Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಹೊಸ ಹೆಸರುಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಹೊಸ ಹೆಸರುಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 16 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಬಹಳ ಐಶ್ವರ್ಯಕ್ಕಿಂತ ಒಳ್ಳೆಯ ಹೆಸರೇ ಅಪೇಕ್ಷಣೀಯಜ್ಞಾನೋ 22:1
    ವಚನಗಳು
    ಜ್ಞಾನೋ 22:1ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.

ಉದಾಹರಣೆಗಳು

  • ಅಬ್ರಾಮನು ಅಬ್ರಹಾಮನಾದನುಆದಿ 17:5
    ವಚನಗಳು
    ಆದಿ 17:5ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.
  • ಸಾರಯಳು ಸಾರಳಾದಳುಆದಿ 17:15
    ವಚನಗಳು
    ಆದಿ 17:15ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
  • ಯಾಕೋಬನು ಇಸ್ರಾಯೇಲನಾದನುಆದಿ 32:28
    ವಚನಗಳು
    ಆದಿ 32:28ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
  • ರಾಹೇಲಳು ತನ್ನ ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು; ಅವನ ತಂದೆ ಅವನನ್ನು ಬೆನ್ಯಾಮೀನ ಎಂದು ಕರೆದನುಆದಿ 35:18
    ವಚನಗಳು
    ಆದಿ 35:18ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.
  • ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನುಆದಿ 41:45
    ವಚನಗಳು
    ಆದಿ 41:45ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
  • ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನುಅರಣ್ಯ 13:16
    ವಚನಗಳು
    ಅರಣ್ಯ 13:16ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
  • ನವೊಮಿ: ನನ್ನನ್ನು ನವೊಮಿಯೆಂದು ಕರೆಯಬೇಡಿರಿ, ಮಾರಾ ಎಂದು ಕರೆಯಿರಿರೂತ 1:20
    ವಚನಗಳು
    ರೂತ 1:20ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
  • ಸೊಲೊಮೋನನಿಗೆ ಯೆದೀದ್ಯ ಎಂಬ ಹೆಸರೂ ಇಡಲಾಯಿತು2 ಸಮು 12:24–25
    ವಚನಗಳು
    2 ಸಮು 12:24–25ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು. ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.
  • ಫರೋಹ ನೆಕೋವನು ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮ್ ಎಂದು ಬದಲಾಯಿಸಿದನು2 ಅರಸು 23:34
    ವಚನಗಳು
    2 ಅರಸು 23:34ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
  • ಬಾಬಿಲೋನಿನ ಅರಸನು ಮತ್ತನ್ಯನ ಹೆಸರನ್ನು ಚಿದ್ಕೀಯ ಎಂದು ಬದಲಾಯಿಸಿದನು2 ಅರಸು 24:17
    ವಚನಗಳು
    2 ಅರಸು 24:17ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.
  • ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ: ಬೇಲ್ತೆಶಚ್ಚರ್, ಶದ್ರಕ್, ಮೇಶಕ್, ಅಬೇದ್ನೆಗೋದಾನಿ 1:7
    ವಚನಗಳು
    ದಾನಿ 1:7ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
  • ಸೀಮೋನನನ್ನು ಕೇಫ, ಅಂದರೆ ಪೇತ್ರ ಎಂದು ಕರೆಯಲಾಯಿತುಯೋಹಾ 1:42
    ವಚನಗಳು
    ಯೋಹಾ 1:42ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
  • ಯಾಕೋಬನಿಗೂ ಯೋಹಾನನಿಗೂ ಬೊವನೆರ್ಗೆಸ್, ಅಂದರೆ ಸಿಡಿಲ ಮರಿಗಳು ಎಂದು ಹೆಸರಿಡಲಾಯಿತುಮಾರ್ಕ 3:17
    ವಚನಗಳು
    ಮಾರ್ಕ 3:17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
  • ಕುಪ್ರದ್ವೀಪದ ಯೋಸೇಫನನ್ನು ಬಾರ್ನಬ, ಅಂದರೆ ಧೈರ್ಯದಾಯಕ ಎಂದು ಕರೆಯಲಾಯಿತುಅ. ಕೃ 4:36
    ವಚನಗಳು
    ಅ. ಕೃ 4:36ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
  • ಪೌಲನೆಂದೂ ಕರೆಯಲ್ಪಡುತ್ತಿದ್ದ ಸೌಲನುಅ. ಕೃ 13:9
    ವಚನಗಳು
    ಅ. ಕೃ 13:9ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು