ದೈನಂದಿನ ಜೀವನ
ಬೈಬಲಿನಲ್ಲಿ ಜಗಳಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 32 ವಾಕ್ಯಭಾಗಗಳು, ಸಾಲು ಸಾಲಾಗಿ.
ಉದಾಹರಣೆಗಳು
- ಅಬ್ರಾಮನ ಮತ್ತು ಲೋಟನ ದನಕಾಯುವವರು ಜಗಳವಾಡುತ್ತಾರೆ, ಆದ್ದರಿಂದ ಇಬ್ಬರೂ ಬೇರೆಯಾಗುತ್ತಾರೆಆದಿ 13:7–9
ವಚನಗಳು
ಆದಿ 13:7–9ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ. ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.
- ಅಬೀಮೆಲೆಕನ ಸೇವಕರು ಕಸಿದುಕೊಂಡ ಬಾವಿಯ ಬಗ್ಗೆ ಅಬ್ರಹಾಮನು ದೂರುತ್ತಾನೆಆದಿ 21:25
ವಚನಗಳು
ಆದಿ 21:25ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
- ಇಬ್ಬರು ಇಬ್ರಿಯರು ಹೊಡೆದಾಡುತ್ತಿರುವುದನ್ನು ಮೋಶೆಯು ಕಾಣುತ್ತಾನೆವಿಮೋ 2:13, ಅ. ಕೃ 7:26
ವಚನಗಳು
ವಿಮೋ 2:13ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು.
ಅ. ಕೃ 7:26ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
- ಜನರ ವ್ಯಾಜ್ಯಗಳನ್ನೆಲ್ಲಾ ಮೋಶೆಯು ಒಬ್ಬನೇ ಹೊರಲಾರನುಧರ್ಮೋ 1:12
ವಚನಗಳು
ಧರ್ಮೋ 1:12ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?
- ಎಫ್ರಾಯೀಮ್ಯರು ಯೆಪ್ತಾಹನನ್ನು ಬೆದರಿಸುತ್ತಾರೆ; ಯೊರ್ದನಿನ ಹಾಯಗಡಗಳ ಬಳಿ “ಷಿಬ್ಬೋಲೆತ್”ನ್ಯಾಯ 12:1–6
ವಚನಗಳು
ನ್ಯಾಯ 12:1–6ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು. ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ. ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ, ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು. ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು. ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.
- ತೆಕೋವದ ಸ್ತ್ರೀಯ ಕಥೆ: ಇಬ್ಬರು ಮಕ್ಕಳು ಹೊಲದಲ್ಲಿ ಜಗಳವಾಡುತ್ತಾರೆ2 ಸಮು 14:6
ವಚನಗಳು
2 ಸಮು 14:6“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
- ತಮ್ಮಲ್ಲಿ ಯಾರು ದೊಡ್ಡವನೆಂದು ಶಿಷ್ಯರು ವಾದಿಸುತ್ತಾರೆಮಾರ್ಕ 9:33–34, ಲೂಕ 22:24
ವಚನಗಳು
ಮಾರ್ಕ 9:33–34ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
ಲೂಕ 22:24ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
- ಸುನ್ನತಿಯ ವಿಷಯದಲ್ಲಿ ಅಂತಿಯೋಕ್ಯದಲ್ಲಿ ತೀವ್ರ ವಾಗ್ವಾದಅ. ಕೃ 15:1–2
ವಚನಗಳು
ಅ. ಕೃ 15:1–2ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು. ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
- ಮಾರ್ಕನ ವಿಷಯದಲ್ಲಿ ಪೌಲನೂ ಬಾರ್ನಬನೂ ಬೇರೆಬೇರೆಯಾಗುತ್ತಾರೆಅ. ಕೃ 15:37–39
ವಚನಗಳು
ಅ. ಕೃ 15:37–39ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು. ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
- ಪುನರುತ್ಥಾನದ ವಿಷಯದಲ್ಲಿ ಫರಿಸಾಯರೂ ಸದ್ದುಕಾಯರೂ ಜಗಳವಾಡುತ್ತಾರೆಅ. ಕೃ 23:7–10
ವಚನಗಳು
ಅ. ಕೃ 23:7–10ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು. ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
- ಅಂತಿಯೋಕ್ಯದಲ್ಲಿ ಪೌಲನು ಕೇಫನನ್ನು ಮುಖಾಮುಖಿಯಾಗಿ ಎದುರಿಸುತ್ತಾನೆಗಲಾ 2:11
ವಚನಗಳು
ಗಲಾ 2:11ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.
- ಕೊರಿಂಥದವರು: “ನಾನು ಪೌಲನವನು,” “ನಾನು ಅಪೊಲ್ಲೋಸನವನು”1 ಕೊರಿ 1:11–12
ವಚನಗಳು
1 ಕೊರಿ 1:11–12ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು. ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- ವಿಶ್ವಾಸಿಗಳು ಒಬ್ಬರನ್ನೊಬ್ಬರು ನ್ಯಾಯಾಲಯಕ್ಕೆ ಎಳೆಯುತ್ತಾರೆ1 ಕೊರಿ 6:6–7
ವಚನಗಳು
1 ಕೊರಿ 6:6–7ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ? ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?
- ಒಂದೇ ಮನಸ್ಸುಳ್ಳವರಾಗಿರಬೇಕೆಂದು ಪೌಲನು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತಾನೆಫಿಲಿಪ್ಪಿ 4:2
ವಚನಗಳು
ಫಿಲಿಪ್ಪಿ 4:2ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಧರ್ಮಶಾಸ್ತ್ರದಲ್ಲಿ
- ಹೊಡೆದಾಟದಲ್ಲಿ ಗಾಯಗೊಂಡವನಿಗೆ ಕಳೆದುಕೊಂಡ ಕೆಲಸಕ್ಕೂ ಚಿಕಿತ್ಸೆಗೂ ಈಡು ಕೊಡಬೇಕುವಿಮೋ 21:18–19
ವಚನಗಳು
ವಿಮೋ 21:18–19ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು, ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
- ಮನುಷ್ಯರ ನಡುವಿನ ವ್ಯಾಜ್ಯವನ್ನು ತೀರ್ಪಿಗಾಗಿ ನ್ಯಾಯಸ್ಥಾನಕ್ಕೆ ತರಲಾಗುತ್ತದೆಧರ್ಮೋ 25:1
ವಚನಗಳು
ಧರ್ಮೋ 25:1ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.
ಜ್ಞಾನೋಕ್ತಿಗಳ ನುಡಿಗಳು
- ಹಗೆಯು ಜಗಳವನ್ನು ಎಬ್ಬಿಸುತ್ತದೆ; ಪ್ರೀತಿಯು ದೋಷಗಳನ್ನು ಮುಚ್ಚುತ್ತದೆಜ್ಞಾನೋ 10:12
ವಚನಗಳು
ಜ್ಞಾನೋ 10:12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
- ಕೋಪಿಷ್ಠನು ಕಲಹವನ್ನು ಎಬ್ಬಿಸುತ್ತಾನೆಜ್ಞಾನೋ 15:18, ಜ್ಞಾನೋ 29:22
ವಚನಗಳು
ಜ್ಞಾನೋ 15:18ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ಜ್ಞಾನೋ 29:22ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
- ಕಲಹದೊಂದಿಗಿನ ಔತಣಕ್ಕಿಂತ ಸಮಾಧಾನದೊಂದಿಗಿನ ಒಣ ತುತ್ತೇ ಲೇಸುಜ್ಞಾನೋ 17:1
ವಚನಗಳು
ಜ್ಞಾನೋ 17:1ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.
- ಜಗಳದ ಆರಂಭವು ನೀರಿನ ಕಟ್ಟೆಯನ್ನು ಒಡೆದುಬಿಟ್ಟಂತೆಜ್ಞಾನೋ 17:14
ವಚನಗಳು
ಜ್ಞಾನೋ 17:14ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
- ವ್ಯಾಜ್ಯವನ್ನು ಬಗೆಹರಿಸುವುದು ಗೌರವ; ಪ್ರತಿಯೊಬ್ಬ ಮೂಢನೂ ಜಗಳವಾಡುತ್ತಾನೆಜ್ಞಾನೋ 20:3
ವಚನಗಳು
ಜ್ಞಾನೋ 20:3ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
- ಕುಚೋದ್ಯಗಾರನನ್ನು ಹೊರಡಿಸು, ಆಗ ಜಗಳ ನಿಲ್ಲುವುದುಜ್ಞಾನೋ 22:10
ವಚನಗಳು
ಜ್ಞಾನೋ 22:10ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
- ಬೇರೆಯವರ ಜಗಳದಲ್ಲಿ ತಲೆಹಾಕುವುದು ನಾಯಿಯ ಕಿವಿಗಳನ್ನು ಹಿಡಿದಂತೆಜ್ಞಾನೋ 26:17
ವಚನಗಳು
ಜ್ಞಾನೋ 26:17ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
- ಜಗಳಗಂಟಿಯಾದ ಹೆಂಡತಿಯು ಮಳೆಗಾಲದಲ್ಲಿ ಸತತವಾಗಿ ತೊಟ್ಟಿಕ್ಕುವ ಸೋರಿಕೆಯಂತೆಜ್ಞಾನೋ 27:15, ಜ್ಞಾನೋ 25:24
ವಚನಗಳು
ಜ್ಞಾನೋ 27:15ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
ಜ್ಞಾನೋ 25:24ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
ಬೇರೆ ಕಡೆಗಳಲ್ಲಿ
- ನ್ಯಾಯಸ್ಥಾನಕ್ಕೆ ಹೋಗುವ ದಾರಿಯಲ್ಲೇ ನಿನ್ನ ಎದುರಾಳಿಯೊಂದಿಗೆ ಬೇಗನೆ ರಾಜಿಮಾಡಿಕೋಮತ್ತಾ 5:25
ವಚನಗಳು
ಮತ್ತಾ 5:25“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
- ಸಾಧ್ಯವಾದರೆ ಎಲ್ಲರೊಂದಿಗೂ ಸಮಾಧಾನದಿಂದ ಬಾಳಿರಿರೋಮಾ 12:18
ವಚನಗಳು
ರೋಮಾ 12:18ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
- ಬುದ್ಧಿಹೀನ ತರ್ಕಗಳು ಜಗಳಗಳನ್ನು ಹುಟ್ಟಿಸುತ್ತವೆ2 ತಿಮೊ 2:23–24
ವಚನಗಳು
2 ತಿಮೊ 2:23–24ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ
- “ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ?”ಯಾಕೋ 4:1
ವಚನಗಳು
ಯಾಕೋ 4:1ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು