಾಜೀರನಾಗಿರಬೇಕಿತ್ತು; ಅವನ ತಲೆಯ ಮೇಲೆ ಕ್ಷೌರಕತ್ತಿ ಬರಬಾರದುನ್ಯಾಯ 13:5
ವಚನಗಳು
ನ್ಯಾಯ 13:5ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
- ಸಂಸೋನನು: ‘ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ’ನ್ಯಾಯ 16:17
ವಚನಗಳು
ನ್ಯಾಯ 16:17ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
- ದೆಲೀಲಳು ಅವನ ತಲೆಯ ಕೂದಲನ್ನು ಬೋಳಿಸಿಬಿಟ್ಟಳುನ್ಯಾಯ 16:19
ವಚನಗಳು
ನ್ಯಾಯ 16:19ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
- ತನ್ನ ಮಗನ ತಲೆಯ ಮೇಲೆ ಎಂದಿಗೂ ಕ್ಷೌರಕತ್ತಿ ಬರುವುದಿಲ್ಲವೆಂದು ಹನ್ನಳು ಹರಕೆ ಮಾಡಿದಳು1 ಸಮು 1:11
ವಚನಗಳು
1 ಸಮು 1:11“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
- ಸ್ನಾನಿಕನಾದ ಯೋಹಾನನು ಎಂದಿಗೂ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದಾಗಿತ್ತುಲೂಕ 1:15, ಲೂಕ 7:33
- ಆಮೋಸನು: ನಿಮ್ಮ ಯುವಕರಲ್ಲಿ ನಾಜೀರರನ್ನು ಎಬ್ಬಿಸಲಾಯಿತು, ಆದರೆ ನೀವು ಅವರಿಗೆ ದ್ರಾಕ್ಷಾರಸ ಕುಡಿಸಿದಿರಿಆಮೋ 2:11–12
ವಚನಗಳು
ಆಮೋ 2:11–12ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ. “ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
ಅಪೊಸ್ತಲರ ಕೃತ್ಯಗಳಲ್ಲಿ ಹರಕೆಗಳು
- ಪೌಲನು ಹರಕೆಯ ನಿಮಿತ್ತ ಕೆಂಖ್ರೆಯದಲ್ಲಿ ತಲೆಯನ್ನು ಬೋಳಿಸಿಕೊಂಡನುಅ. ಕೃ 18:18
ವಚನಗಳು
ಅ. ಕೃ 18:18ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
- ಹರಕೆ ಮಾಡಿಕೊಂಡಿದ್ದ ನಾಲ್ಕು ಮಂದಿ ತಲೆಬೋಳಿಸಿಕೊಳ್ಳುವ ಖರ್ಚನ್ನು ಪೌಲನು ಕೊಟ್ಟನುಅ. ಕೃ 21:23–24, ಅ. ಕೃ 21:26
ವಚನಗಳು
ಅ. ಕೃ 21:23–24ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ. ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
ಅ. ಕೃ 21:26ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
ರೇಕಾಬ್ಯರು
- ತಮ್ಮ ಮೂಲಪುರುಷನಾದ ಯೋನಾದಾಬನು ಆಜ್ಞಾಪಿಸಿದಂತೆ ರೇಕಾಬ್ಯರು ದ್ರಾಕ್ಷಾರಸವನ್ನು ಕುಡಿಯಲಿಲ್ಲಯೆರೆ 35:6, ಯೆರೆ 35:14
ವಚನಗಳು
ಯೆರೆ 35:6ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,
ಯೆರೆ 35:14ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
- ಅವರು ಮನೆಗಳನ್ನು ಕಟ್ಟಲಿಲ್ಲ, ಬೀಜ ಬಿತ್ತಲಿಲ್ಲ, ಗುಡಾರಗಳಲ್ಲಿ ವಾಸಿಸಿದರುಯೆರೆ 35:7
ವಚನಗಳು
ಯೆರೆ 35:7ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು