Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಮಳೆ ಮತ್ತು ಬರ

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಮಳೆ ಮತ್ತು ಬರ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 21 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಯಾವ ಸಸಿಯೂ ಮೊಳೆಯುವುದಕ್ಕೆ ಮೊದಲು ಭೂಮಿಯ ಮೇಲೆ ಮಳೆ ಇರಲಿಲ್ಲಆದಿ 2:5
    ವಚನಗಳು
    ಆದಿ 2:5ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
  • ಮುಂಗಾರು ಮತ್ತು ಹಿಂಗಾರು ಮಳೆಗಳುಧರ್ಮೋ 11:14
    ವಚನಗಳು
    ಧರ್ಮೋ 11:14ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
  • ಒಂಭತ್ತನೆಯ ತಿಂಗಳ ಮಳೆಯಲ್ಲಿ ಎಜ್ರನ ಸಭೆಯು ನಡುಗುತ್ತಾ ಕುಳಿತಿತ್ತುಎಜ್ರ 10:9, ಎಜ್ರ 10:13
    ವಚನಗಳು
    ಎಜ್ರ 10:9ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
    ಎಜ್ರ 10:13ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.
  • ಉತ್ತರದ ಗಾಳಿಯು ಮಳೆಯನ್ನು ತರುತ್ತದೆಜ್ಞಾನೋ 25:23
    ವಚನಗಳು
    ಜ್ಞಾನೋ 25:23ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
  • ಮೋಡಗಳು ತುಂಬಿದ್ದರೆ ಮಳೆಯನ್ನು ಸುರಿಸುತ್ತವೆಪ್ರಸ 11:3
    ವಚನಗಳು
    ಪ್ರಸ 11:3ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
  • ಆತನು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಯನ್ನು ಸುರಿಸುತ್ತಾನೆಮತ್ತಾ 5:45
    ವಚನಗಳು
    ಮತ್ತಾ 5:45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
  • ಮಳೆ ಸುರಿಯಿತು, ಪ್ರವಾಹಗಳು ಮನೆಗೆ ಬಡಿದವುಮತ್ತಾ 7:25
    ವಚನಗಳು
    ಮತ್ತಾ 7:25ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

ಜಲಪ್ರಳಯ

  • ಆಕಾಶದ ತೂಬುಗಳು ತೆರೆದವು; ನಾಲ್ವತ್ತು ದಿನ ಹಗಲಿರುಳು ಮಳೆ ಸುರಿಯಿತುಆದಿ 7:11–12
    ವಚನಗಳು
    ಆದಿ 7:11–12ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.
  • ಆ ಮೇಲೆ ತೂಬುಗಳು ಮುಚ್ಚಿದವು, ಮಳೆ ನಿಂತಿತುಆದಿ 8:2
    ವಚನಗಳು
    ಆದಿ 8:2ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
  • ಕಾಮನಬಿಲ್ಲು: ಭೂಮಿಯನ್ನು ನಾಶಮಾಡುವ ಜಲಪ್ರಳಯವು ಇನ್ನೆಂದೂ ಬರುವುದಿಲ್ಲಆದಿ 9:11–15
    ವಚನಗಳು
    ಆದಿ 9:11–15ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ. ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು. ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.

ಬಿರುಗಾಳಿಗಳು

  • ಆಲಿಕಲ್ಲೂ ಗುಡುಗೂ ಐಗುಪ್ತವನ್ನು ಹೊಡೆದವು, ಆದರೆ ಗೋಷೆನನ್ನು ಅಲ್ಲವಿಮೋ 9:23–26
    ವಚನಗಳು
    ವಿಮೋ 9:23–26ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ. ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು. ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.
  • ಗೋದಿಯ ಸುಗ್ಗಿಯಲ್ಲಿ ಸಮುವೇಲನು ಗುಡುಗನ್ನೂ ಮಳೆಯನ್ನೂ ಬರಮಾಡಿದನು1 ಸಮು 12:17–18
    ವಚನಗಳು
    1 ಸಮು 12:17–18ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು. ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು

ಬರಗಳು

  • ಎಲೀಯನು: ನನ್ನ ಮಾತಿಲ್ಲದೆ ಮಂಜಾಗಲಿ ಮಳೆಯಾಗಲಿ ಬೀಳುವುದಿಲ್ಲ1 ಅರಸು 17:1
    ವಚನಗಳು
    1 ಅರಸು 17:1ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
  • ಬರದ ಮೂರನೆಯ ವರ್ಷದಲ್ಲಿ ಮಳೆಯ ವಾಗ್ದಾನವಾಯಿತು1 ಅರಸು 18:1
    ವಚನಗಳು
    1 ಅರಸು 18:1ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.
  • ಕೈಯಷ್ಟು ಚಿಕ್ಕ ಮೋಡ, ಆ ಮೇಲೆ ಜೋರಾದ ಮಳೆ1 ಅರಸು 18:44–45
    ವಚನಗಳು
    1 ಅರಸು 18:44–45ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು. ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
  • ಮೂರುವರೆ ವರ್ಷ ಆಕಾಶವು ಮುಚ್ಚಿತ್ತುಲೂಕ 4:25, ಯಾಕೋ 5:17–18
    ವಚನಗಳು
    ಲೂಕ 4:25ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
    ಯಾಕೋ 5:17–18ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
  • ಒಂದು ಪಟ್ಟಣದ ಮೇಲೆ ಮಳೆ, ಇನ್ನೊಂದರ ಮೇಲೆ ಇಲ್ಲಆಮೋ 4:7
    ವಚನಗಳು
    ಆಮೋ 4:7“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
  • ನೆಲವು ಬಿರುಕುಬಿಟ್ಟಿತು; ಒಕ್ಕಲಿಗರು ತಮ್ಮ ತಲೆಗಳನ್ನು ಮುಚ್ಚಿಕೊಂಡರುಯೆರೆ 14:4
    ವಚನಗಳು
    ಯೆರೆ 14:4ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
  • ಆಕಾಶವು ಮುಚ್ಚಲ್ಪಟ್ಟಾಗ ಮಳೆಗಾಗಿ ಸೊಲೊಮೋನನು ಪ್ರಾರ್ಥಿಸುತ್ತಾನೆ1 ಅರಸು 8:35–36
    ವಚನಗಳು
    1 ಅರಸು 8:35–36“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ, ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು