ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಉಪ್ಪು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 21 ವಾಕ್ಯಭಾಗಗಳು, ಸಾಲು ಸಾಲಾಗಿ.
- ಲೋಟನ ಹೆಂಡತಿ ಹಿಂದಕ್ಕೆ ತಿರುಗಿ ನೋಡಿ ಉಪ್ಪಿನ ಕಂಬವಾದಳುಆದಿ 19:26
ವಚನಗಳು
ಆದಿ 19:26ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
- ರುಚಿಯಿಲ್ಲದ ಪದಾರ್ಥವನ್ನು ಉಪ್ಪಿಲ್ಲದೆ ತಿನ್ನುವರೋ?ಯೋಬ 6:6
ವಚನಗಳು
ಯೋಬ 6:6ಸಪ್ಪೆಯನ್ನು ಉಪ್ಪಿಲ್ಲದೆ ತಿನ್ನಬಹುದೇ? ಮೊಟ್ಟೆಯಲ್ಲಿರುವ ಲೋಳೆಯು ರುಚಿಯೇ?
- ಎಲೀಷನು ಯೆರಿಕೋವಿನ ಬುಗ್ಗೆಗೆ ಉಪ್ಪನ್ನು ಹಾಕಿದನು2 ಅರಸು 2:20–21
ವಚನಗಳು
2 ಅರಸು 2:20–21ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು. ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
- ಅಬೀಮೆಲೆಕನು ಶೆಕೆಮನ್ನು ಕೆಡವಿ ಅದರ ಮೇಲೆ ಉಪ್ಪನ್ನು ಬಿತ್ತಿದನುನ್ಯಾಯ 9:45
ವಚನಗಳು
ನ್ಯಾಯ 9:45ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
- ಹೊಸದಾಗಿ ಹುಟ್ಟಿದ ಮಕ್ಕಳನ್ನು ಉಪ್ಪಿನಿಂದ ತಿಕ್ಕುತ್ತಿದ್ದರುಯೆಹೆ 16:4
ವಚನಗಳು
ಯೆಹೆ 16:4ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.
- ಪಾರಸಿಯ ಅರಸನು ದೇವಾಲಯಕ್ಕಾಗಿ ಮಿತಿಯಿಲ್ಲದೆ ಉಪ್ಪನ್ನು ಕೊಟ್ಟನುಎಜ್ರ 6:9, ಎಜ್ರ 7:22
ವಚನಗಳು
ಎಜ್ರ 6:9ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.
ಎಜ್ರ 7:22ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
ಆರಾಧನೆಯಲ್ಲಿ
- ಪ್ರತಿಯೊಂದು ಧಾನ್ಯನೈವೇದ್ಯಕ್ಕೂ ಉಪ್ಪು ಸೇರಿಸಲಾಗುತ್ತಿತ್ತುಯಾಜ 2:13
ವಚನಗಳು
ಯಾಜ 2:13ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.
- ಯಾಜಕರು ಸರ್ವಾಂಗಹೋಮಗಳ ಮೇಲೆ ಉಪ್ಪನ್ನು ಚೆಲ್ಲುತ್ತಿದ್ದರುಯೆಹೆ 43:24
ವಚನಗಳು
ಯೆಹೆ 43:24ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.
- ಉಪ್ಪಿನ ಒಡಂಬಡಿಕೆಅರಣ್ಯ 18:19, 2 ಪೂರ್ವ 13:5
ವಚನಗಳು
ಅರಣ್ಯ 18:19ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
2 ಪೂರ್ವ 13:5ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
ಸ್ಥಳಗಳು
- ಲವಣಸಮುದ್ರ, ಇಸ್ರಾಯೇಲಿನ ಪೂರ್ವದ ಮೇರೆಆದಿ 14:3, ಅರಣ್ಯ 34:12, ಯೆಹೋ 15:2
ವಚನಗಳು
ಆದಿ 14:3ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
ಅರಣ್ಯ 34:12ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.
ಯೆಹೋ 15:2ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ
- ಯೆಹೂದದ ಅರಣ್ಯದಲ್ಲಿರುವ ಉಪ್ಪಿನ ಪಟ್ಟಣಯೆಹೋ 15:62
ವಚನಗಳು
ಯೆಹೋ 15:62ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.
- ಉಪ್ಪಿನ ತಗ್ಗಿನಲ್ಲಿ ಎದೋಮಿನೊಂದಿಗೆ ಯುದ್ಧಗಳು2 ಸಮು 8:13, 2 ಅರಸು 14:7
ವಚನಗಳು
2 ಸಮು 8:13ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
2 ಅರಸು 14:7ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
ನುಡಿಗಳು
- ಸಪ್ಪಗಾದ ಉಪ್ಪು ಯಾವುದಕ್ಕೂ ಪ್ರಯೋಜನವಿಲ್ಲಮತ್ತಾ 5:13, ಲೂಕ 14:34
ವಚನಗಳು
ಮತ್ತಾ 5:13“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
ಲೂಕ 14:34“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
- ನಿಮ್ಮಲ್ಲಿ ಉಪ್ಪಿರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿಮಾರ್ಕ 9:50
ವಚನಗಳು
ಮಾರ್ಕ 9:50ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
- ನಿಮ್ಮ ಮಾತು ಉಪ್ಪಿನಿಂದ ಹದಮಾಡಿದಂತೆ ಇಂಪಾಗಿರಲಿಕೊಲೊ 4:6
ವಚನಗಳು
ಕೊಲೊ 4:6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು