ಅನ್ವೇಷಿಸಿ › ವಿಷಯಗಳು › ವೃದ್ಧಾಪ್ಯ
ದೈನಂದಿನ ಜೀವನ
ಬೈಬಲಿನಲ್ಲಿ ವೃದ್ಧಾಪ್ಯ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 42 ವಾಕ್ಯಭಾಗಗಳು, ಸಾಲು ಸಾಲಾಗಿ.
ನುಡಿಗಳು
- ನರೆಕೂದಲಿನವರ ಮುಂದೆ ಎದ್ದುನಿಲ್ಲು; ಮುದುಕರನ್ನು ಸನ್ಮಾನಿಸುಯಾಜ 19:32
ವಚನಗಳು
ಯಾಜ 19:32“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
- ವೃದ್ಧರಲ್ಲಿ ಜ್ಞಾನವಿದೆಯೋಬ 12:12
ವಚನಗಳು
ಯೋಬ 12:12ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.
- ನರೆಕೂದಲು ಮಹಿಮೆಯ ಕಿರೀಟಜ್ಞಾನೋ 16:31, ಜ್ಞಾನೋ 20:29
ವಚನಗಳು
ಜ್ಞಾನೋ 16:31ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.
ಜ್ಞಾನೋ 20:29ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
- ಮೊಮ್ಮಕ್ಕಳು ಮುದುಕರಿಗೆ ಕಿರೀಟಜ್ಞಾನೋ 17:6
ವಚನಗಳು
ಜ್ಞಾನೋ 17:6ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.
- ಎಪ್ಪತ್ತು ವರ್ಷ, ಬಲವಿದ್ದರೆ ಎಂಬತ್ತುಕೀರ್ತ 90:10
ವಚನಗಳು
ಕೀರ್ತ 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
- “ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ”ಕೀರ್ತ 71:9, ಕೀರ್ತ 71:18
ವಚನಗಳು
ಕೀರ್ತ 71:9ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
ಕೀರ್ತ 71:18ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
- ಮುಪ್ಪಿನಲ್ಲಿಯೂ ಅವರು ಫಲಕೊಡುತ್ತಾ ಇರುವರುಕೀರ್ತ 92:14
ವಚನಗಳು
ಕೀರ್ತ 92:14ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.
- “ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ”ಕೀರ್ತ 37:25
ವಚನಗಳು
ಕೀರ್ತ 37:25ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
- “ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು”ಯೆಶಾ 46:4
ವಚನಗಳು
ಯೆಶಾ 46:4ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
- ವೃದ್ಧಾಪ್ಯದ ವರ್ಣನೆ: ನಿನಗೆ ಸಂತೋಷವಿಲ್ಲದ ದಿನಗಳುಪ್ರಸ 12:1–5
ವಚನಗಳು
ಪ್ರಸ 12:1–5ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು. ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು. ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು. ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
- ಮುದುಕರೂ ಮುದುಕಿಯರೂ ಕೈಯಲ್ಲಿ ಕೋಲು ಹಿಡಿದು ಯೆರೂಸಲೇಮಿನ ಬೀದಿಗಳಲ್ಲಿ ಕುಳಿತುಕೊಳ್ಳುವರುಜೆಕ 8:4
ವಚನಗಳು
ಜೆಕ 8:4ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.
- ನೀನು ಮುದುಕನಾದಾಗ ಬೇರೊಬ್ಬನು ನಿನಗೆ ನಡುಕಟ್ಟುವನುಯೋಹಾ 21:18
ವಚನಗಳು
ಯೋಹಾ 21:18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
- ಸಭೆಯಲ್ಲಿ ವೃದ್ಧ ಪುರುಷರೂ ವೃದ್ಧ ಸ್ತ್ರೀಯರೂತೀತ 2:2–3
ವಚನಗಳು
ತೀತ 2:2–3ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
ಉದಾಹರಣೆಗಳು
- ಅಬ್ರಹಾಮನಿಗೆ ತುಂಬು ಮುಪ್ಪಿನ ವಾಗ್ದಾನವಾಗುತ್ತದೆ, ಅವನು ಮುದುಕನಾಗಿ ತೃಪ್ತನಾಗಿ ಸಾಯುತ್ತಾನೆಆದಿ 15:15, ಆದಿ 25:8
- ಮಗನ ವಾಗ್ದಾನವನ್ನು ಕೇಳಿ ವೃದ್ಧಳಾದ ಸಾರಳು ನಗುತ್ತಾಳೆಆದಿ 18:11–12, ಆದಿ 21:7
ವಚನಗಳು
ಆದಿ 18:11–12ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
ಆದಿ 21:7ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.
- ಮುದುಕನಾಗಿ ಬಹುತೇಕ ಕುರುಡನಾದ ಇಸಾಕನು ಏಸಾವನನ್ನು ಕರೆಯುತ್ತಾನೆಆದಿ 27:1–2
ವಚನಗಳು
ಆದಿ 27:1–2ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.
- ಯಾಕೋಬನು ಫರೋಹನ ಮುಂದೆ: ನನ್ನ ಇಹಲೋಕ ಪ್ರಯಾಣದ ಕಾಲವು 130 ವರ್ಷಗಳುಆದಿ 47:9
ವಚನಗಳು
ಆದಿ 47:9ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
- ವೃದ್ಧನಾದ ಯಾಕೋಬನಿಗೆ ಯೋಸೇಫನ ಮಕ್ಕಳು ಸರಿಯಾಗಿ ಕಾಣಿಸುವುದಿಲ್ಲಆದಿ 48:10
ವಚನಗಳು
ಆದಿ 48:10ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
- 120 ವರ್ಷದ ಮೋಶೆ: ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಚೈತನ್ಯ ಕುಂದಲಿಲ್ಲಧರ್ಮೋ 34:7
ವಚನಗಳು
ಧರ್ಮೋ 34:7ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.
- ಎಂಭತ್ತೈದು ವರ್ಷದ ಕಾಲೇಬನು: “ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ”ಯೆಹೋ 14:10–11
ವಚನಗಳು
ಯೆಹೋ 14:10–11ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ. ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
- ವೃದ್ಧನಾದ ಯೆಹೋಶುವನು ಇಸ್ರಾಯೇಲರೆಲ್ಲರನ್ನೂ ಕರೆಯಿಸುತ್ತಾನೆಯೆಹೋ 13:1, ಯೆಹೋ 23:1–2
ವಚನಗಳು
ಯೆಹೋ 13:1ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
ಯೆಹೋ 23:1–2ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು. ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.
- ತೊಂಬತ್ತೆಂಟು ವರ್ಷದ, ಸ್ಥೂಲಕಾಯನಾದ ಏಲಿಯು ತನ್ನ ಪೀಠದಿಂದ ಬೀಳುತ್ತಾನೆ1 ಸಮು 4:15, 1 ಸಮು 4:18
ವಚನಗಳು
1 ಸಮು 4:15ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.
1 ಸಮು 4:18ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.
- ಸಮುವೇಲನು ಮುದುಕನಾಗಿ ತನ್ನ ಮಕ್ಕಳನ್ನು ನ್ಯಾಯಾಧಿಪತಿಗಳನ್ನಾಗಿ ನೇಮಿಸುತ್ತಾನೆ1 ಸಮು 8:1, 1 ಸಮು 8:5
- ಎಂಬತ್ತು ವರ್ಷದ ಬರ್ಜಿಲ್ಲೈ ದಾವೀದನೊಂದಿಗೆ ಅರಮನೆಗೆ ಹೋಗಲು ಒಪ್ಪುವುದಿಲ್ಲ2 ಸಮು 19:32–37
ವಚನಗಳು
2 ಸಮು 19:32–37ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು. ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು. ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು? ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು? ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
- ವೃದ್ಧನಾದ ಅರಸನಾದ ದಾವೀದನಿಗೆ ಹೊದಿಕೆಗಳ ಕೆಳಗೂ ಬೆಚ್ಚಗಾಗುವುದಿಲ್ಲ1 ಅರಸು 1:1–4
ವಚನಗಳು
1 ಅರಸು 1:1–4ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ. ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು. ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು. ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.
- ರೆಹಬ್ಬಾಮನು ಹಿರಿಯರ ಸಲಹೆಯನ್ನು ತಳ್ಳಿಬಿಡುತ್ತಾನೆ1 ಅರಸು 12:6–8
ವಚನಗಳು
1 ಅರಸು 12:6–8ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು. ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು. ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
- ಮುಪ್ಪಿನಿಂದ ಕಣ್ಣು ಮೊಬ್ಬಾದ ಪ್ರವಾದಿಯಾದ ಅಹೀಯನು1 ಅರಸು 14:4
ವಚನಗಳು
1 ಅರಸು 14:4ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.
- ಯೆಹೋಯಾದನು 130 ವರ್ಷದವನಾಗಿ, ಮುದುಕನಾಗಿ, ದಿನತುಂಬಿದವನಾಗಿ ಸಾಯುತ್ತಾನೆ2 ಪೂರ್ವ 24:15
ವಚನಗಳು
2 ಪೂರ್ವ 24:15ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
- ಇತರರು ತನಗಿಂತ ಹಿರಿಯರಾದುದರಿಂದ ಎಲೀಹುವು ಮಾತನಾಡಲು ಕಾಯುತ್ತಾನೆಯೋಬ 32:6–7
ವಚನಗಳು
ಯೋಬ 32:6–7ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.” ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.
- ಯೋಬನು ನಾಲ್ಕು ತಲೆಮಾರುಗಳನ್ನು ನೋಡುವ ತನಕ ಬದುಕುತ್ತಾನೆಯೋಬ 42:16–17
ವಚನಗಳು
ಯೋಬ 42:16–17ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು. ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.
- ನವೊಮಿಯ ಮೊಮ್ಮಗನು ಅವಳ ಮುಪ್ಪಿನಲ್ಲಿ ಅವಳನ್ನು ಪೋಷಿಸುವನುರೂತ 4:15
ವಚನಗಳು
ರೂತ 4:15ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.
- ಜೆಕರ್ಯನೂ ಎಲಿಸಬೇತಳೂ, ಇಬ್ಬರೂ ಬಹಳ ವಯಸ್ಸಾದವರುಲೂಕ 1:7, ಲೂಕ 1:18
- ಎಂಬತ್ತನಾಲ್ಕು ವರ್ಷದ ವಿಧವೆಯಾದ ಅನ್ನಳುಲೂಕ 2:36–37
ವಚನಗಳು
ಲೂಕ 2:36–37ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು, ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
- ಪೌಲನು: “ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು”ಫಿಲೆ 1:9
ವಚನಗಳು
ಫಿಲೆ 1:9ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು