Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಚೇಳುಗಳು

ಪ್ರಕೃತಿ

ಬೈಬಲಿನಲ್ಲಿ ಚೇಳುಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 8 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಅರಣ್ಯದಲ್ಲಿ ವಿಷಸರ್ಪಗಳೂ ಚೇಳುಗಳೂ ಇದ್ದವುಧರ್ಮೋ 8:15
    ವಚನಗಳು
    ಧರ್ಮೋ 8:15ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
  • ಚೇಳುಗಳ ನಡುವೆ ವಾಸಿಸಿದರೂ ಭಯಪಡಬೇಡವೆಂದು ಯೆಹೆಜ್ಕೇಲನಿಗೆ ಹೇಳಲಾಗುತ್ತದೆಯೆಹೆ 2:6
    ವಚನಗಳು
    ಯೆಹೆ 2:6“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
  • ಹಾವುಗಳನ್ನೂ ಚೇಳುಗಳನ್ನೂ ತುಳಿಯುವ ಅಧಿಕಾರವನ್ನು ಯೇಸು ತನ್ನ ಶಿಷ್ಯರಿಗೆ ಕೊಡುತ್ತಾನೆಲೂಕ 10:17, ಲೂಕ 10:19
    ವಚನಗಳು
    ಲೂಕ 10:17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
    ಲೂಕ 10:19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.

ನುಡಿಗಳು

  • ಮಗನು ಮೊಟ್ಟೆಯನ್ನು ಕೇಳಿದರೆ ತಂದೆಯು ಅವನಿಗೆ ಚೇಳನ್ನು ಕೊಡುವನೋ?ಲೂಕ 11:12
    ವಚನಗಳು
    ಲೂಕ 11:12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?
  • ರೆಹಬ್ಬಾಮನು: “ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು”1 ಅರಸು 12:11, 1 ಅರಸು 12:14, 2 ಪೂರ್ವ 10:14
    ವಚನಗಳು
    1 ಅರಸು 12:11ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
    1 ಅರಸು 12:14“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
    2 ಪೂರ್ವ 10:14ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು