ಅನ್ವೇಷಿಸಿ › ವಿಷಯಗಳು › ತಂದೆತಾಯಿಗಳು
ದೈನಂದಿನ ಜೀವನ
ಬೈಬಲಿನಲ್ಲಿ ತಂದೆತಾಯಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 42 ವಾಕ್ಯಭಾಗಗಳು, ಸಾಲು ಸಾಲಾಗಿ.
ಅಚ್ಚುಮೆಚ್ಚಿನವರು
- ಇಸಾಕನು ಏಸಾವನನ್ನು ಪ್ರೀತಿಸುತ್ತಾನೆ; ರೆಬೆಕ್ಕಳು ಯಾಕೋಬನನ್ನು ಪ್ರೀತಿಸುತ್ತಾಳೆಆದಿ 25:28
ವಚನಗಳು
ಆದಿ 25:28ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
- ಇಸಾಕನ ಆಶೀರ್ವಾದವನ್ನು ಯಾಕೋಬನಿಗೆ ದೊರಕಿಸಲು ರೆಬೆಕ್ಕಳು ಉಪಾಯ ಮಾಡುತ್ತಾಳೆಆದಿ 27:6–10
ವಚನಗಳು
ಆದಿ 27:6–10ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ, ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ. ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು. ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ. ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.
- ಕೇಡಾದೀತೆಂಬ ಭಯದಿಂದ ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲು ಒಪ್ಪುವುದಿಲ್ಲಆದಿ 42:4, ಆದಿ 42:38
ವಚನಗಳು
ಆದಿ 42:4ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
ಆದಿ 42:38ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.
ಪ್ರೀತಿ ಮತ್ತು ಆರೈಕೆ
- ತನ್ನ ಹುಡುಗನು ಸಾಯುವುದನ್ನು ನೋಡಲಾರದೆ ಹಾಗರಳು ಬಾಣ ಬೀಳುವಷ್ಟು ದೂರದಲ್ಲಿ ಕುಳಿತುಕೊಳ್ಳುತ್ತಾಳೆಆದಿ 21:15–16
ವಚನಗಳು
ಆದಿ 21:15–16ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ, ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.
- ರೆಬೆಕ್ಕಳನ್ನು ಇನ್ನೂ ಹತ್ತು ದಿನ ಇಟ್ಟುಕೊಳ್ಳಬೇಕೆಂದು ಅವಳ ತಾಯಿಯೂ ಅಣ್ಣನೂ ಕೇಳುತ್ತಾರೆಆದಿ 24:55
ವಚನಗಳು
ಆದಿ 24:55ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
- ಯೋಸೇಫನು ಜೀವದಿಂದಿದ್ದಾನೆಂದು ಕೇಳಿ ಯಾಕೋಬನು ಚೇತರಿಸಿಕೊಳ್ಳುತ್ತಾನೆಆದಿ 45:26–28
ವಚನಗಳು
ಆದಿ 45:26–28ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ. ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು. ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.
- ಮೋಶೆಯ ತಾಯಿ ಅವನನ್ನು ಮೂರು ತಿಂಗಳು ಅಡಗಿಸಿಟ್ಟು ಆ ಮೇಲೆ ಬುಟ್ಟಿಯಲ್ಲಿ ಇಡುತ್ತಾಳೆವಿಮೋ 2:2–3
ವಚನಗಳು
ವಿಮೋ 2:2–3ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು. ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.
- ಹುಟ್ಟಲಿರುವ ಹುಡುಗನನ್ನು ಹೇಗೆ ಬೆಳೆಸಬೇಕೆಂದು ಮಾನೋಹನು ಕೇಳುತ್ತಾನೆನ್ಯಾಯ 13:8
ವಚನಗಳು
ನ್ಯಾಯ 13:8ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.
- ಫಿಲಿಷ್ಟಿಯ ಹೆಂಡತಿಗೆ ಸಂಸೋನನ ತಂದೆತಾಯಿಗಳು ಆಕ್ಷೇಪಿಸುತ್ತಾರೆನ್ಯಾಯ 14:2–3
ವಚನಗಳು
ನ್ಯಾಯ 14:2–3ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು. ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
- ನವೊಮಿಯು ತನ್ನ ಸೊಸೆಯರಿಗೆ ಮುದ್ದಿಟ್ಟು ಅವರನ್ನು ಮನೆಗೆ ಕಳುಹಿಸುತ್ತಾಳೆರೂತ 1:8–9
ವಚನಗಳು
ರೂತ 1:8–9ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ. ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- ಯೋಬನು ಮುಂಜಾನೆ ಎದ್ದು ತನ್ನ ಪ್ರತಿಯೊಂದು ಮಗುವಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸುತ್ತಾನೆಯೋಬ 1:5
ವಚನಗಳು
ಯೋಬ 1:5ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
- ಅಬ್ಷಾಲೋಮನ ಬಳಿಗೆ ಹೋಗಲು ದಾವೀದನು ಹಂಬಲಿಸುತ್ತಾನೆ2 ಸಮು 13:39
ವಚನಗಳು
2 ಸಮು 13:39ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
- ದಾವೀದನು: “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ”2 ಸಮು 18:5
ವಚನಗಳು
2 ಸಮು 18:5ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
- ರಿಚ್ಪಳು ತನ್ನ ಮಕ್ಕಳ ಶವಗಳನ್ನು ಪಕ್ಷಿಗಳಿಂದಲೂ ಮೃಗಗಳಿಂದಲೂ ಕಾಯುತ್ತಾಳೆ2 ಸಮು 21:8, 2 ಸಮು 21:10
ವಚನಗಳು
2 ಸಮು 21:8ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.
2 ಸಮು 21:10ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
- ನಿಜವಾದ ತಾಯಿ ತನ್ನ ಮಗು ಕೊಲ್ಲಲ್ಪಡುವುದನ್ನು ನೋಡುವುದಕ್ಕಿಂತ ಅದನ್ನು ಬಿಟ್ಟುಕೊಡಲು ಸಿದ್ಧಳು1 ಅರಸು 3:26
ವಚನಗಳು
1 ಅರಸು 3:26ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.
- ಸೊಲೊಮೋನನು ತನ್ನ ತಾಯಿಗಾಗಿ ಸಿಂಹಾಸನವನ್ನು ತರಿಸುತ್ತಾನೆ1 ಅರಸು 2:19
ವಚನಗಳು
1 ಅರಸು 2:19ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
- ಮರಿಯಳೂ ಯೋಸೇಫನೂ ಬಾಲಕನಾದ ಯೇಸುವನ್ನು ಚಿಂತೆಯಿಂದ ಹುಡುಕುತ್ತಾರೆಲೂಕ 2:48
ವಚನಗಳು
ಲೂಕ 2:48ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
- ಯೇಸುವಿನ ತಾಯಿ ಶಿಲುಬೆಯ ಬಳಿ ನಿಂತಿದ್ದಾಳೆಯೋಹಾ 19:25
ವಚನಗಳು
ಯೋಹಾ 19:25ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.
- ಯಾಯೀರನು ತನ್ನ ಚಿಕ್ಕ ಮಗಳಿಗಾಗಿ ಬೇಡಿಕೊಳ್ಳುತ್ತಾನೆಮಾರ್ಕ 5:23
ವಚನಗಳು
ಮಾರ್ಕ 5:23“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- ಅರಮನೆಯ ಅಧಿಕಾರಿಯು: “ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು”ಯೋಹಾ 4:49
ವಚನಗಳು
ಯೋಹಾ 4:49ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
- ಹುಡುಗನ ತಂದೆ: “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು”ಮಾರ್ಕ 9:24
ವಚನಗಳು
ಮಾರ್ಕ 9:24ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
- ಜೆಬೆದಾಯನ ಮಕ್ಕಳ ತಾಯಿ ಅವರಿಗಾಗಿ ಗೌರವದ ಸ್ಥಾನಗಳನ್ನು ಕೇಳುತ್ತಾಳೆಮತ್ತಾ 20:20–21
ವಚನಗಳು
ಮತ್ತಾ 20:20–21ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು. ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
- ಹುಟ್ಟುಕುರುಡನ ತಂದೆತಾಯಿಗಳು: “ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ”ಯೋಹಾ 9:20–23
ವಚನಗಳು
ಯೋಹಾ 9:20–23ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು. ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು. ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು. “ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
ಅತಿ ಸಡಿಲತೆ
- ಏಲಿಯು ತನ್ನ ಮಕ್ಕಳನ್ನು ತಡೆಯಲಿಲ್ಲ1 ಸಮು 3:13
ವಚನಗಳು
1 ಸಮು 3:13ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
- ದಾವೀದನು ಅದೋನೀಯನನ್ನು ಒಂದು ಸಾರಿಯೂ ಗದರಿಸಲಿಲ್ಲ1 ಅರಸು 1:6
ವಚನಗಳು
1 ಅರಸು 1:6ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
ಧರ್ಮಶಾಸ್ತ್ರದಲ್ಲಿ
- ನಿನ್ನ ತಂದೆತಾಯಿಗಳನ್ನು ಸನ್ಮಾನಿಸುವಿಮೋ 20:12
ವಚನಗಳು
ವಿಮೋ 20:12“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
- ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಅಥವಾ ಶಪಿಸಿದರೆ ಮರಣದಂಡನೆವಿಮೋ 21:15, ವಿಮೋ 21:17
ವಚನಗಳು
ವಿಮೋ 21:15ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
ವಿಮೋ 21:17ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
- ತಂದೆತಾಯಿಗಳು ಪಸ್ಕದ ಅರ್ಥವನ್ನು ತಮ್ಮ ಮಕ್ಕಳಿಗೆ ವಿವರಿಸುತ್ತಾರೆವಿಮೋ 12:26–27, ವಿಮೋ 13:8
ವಚನಗಳು
ವಿಮೋ 12:26–27ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ, ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.
ವಿಮೋ 13:8ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
- ತಂದೆತಾಯಿಗಳಿಬ್ಬರೂ ಹಟಮಾರಿಯೂ ಮಾತು ಕೇಳದವನೂ ಆದ ಮಗನನ್ನು ಹಿರಿಯರ ಬಳಿಗೆ ತರುತ್ತಾರೆಧರ್ಮೋ 21:18–20
ವಚನಗಳು
ಧರ್ಮೋ 21:18–20ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು, ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
ತಂದೆತಾಯಿಗಳ ಕುರಿತು ಜ್ಞಾನೋಕ್ತಿಗಳ ನುಡಿಗಳು
- ನಿನ್ನ ತಂದೆಯ ಉಪದೇಶವನ್ನೂ ನಿನ್ನ ತಾಯಿಯ ಬೋಧನೆಯನ್ನೂ ಕೇಳುಜ್ಞಾನೋ 1:8
ವಚನಗಳು
ಜ್ಞಾನೋ 1:8ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
- ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ತರುತ್ತಾನೆಜ್ಞಾನೋ 10:1
ವಚನಗಳು
ಜ್ಞಾನೋ 10:1ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
- ಒಳ್ಳೆಯವನು ತನ್ನ ಮೊಮ್ಮಕ್ಕಳಿಗೂ ಆಸ್ತಿಯನ್ನು ಬಿಟ್ಟುಹೋಗುತ್ತಾನೆಜ್ಞಾನೋ 13:22
ವಚನಗಳು
ಜ್ಞಾನೋ 13:22ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
- ನಿನ್ನ ತಾಯಿ ಮುದುಕಿಯಾದಾಗ ಅವಳನ್ನು ತಿರಸ್ಕರಿಸಬೇಡಜ್ಞಾನೋ 23:22
ವಚನಗಳು
ಜ್ಞಾನೋ 23:22ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
- ನಿನ್ನ ತಂದೆತಾಯಿಗಳು ಸಂತೋಷಪಡಲಿಜ್ಞಾನೋ 23:24–25
ವಚನಗಳು
ಜ್ಞಾನೋ 23:24–25ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
- ಅವಳ ಮಕ್ಕಳು ಎದ್ದು ಅವಳನ್ನು ಧನ್ಯಳೆಂದು ಹೇಳುತ್ತಾರೆಜ್ಞಾನೋ 31:28
ವಚನಗಳು
ಜ್ಞಾನೋ 31:28ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.
ಪತ್ರಿಕೆಗಳಲ್ಲಿ
- ತಂದೆತಾಯಿಗಳು ಮಕ್ಕಳಿಗಾಗಿ ಕೂಡಿಸಿಡುತ್ತಾರೆ, ಮಕ್ಕಳು ತಂದೆತಾಯಿಗಳಿಗಾಗಿ ಅಲ್ಲ2 ಕೊರಿ 12:14
ವಚನಗಳು
2 ಕೊರಿ 12:14ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.
- ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನು ಎಬ್ಬಿಸಬೇಡಿರಿಎಫೆ 6:4, ಕೊಲೊ 3:21
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು