Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಬೇಸಿಗೆ ಮತ್ತು ಚಳಿಗಾಲ

ಪ್ರಕೃತಿ

ಬೈಬಲಿನಲ್ಲಿ ಬೇಸಿಗೆ ಮತ್ತು ಚಳಿಗಾಲ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 40 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಬಿತ್ತನೆಯೂ ಸುಗ್ಗಿಯೂ, ಚಳಿಯೂ ಸೆಕೆಯೂ, ಬೇಸಿಗೆಯೂ ಚಳಿಗಾಲವೂ ನಿಂತುಹೋಗುವುದಿಲ್ಲಆದಿ 8:22
    ವಚನಗಳು
    ಆದಿ 8:22ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
  • ಕಾಲಗಳನ್ನೂ ದಿನಗಳನ್ನೂ ವರ್ಷಗಳನ್ನೂ ಗುರುತಿಸಲು ಆಕಾಶದಲ್ಲಿ ಬೆಳಕುಗಳುಆದಿ 1:14, ಕೀರ್ತ 104:19
    ವಚನಗಳು
    ಆದಿ 1:14ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
    ಕೀರ್ತ 104:19ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
  • ಒಂದು ಕೀರ್ತನೆ: “ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು”ಕೀರ್ತ 74:17
    ವಚನಗಳು
    ಕೀರ್ತ 74:17ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
  • ಕಾಲಕಾಲಕ್ಕೆ ಮಳೆ: ಮುಂಗಾರು ಮತ್ತು ಹಿಂಗಾರು ಮಳೆಗಳುಧರ್ಮೋ 11:14, ಯೋವೇ 2:23, ಯೆರೆ 5:24
    ವಚನಗಳು
    ಧರ್ಮೋ 11:14ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
    ಯೋವೇ 2:23ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.
    ಯೆರೆ 5:24“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
  • ಅರಸರು ಯುದ್ಧಕ್ಕೆ ಹೊರಡುವ ವಸಂತಕಾಲದಲ್ಲಿ2 ಸಮು 11:1
    ವಚನಗಳು
    2 ಸಮು 11:1ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.
  • ದ್ರಾಕ್ಷಿಸುಗ್ಗಿಯ ವರೆಗೆ ಕಣ ಬಡಿಯುವುದು, ಬಿತ್ತನೆಯ ಕಾಲದ ವರೆಗೆ ದ್ರಾಕ್ಷಿಸುಗ್ಗಿಯಾಜ 26:5
    ವಚನಗಳು
    ಯಾಜ 26:5ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
  • ರೂತಳು ಜವೆಗೋದಿ ಸುಗ್ಗಿಯ ಆರಂಭದಲ್ಲಿ ಬಂದು ಗೋದಿಯ ಸುಗ್ಗಿ ಮುಗಿಯುವ ತನಕ ಹಕ್ಕಲಾಯ್ದಳುರೂತ 1:22, ರೂತ 2:23
    ವಚನಗಳು
    ರೂತ 1:22ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.
    ರೂತ 2:23ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.
  • ಗೋದಿಯ ಸುಗ್ಗಿಯಲ್ಲಿ ಸಮುವೇಲನು ಗುಡುಗನ್ನೂ ಮಳೆಯನ್ನೂ ಬರಮಾಡಿದನು1 ಸಮು 12:17–18
    ವಚನಗಳು
    1 ಸಮು 12:17–18ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು. ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು
  • ಯಾಕೋಬನ ವರ್ಷಗಳು: ಹಗಲಿನಲ್ಲಿ ಬಿಸಿಲು, ರಾತ್ರಿಯಲ್ಲಿ ಚಳಿಆದಿ 31:40
    ವಚನಗಳು
    ಆದಿ 31:40ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.

ಬೇಸಿಗೆ

  • ಎಗ್ಲೋನನು ತನ್ನ ಮೇಲಂತಸ್ತಿನ ತಂಪಾದ ಕೋಣೆಯಲ್ಲಿ ಕುಳಿತಿದ್ದನುನ್ಯಾಯ 3:20, ನ್ಯಾಯ 3:24
    ವಚನಗಳು
    ನ್ಯಾಯ 3:20ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
    ನ್ಯಾಯ 3:24ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
  • ಚಳಿಗಾಲದ ಮನೆಗಳು ಮತ್ತು ಬೇಸಿಗೆಯ ಮನೆಗಳುಆಮೋ 3:15
    ವಚನಗಳು
    ಆಮೋ 3:15ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.
  • ಚೀಬನು ದಾವೀದನಿಗೆ ನೂರು ಬೇಸಿಗೆಯ ಹಣ್ಣುಗಳನ್ನು ತಂದನು2 ಸಮು 16:1–2
    ವಚನಗಳು
    2 ಸಮು 16:1–2ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು. ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.
  • ಗೆದಲ್ಯನು: ದ್ರಾಕ್ಷಾರಸ, ಬೇಸಿಗೆಯ ಹಣ್ಣುಗಳು ಮತ್ತು ಎಣ್ಣೆಯನ್ನು ಪಾತ್ರೆಗಳಲ್ಲಿ ಕೂಡಿಸಿರಿಯೆರೆ 40:10, ಯೆರೆ 40:12
    ವಚನಗಳು
    ಯೆರೆ 40:10ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
    ಯೆರೆ 40:12ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.
  • ಇರುವೆಯು ಬೇಸಿಗೆಯಲ್ಲಿ ತನ್ನ ಆಹಾರವನ್ನು ಕೂಡಿಸಿಡುತ್ತದೆಜ್ಞಾನೋ 6:6–8, ಜ್ಞಾನೋ 30:25
    ವಚನಗಳು
    ಜ್ಞಾನೋ 6:6–8ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ, ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
    ಜ್ಞಾನೋ 30:25ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
  • ಬೇಸಿಗೆಯಲ್ಲಿ ಕಣದ ಹೊಟ್ಟು, ಗಾಳಿಯಿಂದ ಹಾರಿಹೋಗುತ್ತದೆದಾನಿ 2:35
    ವಚನಗಳು
    ದಾನಿ 2:35ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
  • ಅಂಜೂರದ ಮರವು ಎಲೆ ಬಿಟ್ಟಾಗ ಬೇಸಿಗೆ ಹತ್ತಿರವಾಗಿದೆಮತ್ತಾ 24:32
    ವಚನಗಳು
    ಮತ್ತಾ 24:32“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
  • “ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು”ಕೀರ್ತ 32:4
    ವಚನಗಳು
    ಕೀರ್ತ 32:4ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ

ಚಳಿಗಾಲ

  • “ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು”ಪ.ಗೀ 2:11–13
    ವಚನಗಳು
    ಪ.ಗೀ 2:11–13ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು; ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ; ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
  • ಒಂಭತ್ತನೆಯ ತಿಂಗಳಿನಲ್ಲಿ ಅರಸನು ತನ್ನ ಚಳಿಗಾಲದ ಅರಮನೆಯಲ್ಲಿ ಅಗ್ಗಿಷ್ಟಿಕೆಯ ಬಳಿ ಕುಳಿತಿದ್ದನುಯೆರೆ 36:22
    ವಚನಗಳು
    ಯೆರೆ 36:22ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
  • ಮಳೆಗಾಲದಲ್ಲಿ ಜನರು ಜೋರಾದ ಮಳೆಯಲ್ಲಿ ಚೌಕದಲ್ಲಿ ನಡುಗುತ್ತಾ ಕುಳಿತಿದ್ದರುಎಜ್ರ 10:9, ಎಜ್ರ 10:13
    ವಚನಗಳು
    ಎಜ್ರ 10:9ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.
    ಎಜ್ರ 10:13ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.
  • ಚಳಿಗಾಲದಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬ; ಯೇಸು ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದನುಯೋಹಾ 10:22–23
    ವಚನಗಳು
    ಯೋಹಾ 10:22–23ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು. ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,
  • “ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ” ಆಗಬಾರದೆಂದು ಪ್ರಾರ್ಥಿಸಿರಿಮತ್ತಾ 24:20
    ವಚನಗಳು
    ಮತ್ತಾ 24:20ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
  • ಉಪವಾಸದ ದಿನದ ನಂತರ ಸಮುದ್ರಯಾನವು ಅಪಾಯಕರವಾಯಿತು; ಚಳಿಗಾಲ ಕಳೆಯಲು ಅವರು ಬಂದರನ್ನು ಹುಡುಕಿದರುಅ. ಕೃ 27:9, ಅ. ಕೃ 27:12
    ವಚನಗಳು
    ಅ. ಕೃ 27:9ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
    ಅ. ಕೃ 27:12ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.
  • ಅಲೆಕ್ಸಾಂದ್ರಿಯದ ಒಂದು ಹಡಗು ಆ ದ್ವೀಪದಲ್ಲಿ ಚಳಿಗಾಲವನ್ನು ಕಳೆದಿತ್ತುಅ. ಕೃ 28:11
    ವಚನಗಳು
    ಅ. ಕೃ 28:11ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
  • ಪೌಲನು ನಿಕೊಪೊಲಿಯಲ್ಲಿ ಚಳಿಗಾಲ ಕಳೆಯಲು ನಿರ್ಧರಿಸಿದನುತೀತ 3:12
    ವಚನಗಳು
    ತೀತ 3:12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
  • ಪೌಲನು ತಿಮೊಥೆಯನಿಗೆ: “ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು”2 ತಿಮೊ 4:21
    ವಚನಗಳು
    2 ತಿಮೊ 4:21ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.
  • ಉಣ್ಣೆಯಂತೆ ಹರಡಿದ ಹಿಮ, ಬೂದಿಯಂತೆ ಚೆಲ್ಲಿದ ಮಂಜುಗಡ್ಡೆಕೀರ್ತ 147:16
    ವಚನಗಳು
    ಕೀರ್ತ 147:16ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.

ಜ್ಞಾನೋಕ್ತಿಗಳ ನುಡಿಗಳು

  • “ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು”ಜ್ಞಾನೋ 10:5
    ವಚನಗಳು
    ಜ್ಞಾನೋ 10:5ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
  • “ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ” ಹೇಗೋಜ್ಞಾನೋ 26:1
    ವಚನಗಳು
    ಜ್ಞಾನೋ 26:1ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.
  • “ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ”ಜ್ಞಾನೋ 25:13
    ವಚನಗಳು
    ಜ್ಞಾನೋ 25:13ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
  • ಸೋಮಾರಿಯು ಕಾಲಕ್ಕೆ ಸರಿಯಾಗಿ ಉಳುವುದಿಲ್ಲಜ್ಞಾನೋ 20:4
    ವಚನಗಳು
    ಜ್ಞಾನೋ 20:4ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು