Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಸಮುದ್ರ

ಪ್ರಕೃತಿ

ಬೈಬಲಿನಲ್ಲಿ ಸಮುದ್ರ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 32 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಒಟ್ಟುಗೂಡಿದ ನೀರಿಗೆ “ಸಮುದ್ರ” ಎಂದು ಹೆಸರಿಡಲಾಯಿತುಆದಿ 1:9–10
    ವಚನಗಳು
    ಆದಿ 1:9–10ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
  • ಮಹಾ ಜಲಜಂತುಗಳು ಐದನೆಯ ದಿನದಲ್ಲಿ ಉಂಟುಮಾಡಲ್ಪಟ್ಟವುಆದಿ 1:21–23
    ವಚನಗಳು
    ಆದಿ 1:21–23ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
  • ವಿಶಾಲವಾದ ಮಹಾಸಮುದ್ರ, ಜಲಜಂತುಗಳಿಂದ ತುಂಬಿದ್ದು, ಹಡಗುಗಳು ಸಂಚರಿಸುವ ಸ್ಥಳಕೀರ್ತ 104:25–26
    ವಚನಗಳು
    ಕೀರ್ತ 104:25–26ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ. ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.
  • ಎಲ್ಲಾ ನದಿಗಳು ಸಮುದ್ರಕ್ಕೆ ಹರಿಯುತ್ತವೆ, ಆದರೂ ಸಮುದ್ರ ತುಂಬುವುದಿಲ್ಲಪ್ರಸ 1:7
    ವಚನಗಳು
    ಪ್ರಸ 1:7ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
  • ಮರಳು ಅಲೆಗಳು ದಾಟಲಾರದ ಮೇರೆಯಾಗಿದೆಯೆರೆ 5:22, ಯೋಬ 38:8–11
    ವಚನಗಳು
    ಯೆರೆ 5:22ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
    ಯೋಬ 38:8–11ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು? ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ? ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು ‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.
  • ಅಲೆಗಳ ಮೇಲಿನ ನಾವಿಕರು ಆಕಾಶಕ್ಕೆ ಏರಿ ಅಗಾಧಕ್ಕೆ ಇಳಿಯುತ್ತಾರೆಕೀರ್ತ 107:23–27
    ವಚನಗಳು
    ಕೀರ್ತ 107:23–27ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು, ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು. ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು. ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.

ದೇಶದ ಸಮುದ್ರಗಳು

  • ಮಹಾಸಮುದ್ರವು ಪಶ್ಚಿಮದ ಮೇರೆಯಾಗಿತ್ತುಅರಣ್ಯ 34:6, ಯೆಹೋ 1:4
    ವಚನಗಳು
    ಅರಣ್ಯ 34:6ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.
    ಯೆಹೋ 1:4ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
  • ಸಿದ್ದೀಮ್ ತಗ್ಗು ಇದ್ದ ಸ್ಥಳವಾದ ಲವಣಸಮುದ್ರಆದಿ 14:3
    ವಚನಗಳು
    ಆದಿ 14:3ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
  • ಇಸ್ರಾಯೇಲರು ದಾಟುತ್ತಿದ್ದಾಗ ಲವಣಸಮುದ್ರಕ್ಕೆ ಹರಿಯುವ ಯೊರ್ದನಿನ ಪ್ರವಾಹವು ನಿಂತುಹೋಯಿತುಯೆಹೋ 3:16
    ವಚನಗಳು
    ಯೆಹೋ 3:16ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
  • ಕೆಂಪುಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೆ ಮೇರೆಗಳುವಿಮೋ 23:31
    ವಚನಗಳು
    ವಿಮೋ 23:31ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.
  • ಸೊಲೊಮೋನನು ಕೆಂಪುಸಮುದ್ರದ ತೀರದ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು1 ಅರಸು 9:26
    ವಚನಗಳು
    1 ಅರಸು 9:26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
  • ಪೇತ್ರನೂ ಅಂದ್ರೆಯನೂ ಗಲಿಲಾಯ ಸಮುದ್ರದಲ್ಲಿ ಬಲೆ ಬೀಸುತ್ತಿದ್ದರುಮತ್ತಾ 4:18
    ವಚನಗಳು
    ಮತ್ತಾ 4:18ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.

ಕಥೆಗಳಲ್ಲಿ

  • ಮೂಡಣ ಗಾಳಿಯು ಸಮುದ್ರವನ್ನು ಹಿಂದಕ್ಕೆ ಸರಿಸಿತು; ಇಸ್ರಾಯೇಲರು ಒಣನೆಲದ ಮೇಲೆ ದಾಟಿದರುವಿಮೋ 14:21–22
    ವಚನಗಳು
    ವಿಮೋ 14:21–22ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು. ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
  • ಬೆಳಗಾಗುವಾಗ ಸಮುದ್ರವು ಮರಳಿ ಬಂದು ಫರೋಹನ ರಥಗಳನ್ನು ಮುಚ್ಚಿಬಿಟ್ಟಿತುವಿಮೋ 14:27–28
    ವಚನಗಳು
    ವಿಮೋ 14:27–28ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು. ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
  • ಹಡಗನ್ನು ಹಗುರಮಾಡಲು ಯೋನನ ನಾವಿಕರು ಸರಕನ್ನು ಸಮುದ್ರಕ್ಕೆ ಎಸೆದರುಯೋನ 1:4–5
    ವಚನಗಳು
    ಯೋನ 1:4–5ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು. ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
  • ಯೋನನನ್ನು ಸಮುದ್ರಕ್ಕೆ ಹಾಕಿದಾಗ ಅಬ್ಬರಿಸುತ್ತಿದ್ದ ಸಮುದ್ರವು ಶಾಂತವಾಯಿತುಯೋನ 1:15
    ವಚನಗಳು
    ಯೋನ 1:15ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.
  • ಒಂದು ದೊಡ್ಡ ಮೀನು ಯೋನನನ್ನು ನುಂಗಿತುಯೋನ 1:17
    ವಚನಗಳು
    ಯೋನ 1:17ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.
  • ಅಲೆಗಳು ದೋಣಿಗೆ ಅಪ್ಪಳಿಸುತ್ತಿದ್ದಾಗ ಯೇಸು ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ರಿಸುತ್ತಿದ್ದನುಮಾರ್ಕ 4:37–39
    ವಚನಗಳು
    ಮಾರ್ಕ 4:37–39ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
  • ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದನುಮತ್ತಾ 14:25–26
    ವಚನಗಳು
    ಮತ್ತಾ 14:25–26ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
  • ಪೇತ್ರನು ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನುಮತ್ತಾ 14:28–29
    ವಚನಗಳು
    ಮತ್ತಾ 14:28–29ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು, ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
  • ಮೊದಲು ಹಿಡಿದ ಮೀನಿನ ಬಾಯಲ್ಲಿ ಒಂದು ನಾಣ್ಯಮತ್ತಾ 17:27
    ವಚನಗಳು
    ಮತ್ತಾ 17:27ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
  • 153 ದೊಡ್ಡ ಮೀನುಗಳು, ಆದರೂ ಬಲೆ ಹರಿಯಲಿಲ್ಲಯೋಹಾ 21:11
    ವಚನಗಳು
    ಯೋಹಾ 21:11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
  • ಸುಮಾರು ಎರಡು ಸಾವಿರ ಹಂದಿಗಳು ದಡದಿಂದ ಸಮುದ್ರಕ್ಕೆ ಓಡಿಹೋದವುಮಾರ್ಕ 5:13
    ವಚನಗಳು
    ಮಾರ್ಕ 5:13ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
  • ಆದ್ರಿಯ ಸಮುದ್ರದಲ್ಲಿ ಆಳ ಅಳೆಯುವುದು: ನೀರು ಕಡಿಮೆ ಆಳವಾಗುತ್ತಾ ಬರುತ್ತದೆಅ. ಕೃ 27:27–28
    ವಚನಗಳು
    ಅ. ಕೃ 27:27–28ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ, ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.

ದೇವಾಲಯದಲ್ಲಿನ ಸಮುದ್ರ

  • ಸೊಲೊಮೋನನ ಎರಕದ ಸಮುದ್ರ: ಒಂದು ದೊಡ್ಡ ದುಂಡಾದ ತೊಟ್ಟಿ1 ಅರಸು 7:23
    ವಚನಗಳು
    1 ಅರಸು 7:23ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
  • ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು, ಪ್ರತಿಯೊಂದು ದಿಕ್ಕಿಗೆ ಮೂರು ಮೂರು1 ಅರಸು 7:25
    ವಚನಗಳು
    1 ಅರಸು 7:25ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.

ನುಡಿಗಳು

  • ಸಂತತಿಯು “ಸಮುದ್ರ ತೀರದಲ್ಲಿರುವ ಮರಳಿನಂತೆಯೂ”ಆದಿ 22:17, ಆದಿ 32:12
    ವಚನಗಳು
    ಆದಿ 22:17ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
    ಆದಿ 32:12‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
  • ಸೊಲೊಮೋನನ ವಿವೇಕ: “ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ”1 ಅರಸು 4:29
    ವಚನಗಳು
    1 ಅರಸು 4:29ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
  • ಅಲ್ಲೋಲಕಲ್ಲೋಲವಾದ ಸಮುದ್ರವು ಶಾಂತವಾಗಿರಲಾರದು; ಅದರ ಅಲೆಗಳು ಕೆಸರನ್ನು ಎತ್ತುತ್ತವೆಯೆಶಾ 57:20
    ವಚನಗಳು
    ಯೆಶಾ 57:20ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು