Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಕಾಗೆಗಳು

ಪ್ರಕೃತಿ

ಬೈಬಲಿನಲ್ಲಿ ಕಾಗೆಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 9 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಇಸ್ರಾಯೇಲರು ತಿನ್ನಬಾರದ ಪಕ್ಷಿಗಳಲ್ಲಿ ಕಾಗೆಗಳು ಸೇರಿವೆಯಾಜ 11:15, ಧರ್ಮೋ 14:14
    ವಚನಗಳು
    ಯಾಜ 11:15ಸಕಲವಿಧವಾದ ಗಿಡುಗ,
    ಧರ್ಮೋ 14:14ಸಕಲವಿಧವಾದ ಕಾಗೆ,
  • ನೋಹನು ಒಂದು ಕಾಗೆಯನ್ನು ಹೊರಗೆ ಬಿಟ್ಟನು; ನೀರು ಒಣಗುವ ತನಕ ಅದು ಹೋಗುತ್ತಾ ಬರುತ್ತಾ ಇತ್ತುಆದಿ 8:7
    ವಚನಗಳು
    ಆದಿ 8:7ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.
  • ಕೆರೀತ್ ಹಳ್ಳದ ಬಳಿ ಕಾಗೆಗಳು ಎಲೀಯನಿಗೆ ಬೆಳಿಗ್ಗೆಯೂ ಸಾಯಂಕಾಲವೂ ರೊಟ್ಟಿಯನ್ನೂ ಮಾಂಸವನ್ನೂ ತಂದವು1 ಅರಸು 17:4–6
    ವಚನಗಳು
    1 ಅರಸು 17:4–6ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು. ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು. ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
  • ಕಾಗೆಯ ಮರಿಗಳು ಆಹಾರವಿಲ್ಲದೆ ಕೂಗುತ್ತವೆಯೋಬ 38:41, ಕೀರ್ತ 147:9
    ವಚನಗಳು
    ಯೋಬ 38:41ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?”
    ಕೀರ್ತ 147:9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
  • ಕಾಗೆಗಳು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಕಣಜವೂ ಇಲ್ಲಲೂಕ 12:24
    ವಚನಗಳು
    ಲೂಕ 12:24ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.

ನುಡಿಗಳು

  • ಕೂದಲು “ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ”ಪ.ಗೀ 5:11
    ವಚನಗಳು
    ಪ.ಗೀ 5:11ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.
  • ಒಂದು ಗಾದೆ: ಹಾಸ್ಯಮಾಡುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವುಜ್ಞಾನೋ 30:17
    ವಚನಗಳು
    ಜ್ಞಾನೋ 30:17ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು