ಅನ್ವೇಷಿಸಿ › ವಿಷಯಗಳು › ಏಳು ಎಂಬ ಸಂಖ್ಯೆ
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಏಳು ಎಂಬ ಸಂಖ್ಯೆ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 49 ವಾಕ್ಯಭಾಗಗಳು, ಸಾಲು ಸಾಲಾಗಿ.
ಏಳು ದಿನಗಳು
- ದೇವರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು; ಆರು ದಿನ ಕೆಲಸ, ಆ ಮೇಲೆ ಸಬ್ಬತ್ಆದಿ 2:3, ವಿಮೋ 20:11, ಧರ್ಮೋ 5:13–14
ವಚನಗಳು
ಆದಿ 2:3ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
ವಿಮೋ 20:11ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
ಧರ್ಮೋ 5:13–14ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
- ನೋಹನು ನಾವೆಯೊಳಗೆ ಹೋದ ಏಳು ದಿನಗಳ ನಂತರ ಜಲಪ್ರಳಯವು ಬಂತುಆದಿ 7:4, ಆದಿ 7:10
- ಪಾರಿವಾಳವನ್ನು ಹೊರಗೆ ಕಳುಹಿಸುವ ನಡುವೆ ನೋಹನು ಏಳು ದಿನ ಕಾದನುಆದಿ 8:10, ಆದಿ 8:12
- ಯೋಸೇಫನು ತನ್ನ ತಂದೆಗಾಗಿ ಏಳು ದಿನ ಗೋಳಾಡಿದನುಆದಿ 50:10
ವಚನಗಳು
ಆದಿ 50:10ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
- ಯೋಬನ ಮಿತ್ರರು ಏಳು ದಿನ ಮೌನವಾಗಿ ಅವನ ಸಂಗಡ ಕುಳಿತರುಯೋಬ 2:13
ವಚನಗಳು
ಯೋಬ 2:13ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.
- ಪಸ್ಕದಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿವಿಮೋ 12:15
ವಚನಗಳು
ವಿಮೋ 12:15“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
- ಪರ್ಣಶಾಲೆಗಳ ಹಬ್ಬದಲ್ಲಿ ಏಳು ದಿನ ಚಪ್ಪರಗಳಲ್ಲಿಯಾಜ 23:34, ಯಾಜ 23:42
- ಯಾಜಕರ ಪ್ರತಿಷ್ಠೆಗೆ ಏಳು ದಿನಗಳು ಬೇಕಾದವುವಿಮೋ 29:35
ವಚನಗಳು
ವಿಮೋ 29:35ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
- ಸೌಲನು ಗಿಲ್ಗಾಲಿನಲ್ಲಿ ಸಮುವೇಲನಿಗಾಗಿ ಏಳು ದಿನ ಕಾದನು1 ಸಮು 13:8
ವಚನಗಳು
1 ಸಮು 13:8ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
- ಶರಣಾಗುವ ಮೊದಲು ಯಾಬೇಷಿನವರು ಏಳು ದಿನ ಗಡುವು ಕೇಳಿದರು1 ಸಮು 11:3
ವಚನಗಳು
1 ಸಮು 11:3ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
- ಸೌಲನನ್ನು ಹೂಣಿಟ್ಟ ನಂತರ ಯಾಬೇಷಿನವರು ಏಳು ದಿನ ಉಪವಾಸಮಾಡಿದರು1 ಸಮು 31:13
ವಚನಗಳು
1 ಸಮು 31:13ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
- ಸಂಸೋನನ ಮದುವೆಯ ಔತಣವೂ ಒಗಟೂ ಏಳು ದಿನ ನಡೆದವುನ್ಯಾಯ 14:12, ನ್ಯಾಯ 14:17
ವಚನಗಳು
ನ್ಯಾಯ 14:12ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
ನ್ಯಾಯ 14:17ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
- ಅಹಷ್ವೇರೋಷನು ಅರಮನೆಯ ತೋಟದಲ್ಲಿ ಏಳು ದಿನಗಳ ಔತಣ ಮಾಡಿದನುಎಸ್ತೇ 1:5
ವಚನಗಳು
ಎಸ್ತೇ 1:5ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
- ಪೌಲನು ತೂರಿನಲ್ಲಿ ಏಳು ದಿನ ಇದ್ದನುಅ. ಕೃ 21:4
ವಚನಗಳು
ಅ. ಕೃ 21:4ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
ಏಳು ವರ್ಷಗಳು
- ಯಾಕೋಬನು ರಾಹೇಲಳಿಗಾಗಿ ಏಳು ವರ್ಷ, ಆ ಮೇಲೆ ಇನ್ನೂ ಏಳು ವರ್ಷ ದುಡಿದನುಆದಿ 29:20, ಆದಿ 29:27
- ಐಗುಪ್ತದಲ್ಲಿ ಏಳು ವರ್ಷ ಸಮೃದ್ಧಿ, ಆ ಮೇಲೆ ಏಳು ವರ್ಷ ಬರಆದಿ 41:53–54
ವಚನಗಳು
ಆದಿ 41:53–54ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
- ಎಲೀಷನ ಕಾಲದಲ್ಲಿ ಏಳು ವರ್ಷಗಳ ಬರ2 ಅರಸು 8:1–2
ವಚನಗಳು
2 ಅರಸು 8:1–2ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು. ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.
- ಸೊಲೊಮೋನನು ಏಳು ವರ್ಷಗಳಲ್ಲಿ ದೇವಾಲಯವನ್ನು ಕಟ್ಟಿದನು1 ಅರಸು 6:38
ವಚನಗಳು
1 ಅರಸು 6:38ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
- ಜೂಬಿಲಿ ವರ್ಷದ ವರೆಗೆ ಏಳು ಸಾರಿ ಏಳು ವರ್ಷಗಳುಯಾಜ 25:8
ವಚನಗಳು
ಯಾಜ 25:8“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
ಏಳು ಸಾರಿ ಮತ್ತು ಏಳೇಳು
- ಲೆಮೆಕನು: ಕಾಯಿನನಿಗಾಗಿ ಏಳರಷ್ಟು ಮುಯ್ಯಿ, ಲೆಮೆಕನಿಗಾಗಿ ಎಪ್ಪತ್ತೇಳರಷ್ಟುಆದಿ 4:24
ವಚನಗಳು
ಆದಿ 4:24ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
- ಶುದ್ಧ ಪ್ರಾಣಿಗಳಲ್ಲಿ ಪ್ರತಿಯೊಂದರ ಏಳು ಜೋಡಿಗಳು ನಾವೆಯೊಳಗೆಆದಿ 7:2
ವಚನಗಳು
ಆದಿ 7:2ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
- ಅಬ್ರಹಾಮನು ಅಬೀಮೆಲೆಕನಿಗೆ ಏಳು ಹೆಣ್ಣು ಕುರಿಮರಿಗಳನ್ನು ಕೊಟ್ಟನುಆದಿ 21:28–30
ವಚನಗಳು
ಆದಿ 21:28–30ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.
- ಏಸಾವನ ಮುಂದೆ ಯಾಕೋಬನು ಏಳು ಸಾರಿ ನೆಲದ ವರೆಗೆ ಬಾಗಿದನುಆದಿ 33:3
ವಚನಗಳು
ಆದಿ 33:3ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.
- ಫರೋಹನ ಕನಸು: ಏಳು ಹಸುಗಳು ಮತ್ತು ಏಳು ತೆನೆಗಳುಆದಿ 41:2–7
ವಚನಗಳು
ಆದಿ 41:2–7ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು. ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು. ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು. ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು. ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು. ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
- ಯಾಜಕನು ರಕ್ತವನ್ನೂ ಎಣ್ಣೆಯನ್ನೂ ಏಳು ಸಾರಿ ಚಿಮುಕಿಸಿದನುಯಾಜ 4:6, ಯಾಜ 14:16
- ಬಿಳಾಮನು ಏಳು ಯಜ್ಞವೇದಿಗಳನ್ನೂ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಕೇಳಿದನುಅರಣ್ಯ 23:1
ವಚನಗಳು
ಅರಣ್ಯ 23:1ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
- ಏಳು ಯಾಜಕರು, ಏಳು ಕೊಂಬುಗಳು, ಯೆರಿಕೋವಿನ ಸುತ್ತಲೂ ಏಳು ಸಾರಿಯೆಹೋ 6:4, ಯೆಹೋ 6:15–16
ವಚನಗಳು
ಯೆಹೋ 6:4ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.
ಯೆಹೋ 6:15–16ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು. ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.
- ಸಂಸೋನನ ಏಳು ಜಡೆಗಳುನ್ಯಾಯ 16:13, ನ್ಯಾಯ 16:19
ವಚನಗಳು
ನ್ಯಾಯ 16:13ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
ನ್ಯಾಯ 16:19ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
- ಎಲೀಯನ ಸೇವಕನು ಏಳು ಸಾರಿ ಸಮುದ್ರದ ಕಡೆಗೆ ನೋಡಿದನು1 ಅರಸು 18:43–44
ವಚನಗಳು
1 ಅರಸು 18:43–44ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು. ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.
- ಶೂನೇಮ್ಯಳ ಮಗನು ಏಳು ಸಾರಿ ಸೀನಿದನು2 ಅರಸು 4:35
ವಚನಗಳು
2 ಅರಸು 4:35ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
- ನಾಮಾನನು ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡಿದನು2 ಅರಸು 5:10, 2 ಅರಸು 5:14
ವಚನಗಳು
2 ಅರಸು 5:10ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.
2 ಅರಸು 5:14ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
- ನೆಬೂಕದ್ನೆಚ್ಚರನು ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಿದನುದಾನಿ 3:19
ವಚನಗಳು
ದಾನಿ 3:19ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
- ಅಹಷ್ವೇರೋಷನ ಆಸ್ಥಾನದಲ್ಲಿ ಏಳು ಮಂದಿ ಕಂಚುಕಿಗಳೂ ಏಳು ಮಂದಿ ಪ್ರಧಾನರೂಎಸ್ತೇ 1:10, ಎಸ್ತೇ 1:14
ವಚನಗಳು
ಎಸ್ತೇ 1:10ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
ಎಸ್ತೇ 1:14ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
- ಏಳು ಸಾರಿ ಮಾತ್ರವಲ್ಲ, ಅದಕ್ಕಿಂತ ಎಷ್ಟೋ ಹೆಚ್ಚು ಸಾರಿ ಕ್ಷಮಿಸುಮತ್ತಾ 18:21–22
ವಚನಗಳು
ಮತ್ತಾ 18:21–22ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
- ಏಳು ರೊಟ್ಟಿಗಳು, ಉಳಿದ ತುಂಡುಗಳು ಏಳು ಹೆಡಿಗೆಗಳಷ್ಟುಮತ್ತಾ 15:34–37
ವಚನಗಳು
ಮತ್ತಾ 15:34–37ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು. ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು. ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- ಯೆರೂಸಲೇಮಿನ ವಿಶ್ವಾಸಿಗಳ ಸೇವೆಗೆ ಏಳು ಮಂದಿಯನ್ನು ಆರಿಸಲಾಯಿತುಅ. ಕೃ 6:3
ವಚನಗಳು
ಅ. ಕೃ 6:3ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.
- ಸ್ಕೇವನ ಏಳು ಮಂದಿ ಮಕ್ಕಳುಅ. ಕೃ 19:14
ವಚನಗಳು
ಅ. ಕೃ 19:14ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು