ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಒಗಟುಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 15 ವಾಕ್ಯಭಾಗಗಳು, ಸಾಲು ಸಾಲಾಗಿ.
ಸಂಸೋನನ ಒಗಟು
- ತಾನು ಕೊಂದ ಸಿಂಹದ ಶವದಲ್ಲಿ ಸಂಸೋನನು ಜೇನುಹುಳುಗಳನ್ನೂ ಜೇನನ್ನೂ ಕಂಡನುನ್ಯಾಯ 14:5–9
ವಚನಗಳು
ನ್ಯಾಯ 14:5–9ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು. ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ. ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು. ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು, ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
- ಪಣ: ಮೂವತ್ತು ನಾರುಮಡಿಯ ಅಂಗಿಗಳು ಮತ್ತು ಮೂವತ್ತು ಜೊತೆ ವಸ್ತ್ರಗಳುನ್ಯಾಯ 14:12–13
ವಚನಗಳು
ನ್ಯಾಯ 14:12–13ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು. ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
- ‘ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು’ನ್ಯಾಯ 14:14
ವಚನಗಳು
ನ್ಯಾಯ 14:14ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
- ಅವನ ಹೆಂಡತಿ ಏಳು ದಿನ ಅವನನ್ನು ಪೀಡಿಸಿ, ಆ ಮೇಲೆ ತನ್ನ ಜನರಿಗೆ ಹೇಳಿದಳುನ್ಯಾಯ 14:15–17
ವಚನಗಳು
ನ್ಯಾಯ 14:15–17ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು. ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು. ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
- ‘ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?’ನ್ಯಾಯ 14:18
ವಚನಗಳು
ನ್ಯಾಯ 14:18ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
ಇತರ ಒಗಟುಗಳು
- ಶೆಬದ ರಾಣಿಯು ಕಠಿಣವಾದ ಪ್ರಶ್ನೆಗಳಿಂದ ಸೊಲೊಮೋನನನ್ನು ಪರೀಕ್ಷಿಸಿದಳು1 ಅರಸು 10:1–3, 2 ಪೂರ್ವ 9:1–2
ವಚನಗಳು
1 ಅರಸು 10:1–3ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು. ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು. ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
2 ಪೂರ್ವ 9:1–2ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು. ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.
- ದೇವರು ಮೋಶೆಯೊಂದಿಗೆ ಒಗಟುಗಳಲ್ಲಿ ಅಲ್ಲ, ಸ್ಪಷ್ಟವಾಗಿ ಮಾತನಾಡುತ್ತಾನೆಅರಣ್ಯ 12:8
ವಚನಗಳು
ಅರಣ್ಯ 12:8ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
- ಕೀರ್ತನೆಗಾರನು ಕಿನ್ನರಿಯೊಂದಿಗೆ ತನ್ನ ಒಗಟನ್ನು ವಿವರಿಸುತ್ತಾನೆಕೀರ್ತ 49:4
ವಚನಗಳು
ಕೀರ್ತ 49:4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
- ಜ್ಞಾನಿಗಳ ಒಗಟುಗಳನ್ನು ಗ್ರಹಿಸುವುದಕ್ಕಾಗಿ ಜ್ಞಾನೋಕ್ತಿಗಳುಜ್ಞಾನೋ 1:6
ವಚನಗಳು
ಜ್ಞಾನೋ 1:6ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
- ದಾನಿಯೇಲನು ಒಗಟುಗಳನ್ನು ವಿವರಿಸಿ ಕಠಿಣ ಸಮಸ್ಯೆಗಳನ್ನು ಬಿಡಿಸಬಲ್ಲವನಾಗಿದ್ದನುದಾನಿ 5:12
ವಚನಗಳು
ದಾನಿ 5:12ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
- ದೊಡ್ಡ ಹದ್ದಿನ ಬಗ್ಗೆ ಒಗಟನ್ನು ಹೇಳಬೇಕೆಂದು ಯೆಹೆಜ್ಕೇಲನಿಗೆ ಆಜ್ಞೆಯೆಹೆ 17:2–3
ವಚನಗಳು
ಯೆಹೆ 17:2–3“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
- ಆಗೂರನ ನುಡಿಗಳು: ಮೂರು ವಿಷಯಗಳು, ನಾಲ್ಕು ವಿಷಯಗಳುಜ್ಞಾನೋ 30:15–16, ಜ್ಞಾನೋ 30:18–19, ಜ್ಞಾನೋ 30:24–28
ವಚನಗಳು
ಜ್ಞಾನೋ 30:15–16ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು. ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.
ಜ್ಞಾನೋ 30:18–19ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು; ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
ಜ್ಞಾನೋ 30:24–28ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು. ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು. ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು. ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು