ಅನ್ವೇಷಿಸಿ › ವಿಷಯಗಳು › ಸೆರೆಮನೆಗಳು ಮತ್ತು ಸಂಕೋಲೆಗಳು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಸೆರೆಮನೆಗಳು ಮತ್ತು ಸಂಕೋಲೆಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 45 ವಾಕ್ಯಭಾಗಗಳು, ಸಾಲು ಸಾಲಾಗಿ.
ಹಳೆಯ ಒಡಂಬಡಿಕೆಯಲ್ಲಿ
- ಅರಸನ ಸೆರೆಯವರನ್ನು ಇಡುತ್ತಿದ್ದ ಸೆರೆಮನೆಯಲ್ಲಿ ಯೋಸೇಫನನ್ನು ಹಾಕಲಾಯಿತುಆದಿ 39:20
ವಚನಗಳು
ಆದಿ 39:20ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
- ಸೆರೆಮನೆಯ ಯಜಮಾನನು ಎಲ್ಲಾ ಸೆರೆಯವರನ್ನು ಯೋಸೇಫನ ವಶಕ್ಕೆ ಕೊಟ್ಟನುಆದಿ 39:22
ವಚನಗಳು
ಆದಿ 39:22ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.
- ಫರೋಹನ ಪಾನದಾಯಕನೂ ರೊಟ್ಟಿಗಾರನೂ ಅದೇ ಸೆರೆಮನೆಯಲ್ಲಿದ್ದರುಆದಿ 40:3
ವಚನಗಳು
ಆದಿ 40:3ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು
- ಯೋಸೇಫನನ್ನು ಸೆರೆಯ ಗುಂಡಿಯಿಂದ ತಂದರು, ಅವನು ಕ್ಷೌರಮಾಡಿಕೊಂಡು ಬಟ್ಟೆ ಬದಲಾಯಿಸಿಕೊಂಡನುಆದಿ 41:14
ವಚನಗಳು
ಆದಿ 41:14ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
- ಯೋಸೇಫನು ತನ್ನ ಅಣ್ಣಂದಿರನ್ನು ಮೂರು ದಿನ ಸೆರೆಯಲ್ಲಿಟ್ಟು, ಆ ಮೇಲೆ ಸಿಮೆಯೋನನನ್ನು ಕಟ್ಟಿಹಾಕಿಟ್ಟುಕೊಂಡನುಆದಿ 42:17, ಆದಿ 42:24
- ಅಹಾಬನು: ಮೀಕಾಯೆಹುವನ್ನು ಸೆರೆಮನೆಯಲ್ಲಿ ಹಾಕಿ ರೊಟ್ಟಿ ನೀರು ಮಾತ್ರ ಕೊಡಿರಿ1 ಅರಸು 22:27
ವಚನಗಳು
1 ಅರಸು 22:27‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
- ಆಸನು ರೌದ್ರಗೊಂಡು ದರ್ಶಿಯಾದ ಹನಾನೀಯನ್ನು ಸೆರೆಮನೆಗೆ ಹಾಕಿದನು2 ಪೂರ್ವ 16:7, 2 ಪೂರ್ವ 16:10
ವಚನಗಳು
2 ಪೂರ್ವ 16:7ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
2 ಪೂರ್ವ 16:10ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
- ಅಶ್ಶೂರದ ಅರಸನು ಅರಸನಾದ ಹೋಶೇಯನನ್ನು ಸೆರೆಮನೆಗೆ ಹಾಕಿದನು2 ಅರಸು 17:4
ವಚನಗಳು
2 ಅರಸು 17:4ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
- ಮನಸ್ಸೆಯನ್ನು ಕೊಕ್ಕೆ ಮತ್ತು ತಾಮ್ರದ ಸಂಕೋಲೆಗಳೊಂದಿಗೆ ಬಾಬಿಲೋನಿಗೆ ಒಯ್ಯಲಾಯಿತು2 ಪೂರ್ವ 33:10–11
ವಚನಗಳು
2 ಪೂರ್ವ 33:10–11ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ. ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
- ಕುರುಡನಾಗಿಸಲ್ಪಟ್ಟ ಚಿದ್ಕೀಯನನ್ನು ತಾಮ್ರದ ಸಂಕೋಲೆಗಳೊಂದಿಗೆ ಬಾಬಿಲೋನಿಗೆ ಒಯ್ಯಲಾಯಿತು2 ಅರಸು 25:7, ಯೆರೆ 52:11
ವಚನಗಳು
2 ಅರಸು 25:7ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
ಯೆರೆ 52:11ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
- ಯೆಹೋಯಾಖೀನನನ್ನು ಮೂವತ್ತೇಳು ವರ್ಷಗಳ ನಂತರ ಬಿಡುಗಡೆ ಮಾಡಲಾಯಿತು, ಅವನು ಅರಸನ ಮೇಜಿನಲ್ಲಿ ಊಟಮಾಡಿದನು2 ಅರಸು 25:27–29
ವಚನಗಳು
2 ಅರಸು 25:27–29ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು. ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು. ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
ಯೆರೆಮೀಯ
- ಹೊಡೆಯಲ್ಪಟ್ಟು ಬೆನ್ಯಾಮೀನನ ಮೇಲಿನ ಬಾಗಿಲಲ್ಲಿ ಕೋಳಕ್ಕೆ ಹಾಕಲ್ಪಟ್ಟನುಯೆರೆ 20:2
ವಚನಗಳು
ಯೆರೆ 20:2ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.
- ಲೇಖಕನಾದ ಯೋನಾತಾನನ ಮನೆಯಲ್ಲಿ ಸೆರೆಯ ನೆಲಮನೆಯ ಕೋಣೆಯಲ್ಲಿ ಇರಿಸಲ್ಪಟ್ಟನುಯೆರೆ 37:15–16
ವಚನಗಳು
ಯೆರೆ 37:15–16ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು. ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
- ದಿನಕ್ಕೊಂದು ರೊಟ್ಟಿಯೊಂದಿಗೆ ಕಾವಲಿನ ಅಂಗಳದಲ್ಲಿ ಇರಿಸಲ್ಪಟ್ಟನುಯೆರೆ 32:2, ಯೆರೆ 37:21
ವಚನಗಳು
ಯೆರೆ 32:2ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
ಯೆರೆ 37:21ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
- ನೀರಿಲ್ಲದೆ ಕೆಸರು ಮಾತ್ರ ಇದ್ದ ತೊಟ್ಟಿಗೆ ಹಗ್ಗಗಳಿಂದ ಇಳಿಸಲ್ಪಟ್ಟನುಯೆರೆ 38:6
ವಚನಗಳು
ಯೆರೆ 38:6ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
- ರಾಮದಲ್ಲಿ ಅವನ ಕೈಗಳ ಸಂಕೋಲೆಗಳಿಂದ ಬಿಡಿಸಲ್ಪಟ್ಟನುಯೆರೆ 40:1, ಯೆರೆ 40:4
ವಚನಗಳು
ಯೆರೆ 40:1ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
ಯೆರೆ 40:4ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
ಹೊಸ ಒಡಂಬಡಿಕೆಯಲ್ಲಿ
- ಹೆರೋದನು ಯೋಹಾನನನ್ನು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದನುಮತ್ತಾ 14:3
ವಚನಗಳು
ಮತ್ತಾ 14:3ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
- ಸೆರೆಮನೆಯಿಂದ ಯೋಹಾನನು ತನ್ನ ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನುಮತ್ತಾ 11:2
ವಚನಗಳು
ಮತ್ತಾ 11:2ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
- ಸೆರೆಮನೆಯಲ್ಲಿ ಯೋಹಾನನ ತಲೆ ಕಡಿಯಲಾಯಿತುಮತ್ತಾ 14:10
ವಚನಗಳು
ಮತ್ತಾ 14:10ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
- ದಂಗೆಗಾಗಿಯೂ ಕೊಲೆಗಾಗಿಯೂ ಬರಬ್ಬನು ಸೆರೆಮನೆಯಲ್ಲಿದ್ದನುಲೂಕ 23:19
ವಚನಗಳು
ಲೂಕ 23:19ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
- ಯೇಸು: ‘ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ಮತ್ತಾ 25:36
ವಚನಗಳು
ಮತ್ತಾ 25:36ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
- ಸಾಯಂಕಾಲವಾದ್ದರಿಂದ ಪೇತ್ರನನ್ನೂ ಯೋಹಾನನನ್ನೂ ರಾತ್ರಿಯೆಲ್ಲಾ ಕಾವಲಿನಲ್ಲಿಟ್ಟರುಅ. ಕೃ 4:3
ವಚನಗಳು
ಅ. ಕೃ 4:3ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
- ಸೆರೆಮನೆಯು ಬೀಗ ಹಾಕಲ್ಪಟ್ಟು ಕಾವಲಿನಲ್ಲಿದ್ದರೂ ಅಪೊಸ್ತಲರು ಅದರೊಳಗೆ ಇರಲಿಲ್ಲಅ. ಕೃ 5:18–19, ಅ. ಕೃ 5:23
ವಚನಗಳು
ಅ. ಕೃ 5:18–19ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
ಅ. ಕೃ 5:23“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
- ಬಿಗಿಯಾದ ಕಾವಲಿನಲ್ಲಿ ಪೇತ್ರನು ಇಬ್ಬರು ಸೈನಿಕರ ನಡುವೆ ಸಂಕೋಲೆಗಳಿಂದ ಕಟ್ಟಲ್ಪಟ್ಟು ನಿದ್ರಿಸುತ್ತಿದ್ದನುಅ. ಕೃ 12:4, ಅ. ಕೃ 12:6
ವಚನಗಳು
ಅ. ಕೃ 12:4ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
ಅ. ಕೃ 12:6ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
- ಸಂಕೋಲೆಗಳು ಕಳಚಿಬಿದ್ದವು, ಕಬ್ಬಿಣದ ಬಾಗಿಲು ತಾನಾಗಿಯೇ ತೆರೆಯಿತುಅ. ಕೃ 12:7, ಅ. ಕೃ 12:10
ವಚನಗಳು
ಅ. ಕೃ 12:7ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
ಅ. ಕೃ 12:10ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
- ಫಿಲಿಪ್ಪಿಯಲ್ಲಿ: ಒಳಗಿನ ಕೋಣೆ, ಕಾಲುಗಳು ಕೋಳಕ್ಕೆ ಬಿಗಿಯಲ್ಪಟ್ಟವುಅ. ಕೃ 16:23–24
ವಚನಗಳು
ಅ. ಕೃ 16:23–24ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು. ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- ಮಧ್ಯರಾತ್ರಿಯಲ್ಲಿ ಭೂಕಂಪವು ಬಾಗಿಲುಗಳನ್ನು ತೆರೆಯಿತು, ಎಲ್ಲರ ಸಂಕೋಲೆಗಳು ಕಳಚಿದವುಅ. ಕೃ 16:25–26
ವಚನಗಳು
ಅ. ಕೃ 16:25–26ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- ಯೆರೂಸಲೇಮಿನಲ್ಲಿ ಪೌಲನನ್ನು ಎರಡು ಸರಪಣಿಗಳಿಂದ ಕಟ್ಟಲಾಯಿತುಅ. ಕೃ 21:33
ವಚನಗಳು
ಅ. ಕೃ 21:33ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
- ಫೇಲಿಕ್ಸನು ಪೌಲನನ್ನು ಎರಡು ವರ್ಷ ಸೆರೆಮನೆಯಲ್ಲಿಯೇ ಬಿಟ್ಟನುಅ. ಕೃ 24:27
ವಚನಗಳು
ಅ. ಕೃ 24:27ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.
- ರೋಮಿನಲ್ಲಿ ಪೌಲನು ತನ್ನನ್ನು ಕಾಯುವ ಸೈನಿಕನೊಂದಿಗೆ, ಸರಪಣಿಯಿಂದ ಕಟ್ಟಲ್ಪಟ್ಟು ವಾಸಿಸಿದನುಅ. ಕೃ 28:16, ಅ. ಕೃ 28:20
ವಚನಗಳು
ಅ. ಕೃ 28:16ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
ಅ. ಕೃ 28:20ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
- ಅವನು ತನ್ನ ಸ್ವಂತ ಬಾಡಿಗೆ ಮನೆಯಲ್ಲಿ ಪೂರ್ಣ ಎರಡು ವರ್ಷ ಇದ್ದನುಅ. ಕೃ 28:30
ವಚನಗಳು
ಅ. ಕೃ 28:30ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.
- ಒನೇಸಿಪೊರನು ಪೌಲನ ಸಂಕೋಲೆಗಳಿಗೆ ನಾಚಿಕೆಪಡಲಿಲ್ಲ2 ತಿಮೊ 1:16
ವಚನಗಳು
2 ತಿಮೊ 1:16ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
ಚಿನ್ನದ ಸರಪಣಿಗಳು
- ಫರೋಹನು ಯೋಸೇಫನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿದನುಆದಿ 41:42
ವಚನಗಳು
ಆದಿ 41:42ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
- ಬೇಲ್ಶಚ್ಚರನು ದಾನಿಯೇಲನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿದನುದಾನಿ 5:29
ವಚನಗಳು
ದಾನಿ 5:29ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
- ಗಿದ್ಯೋನನು ಮಿದ್ಯಾನ್ಯರ ಒಂಟೆಗಳ ಕೊರಳಿನ ಸರಪಣಿಗಳನ್ನು ತೆಗೆದುಕೊಂಡನುನ್ಯಾಯ 8:26
ವಚನಗಳು
ನ್ಯಾಯ 8:26ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.
- ಸೊಲೊಮೋನನು ಗರ್ಭಗೃಹದ ಮುಂಭಾಗದಲ್ಲಿ ಅಡ್ಡವಾಗಿ ಚಿನ್ನದ ಸರಪಣಿಗಳನ್ನು ತೂಗುಹಾಕಿದನು1 ಅರಸು 6:21
ವಚನಗಳು
1 ಅರಸು 6:21ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು