Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ದಾರಿಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ದಾರಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 15 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಎದೋಮಿನ ಮೂಲಕ ರಾಜಮಾರ್ಗದಲ್ಲೇ ನಡೆಯುವೆವೆಂದು ಇಸ್ರಾಯೇಲರು ಕೇಳಿಕೊಂಡರುಅರಣ್ಯ 20:17–19
    ವಚನಗಳು
    ಅರಣ್ಯ 20:17–19ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು. ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು. ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
  • ಅಮೋರಿಯರ ಸೀಹೋನನಿಗೂ ಅದೇ ಬೇಡಿಕೆಅರಣ್ಯ 21:22, ಧರ್ಮೋ 2:27
    ವಚನಗಳು
    ಅರಣ್ಯ 21:22“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
    ಧರ್ಮೋ 2:27“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
  • ಆಶ್ರಯನಗರಗಳಿಗೆ ದಾರಿಗಳನ್ನು ಕಟ್ಟಲಾಯಿತುಧರ್ಮೋ 19:3
    ವಚನಗಳು
    ಧರ್ಮೋ 19:3ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.
  • ರಾಹೇಲಳನ್ನು ಎಫ್ರಾತಿನ ದಾರಿಯಲ್ಲಿ ಹೂಣಿಡಲಾಯಿತುಆದಿ 35:19
    ವಚನಗಳು
    ಆದಿ 35:19ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.
  • ಯೆಹೋಶುವನು ಬೇತ್‌ಹೋರೋನಿನ ಏರುದಾರಿಯಲ್ಲಿ ಶತ್ರುಗಳನ್ನು ಹಿಂದಟ್ಟಿದನುಯೆಹೋ 10:10
    ವಚನಗಳು
    ಯೆಹೋ 10:10ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
  • ಶಮ್ಗರನ ದಿನಗಳಲ್ಲಿ ರಾಜಮಾರ್ಗಗಳು ನಿರ್ಜನವಾಗಿದ್ದವುನ್ಯಾಯ 5:6
    ವಚನಗಳು
    ನ್ಯಾಯ 5:6“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
  • ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೆ ಶೀಲೋನ್ಯಾಯ 21:19
    ವಚನಗಳು
    ನ್ಯಾಯ 21:19ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
  • ಹಸುಗಳು ಮಂಜೂಷವನ್ನು ಬೇತ್ ಷೆಮೆಷಿನ ದಾರಿಯಲ್ಲಿ ನೇರವಾಗಿ ಎಳೆದುಕೊಂಡು ಹೋದವು1 ಸಮು 6:12
    ವಚನಗಳು
    1 ಸಮು 6:12ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.
  • ಕಾಲುವೆಯ ಬಳಿ ಅಗಸರ ಹೊಲಕ್ಕೆ ಹೋಗುವ ರಾಜಮಾರ್ಗಯೆಶಾ 7:3
    ವಚನಗಳು
    ಯೆಶಾ 7:3ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
  • ಯೆರೂಸಲೇಮಿನಿಂದ ಯೆರಿಕೋವಿಗೆ ಇಳಿದುಹೋಗುತ್ತಿದ್ದ ಒಬ್ಬನು ಕಳ್ಳರ ಕೈಗೆ ಸಿಕ್ಕಿದನುಲೂಕ 10:30–31
    ವಚನಗಳು
    ಲೂಕ 10:30–31ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
  • ಬಾರ್ತಿಮಾಯನು ಯೆರಿಕೋವಿನಿಂದ ಹೊರಡುವ ದಾರಿಯ ಪಕ್ಕದಲ್ಲಿ ಕುಳಿತಿದ್ದನುಮಾರ್ಕ 10:46
    ವಚನಗಳು
    ಮಾರ್ಕ 10:46ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
  • ಯೆರೂಸಲೇಮಿನಿಂದ ಸುಮಾರು ಏಳು ಮೈಲಿ ದೂರದಲ್ಲಿರುವ ಎಮ್ಮಾಹುಲೂಕ 24:13
    ವಚನಗಳು
    ಲೂಕ 24:13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,
  • ಯೆರೂಸಲೇಮಿನಿಂದ ಗಾಜಾಕ್ಕೆ ಹೋಗುವ ಅರಣ್ಯದ ದಾರಿಅ. ಕೃ 8:26
    ವಚನಗಳು
    ಅ. ಕೃ 8:26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
  • ಗಲಿಲಾಯಕ್ಕೆ ಹೋಗುವ ದಾರಿಯಲ್ಲಿ ಯೇಸು ಸಮಾರ್ಯದ ಮೂಲಕ ಹಾದುಹೋಗಬೇಕಾಗಿತ್ತುಯೋಹಾ 4:3–5
    ವಚನಗಳು
    ಯೋಹಾ 4:3–5ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು. ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು. ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು