Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಹಾವುಗಳು

ಪ್ರಕೃತಿ

ಬೈಬಲಿನಲ್ಲಿ ಹಾವುಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 28 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಆದಿಕಾಂಡ: ಕಾಡುಮೃಗಗಳೆಲ್ಲಕ್ಕಿಂತ ಸರ್ಪವು ಹೆಚ್ಚು ಕುಯುಕ್ತಿಯುಳ್ಳದ್ದಾಗಿತ್ತುಆದಿ 3:1
    ವಚನಗಳು
    ಆದಿ 3:1ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
  • ಆದಿಕಾಂಡ: ಸರ್ಪವು ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನಬೇಕುಆದಿ 3:14
    ವಚನಗಳು
    ಆದಿ 3:14ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
  • “ಬಂಡೆಯ ಮೇಲೆ ಸರ್ಪದ ಸರಣಿ” — ಅತ್ಯಾಶ್ಚರ್ಯವಾದ ನಾಲ್ಕು ವಿಷಯಗಳಲ್ಲಿ ಒಂದುಜ್ಞಾನೋ 30:18–19
    ವಚನಗಳು
    ಜ್ಞಾನೋ 30:18–19ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು; ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
  • ಗೋಡೆಗಳಲ್ಲಿ ಹಾವುಗಳು: ಗೋಡೆಯನ್ನು ಒಡೆಯುವವನನ್ನಾಗಲಿ ಅದಕ್ಕೆ ಒರಗುವವನನ್ನಾಗಲಿ ಹಾವು ಕಚ್ಚಬಹುದುಪ್ರಸ 10:8, ಆಮೋ 5:19
    ವಚನಗಳು
    ಪ್ರಸ 10:8ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
    ಆಮೋ 5:19ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
  • ಹಾವಾಡಿಗರು: ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ ಯಾವ ಪ್ರಯೋಜನವೂ ಇಲ್ಲಪ್ರಸ 10:11
    ವಚನಗಳು
    ಪ್ರಸ 10:11ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
  • ಹಾವಾಡಿಗನ ನಾದಕ್ಕೆ ಕಿವಿ ಮುಚ್ಚಿಕೊಳ್ಳುವ ನಾಗರಹಾವುಕೀರ್ತ 58:4–5
    ವಚನಗಳು
    ಕೀರ್ತ 58:4–5ಅವರು ಸರ್ಪದಂತೆ ವಿಷಭರಿತರು. ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
  • ಮಂತ್ರಕ್ಕೆ ಒಳಗಾಗದ ವಿಷಸರ್ಪಗಳುಯೆರೆ 8:17
    ವಚನಗಳು
    ಯೆರೆ 8:17ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
  • ದಾರಿಯ ಪಕ್ಕದ ವಿಷಸರ್ಪವು ಕುದುರೆಯ ಹಿಮ್ಮಡಿಯನ್ನು ಕಚ್ಚುತ್ತದೆ, ಸವಾರನು ಹಿಂದಕ್ಕೆ ಬೀಳುತ್ತಾನೆಆದಿ 49:17
    ವಚನಗಳು
    ಆದಿ 49:17ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
  • ಅರಣ್ಯದಲ್ಲಿ ವಿಷಸರ್ಪಗಳೂ ಚೇಳುಗಳೂ ಇದ್ದವುಧರ್ಮೋ 8:15
    ವಚನಗಳು
    ಧರ್ಮೋ 8:15ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
  • ದಕ್ಷಿಣ ಸೀಮೆ: ಸಿಂಹ, ವಿಷಸರ್ಪ ಮತ್ತು ಹಾರುವ ಸರ್ಪಗಳ ದೇಶಯೆಶಾ 30:6
    ವಚನಗಳು
    ಯೆಶಾ 30:6ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
  • ವಿಷಸರ್ಪದ ಮೊಟ್ಟೆಯನ್ನು ಒಡೆದರೆ ವಿಷಸರ್ಪವು ಹೊರಬರುತ್ತದೆಯೆಶಾ 59:5
    ವಚನಗಳು
    ಯೆಶಾ 59:5ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.

ಕಥೆಗಳಲ್ಲಿ

  • ಮೋಶೆಯ ಕೋಲು ಸರ್ಪವಾಯಿತು; ಅವನು ಅದರಿಂದ ಓಡಿಹೋದನು, ಆ ಮೇಲೆ ಅದರ ಬಾಲವನ್ನು ಹಿಡಿದನುವಿಮೋ 4:3–4
    ವಚನಗಳು
    ವಿಮೋ 4:3–4ಯೆಹೋವನು ಅವನಿಗೆ, “ಅದನ್ನು ನೆಲದ ಮೇಲೆ ಹಾಕು” ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು. ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.
  • ಆರೋನನ ಕೋಲು ಸರ್ಪವಾಗಿ ಮಂತ್ರಗಾರರ ಕೋಲುಗಳನ್ನು ನುಂಗಿಬಿಟ್ಟಿತುವಿಮೋ 7:10–12
    ವಚನಗಳು
    ವಿಮೋ 7:10–12ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು. ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು. ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
  • ಅರಣ್ಯದಲ್ಲಿ ವಿಷಸರ್ಪಗಳು ಇಸ್ರಾಯೇಲರನ್ನು ಕಚ್ಚಿದವು, ಅನೇಕರು ಸತ್ತರುಅರಣ್ಯ 21:6
    ವಚನಗಳು
    ಅರಣ್ಯ 21:6ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
  • ಮೋಶೆಯು ಕಂಬದ ಮೇಲೆ ತಾಮ್ರದ ಸರ್ಪವನ್ನು ಮಾಡಿಸಿದನು; ಕಚ್ಚಲ್ಪಟ್ಟವರು ಅದನ್ನು ನೋಡಿ ಬದುಕಿದರುಅರಣ್ಯ 21:8–9
    ವಚನಗಳು
    ಅರಣ್ಯ 21:8–9ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು. ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
  • ಅದಕ್ಕೆ ಧೂಪವನ್ನರ್ಪಿಸುತ್ತಿದ್ದುದರಿಂದ ಹಿಜ್ಕೀಯನು ನೆಹುಷ್ಟಾನ್ ಎಂಬ ಆ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು2 ಅರಸು 18:4
    ವಚನಗಳು
    2 ಅರಸು 18:4ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
  • ಮೆಲೀತೆಯಲ್ಲಿ ಬೆಂಕಿಯ ಕಾವಿನಿಂದ ಹೊರಬಂದ ವಿಷಸರ್ಪವು ಪೌಲನ ಕೈಗೆ ಸುತ್ತಿಕೊಂಡಿತುಅ. ಕೃ 28:3–4
    ವಚನಗಳು
    ಅ. ಕೃ 28:3–4ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು. ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
  • ಪೌಲನು ಅದನ್ನು ಝಾಡಿಸಿಬಿಟ್ಟನು; ಅವನು ಬಾತುಹೋಗುವನೆಂದು ದ್ವೀಪದವರು ಕಾದಿದ್ದರುಅ. ಕೃ 28:5–6
    ವಚನಗಳು
    ಅ. ಕೃ 28:5–6ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ. ಅವರು; “ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ” ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು “ಇವನೊಬ್ಬ ದೇವನೇ” ಇರಬೇಕು ಎಂದುಕೊಂಡರು.
  • ಹಾವುಗಳನ್ನೂ ಚೇಳುಗಳನ್ನೂ ತುಳಿಯುವ ಅಧಿಕಾರವನ್ನು ಯೇಸು ತನ್ನ ಶಿಷ್ಯರಿಗೆ ಕೊಡುತ್ತಾನೆಲೂಕ 10:17, ಲೂಕ 10:19
    ವಚನಗಳು
    ಲೂಕ 10:17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
    ಲೂಕ 10:19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.

ನುಡಿಗಳು

  • “ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ”ಮತ್ತಾ 10:16
    ವಚನಗಳು
    ಮತ್ತಾ 10:16“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
  • ಮಗನು ಮೀನನ್ನು ಕೇಳಿದರೆ ಯಾವ ತಂದೆ ಅವನಿಗೆ ಹಾವನ್ನು ಕೊಡುವನು?ಮತ್ತಾ 7:10, ಲೂಕ 11:11
    ವಚನಗಳು
    ಮತ್ತಾ 7:10ಮೀನು ಕೇಳಿದರೆ ಹಾವನ್ನು ಕೊಡುವನೋ?
    ಲೂಕ 11:11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
  • ದ್ರಾಕ್ಷಾರಸವು “ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ”ಜ್ಞಾನೋ 23:31–32
    ವಚನಗಳು
    ಜ್ಞಾನೋ 23:31–32ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
  • “ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ”ಕೀರ್ತ 140:3
    ವಚನಗಳು
    ಕೀರ್ತ 140:3ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ
  • “ಹಾವಿನಂತೆ ಧೂಳನ್ನು ನೆಕ್ಕುವರು”ಮೀಕ 7:17
    ವಚನಗಳು
    ಮೀಕ 7:17ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.
  • ಐಗುಪ್ತವು ಓಡಿಹೋಗುವ ಶಬ್ದವು “ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು”ಯೆರೆ 46:22
    ವಚನಗಳು
    ಯೆರೆ 46:22ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು